AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಲ್ಮಾನ್ ಖಾನ್ ಜೊತೆ ಶಿವಣ್ಣ ಸಿನಿಮಾ ಮಾಡ್ತಾರಾ? ಶಿವರಾಜ್​ಕುಮಾರ್ ಕೊಟ್ಟರು ಉತ್ತರ

ಕನ್ನಡದ ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಅಭಿನಯದ ‘ಒರಿಜಿನಲ್ ಮಾನ್ಸ್ಟರ್’ ಹಾಗೂ ಸಲ್ಮಾನ್ ಖಾನ್ ಅವರ ‘ಮಾನ್ಸ್ಟರ್’ ಸಿನಿಮಾಗಳ ನಡುವೆ ಯಾವುದೇ ಸ್ಪರ್ಧೆಯಿಲ್ಲ ಎಂದು ಶಿವಣ್ಣ ಸ್ಪಷ್ಟಪಡಿಸಿದ್ದಾರೆ. ಎರಡೂ ಸಿನಿಮಾಗಳ ಶೀರ್ಷಿಕೆಗಳು ಒಂದೇ ರೀತಿಯಲ್ಲಿದ್ದರೂ, ಕಥಾಹಂದರ ಸಂಪೂರ್ಣ ವಿಭಿನ್ನವಾಗಿದೆ ಎಂದು ಅವರು ಕಾರ್ಯಕ್ರಮದಲ್ಲಿ ತಿಳಿಸಿದ್ದಾರೆ.

ಸಲ್ಮಾನ್ ಖಾನ್ ಜೊತೆ ಶಿವಣ್ಣ ಸಿನಿಮಾ ಮಾಡ್ತಾರಾ? ಶಿವರಾಜ್​ಕುಮಾರ್ ಕೊಟ್ಟರು ಉತ್ತರ
ಶಿವಣ್ಣ-ಸಲ್ಮಾನ್
ರಾಜೇಶ್ ದುಗ್ಗುಮನೆ
|

Updated on: Aug 31, 2026 | 11:02 AM

Share

ಮುಖ್ಯಾಂಶಗಳು

  • ಮಾನ್ಸ್ಟರ್ ಶೀರ್ಷಿಕೆ ಗೊಂದಲಕ್ಕೆ ತೆರೆ ಎಳೆದ ಶಿವಣ್ಣ
  • ಸಲ್ಮಾನ್ ಖಾನ್ ಜೊತೆ ನಟಿಸುವ ಇಂಗಿತ ವ್ಯಕ್ತಪಡಿಸಿದ ಶಿವರಾಜ್‌ಕುಮಾರ್
  • ಪ್ಯಾನ್ ಇಂಡಿಯಾ ಮಟ್ಟದಲ್ಲಿ ಧೂಳೆಬ್ಬಿಸಲು ಸಜ್ಜಾದ 'ಒರಿಜಿನಲ್ ಮಾನ್ಸ್ಟರ್' 

ಕನ್ನಡದ ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ (Shivarajkumar) ತಮ್ಮ ಮುಂಬರುವ ‘ಒರಿಜಿನಲ್ ಮಾನ್ಸ್ಟರ್’ ಚಿತ್ರದ ಬಗ್ಗೆ ಮಾತನಾಡಿದ್ದಾರೆ. ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ‘ಮಾನ್ಸ್ಟರ್’ ಚಿತ್ರಕ್ಕೂ ತಮ್ಮ ಸಿನಿಮಾಗೂ ಯಾವುದೇ ಸಂಬಂಧ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಎರಡೂ ಸಿನಿಮಾಗಳ ಶೀರ್ಷಿಕೆಗಳು ಒಂದೇ ರೀತಿಯಲ್ಲಿ ಇದ್ದರೂ ಕಥೆಗಳು ಸಂಪೂರ್ಣ ವಿಭಿನ್ನವಾಗಿವೆ ಎಂದಿದ್ದಾರೆ.

ಇತ್ತೀಚೆಗೆ ನಡೆದ ‘ಒರಿಜಿನಲ್ ಮಾನ್ಸ್ಟರ್’ ಚಿತ್ರದ ಶೀರ್ಷಿಕೆ ಅನಾವರಣ ಕಾರ್ಯಕ್ರಮದಲ್ಲಿ ಶಿವಣ್ಣ ಈ ವಿಷಯ ತಿಳಿಸಿದರು. ಇದು ಶಿವಣ್ಣ ಮತ್ತು ಸಲ್ಮಾನ್ ಖಾನ್ ನಡುವಿನ ಸ್ಪರ್ಧೆಯಲ್ಲ ಎಂದು ಅವರು ಹೇಳಿದ್ದಾರೆ. ನಾವಿಬ್ಬರೂ ಒಂದೇ ಎನ್ನುವ ಮೂಲಕ ಅವರು ಅಭಿಮಾನಿಗಳ ಸಂಶಯವನ್ನು ದೂರ ಮಾಡಿದ್ದಾರೆ.

ಇದೇ ವೇಳೆ ಭವಿಷ್ಯದಲ್ಲಿ ಸಲ್ಮಾನ್ ಖಾನ್ ಜೊತೆ ನಟಿಸುವ ಸುಳಿವನ್ನು ಕೂಡ ಶಿವರಾಜ್‌ಕುಮಾರ್ ನೀಡಿದ್ದಾರೆ. ‘ದೇವರ ಹಾಗೂ ಅಭಿಮಾನಿಗಳ ಆಶೀರ್ವಾದ ಇದ್ದರೆ ನಾವಿಬ್ಬರೂ ಸೇರಿ ಖಂಡಿತ ಸಿನಿಮಾ ಮಾಡುತ್ತೇವೆ’ ಎಂದು ಅವರು ತಿಳಿಸಿದ್ದಾರೆ. ಈ ಮಾತು ಚಿತ್ರಪ್ರೇಮಿಗಳಲ್ಲಿ ಭಾರೀ ಕುತೂಹಲ ಮೂಡಿಸಿವೆ.

‘ಒರಿಜಿನಲ್ ಮಾನ್ಸ್ಟರ್’ ಬಹುಭಾಷೆಯ ಆಕ್ಷನ್ ಸಿನಿಮಾ. ಈ ಚಿತ್ರವನ್ನು ಪ್ರಖ್ಯಾತ ನಿರ್ದೇಶಕ ಆರ್‌. ಚಂದ್ರು ನಿರ್ದೇಶಿಸುತ್ತಿದ್ದಾರೆ. ಆನಂದ್ ಪಂಡಿತ್ ಈ ಬಿಗ್ ಬಜೆಟ್ ಸಿನಿಮಾಗೆ ಬಂಡವಾಳ ಹೂಡುತ್ತಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ.

ಇದನ್ನೂ ಓದಿ: ಮತ್ತೆ ಲಾಯರ್ ಪಾತ್ರ ಮಾಡಿದ ಶಿವರಾಜ್​ಕುಮಾರ್; ‘ಮಹಾನ್’ ಸಿನಿಮಾದಲ್ಲಿ ನಟನೆ

ಇನ್ನೊಂದೆಡೆ ಸಲ್ಮಾನ್ ಖಾನ್ ಹಾಗೂ ವಂಶಿ ಪೈಡಿಪಲ್ಲಿ ಕಾಂಬಿನೇಷನ್‌ನಲ್ಲಿಯೂ ‘ಮಾನ್ಸ್ಟರ್’ ಸಿನಿಮಾ ಮೂಡಿಬರುತ್ತಿದೆ. ನಯನತಾರಾ ಈ ಸಿನಿಮಾದಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ. ದಿಲ್ ರಾಜು ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಈ ಸಿನಿಮಾ 2027ರ ಈದ್ ಹಬ್ಬದ ಸಮಯದಲ್ಲಿ ಬಿಡುಗಡೆಯಾಗುವ ಸಾಧ್ಯತೆಯಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
KPSC ಹಗರಣ: ಅಕ್ರಮದ ಹಣದಲ್ಲಿ ಆರೋಪಿಗಳಿಂದ ಪ್ಲೈಟ್ ಟಿಕೆಟ್​ ಬುಕ್ಕಿಂಗ್
KPSC ಹಗರಣ: ಅಕ್ರಮದ ಹಣದಲ್ಲಿ ಆರೋಪಿಗಳಿಂದ ಪ್ಲೈಟ್ ಟಿಕೆಟ್​ ಬುಕ್ಕಿಂಗ್
ಜಂಬೂಸವಾರಿ: ಮಹೇಂದ್ರ ಆನೆಯನ್ನು ಕ್ಯಾಪ್ಟನ್ ರೇಸ್​ನಿಂದ ಹೊರಗಿಟ್ಟಿದ್ದೇಕೆ?
ಜಂಬೂಸವಾರಿ: ಮಹೇಂದ್ರ ಆನೆಯನ್ನು ಕ್ಯಾಪ್ಟನ್ ರೇಸ್​ನಿಂದ ಹೊರಗಿಟ್ಟಿದ್ದೇಕೆ?
ಮೈಸೂರು ದಸರಾ 2026: ಗಜಪಡೆಗೆ ಸಿಡಿಮದ್ದು ತರಬೇತಿ
ಮೈಸೂರು ದಸರಾ 2026: ಗಜಪಡೆಗೆ ಸಿಡಿಮದ್ದು ತರಬೇತಿ
ದಾವಣಗೆರೆ ಸ್ಕ್ಯಾನಿಂಗ್ ಕೇಂದ್ರಗಳ ಮೇಲೆ ಭ್ರೂಣ ಲಿಂಗ ಪತ್ತೆ ಶಂಕೆ
ದಾವಣಗೆರೆ ಸ್ಕ್ಯಾನಿಂಗ್ ಕೇಂದ್ರಗಳ ಮೇಲೆ ಭ್ರೂಣ ಲಿಂಗ ಪತ್ತೆ ಶಂಕೆ
ಧರೆಗುರುಳಿದ ಬೃಹತ್ ಮರ, ಹೊಯ್ಸಳ ಪೊಲೀಸ್ ಕಾರು ಜಸ್ಟ್ ಮಿಸ್
ಧರೆಗುರುಳಿದ ಬೃಹತ್ ಮರ, ಹೊಯ್ಸಳ ಪೊಲೀಸ್ ಕಾರು ಜಸ್ಟ್ ಮಿಸ್
ಸ್ಟಿಂಗ್ ಆಪರೇಷನ್​​: ಪೆನ್‌ಡ್ರೈವ್​ ಪ್ರದರ್ಶಿಸಿ ಗಣಿಗ ರವಿ ಸ್ಫೋಟಕ ಆರೋಪ
ಸ್ಟಿಂಗ್ ಆಪರೇಷನ್​​: ಪೆನ್‌ಡ್ರೈವ್​ ಪ್ರದರ್ಶಿಸಿ ಗಣಿಗ ರವಿ ಸ್ಫೋಟಕ ಆರೋಪ
ಪಿಜಿಸಿಇಟಿ ಕೌನ್ಸಿಲಿಂಗ್ ವಿಳಂಬ: ಕೆಇಎ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ!
ಪಿಜಿಸಿಇಟಿ ಕೌನ್ಸಿಲಿಂಗ್ ವಿಳಂಬ: ಕೆಇಎ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ!
ಗಾನವಿ ಕೊಟ್ಟ ಕೌಂಟರ್​​ಗೆ ಸೈಲೆಂಟ್ ಆದ ತಾಂಡವ್ ರಾಮ್
ಗಾನವಿ ಕೊಟ್ಟ ಕೌಂಟರ್​​ಗೆ ಸೈಲೆಂಟ್ ಆದ ತಾಂಡವ್ ರಾಮ್
ಬೆಂಗಳೂರಿನಲ್ಲಿ ಭಕ್ತರ ಗಮನ ಸೆಳೆಯುತ್ತಿದೆ ಮಂತ್ರಾಲಯದ ಮಾದರಿಯ ಗಣೇಶ ಮಂಟಪ!
ಬೆಂಗಳೂರಿನಲ್ಲಿ ಭಕ್ತರ ಗಮನ ಸೆಳೆಯುತ್ತಿದೆ ಮಂತ್ರಾಲಯದ ಮಾದರಿಯ ಗಣೇಶ ಮಂಟಪ!
ಸಂಕೇಶ್ವರ: ಟಿಪ್ಪರ್​ಗೆ KSRTC ಬಸ್ ಡಿಕ್ಕಿ, ಚಾಲಕ ಸಾವು, 12 ಮಂದಿಗೆ ಗಾಯ
ಸಂಕೇಶ್ವರ: ಟಿಪ್ಪರ್​ಗೆ KSRTC ಬಸ್ ಡಿಕ್ಕಿ, ಚಾಲಕ ಸಾವು, 12 ಮಂದಿಗೆ ಗಾಯ