AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಟ್ಟೇರಿತು ಶಶಿಕುಮಾರ್ ಮಗನ ಮೂರನೇ ಸಿನಿಮಾ; ಹೆಸರು ಬದಲಿಸಿಕೊಂಡ ಯುವ ನಟ

ಧುವನ್ ಫಿಲ್ಮ್ಸ್​ ಲಾಂಛನದಲ್ಲಿ ಅಖಿಲೇಶ್ ‘ರಾಶಿ’ ಸಿನಿಮಾ ನಿರ್ಮಾಣ ಆಗುತ್ತಿದ್ದು, ವಿಜಯ್ ಪಾಳೇಗಾರ್ ನಿರ್ದೇಶನ ಮಾಡುತ್ತಿದ್ದಾರೆ. ಲವ್​ಸ್ಟೋರಿ ಕಥಾ ಹಂದರದ ಈ ಚಿತ್ರಕ್ಕೆ ಹಲವು ಗಣ್ಯರು ಸಾಥ್ ನೀಡಿದ್ದಾರೆ. ಆದಿತ್ಯ ಅವರ ಹುಟ್ಟುಹಬ್ಬದ ದಿನ ಈ ಚಿತ್ರದ ಶೀರ್ಷಿಕೆ ಅನಾವರಣಗೊಂಡಿದೆ ಅನ್ನೋದು ವಿಶೇಷ.

ಸೆಟ್ಟೇರಿತು ಶಶಿಕುಮಾರ್ ಮಗನ ಮೂರನೇ ಸಿನಿಮಾ; ಹೆಸರು ಬದಲಿಸಿಕೊಂಡ ಯುವ ನಟ
ಶಶಿಕುಮಾರ್
ರಾಜೇಶ್ ದುಗ್ಗುಮನೆ
|

Updated on: Sep 21, 2024 | 10:55 AM

Share

ನಟ ಶಶಿಕುಮಾರ್ ಅವರು ಚಿತ್ರರಂಗದಲ್ಲಿ ಸಾಕಷ್ಟು ಹೆಸರು ಮಾಡಿದವರು. ಈಗ ಅವರು ಪೋಷಕ ಪಾತ್ರಗಳ ಮೂಲಕ ಸ್ಯಾಂಡಲ್​ವುಡ್​ನಲ್ಲಿ ಗುರುತಿಸಿಕೊಂಡಿದ್ದಾರೆ. ಈಗ ಅವರ ಮಗ ಆದಿತ್ಯ ಅವರು ನಟನಾಗಿ ಗುರುತಿಸಿಕೊಳ್ಳುವ ಪ್ರಯತ್ನದಲ್ಲಿ ಇದ್ದಾರೆ. ಅವರು ಹೀರೋ ನಟಿಸುತ್ತಿರುವ ನೂತನ ಚಿತ್ರದ ಶೀರ್ಷಿಕೆ ಅನಾವರಣ ಆಗಿದೆ. ಈ ಚಿತ್ರಕ್ಕೆ ‘ರಾಶಿ’ ಎನ್ನುವ ಟೈಟಲ್ ಇಡಲಾಗಿದೆ.

ಧುವನ್ ಫಿಲ್ಮ್ಸ್​ ಲಾಂಛನದಲ್ಲಿ ಅಖಿಲೇಶ್ ‘ರಾಶಿ’ ಸಿನಿಮಾ ನಿರ್ಮಾಣ ಆಗುತ್ತಿದ್ದು, ವಿಜಯ್ ಪಾಳೇಗಾರ್ ನಿರ್ದೇಶನ ಮಾಡುತ್ತಿದ್ದಾರೆ. ಲವ್​ಸ್ಟೋರಿ ಕಥಾ ಹಂದರದ ಈ ಚಿತ್ರಕ್ಕೆ ಹಲವು ಗಣ್ಯರು ಸಾಥ್ ನೀಡಿದ್ದಾರೆ. ಆದಿತ್ಯ ಅವರ ಹುಟ್ಟುಹಬ್ಬದ ದಿನ ಈ ಚಿತ್ರದ ಶೀರ್ಷಿಕೆ ಅನಾವರಣಗೊಂಡಿದೆ ಅನ್ನೋದು ವಿಶೇಷ. ಚಿತ್ರದ ನಾಯಕಿ ಆಗಿ ಸಮೀಕ್ಷಾ ನಟಿಸುತ್ತಿದ್ದಾರೆ.

ನಟ ಶಶಿಕುಮಾರ್, ರಾಜ್ಯಸಭಾ ಸದಸ್ಯರು ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿಯ ಕಾರ್ಯಾಧ್ಯಕ್ಷರಾದ ಜಿ.ಎಸ್.ಚಂದ್ರಶೇಖರ್, ಬೆಂಗಳೂರು ಪೊಲೀಸ್ ಉಪ ಆಯುಕ್ತ ಸಿದ್ದರಾಜು, ಮಂಡ್ಯ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಎಸ್. ಚಿದಂಬರ್ ಸೇರಿದಂತೆ ಅನೇಕ ಗಣ್ಯರು ಈ ಚಿತ್ರದ ಶೀರ್ಷಿಕೆ ಅನಾವರಣ ಮಾಡಿದ್ದಾರೆ. ಜೊತೆಗೆ ಆದಿತ್ಯಗೆ ಶುಭಕೋರಿದ್ದಾರೆ.

ಆದಿತ್ಯ ಶಶಿಕುಮಾರ್ ಅವರು ಹೀರೋ ಆಗಿ ನಟಿಸುತ್ತಿರುವ ಮೂರನೇ ಸಿನಿಮಾ ಇದು. ಈ ಚಿತ್ರದ ಬಗ್ಗೆ ಅವರಿಗೆ ನಂಬಿಕೆ ಇದೆ. ಇಷ್ಟು ದಿನ ಅಕ್ಷಿತ್ ಶಶಿಕುಮಾರ್ ಆಗಿದ್ದ ಅವರು ಈಗ ಆದಿತ್ಯ ಶಶಿಕುಮಾರ್ ಎಂದು ಹೆಸರು ಬದಲಿಸಿಕೊಂಡಿದ್ದಾರೆ. ‘ಇನ್ನು ಮುಂದೆ ಎಲ್ಲರೂ ಆದಿತ್ಯ ಶಶಿಕುಮಾರ್ ಎಂದೇ ಕರೆಯಬೇಕೆಂದು’ ಎಂದು ಮನವಿ ಮಾಡಿದರು.

ಇದನ್ನೂ ಓದಿ: ‘ಕಾದಾಡಿ’ ಸಿನಿಮಾದ ಐಟಂ ಸಾಂಗ್​ನಲ್ಲಿ ಆದಿತ್ಯ ಶಶಿಕುಮಾರ್, ಸೋನಿ ಸಖತ್ ಡ್ಯಾನ್ಸ್

ಅಖಿಲೇಶ್ ನಿರ್ಮಾಣ ಮಾಡುವುದರ ಜೊತೆಗೆ ಚಿತ್ರಕ್ಕೆ ಕಥೆ ಕೂಡ ಅವರದ್ದೇ. ಚಿತ್ರಕ್ಕೆ ಗೀತರಚನೆ ಮಾಡಿರುವ ವಿಜಯ್ ಪಾಳೇಗಾರ ಅವರು ಸಂಗೀತ ಸಂಯೋಜನೆ ಕೂಡ ಮಾಡಿದ್ದಾರೆ. ಈ ಮೊದಲು ‘ಟ್ರಿಗರ್’ ಹೆಸರಿನ ಚಿತ್ರವನ್ನು ಅವರು ನಿರ್ದೇಶನ ಮಾಡಿದ್ದರು. ಚಿತ್ರಕ್ಕೆ ಅಭಿನಂದನ್ ದೇಶಪ್ರಿಯ ಸಂಭಾಷಣೆ, ನವೀನ್ ಸೂರ್ಯ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ‌, ಮಂಜು ಮಹದೇವ್ ಹಿನ್ನೆಲೆ ಸಂಗೀತ ಹಾಗೂ ಬಂಡೆ ಚಂದ್ರು ಅವರ ಸಾಹಸ ನಿರ್ದೇಶನ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ