AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ಬಾಸ್ ನಿಲ್ಲಿಸಿ, ಕೋರ್ಟ್ ಮೆಟ್ಟಿಲೇರಿದ ವೀಕ್ಷಕ, ನೊಟೀಸ್ ನೀಡಿದ ನ್ಯಾಯಾಲಯ

ಬಿಗ್​ಬಾಸ್ ಕನ್ನಡ ಸೀಸನ್ 11 ಆರಂಭವಾದಾಗಿನಿಂದಲೂ ಒಂದಲ್ಲ ಒಂದು ವಿವಾದಕ್ಕೆ ಗುರಿ ಆಗುತ್ತಲೇ ಇದೆ. ಈ ಹಿಂದೆ ಮಹಿಳಾ ಆಯೋಗ, ಮಾನವಹ ಹಕ್ಕು ಆಯೋಗಗಳು ಬಿಗ್​ಬಾಸ್​ಗೆ ನೊಟೀಸ್​ಗೆ ನೀಡಿದ್ದವು. ಈಗ ಬಿಗ್​ಬಾಸ್ ಶೋ ಅನ್ನು ನಿಲ್ಲಿಸಬೇಕೆಂದು ವಕೀಲರೊಬ್ಬರು ಅರ್ಜಿ ಹೂಡಿದ್ದು, ನ್ಯಾಯಾಲಯವು ಬಿಗ್​ಬಾಸ್​ಗೆ ನೊಟೀಸ್ ನೀಡಿದೆ.

ಬಿಗ್​ಬಾಸ್ ನಿಲ್ಲಿಸಿ, ಕೋರ್ಟ್ ಮೆಟ್ಟಿಲೇರಿದ ವೀಕ್ಷಕ, ನೊಟೀಸ್ ನೀಡಿದ ನ್ಯಾಯಾಲಯ
Basavaraj Yaraganavi
| Edited By: |

Updated on: Oct 18, 2024 | 3:17 PM

Share

ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಕನ್ನಡದ ಕಿರುತೆರೆಯ ಅತೀ ದೊಡ್ಡ ರಿಯಾಲಿಟಿ ಶೋ ಗಳಲ್ಲಿ ಒಂದಾದ ಕನ್ನಡ ಚಿತ್ರರಂಗದ ಮಾಣಿಕ್ಯ ಕಿಚ್ಚ ಸುದೀಪ್ ಹೋಸ್ಟ್ ಮಾಡುತ್ತಿರುವ ಬಿಗ್ ಬಾಸ್ 11 ನೇ ಸೀಸನ್ ಗೆ ಒಂದಲ್ಲ ಒಂದು ಸಂಕಷ್ಟ ಎದುರಾಗುತ್ತಲೇ ಇದೆ. ಬಿಗ್ ಬಾಸ್ 11 ನೇ ಸೀಸನ್ ಪ್ರಾರಂಭವಾಗಿ ಇಂದಿಗೆ 19 ದಿನ ಕಳೆದಿದೆ ಈ ನಡುವೆ ಬಿಗ್ ಬಾಸ್ ಕಾರ್ಯಕ್ರಮದ ವಿರುದ್ಧ ಅನೇಕ ಅರೋಪ ಕೇಳು ಬಂದಿದ್ದು ಕಳೆದ ವಾರ . ‘ಬಿಗ್ ಬಾಸ್’ ಮನೆಯಲ್ಲಿ ಮಹಿಳಾ ಸ್ಪರ್ಧಿಗಳ ಖಾಸಗಿತನಕ್ಕೆ ಧಕ್ಕೆಯಾಗಿದೆ ಅಂತ ಮಹಿಳಾ ಆಯೋಗಕ್ಕೆ ಪತ್ರದ ಮೂಲಕ ವಕೀಲೆ ದೂರು ನೀಡಿದ್ದರು . ಇನ್ನೂ ಇದೇ ಶೋನಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ ಎಂದು ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಕೆಯಾಗಿತ್ತು. ಈ ಹಿನ್ನೆಲೆಯಲ್ಲಿ ಬಿಗ್ ಬಾಸ್ ತಂಡ ಎಚ್ಚೆತ್ತುಕೊಂಡು ಈ ಬಾರಿಯ ನರಕ-ಸ್ವರ್ಗ ಎಂಬ ಪರಿಕಲ್ಪನೆಯನ್ನು ಅರ್ಧಕ್ಕೆ ನಿಲ್ಲಿಸಿ ಎಲ್ಲಾ ಸ್ಪರ್ಧಿಗಳನ್ನು ಒಂದೇ ಮನೆಯಲ್ಲಿ ಇರುವ ಅವಕಾಶ ಕಲ್ಪಿಸಿಕೊಡಲಾಗಿದೆ.

ಸಂಕಷ್ಟಗಳಿಂದ ಮುಕ್ತಿಗೊಂಡಿದೆ ಎಂದುಕೊಂಡಿದ್ದ ಕಲರ್ಸ್ ಕನ್ನಡ ತಂಡಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದೆ. ಬಿಗ್ ಬಾಸ್ 11 ನೇ ಸೀಸನ್ ಪ್ರಸಾರವನ್ನು ಖಾಯಂ ಅಗಿ ರದ್ದುಪಡಿಸುವಂತೆ ಶಿವಮೊಗ್ಗ ಜಿಲ್ಲೆಯ ಸಾಗರದ ಮಾನ್ಯ ಪ್ರಧಾನ ವ್ಯವಹಾರ ನ್ಯಾಯಾಧೀಶರ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲಾಗಿದೆ.

ಇದನ್ನೂ ಓದಿ:ಬಿಗ್​ಬಾಸ್​ನಿಂದ ಹೊರಬಂದು ಕೆಲವರಿಗೆ ಕ್ಷಮೆ ಕೇಳಿದ ಜಗದೀಶ್

ಕನ್ನಡ ಕಲರ್ಸ್ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಬಿಗ್ ಬಾಸ್ 11 ನೇ ಸೀಸನ್ ವಿರುದ್ಧ ಶಿವಮೊಗ್ಗ ಜಿಲ್ಲೆಯ ಸಾಗರದ ವಕೀಲ ಕೆ.ಎಲ್ ಭೋಜರಾಜ್ ಎಂಬವರು ವ್ಯವಹಾರ ಪ್ರಕ್ರಿಯಾ ಸಂಹಿತೆ ಆದೇಶ 39 ನಿಯಮ 1 ಮತ್ತು 2 ರೆಡ್ ವಿತ್ ಸೆಕ್ಷನ್ 151ರ ಪ್ರಕಾರ ಅರ್ಜಿ ಸಲ್ಲಿಸಿದ್ದು ನ್ಯಾಯಾಧೀಶರಾದ ಚಾಂದಿನಿ ಜಿ.ಯು ರವರು ವಕೀಲ ಕೆ.ಎಲ್ ಭೋಜರಾಜ್ ರವರ ಅರ್ಜಿ ಕೈಗೆತ್ತಿಕೊಂಡಿದ್ದು ಸಿವಿಲ್ ಕಾರ್ಯವಿಧಾನದ ಕೋಡ್ ಕಾಯಿದೆ U/sec.26,order7,rule1 ಅಡಿಯಲ್ಲಿ ಕಲರ್ಸ್ ಕನ್ನಡ ವಾಹಿನಿಯ ನಿರ್ಮಾಪಕರ ಹಾಗೂ ಸಂಪಾದಕರಿಗೆ ತುರ್ತು ನೋಟಿಸ್ ನೀಡಿದ್ದಾರೆ. ಅರ್ಜಿಯ ಮುಂದಿನ ವಿಚಾರಣೆ ಅಕ್ಟೋಬರ್ 28 ರಂದು ನಡೆಯಲಿದೆ.

ಒಟ್ಟಾರೆ ಕನ್ನಡ ಚಿತ್ರರಂಗದ ಮಾಣಿಕ್ಯ ಕಿಚ್ಚ ಸುದೀಪ್ ಹೋಸ್ಟ್ ಮಾಡುತ್ತಿರುವ ಕನ್ನಡ ಕಿರುತೆರೆಯ ಅತೀ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಈ ರೀತಿ ಒಂದಿಲ್ಲ ಒಂದು ಸಂಕಷ್ಟಗಳು ಎದುರಿಸುತ್ತಿದ್ದು ಈ ಬಾರಿಯ ಬಿಗ್ ಬಾಸ್ 11ನೇ ಸೀಸನ್ ಖಾಯಂ ರದ್ದು ಅಗುತ್ತ ಕಾದು ನೋಡಬೇಕಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ