AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಂಕ್ರಾಂತಿ ರೇಸ್​’ಗೆ ಕನ್ನಡ ಸಿನಿಮಾ ಎಂಟ್ರಿ

Sharan: ತೆಲುಗಿನ ದೊಡ್ಡ ಸಿನಿಮಾಗಳು ಸಂಕ್ರಾಂತಿ ಹಬ್ಬದ ವೇಳೆಗೆ ಬಿಡುಗಡೆ ಆಗುತ್ತಿರುವ ಕಾರಣಕ್ಕೆ ಪರಭಾಷೆಯ ಸಿನಿಮಾಗಳು ತಮ್ಮ ಸಿನಿಮಾ ಮುಂದಕ್ಕೆ ಹಾಕಿಕೊಂಡಿವೆ. ಆದರೆ ಕನ್ನಡದ ಒಂದು ಸಿನಿಮಾ ತೆಲುಗು ಸಿನಿಮಾಗಳ ನಡುವೆ ಸಂಕ್ರಾಂತಿಗೆ ಬಿಡುಗಡೆ ಆಗಲಿದೆ. ಸಿನಿಮಾ ಜನವರಿ 10ಕ್ಕೆ ತೆರೆಗೆ ಬರಲಿದೆ.

‘ಸಂಕ್ರಾಂತಿ ರೇಸ್​’ಗೆ ಕನ್ನಡ ಸಿನಿಮಾ ಎಂಟ್ರಿ
ಛೂ ಮಂಥರ್
ಮಂಜುನಾಥ ಸಿ.
|

Updated on:Dec 10, 2024 | 5:07 PM

Share

ಸಂಕ್ರಾಂತಿ ಹಬ್ಬ ಬಂತೆಂದರೆ ನೆರೆಯ ತೆಲುಗು ಚಿತ್ರರಂಗದಲ್ಲಿ ಸಿನಿಮಾಗಳ ಹಾವಳಿ ಜೋರು. ಸಂಕ್ರಾಂತಿಗೆ ಈಗಾಗಲೇ ಕೆಲವು ಸಿನಿಮಾಗಳು ಬಿಡುಗಡೆಗೆ ಸಜ್ಜಾಗಿವೆ. ರಾಮ್ ಚರಣ್​ರ ಒಂದು ಸಿನಿಮಾ, ವಿಕ್ಟರಿ ವೆಂಕಟೇಶ್, ನಾಗ ಚೈತನ್ಯರ ಸಿನಿಮಾ ಹೀಗೆ ಹಲವು ಸ್ಟಾರ್​ ನಟರ ಬಿಗ್​ಬಜೆಟ್ ತೆಲುಗು ಸಿನಿಮಾಗಳು ಸಂಕ್ರಾಂತಿ ವೇಳೆಗೆ ಬಿಡುಗಡೆ ಆಗಲಿವೆ. ತೆಲುಗಿನ ದೊಡ್ಡ ಸಿನಿಮಾಗಳು ಬಿಡುಗಡೆ ಆಗುತ್ತಿರುವ ಕಾರಣಕ್ಕೆ ಪರಭಾಷೆಯ ಸಿನಿಮಾಗಳು ತಮ್ಮ ಸಿನಿಮಾ ಮುಂದಕ್ಕೆ ಹಾಕಿಕೊಂಡಿವೆ. ಆದರೆ ಕನ್ನಡದ ಒಂದು ಸಿನಿಮಾ ತೆಲುಗು ಸಿನಿಮಾಗಳ ನಡುವೆ ಸಂಕ್ರಾಂತಿಗೆ ಬಿಡುಗಡೆ ಆಗಲಿದೆ.

ಶರಣ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ “ಛೂ ಮಂತರ್” ಸಂಕ್ರಾಂತಿ ಹಬ್ಬಕ್ಕೆ ಅಂದರೆ ಜನವರಿ 10 ರಂದು ಬಿಡುಗಡೆಯಾಗಲಿದೆ. ಸಂಕ್ರಾಂತಿ ಸಮಯದಲ್ಲಿ ತೆಲುಗು, ತಮಿಳಿನ‌ ದೊಡ್ಡದೊಡ್ಡ ಚಿತ್ರಗಳು ಬಿಡುಗಡೆ ಆಗಲಿವೆ. ಇದೇ ಕಾರಣಕ್ಕೆ ಸಂಕ್ರಾಂತಿ ಸಮಯದಲ್ಲಿ ಕನ್ನಡ ಸಿನಿಮಾಗಳನ್ನು ಬಿಡುಗಡೆ ಮಾಡಲಾಗುತ್ತಿಲ್ಲ. ಆದರೆ ಈಗ ‘ಛೂ ಮಂತರ್’ ಸಿನಿಮಾ ಬಿಡುಗಡೆ ಮಾಡಲಾಗುತ್ತಿದೆ. ಇತ್ತೀಚೆಗಷ್ಟೆ ಗಣ್ಯರ ಸಮ್ಮುಖದಲ್ಲಿ ಸಿನಿಮಾದ ಟೀಸರ್ ಬಿಡುಗಡೆ ಮಾಡಲಾಯ್ತು.

ಈ ಸಿನಿಮಾಕ್ಕೆ ಹೆಸರು ಸೂಚಿಸಿದ್ದು ನಟ ದರ್ಶನ್ ಅಂತೆ, ಟೀಸರ್ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಶರಣ್, ‘ತರುಣ್ ಸುಧೀರ್ ಈ ಚಿತ್ರಕ್ಕೆ ಓಂಕಾರ ಹಾಕಿದರು. ದರ್ಶನ್ ಹೆಸರು ಸೂಚಿಸುವ ಮೂಲಕ ಸಿನಿಮಾ ಆರಂಭವಾಯ್ತು. ಹಲವು ವರ್ಷಗಳಿಂದ ಸಂಕ್ರಾಂತಿಗೆ ಕನ್ನಡ ಚಿತ್ರಗಳನ್ನು ಬಿಡುಗಡೆ‌ ಮಾಡುತ್ತಿರಲಿಲ್ಲ. ಆದರೆ ತರುಣ್, ಸಂಕ್ರಾಂತಿ ಸಮಯಕ್ಕೆ ಸಿನಿಮಾ ಬಿಡುಗಡೆ‌ ಮಾಡುತ್ತಿದ್ದಾರೆ. ಒಳ್ಳೆಯ ಕತೆ ಹೊಂದಿರುವ ಈ ಸಿನಿಮಾ ಗೆದ್ದೇ ಗೆಲ್ಲುತ್ತೆ ಎಂಬ ವಿಶ್ವಾಸ ಇದೆ. ಜನವರಿ 10 ರಂದು ಬಿಡುಗಡೆಯಾಗಲಿದೆ. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದು ನಿರ್ಮಾಪಕ ತರುಣ್ ಶಿವಪ್ಪ ಹಾರೈಸಿದರು.

ಇದನ್ನೂ ಓದಿ:41ರ ಹರೆಯದಲ್ಲೂ ಶ್ರಿಯಾ ಶರಣ್​ ಸಖತ್​ ಬೋಲ್ಡ್​​​

ಇದೊಂದು ಡಾರ್ಕ್ ಹ್ಯೂಮರ್ ಜಾನರ್ ನ ಹಾರಾರ್ ಚಿತ್ರ. ಉತ್ತರ ಕಾಂಡ, ಶ್ರೀಲಂಕ, ಮೈಸೂರು, ಬೆಂಗಳೂರು ಮುಂತಾದ ಕಡೆ ಅರವತ್ತು ದಿನಗಳ ಚಿತ್ರೀಕರಣ ಮಾಡಿದ್ದೇವೆ. ಬೆಂಗಳೂರಿನಲ್ಲಿ ಎರಡು ಕೋಟಿ ರೂಪಾಯಿ ವೆಚ್ಚದಲ್ಲಿ ಹಾಕಲಾಗಿದ್ದ ಅದ್ದೂರಿ ಸೆಟ್ ನಲ್ಲೇ ಹೆಚ್ಚಿನ ಚಿತ್ರೀಕರಣ ನಡೆದಿದೆ. ರವಿವರ್ಮ ಸಾಹಸ ನಿರ್ದೇಶನ‌ ಮಾಡಿದ್ದಾರೆ. ಅನೂಪ್ ಅವರ ಛಾಯಾಗ್ರಹಣ ಹಾಗೂ ಶರಣ್ ಅವರು ಸೇರಿದಂತೆ ಎಲ್ಲಾ ಕಲಾವಿದರ ಅಭಿನಯ ಅದ್ಭುತವಾಗಿದೆ ಎಂದರು ನಿರ್ದೇಶಕ ನವನೀತ್.

ಶರಣ್ ಅವರ ಜೊತೆಗೆ ನಟಿಸಬೇಕೆಂಬ ಆಸೆ ಈ ಚಿತ್ರದ ಮೂಲಕ‌ ಈಡೇರಿದೆ ಎಂದು ನಟಿ ಮೇಘನಾ‌ ಗಾಂವ್ಕರ್ ತಿಳಿಸಿದರು. ಉತ್ತಮ ತಂಡದೊಂದಿಗೆ ಕೆಲಸ ಮಾಡಿದ್ದು ಖುಷಿಯಾಗಿದೆ ಎಂದು ನಟಿ ಅದಿತಿ ಪ್ರಭುದೇವ ಹೇಳಿದರು. ಚಿತ್ರದಲ್ಲಿ ಅಭಿನಯಿಸಿರುವ ಪ್ರಭು ಮುಂಡ್ಕರ್, ದಿಲೀಪ್‌ ರಾಜ್, ಧರ್ಮ, ನರಸಿಂಹ ಜಾಲಹಳ್ಳಿ, ರಂಜನಿ ರಾಘವನ್ ಸಹ ತಮ್ಮ ಪಾತ್ರದ ಬಗ್ಗೆ ಮಾತನಾಡಿದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:07 pm, Tue, 10 December 24

ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!