AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sharan: ‘ಅವತಾರ ಪುರುಷ’ ರಿಲೀಸ್​ಗೆ ಮುಹೂರ್ತ ಫಿಕ್ಸ್; ಸಾವು- ಬದುಕು ನಡುವಿನ ಕೊನೆಯ ಆಸರೆ ಈ ಸಿನಿಮಾ ಎಂದ ಪುಷ್ಕರ್

Simpe Suni | Avatara Purusha: ಶರಣ್ ಹಾಗೂ ಆಶಿಕಾ ರಂಗನಾಥ್ ನಟನೆಯ ‘ಅವತಾರ ಪುರುಷ’ ಹಲವು ಕಾರಣಗಳಿಗೆ ಸದ್ದು ಮಾಡುತ್ತಿರುವ ಚಿತ್ರ. ಇದೀಗ ಚಿತ್ರದ ಹೊಸ ಬಿಡುಗಡೆ ದಿನಾಂಕವನ್ನು ಘೋಷಿಸಲಾಗಿದೆ.

Sharan: ‘ಅವತಾರ ಪುರುಷ’ ರಿಲೀಸ್​ಗೆ ಮುಹೂರ್ತ ಫಿಕ್ಸ್; ಸಾವು- ಬದುಕು ನಡುವಿನ ಕೊನೆಯ ಆಸರೆ ಈ ಸಿನಿಮಾ ಎಂದ ಪುಷ್ಕರ್
‘ಅವತಾರ ಪುರುಷ’ ಚಿತ್ರದ ಹೊಸ ಪೋಸ್ಟರ್
TV9 Web
| Edited By: |

Updated on:Mar 11, 2022 | 8:56 PM

Share

ಸ್ಯಾಂಡಲ್​ವುಡ್​ನ ಹಲವು ಚಿತ್ರಗಳು ಹೊಸ ಬಿಡುಗಡೆ ದಿನಾಂಕಗಳನ್ನು ಘೋಷಿಸಿಕೊಳ್ಳುತ್ತಿವೆ. ಈ ಪಟ್ಟಿಗೆ ಹೊಸ ಸೇರ್ಪಡೆ ‘ಅವತಾರ ಪುರುಷ’ (Avatara Purusha). ಶರಣ್ (Sharan) ನಾಯಕನಾಗಿ ಕಾಣಿಸಿಕೊಳ್ಳುತ್ತಿರುವ ಈ ಚಿತ್ರದಲ್ಲಿ ಅವರಿಗೆ ಜತೆಯಾಗಿ ಬಣ್ಣಹಚ್ಚಿರುವವರು ಆಶಿಕಾ ರಂಗನಾಥ್. ಈಗಾಗಲೇ ತೆರೆಯ ಮೇಲೆ ಮೋಡಿ ಮಾಡಿರುವ ಈ ಜೋಡಿಯನ್ನು ಮತ್ತೊಮ್ಮೆ ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾದಿದ್ದಾರೆ. ಎಲ್ಲವೂ ಸರಿಯಿದ್ದಿದ್ದರೆ 2021ರ ಡಿಸೆಂಬರ್​ನಲ್ಲೇ ಚಿತ್ರ ರಿಲೀಸ್ ಆಗಬೇಕಿತ್ತು. ಆದರೆ ಕೊರೊನಾ ನಿಯಮಾವಳಿಗಳ ಕಾರಣದಿಂದ ಚಿತ್ರದ ರಿಲೀಸ್ ಮುಂದೂಡಲಾಗಿತ್ತು. ಇದೀಗ ಹೊಸ ರಿಲೀಸ್ ದಿನಾಂಕವನ್ನು ಘೋಷಿಸಲಾಗಿದೆ. ಸಿಂಪಲ್ ಸುನಿ ಆಕ್ಷನ್ ಕಟ್ ಹೇಳುತ್ತಿರುವ ಈ ಚಿತ್ರ ಮೇ 6ರಂದು ತೆರೆಗೆ ಬರಲಿದೆ. ಈ ಕುರಿತು ಟ್ವೀಟ್ ಮಾಡಿರುವ ಸುನಿ, ‘‘ಕಪ್ಪುಜಾದು ಶುರುವಾಗುವ ಸಮಯ. ಮೇ 6ಂದು ಬಿಡುಗಡೆ. ಆಶೀರ್ವಾದವಿರಲಿ’’ ಎಂದು ಬರೆದಿದ್ದಾರೆ. ಚಿತ್ರದ ರಿಲೀಸ್ ಜತೆಗೆ ಹೊಸ ಪೋಸ್ಟರ್ ಹಂಚಿಕೊಳ್ಳಲಾಗಿದ್ದು, ಗಮನ ಸೆಳೆಯುತ್ತಿದೆ.

ಖ್ಯಾತ ಕಲಾವಿದರ ದಂಡೇ ಚಿತ್ರದಲ್ಲಿದ್ದು, ಎಲ್ಲರ ಲುಕ್​ಗಳನ್ನು ಒಳಗೊಂಡಿರುವ ಪೋಸ್ಟರ್​ಅನ್ನು ಹಂಚಿಕೊಳ್ಳಲಾಗಿದೆ. ಶ್ರೀನಗರ ಕಿಟ್ಟಿ, ಆಶಿಕಾ ರಂಗನಾಥ್ ಸೇರಿದಂತೆ ಎಲ್ಲರ ಗೆಟಪ್ ಕುತೂಹಲ ಮೂಡಿಸುತ್ತಿದೆ. ಜೂನಿಯರ್ ಆರ್ಟಿಸ್ಟ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ಶರಣ್, ಹಲವು ವಿಭಿನ್ನ ವೇಷ ತೊಟ್ಟಿದ್ದಾರೆ.

ಚಿತ್ರದ ರಿಲೀಸ್ ಬಗ್ಗೆ ಸಿಂಪಲ್ ಸುನಿ ಹಂಚಿಕೊಂಡ ಟ್ವೀಟ್:

‘ಅವತಾರ ಪುರುಷ’ ನಿರ್ಮಾಪಕ ಪುಷ್ಕರ್ ಮಲ್ಲಿಕಾರ್ಜುನಯ್ಯ ವೃತ್ತಿ ಬದುಕಿನ ಇತ್ತೀಚಿನ ಏಳುಬೀಳುಗಳನ್ನು ಹಿನ್ನೆಲೆಯಾಗಿಟ್ಟು ಟ್ವೀಟ್ ಮಾಡಿದ್ದು, ‘‘ನನ್ನ ಸಾವು-ಬದುಕಿನ ಮದ್ಯೆ ಸಣ್ಣ ಎಳೆಯಂತೆ ಇರುವ ನನ್ನ ಕೊನೆಯ ಆಸರೆ ಅವತಾರಪುರುಷ. ನಿಮ್ಮ ಪ್ರಾರ್ಥನೆ ಹಾಗು ಬೆಂಬಲ ನನ್ನ ಜೊತೆಯಿರಲಿ’’ ಎಂದು ಬರೆದಿದ್ದಾರೆ.

ಪುಷ್ಕರ್ ಮಲ್ಲಿಕಾರ್ಜುನಯ್ಯ ಟ್ವೀಟ್ ಇಲ್ಲಿದೆ:

‘ಅವತಾರ ಪುರುಷ’ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ನೀಡಿದ್ದು, ವಿಲಿಯಮ್​ ಡೇವಿಡ್​ ಛಾಯಾಗ್ರಹಣ ಮಾಡಿದ್ದಾರೆ. ತಾಂತ್ರಿಕವಾಗಿ ತುಂಬ ಶ್ರೀಮಂತವಾಗಿ ಮೂಡಿಬಂದಿರುವ ಈ ಚಿತ್ರದ ಪೋಸ್ಟರ್ ಹಾಗೂ ಟೀಸರ್​ ಗಮನ ಸೆಳೆದಿತ್ತು. ಚಿತ್ರ ಕನ್ನಡದಲ್ಲಿ ಮಾತ್ರ ರಿಲೀಸ್ ಆಗಲಿದೆ ಎಂದು ತಿಳಿಸಲಾಗಿದೆ.

ಇದನ್ನೂ ಓದಿ:

Prakash Belawadi: ಕಾಶ್ಮೀರಿ ಪಂಡಿತರ ಕ್ಷಮೆಯಾಚಿಸಿದ ಪ್ರಕಾಶ್ ಬೆಳವಾಡಿ; ‘ದಿ ಕಾಶ್ಮೀರ್ ಫೈಲ್ಸ್’ ಬಗ್ಗೆ ನಟ ಹೇಳಿದ್ದೇನು?

James: ಪುನೀತ್ ಕುರಿತು ಪ್ರೀತಿಯ ಮಾತನ್ನಾಡಿದ ಕಿಚ್ಚ; ‘ಸಲಾಂ ಸೋಲ್ಜರ್’ ಹಾಡಿನ ರಿಲೀಸ್ ಫೋಟೋಗಳು ಇಲ್ಲಿವೆ

Published On - 8:13 pm, Fri, 11 March 22

ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಐದೇ ನಿಮಿಷ, ಪಕ್ಕಾ ಪ್ಲ್ಯಾನ್​​: ಕೆಜಿಗಟ್ಟಲೆ ಚಿನ್ನ ಕದ್ದು ಎಸ್ಕೇಪ್​
ಐದೇ ನಿಮಿಷ, ಪಕ್ಕಾ ಪ್ಲ್ಯಾನ್​​: ಕೆಜಿಗಟ್ಟಲೆ ಚಿನ್ನ ಕದ್ದು ಎಸ್ಕೇಪ್​
ಮೆಕ್ಸಿಕೋದಲ್ಲಿ ಹಳಿ ತಪ್ಪಿದ ರೈಲು, 13 ಮಂದಿ ಸಾವು, ಹಲವರಿಗೆ ಗಾಯ
ಮೆಕ್ಸಿಕೋದಲ್ಲಿ ಹಳಿ ತಪ್ಪಿದ ರೈಲು, 13 ಮಂದಿ ಸಾವು, ಹಲವರಿಗೆ ಗಾಯ
ಭೀಕರ ಅವಘಡದಿಂದ ಆಟಗಾರರು ಕೂದಲೆಳೆಯ ಅಂತರದಲ್ಲಿ ಪಾರು..!
ಭೀಕರ ಅವಘಡದಿಂದ ಆಟಗಾರರು ಕೂದಲೆಳೆಯ ಅಂತರದಲ್ಲಿ ಪಾರು..!
ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಲಾರಿ
ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಲಾರಿ
ಕತ್ರಿಗುಪ್ಪೆಯಲ್ಲಿ ಗ್ಯಾಂಗ್​ ವಾರ್, ಲಾಂಗು ಮಚ್ಚಿನ ಹೊಡೆತಕ್ಕೆ ಕಾರು ಪೀಸ್!
ಕತ್ರಿಗುಪ್ಪೆಯಲ್ಲಿ ಗ್ಯಾಂಗ್​ ವಾರ್, ಲಾಂಗು ಮಚ್ಚಿನ ಹೊಡೆತಕ್ಕೆ ಕಾರು ಪೀಸ್!
ಬಿಜೆಪಿ ಶಾಸಕ ಶರಣು ಸಲಗರ ವಿರುದ್ಧ ಎಫ್ಐಆರ್ ದಾಖಲು
ಬಿಜೆಪಿ ಶಾಸಕ ಶರಣು ಸಲಗರ ವಿರುದ್ಧ ಎಫ್ಐಆರ್ ದಾಖಲು