Bhajarangi 2: ಟ್ವಿಟರ್​ನಲ್ಲಿ ಟ್ರೆಂಡ್ ಆದ ‘ಭಜರಂಗಿ 2’; ಬಿಡುಗಡೆಗೂ ಮುನ್ನವೇ ಸಖತ್ ಕ್ರೇಜ್ ಹುಟ್ಟುಹಾಕಿದ ಚಿತ್ರ

| Updated By: shivaprasad.hs

Updated on: Oct 27, 2021 | 12:37 PM

Bhajarangi 2 Twitter Trend: ಸ್ಯಾಂಡಲ್​ವುಡ್ ನಟ ಶಿವರಾಜ್ ಕುಮಾರ್ ಅಭಿನಯದ ಬಹುನಿರೀಕ್ಷಿತ ‘ಭಜರಂಗಿ 2’ ಚಿತ್ರ ಸಖತ್ ಸದ್ದು ಮಾಡುತ್ತಿದೆ. ಬಿಡುಗಡೆಗೂ ಮುನ್ನವೇ ಟ್ವಿಟರ್​ನಲ್ಲಿ Bhajarangi 2 ಹ್ಯಾಷ್ ಟ್ಯಾಗ್ ಟ್ರೆಂಡ್ ಆಗಿದೆ.

Bhajarangi 2: ಟ್ವಿಟರ್​ನಲ್ಲಿ ಟ್ರೆಂಡ್ ಆದ ‘ಭಜರಂಗಿ 2’; ಬಿಡುಗಡೆಗೂ ಮುನ್ನವೇ ಸಖತ್ ಕ್ರೇಜ್ ಹುಟ್ಟುಹಾಕಿದ ಚಿತ್ರ
‘ಭಜರಂಗಿ 2’ ಚಿತ್ರದಲ್ಲಿ ಶಿವರಾಜ್ ಕುಮಾರ್
Follow us on

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ (Shivaraj kumar) ಅಭಿನಯದ ‘ಭಜರಂಗಿ 2’ ಚಿತ್ರ ಬಿಡುಗಡೆಗೂ ಮುನ್ನವೇ ಬುದೊಡ್ಡ ಕ್ರೇಜ್ ಹುಟ್ಟುಹಾಕಿದೆ. ಅಲ್ಲದೇ ಈ ಚಿತ್ರದ ಬಗ್ಗೆ ಅಭಿಮಾನಿಗಳಲ್ಲಿ ಬಹುದೊಡ್ಡ ನಿರೀಕ್ಷೆ ಇದ್ದು, ಅದಕ್ಕೆ ಸಾಕ್ಷಿ ಎಂಬಂತೆ ಟ್ವಿಟರ್​ನಲ್ಲಿ ಭಾರತದ ಮಟ್ಟದಲ್ಲಿ Bhajarangi 2 ಹ್ಯಾಷ್ ಟ್ಯಾಗ್ ಟ್ರೆಂಡ್ ಆಗಿದೆ. ಈವರೆಗೆ ಸುಮಾರು ಭಜರಂಗಿ 2 ಚಿತ್ರದ ಹ್ಯಾಷ್ ಟ್ಯಾಗ್​ನಲ್ಲಿ 9,300ಕ್ಕೂ ಅಧಿಕ ಟ್ವೀಟ್​ಗಳನ್ನು ಮಾಡಲಾಗಿದ್ದು, ಈ ಸಂಖ್ಯೆ ಕ್ಷಣದಿಂದ ಕ್ಷಣಕ್ಕೆ ಹೆಚ್ಚಾಗುತ್ತಿದೆ. ನಿನ್ನೆಯಷ್ಟೇ (ಅಕ್ಟೋಬರ್ 26) ಚಿತ್ರತಂಡದ ಪ್ರಿ- ರಿಲೀಸ್ ಈವೆಂಟ್ ಅದ್ದೂರಿಯಾಗಿ ನಡೆದಿದ್ದು, ರಾಕಿಂಗ್ ಸ್ಟಾರ್ ಯಶ್ ಹಾಗೂ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಭಾಗವಹಿಸಿ ಚಿತ್ರಕ್ಕೆ ಶುಭಹಾರೈಸಿದ್ದಾರೆ. ಕಾರ್ಯಕ್ರಮದ ತುಣುಕುಗಳೂ ಕೂಡ ಅಂತರ್ಜಾಲದಲ್ಲಿ ಸಖತ್ ಸದ್ದು ಮಾಡುತ್ತಿದ್ದು, ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ಚಿತ್ರವು ಅಕ್ಟೋಬರ್ 29ರ ಶುಕ್ರವಾರ ರಾಷ್ಟ್ರಾದ್ಯಂತ ಬಿಡುಗಡೆಯಾಗಲಿದೆ. 

ಚಿತ್ರವನ್ನು ‘ಜಯಣ್ಣ ಫಿಲ್ಮ್ಸ್’ ಬ್ಯಾನರ್​ನಲ್ಲಿ ನಿರ್ಮಿಸಲಾಗಿದ್ದು, ಎ.ಹರ್ಷ ನಿರ್ದೇಶಿಸಿದ್ದಾರೆ. ಶಿವರಾಜ್ ಕುಮಾರ್ ಹಾಗೂ ಹರ್ಷ ಕಾಂಬಿನೇಷನ್​ನಲ್ಲಿ ಮುಡಿಬರುತ್ತಿರುವ ಮೂರನೇ ಚಿತ್ರ ಇದಾಗಿದೆ. ಈಗಾಗಲೇ ಚಿತ್ರದ ಟ್ರೈಲರ್ ಹಾಗೂ ಹಾಡುಗಳು ಎಲ್ಲರ ಮನಗೆದ್ದಿದ್ದವು. ಇದೀಗ ಚಿತ್ರತಂಡ ‘ವೈದ್ಯೋ ನಾರಾಯಣ ಹರಿಃ’ ಎಂಬ ಮತ್ತೊಂದು ಹಾಡನ್ನು ಬಿಡುಗಡೆ ಮಾಡಿದ್ದು, ಕೇಳುಗರನ್ನು ಮೋಡಿ ಮಾಡಿದೆ. ಡಾ.ವಿ.ನಾಗೇಂದ್ರ ಪ್ರಸಾದ್ ಸಾಹಿತ್ಯಕ್ಕೆ, ವಿಜಯ್ ಪ್ರಕಾಶ್ ದನಿಯಾಗಿದ್ದಾರೆ. ಸಂಪೂರ್ಣವಾಗಿ ಭಿನ್ನವಾಗಿರುವ ಈ ಹಾಡು, ನೋಡುಗರಿಗೆ ಪ್ರಿಯವಾಗಿದೆ.

ಫ್ಯಾನ್ಸ್ ಮನಗೆದ್ದ ವಿಜಯ್ ಪ್ರಕಾಶ್ ಹಾಡಿರುವ ‘ವೈದ್ಯೋ ನಾರಾಯಣೋ ಹರಿಃ’ ಹಾಡು ಇಲ್ಲಿದೆ:

ಚಿತ್ರತಂಡವು ನಿನ್ನೆ (ಅಕ್ಟೋಬರ್ 26) ನಡೆಸಿದ ಪ್ರಿ- ರಿಲೀಸ್ ಈವೆಂಟ್​ನಲ್ಲಿ ಭಾಗವಹಿಸಿದ್ದ ಯಶ್ ಹಾಗೂ ಪುನೀತ್ ರಾಜಕುಮಾರ್ ಶಿವರಾಜ್ ಕುಮಾರ್ ಜೊತೆ ‘ಭಜರಂಗಿ 2’ ಚಿತ್ರದ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಈ ವಿಡಿಯೋ ಈಗ ವೈರಲ್ ಆಗಿದೆ. ಕಾರ್ಯಕ್ರಮದಲ್ಲಿ ಮಾತನಾಡಿದ ಶಿವರಾಜ್ ಕುಮಾರ್ ಯಶ್ ಅವರನ್ನು ಹೊಗಳಿದರು. ಹಾಗೆಯೇ ಯಶ್ ಹಾಗೂ ಪುನೀತ್ ರಾಜಕುಮಾರ್ ಮಾತನಾಡಿ ಚಿತ್ರಕ್ಕೆ ಶುಭ ಹಾರೈಸಿದರು.

ಶಿವರಾಜ್ ಕುಮಾರ್, ಯಶ್ ಹಾಗೂ ಪುನೀತ್ ನೃತ್ಯ ಮಾಡುತ್ತಿರುವ ವಿಡಿಯೋ ಇಲ್ಲಿದೆ:

ಹಿರಿಯ ನಟಿ ಶ್ರುತಿ, ಭಜರಂಗಿ ಲೋಕಿ, ಭಾವನಾ ಮೆನನ್​, ಶಿವರಾಜ್​ ಕೆ.ಆರ್​. ಪೇಟೆ, ಚೆಲುವ ರಾಜು ಮುಂತಾದವರು ಅಭಿನಯಿಸಿದ್ದಾರೆ. ಈ ಚಿತ್ರಕ್ಕೆ ಅರ್ಜುನ್​ ಜನ್ಯ ಸಂಗೀತ ನಿರ್ದೇಶನ ನೀಡಿದ್ದು, ರಘು ನಿಡುವಳ್ಳಿ ಸಂಭಾಷಣೆ ಬರೆದಿದ್ದಾರೆ. ಸ್ವಾಮಿ ಜೆ. ಗೌಡ ಛಾಯಾಗ್ರಹಣ, ದೀಪು ಎಸ್​. ಕುಮಾರ್​ ಸಂಕಲನ ಚಿತ್ರಕ್ಕಿದೆ.

ಇದನ್ನೂ ಓದಿ:

Bhajarangi 2 Trailer: ‘ಭಜರಂಗಿ 2’ ಟ್ರೇಲರ್ ಮೂಲಕ ಮೋಡಿ ಮಾಡಿದ ಶಿವರಾಜ್​ಕುಮಾರ್​; ದುಪ್ಪಟ್ಟಾಯಿತು ನಿರೀಕ್ಷೆ

Shiva Rajkumar: ಯಶ್​ರನ್ನು ಹಾಡಿಹೊಗಳಿದ ಶಿವಣ್ಣ; ವಿಡಿಯೋ ನೋಡಿ

Published On - 12:35 pm, Wed, 27 October 21