AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗೆ ಮರಳಲಿರುವ ಶಿವಣ್ಣ, ಅದ್ಧೂರಿ ಸ್ವಾಗತಕ್ಕೆ ಸಿದ್ಧತೆ

Shiva Rajkumar: ಆರೋಗ್ಯ ಚಿಕಿತ್ಸೆಗಾಗಿ ಅಮೆರಿಕಕ್ಕೆ ತೆರಳಿದ್ದ ನಟ ಶಿವರಾಜ್ ಕುಮಾರ್ ಅವರು 35 ದಿನಗಳ ನಂತರ ಬೆಂಗಳೂರಿಗೆ ಇಂದು ವಾಪಸ್ಸಾಗುತ್ತಿದ್ದಾರೆ. ಶಿವರಾಜ್ ಕುಮಾರ್ ಅವರನ್ನು ಸ್ವಾಗತಿಸಲು ಅಭಿಮಾನಿಗಳು, ಆತ್ಮೀಯರು ಸಕಲ ರೀತಿಯಲ್ಲಿ ಸಜ್ಜಾಗಿದ್ದಾರೆ. ವಿಮಾನ ನಿಲ್ದಾಣದಿಂದಲೇ ಶಿವಣ್ಣನಿಗೆ ಭಾರಿ ಅದ್ಧೂರಿ ಸ್ವಾಗತ ಸಿಗಲಿದೆ.

ಬೆಂಗಳೂರಿಗೆ ಮರಳಲಿರುವ ಶಿವಣ್ಣ, ಅದ್ಧೂರಿ ಸ್ವಾಗತಕ್ಕೆ ಸಿದ್ಧತೆ
Shiva Rajkumar
Follow us
ಮಂಜುನಾಥ ಸಿ.
|

Updated on:Jan 26, 2025 | 8:22 AM

ಒಂದು ತಿಂಗಳ ಹಿಂದೆ ಅನಾರೋಗ್ಯ ನಿಮಿತ್ತ ಚಿಕಿತ್ಸೆ ಪಡೆಯಲೆಂದು ಅಮೆರಕಕ್ಕೆ ತೆರಳಿದ್ದ ನಟ ಶಿವರಾಜ್ 35 ದಿನಗಳ ಬಳಿಕ ಇಂದು (ಜನವರಿ 26) ಬೆಂಗಳೂರಿಗೆ ವಾಪಸ್ಸಾಗುತ್ತಿದ್ದಾರೆ. ಅನಾರೋಗ್ಯದಿಂದ ಗುಣಮುಖರಾಗಿ ರಾಜ್ಯಕ್ಕೆ ವಾಪಸ್ಸಾಗುತ್ತಿರುವ ಶಿವರಾಜ್ ಕುಮಾರ್ ಅವರನ್ನು ಸ್ವಾಗತಿಸಲು ಅವರ ಅಭಿಮಾನಿಗಳು, ಸಿನಿಮಾ ಪ್ರೇಮಿಗಳು, ಆತ್ಮೀಯರು ಸಕಲ ರೀತಿಯಲ್ಲಿ ಸಜ್ಜಾಗಿದ್ದಾರೆ. ಶಿವಣ್ಣ ಅವರಿಗೆ ಭಾರಿ ಅದ್ಧೂರಿ ಸ್ವಾಗತವನ್ನು ಅಭಿಮಾನಿಗಳು, ಆತ್ಮೀಯರು ನೀಡಲಿದ್ದಾರೆ.

ಶಿವರಾಜ್ ಕುಮಾರ್ ಅವರು ಇಂದು ಬೆಳಿಗ್ಗೆ 9 ಗಂಟೆ ಸುಮಾರಿಗೆ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಅಭಿಮಾನಿಗಳು, ಆತ್ಮೀಯರು ವಿಮಾನ ನಿಲ್ದಾಣದ ಬಳಿಯೇ ಶಿವಣ್ಣನ ಸ್ವಾಗತಕ್ಕೆ ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಏರ್​ಪೋರ್ಟ್ ಟೋಲ್ ಇಂದ, ಶಿವಣ್ಣನ ಮನೆಯವರೆಗೆ ಅದ್ಧೂರಿ ಮೆರವಣಿಗೆ ಮಾಡಲು ಅಭಿಮಾನಿಗಳು ಸಿದ್ಧತೆ ಮಾಡಿಕೊಂಡಿದ್ದಾರೆ. ಶಿವಣ್ಣನನ್ನು ನೋಡಲು ಏರ್​ಪೋರ್ಟ್ ಟೋಲ್ ಬಳಿ ನೂರಾರು ಸಂಖ್ಯೆಯಲ್ಲಿ ಜನ ಸೇರುವ ನಿರೀಕ್ಷೆ ಇದೆ.

ಇದನ್ನೂ ಓದಿ:ಬಿಗ್ ಬಾಸ್ ಮನೆಯಲ್ಲಿ ರಜತ್​ಗೆ ಸಿಕ್ತು ವಿಶೇಷ ಅವಾರ್ಡ್; ಏನದು?

ಏರ್​ಪೋರ್ಟ್ ರಸ್ತೆ, ಶಿವಣ್ಣ ಅವರ ಮನೆಯ ಬಳಿ ಶಿವಣ್ಣ ಅವರ ಕಟೌಟ್​ಗಳು ರಾರಾಜಿಸುತ್ತಿವೆ. ಶಿವಣ್ಣ ಗುಣಮುಖರಾಗಿ ಬರುತ್ತಿರುವುದಕ್ಕೆ ಶುಭ ಕೋರಿ ಹಲವಾರು ಮಂದಿ ಕಟೌಟ್​ಗಳನ್ನು, ಶುಭ ಸಂದೇಶಗಳನ್ನು ಕಟೌಟ್​ ಮಾಡಿ ಹಾಕಿಸಿದ್ದಾರೆ. ಶಿವರಾಜ್ ಕುಮಾರ್ ಅವರ ಜೊತೆಗೆ ಕೆಲವೆಡೆ ಗೀತಾ ಶಿವರಾಜ್ ಕುಮಾರ್ ಅವರ ಕಟೌಟ್​ ಅನ್ನು ಸಹ ಹಾಕಿರುವುದು ವಿಶೇಷ. ಇಂದು ಶಿವಣ್ಣ ಮರಳುತ್ತಿರುವುದಕ್ಕೆ ಹಲವೆಡೆ ಅಭಿಮಾನಿಗಳು ಅನ್ನ ಸಂತರ್ಪಣೆ ಸಹ ಆಯೋಜನೆ ಮಾಡಿದ್ದಾರೆ.

ಶಿವರಾಜ್ ಕುಮಾರ್ ಅವರು ಅನಾರೋಗ್ಯಕ್ಕೆ ಚಿಕಿತ್ಸೆ ಪಡೆಯಲೆಂದು 35 ದಿನಗಳ ಹಿಂದೆ ಅಮೆರಿಕಕ್ಕೆ ತೆರಳಿದ್ದರು. ಮಿಸಿಸಿಪ್ಪಿ ಕ್ಯಾನ್ಸರ್ ಇನ್​ಸ್ಟಿಟ್ಯೂಷನ್​ನಲ್ಲಿ ಶಿವರಾಜ್ ಕುಮಾರ್ ಅವರಿಗೆ ಶಸ್ತಚಿಕಿತ್ಸೆ ಮಾಡಲಾಯ್ತು. ಶಿವಣ್ಣ ಅವರು ಅಲ್ಲಿಯೇ ಸುಮಾರು ಒಂದು ತಿಂಗಳ ಕಾಲ ವಿಶ್ರಾಂತಿ ಪಡೆದು ಇದೀಗ ಬೆಂಗಳೂರಿಗೆ ವಾಪಸ್ಸಾಗಿದ್ದಾರೆ. ಶಿವರಾಜ್ ಕುಮಾರ್ ಅವರ ಜೊತೆಯಲ್ಲಿ ಗೀತಾ ಶಿವರಾಜ್ ಕುಮಾರ್, ಅವರ ಪುತ್ರಿ ನಿವೇದಿತಾ, ಮಧು ಬಂಗಾರಪ್ಪ ಅವರುಗಳು ಸಹ ಅಮೆರಿಕಕ್ಕೆ ತೆರಳಿದ್ದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:22 am, Sun, 26 January 25

ಅಕ್ಷಯ ತೃತೀಯ ದಿನದಂದು ಯಾವೆಲ್ಲಾ ರಾಶಿಗಳಿಗೆ ಅದೃಷ್ಟ ತಿಳಿಯಿರಿ
ಅಕ್ಷಯ ತೃತೀಯ ದಿನದಂದು ಯಾವೆಲ್ಲಾ ರಾಶಿಗಳಿಗೆ ಅದೃಷ್ಟ ತಿಳಿಯಿರಿ
ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ