AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಳು ಚಿತ್ರರಂಗಕ್ಕೆ ಕಾಲಿಟ್ಟ ಗಣೇಶ್ ಪತ್ನಿ ಶಿಲ್ಪಾ ಗಣೇಶ್

Shilpa Ganesh: ಗೋಲ್ಡನ್ ಸ್ಟಾರ್ ಗಣೇಶ್ ಪತ್ನಿ ಶಿಲ್ಪಾ ಗಣೇಶ್ ಈಗಾಗಲೇ ಕನ್ನಡದಲ್ಲಿ ಕೆಲವು ಸಿನಿಮಾಗಳ ನಿರ್ಮಾಣ ಮಾಡಿದ್ದಾರೆ. ಆದರೆ ಈಗ ಮೊದಲ ಬಾರಿಗೆ ತುಳು ಸಿನಿಮಾ ನಿರ್ಮಾಣಕ್ಕೆ ಮುಂದಾಗಿದ್ದಾರೆ.

ತುಳು ಚಿತ್ರರಂಗಕ್ಕೆ ಕಾಲಿಟ್ಟ ಗಣೇಶ್ ಪತ್ನಿ ಶಿಲ್ಪಾ ಗಣೇಶ್
ಮಂಜುನಾಥ ಸಿ.
|

Updated on: Oct 24, 2024 | 7:56 AM

Share

ಗೋಲ್ಡನ್ ಸ್ಟಾರ್ ಗಣೇಶ್ ಕನ್ನಡ ಚಿತ್ರರಂಗದ ಜನಪ್ರಿಯ ನಟ. ಈಗ ಅವರ ಪತ್ನಿ ಶಿಲ್ಪಾ ಗಣೇಶ್ ತುಳು ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ. ಈ ಹಿಂದೆ ಗಣೇಶ್ ನಟನೆಯ ಕೆಲವು ಸಿನಿಮಾಗಳನ್ನು ನಿರ್ಮಾಣ ಮಾಡಿರುವ ಶಿಲ್ಪಾ ಗಣೇಶ್ ಈಗ ಮೊದಲ ಬಾರಿಗೆ ತುಳು ಸಿನಿಮಾಣಕ್ಕೆ ಕೈ ಹಾಕಿದ್ದಾರೆ. ಸ್ವತಃ ಮಂಗಳೂರು ಮೂಲದವರಾದ ಶಿಲ್ಪಾ ಗಣೇಶ್ ತವರಿನಲ್ಲಿ ಸಿನಿಮಾ ಮಾಡುವ ಸಾಹಸ ಮಾಡುತ್ತಿದ್ದಾರೆ. ತುಳು ಸಿನಿಮಾಗಳಿಗೆ ಕಳೆದ ಕೆಲ ವರ್ಷಗಳಲ್ಲಿ ಮಾರುಕಟ್ಟೆ ದೊಡ್ಡದಾಗಿದ್ದು, ಅದರ ಲಾಭ ಪಡೆಯುವ ಆಲೋಚನೆ ಶಿಲ್ಪಾ ಗಣೇಶ್ ಅವರದ್ದು.

ಉತ್ತಮ ಬಜೆಟ್​ನಲ್ಲಿ ಗುಣಮಟ್ಟದ ಸಿನಿಮಾ ನಿರ್ಮಾಣ ಮಾಡುವ ಉದ್ದೇಶದಿಂದ ಪ್ರಾಜೆಕ್ಟ್​ಗೆ ಕೈ ಹಾಕಿದ್ದು, ಸಿನಿಮಾವನ್ನು ಸಂದೀಪ್ ಬೆದ್ರ ನಿರ್ದೇಶನ ಮಾಡಲಿದ್ದಾರೆ. ಸಿನಿಮಾಕ್ಕೆ ಕತೆ ಹಾಗೂ ಚಿತ್ರಕತೆಯನ್ನು ಮೋಹನ್ ಭಟ್ಕಳ್ ಬರೆದಿದ್ದಾರೆ. ಜನಪ್ರಿಯ ಕ್ಯಾಮೆರಾಮನ್ ಹಾಗೂ ನಿರ್ದೇಶಕ ಸಂತೋಶ್ ರೈ ಪತಾಜೆ ಅವರು ಈ ಸಿನಿಮಾಕ್ಕೆ ಕ್ಯಾಮೆರಾ ಕೆಲಸ ಮಾಡಲಿದ್ದಾರೆ. ಗಟ್ಟಿಯಾದ ತಂತ್ರಜ್ಞರನ್ನೇ ಶಿಲ್ಪಾ ಗಣೇಶ್ ಅವರು ತಮ್ಮ ಮೊದಲ ತುಳು ಸಿನಿಮಾಕ್ಕೆ ಆಯ್ಕೆ ಮಾಡಿಕೊಂಡಿದ್ದಾರೆ.

ಸಿನಿಮಾದ ನಾಯಕನಾಗಿ ಕರಾವಳಿ ಭಾಗದ ಬಿಜೆಪಿ ಹಾಗೂ ಬಿಲ್ಲವ ಸಮುದಾಯದ ಮುಖಂಡರೂ ಆಗಿರುವ ಹರಿಕೃಷ್ಣ ಬಂಟ್ವಾಳ ಅವರ ಪುತ್ರ ನಿತ್ಯ ಪ್ರಕಾಶ್ ಬಂಟ್ವಾಳ ನಟಿಸಲಿದ್ದಾರೆ. ನಾಯಕಿಯಾಗಿ ಹೊಸ ಮುಖವನ್ನು ಪರಿಚಯ ಮಾಡುವ ಉಮೇದಿನಲ್ಲಿದ್ದಾರೆ ಶಿಲ್ಪಾ ಗಣೇಶ್. ಸಿನಿಮಾದ ಕತೆ, ಚಿತ್ರಕತೆ, ತಂತ್ರಜ್ಞರು ಅಂತಿಮವಾಗಿದ್ದು, ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕಾರ್ಯಗಳು ಚಾಲ್ತಿಯಲ್ಲಿವೆ. ಸಿನಿಮಾದ ಚಿತ್ರೀಕರಣ ಡಿಸೆಂಬರ್ ತಿಂಗಳಲ್ಲಿ ಪ್ರಾರಂಭ ಆಗಲಿದ್ದು, ನಟ ಗೋಲ್ಡನ್ ಸ್ಟಾರ್ ಗಣೇಶ್ ಅತಿಥಿ ಪಾತ್ರದಲ್ಲಿ ನಟಿಸುವ ಸಾಧ್ಯತೆಯೂ ಇದೆ.

ಇದನ್ನೂ ಓದಿ:‘ಮುಂಗಾರು ಮಳೆ’ ಚಿತ್ರದ ಆಫರ್ ಗಣೇಶ್ ಕೈ ಸೇರಲು ಕಾರಣ ಆಗಿದ್ದೇ ಪುನೀತ್ ರಾಜ್​ಕುಮಾರ್

ಸಿನಿಮಾ ಕೌಟುಂಬಿಕ ಕತೆಯನ್ನು ಒಳಗೊಂಡಿದ್ದು, ಹಾಸ್ಯ ಪ್ರಧಾನ ಆಗಿರಲಿದೆ. ಮಂಗಳೂರು, ಉಡುಪಿ, ಮೂಡುಬಿದಿರೆ, ಬಂಟ್ವಾಳ ಸೇರಿದಂತೆ ಕರಾವಳಿ ಭಾಗದಲ್ಲಿ ಸಿನಿಮಾದ ಚಿತ್ರೀಕರಣ ನಡೆಯಲಿದೆ. ಚಿತ್ರದ ಹಾಡುಗಳನ್ನು ಕೆಲವು ಬೇರೆ ಲೊಕೇಶನ್​ಗಳಲ್ಲಿ ಚಿತ್ರೀಕರಣ ಮಾಡುವ ಉದ್ದೇಶ ಇದೆ ಎಂದು ನಿರ್ದೇಶಕ ಸಂದೀಪ್ ಹೇಳಿದ್ದಾರೆ. ಶಿಲ್ಪಾ ಗಣೇಶ್ ಮೂಲತಃ ಕರಾವಳಿಯವರು. ಉಡುಪಿ ಬಳಿಯ ಬಾರ್ಕೂರು ಅವರ ಹುಟ್ಟೂರು. ಹಾಗಾಗಿ ತಮ್ಮ ತವರು ಭಾಷೆಯಲ್ಲಿ ಸಿನಿಮಾ ನಿರ್ಮಾಣ ಮಾಡಬೇಕು ಎಂಬ ಆಸೆ ಮೊದಲಿನಿಂದಲೂ ಶಿಲ್ಪಾ ಅವರಿಗೆ ಇತ್ತಂತೆ ಹಾಗಾಗಿ ಈಗ ತುಳು ಸಿನಿಮಾ ನಿರ್ಮಾಣಕ್ಕೆ ಕೈ ಹಾಕಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ