ಶಸ್ತ್ರಚಿಕಿತ್ಸೆ ಯಶಸ್ವಿ, ಅಭಿಮಾನಿಗಳಿಗೆ ಧನ್ಯವಾದ ಹೇಳಿದ‌ ಶಿವಣ್ಣನ ಪುತ್ರಿ ನಿವೇದಿತ

Shiva Rajkumar Health Update: ಅನಾರೋಗ್ಯದಿಂದ ಬಳಲುತ್ತಿದ್ದ ಶಿವರಾಜ್ ಕುಮಾರ್ ಅವರಿಗೆ ಇಂದು‌ ಅಮೆರಿಕದಲ್ಲಿ ಶಸ್ತ್ರಚಿಕಿತ್ಸೆ ನಡೆದಿದ್ದು‌ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನಡೆದಿದೆ‌. ಈ ಬಗ್ಗೆ‌ ಶಿವರಾಜ್ ಕುಮಾರ್ ಪುತ್ರಿ ನಿವೇದಿತಾ ಶಿವರಾಜ್ ಕುಮಾರ್ ಅವರು ಇನ್​ಸ್ಟಾಗ್ರಾಂನಲ್ಲಿ ಪೋಸ್ಟ್ ಹಂಚಿಕೊಂಡಿದ್ದು ಅಭಿಮಾನಿಗಳಿಗೆ ಸೇರಿದಂತೆ ಹಲವರಿಗೆ ಧನ್ಯವಾದ ಹೇಳಿದ್ದಾರೆ.

ಶಸ್ತ್ರಚಿಕಿತ್ಸೆ ಯಶಸ್ವಿ, ಅಭಿಮಾನಿಗಳಿಗೆ ಧನ್ಯವಾದ ಹೇಳಿದ‌ ಶಿವಣ್ಣನ ಪುತ್ರಿ ನಿವೇದಿತ
Shiva Rajkumar Niveditha
Follow us
ಮಂಜುನಾಥ ಸಿ.
|

Updated on:Dec 25, 2024 | 8:42 PM

ಶಿವರಾಜ್ ಕುಮಾರ್ ಅವರು ಇಂದು ಅಮೆರಿಕದ ಮಿಯಾಮಿ ಕ್ಯಾನ್ಸರ್ ಸೆಂಟರ್ ನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನಡೆದಿದ್ದು, ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯ ಮುರುಗೇಶ್ ಅವರೇ ಖುದ್ದಾಗಿ ವಿಡಿಯೋ ಮಾಡಿ ಶಿವಣ್ಣನ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ್ದಾರೆ. ಇದರ ಜೊತೆಗೆ ಇದೀಗ ಶಿವಣ್ಣ-ಗೀತಕ್ಕನ ಕಿರಿಯ ಪುತ್ರಿ ನಿವೇದಿತಾ ಅಪ್ಪನ ಆರೋಗ್ಯದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ ಜೊತೆಗೆ ಅಭಿಮಾನಿಗಳು ಸೇರಿದಂತೆ ಹಲವರಿಗೆ ಧನ್ಯವಾದ ಸಹ ಹೇಳಿದ್ದಾರೆ.

ದೇವರ ಕೃಪೆಯಿಂದ ನನ್ನ ತಂದೆಯ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿ ಸಂಪೂರ್ಣಗೊಂಡಿದೆ. ಈಗ ಅವರ ಆರೋಗ್ಯ ಸ್ಥಿರವಾಗಿದ್ದು, ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಇದಕ್ಕೆ ಪ್ರಮುಖ ಕಾರಣರಾಗಿರುವ, ಮಿಯಾಮಿ ಹೆಲ್ತ್ ಕೇರ್ ನಲ್ಲಿ ಅಸಾಧಾರಣ ಸೇವೆ ಒದಗಿಸಿದ ವೈದ್ಯಕೀಯ ತಂಡ ಮತ್ತು ಡಾ. ಮುರುಗೇಸನ್ ಮನೋಹರನ್ ಅವರ ಅಚಲ ಬೆಂಬಲ ಮತ್ತು ಕಾಳಜಿಗೆ ನಮ್ಮ ಹೃತ್ತೂರ್ವಕ ಧನ್ಯಾದಗಳನ್ನು ಅರ್ಪಿಸುತ್ತೇವೆ.

ಈ ಪ್ರಯಾಣದಲ್ಲಿ ನನ್ನ ತಂದೆ ತೋರಿದ ಧೈರ್ಯ ಮತ್ತು ಶಕ್ತಿಗೆ ಅವರೇ ಸಾಟಿ. ಈ ಸವಾಲುಗಳನ್ನು ಎದುರಿಸುವಲ್ಲಿ ಅವರು ತೋರಿದ ಮನೋಬಲ ಮಗೂ ಆಶಾಭಾವ ಮೂಡಿಸಿ ನಮ್ಮೆಲ್ಲರಿಗೂ ಧೈರ್ಯ ಒದಗಿಸಿದೆ. ಇದರ ನಡುವೆ, ಎಲ್ಲಾ ಅಭಿಮಾನಿ ದೇವರುಗಳಿಗೂ, ಕುಟುಂಬ ಸದಸ್ಯರಿಗೂ, ಸ್ನೇಹಿತರಿಗೂ ಮತ್ತು ಮಾಧ್ಯಮದ ಸದಸ್ಯರಿಗೂ ನಾವು ನಮ್ಮ ತುಂಬು ಹೃದಯದ ಕೃತಜ್ಞತೆಯನ್ನು ವ್ಯಕ್ತಪಡಿಸಲು ಬಯಸುತ್ತೇವೆ. ನಿಮ್ಮೆಲ್ಲರ ಪ್ರೀತಿ, ಪ್ರಾರ್ಥನೆ ಮತ್ತು ಆಶೀರ್ವಾದ ನಮ್ಮ ಶಕ್ತಿಯ ಮೂಲವಾಗಿವೆ. ನೀವೆಲ್ಲರೂ ತೋರಿದ ಕಾಳಜಿ ನಮಗೆ ಮುನ್ನಡೆಯುವ ಬಲ ತುಂಬಿದ್ದು, ಅದಕ್ಕೆ ನಾವೆಂದೆಂದಿಗೂ ಆಭಾರಿಯಾಗಿರುತ್ತೇವೆ. ತಂದೆಯ ಚೇತರಿಕೆಯ ಕುರಿತು ಬರುವ ದಿನಗಳಲ್ಲಿ ತಿಳಿಸುತ್ತೇವೆ. ಈ ಪಯಣದಲ್ಲಿ ನಾವು ಮುಂದಿನ ಹೆಜ್ಜೆ ಇಡುತ್ತಿರಲು, ನಿಮ್ಮ ಪ್ರಾರ್ಥನೆಯ ಮೂಲಕ ನಮ್ಮನ್ನು ಆಶೀರ್ವದಿಸಿ ಎಂದು ಕೇಳಿಕೊಳ್ಳುತ್ತೇವೆ, ಧನ್ಯವಾದಗಳು’ ಎಂದಿದ್ದಾರೆ ನಿವೇದಿತಾ ಶಿವರಾಜಕುಮಾ‌ರ್.

ಇದನ್ನೂ ಓದಿ:ಶಿವರಾಜ್ ಕುಮಾರ್ ಶಸ್ತ್ರಚಿಕಿತ್ಸೆ: ಅಭಿಮಾನಿಗಳಿಂದ ವಿಶೇಷ ಪೂಜೆ

ಶಿವರಾಜ್ ಕುಮಾರ್ ಅವರು ಬ್ಲಾಡರ್ ಕ್ಯಾನ್ಸರ್’ನಿಂದ ಬಳಲುತ್ತಿದ್ದು, ಚಿಕಿತ್ಸೆಗಾಗಿ ಕೆಲ ದಿನಗಳ‌ ಹಿಂದೆ ಅಮೆರಿಕಕ್ಕೆ ತೆರಳಿದ್ದರು. ಶಿವಣ್ಣ ಅಮೆರಿಕಕ್ಕೆ ತೆರಳುವಾಗ ಸಿನಿಮಾ ರಂಗದ ಹಲವು ಸೆಲೆಬ್ರಿಟಿಗಳ‌ ಜೊತೆಗೆ ಹಲವಾರು ಮಂದಿ ಅಭಿಮಾನಿಗಳು ಮನೆಯ ಬಳಿ ಆಗಮಿಸಿ ಅವರನ್ನು ಬೀಳ್ಕೊಟ್ಟಿದ್ದರು. ಇಂದು (ಡಿಸೆಂಬರ್ 25) ಶಸ್ತ್ರಚಿಕಿತ್ಸೆ ನಡೆಯಲಿದೆ ಎಂಬುದನ್ನು ತಿಳಿದು ಬೆಂಗಳೂರು, ಮೈಸೂರು, ಚಾಮರಾಜನಗರ, ಬೆಳಗಾವಿ, ಬಳ್ಳಾರಿ ಸೇರಿದಂತೆ ಹಲವು ಕಡೆ ಶಿವಣ್ಣನ ಅಭಿಮಾನಿಗಳು ದೇವಾಲಯಗಳಲ್ಲಿ ವಿಶೇಷ ಪೂಜೆ, ಮೃತ್ಯುಂಜಯ ಹೋಮ, ಅನ್ನದಾನ ಇನ್ನಿತರೆ ಕಾರ್ಯಕ್ರಮಗಳನ್ನಹ ಹಮ್ಮಿಕೊಂಡಿದ್ದರು.

ಅಭಿಮಾನಿಗಳ‌‌ ಪ್ರಾರ್ಥನೆಯಂತೆ ಶಿವಣ್ಣನ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಮುಗಿದಿದ್ದು ಇನ್ನೇನಿದ್ದರು ಅವರ ವಿಶ್ರಾಂತಿಯ ಸಮಯ. ಅಮೆರಿಕಕ್ಕೆ ತೆರಳುವ‌ ಮುಂಚೆ ಶಿವರಾಜ್ ಕುಮಾರ್ ಅವರೇ ಹೇಳಿದ್ದಂತೆ, ಮುಂದಿನ ತಿಂಗಳು ಅಂದರೆ ಜನವರಿ 25 ರಂದು ಕರ್ನಾಟಕಕ್ಕೆ ವಾಪಸ್ ಬರಲಿದ್ದಾರೆ. ಆ ವರೆಗೂ ಅವರು ಅಮೆರಿಕದಲ್ಲಿಯೇ ಇರಲಿದ್ದಾರೆ. ಅಮೆರಿಕದಲ್ಲಿ‌ ಶಿವಣ್ಣನ ಜೊತೆಗೆ ಗೀತಾ ಶಿವರಾಜ್ ಕುಮಾರ್, ಪುತ್ರಿ ನಿವೇದಿತಾ ಮತ್ತು ಶಿವಣ್ಣನ ಭಾಮೈದ, ರಾಜ್ಯದ ಶಿಕ್ಷಣ ಸಚಿವರೂ ಆಗಿರುವ ಮಧು ಬಂಗಾರಪ್ಪ ಇದ್ದಾರೆ. ಮುರುಗದಾಸ್ ಹೆಸರಿನ ವೈದ್ಯರು ಶಿವಣ್ಣನಿಗೆ ಶಸ್ತ್ರ ಚಿಕಿತ್ಸೆ ನೀಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:40 pm, Wed, 25 December 24

ನಂಜನಗೂಡು: ಹುಲಿ ವಿಡಿಯೋ ವೈರಲ್ ಬಗ್ಗೆ ಅರಣ್ಯ ಇಲಾಖೆ ಹೇಳಿದ್ದೇನು?
ನಂಜನಗೂಡು: ಹುಲಿ ವಿಡಿಯೋ ವೈರಲ್ ಬಗ್ಗೆ ಅರಣ್ಯ ಇಲಾಖೆ ಹೇಳಿದ್ದೇನು?
ಒಡಿಶಾದಲ್ಲಿ ಬಸ್ ಪಲ್ಟಿ, ಇಬ್ಬರು ಸಾವು, 30ಕ್ಕೂ ಅಧಿಕ ಮಂದಿಗೆ ಗಂಭೀರ ಗಾಯ
ಒಡಿಶಾದಲ್ಲಿ ಬಸ್ ಪಲ್ಟಿ, ಇಬ್ಬರು ಸಾವು, 30ಕ್ಕೂ ಅಧಿಕ ಮಂದಿಗೆ ಗಂಭೀರ ಗಾಯ
ನೈಜೀರಿಯಾದಲ್ಲಿ ತೈಲ ಟ್ಯಾಂಕರ್ ಸ್ಫೋಟ, 18 ಮಂದಿ ಸಾವು
ನೈಜೀರಿಯಾದಲ್ಲಿ ತೈಲ ಟ್ಯಾಂಕರ್ ಸ್ಫೋಟ, 18 ಮಂದಿ ಸಾವು
ತಾಳಿ ಕಟ್ಟುವಾಗ ಮೂರು ಗಂಟು ಹಾಕುವುದು ಏಕೆ? ಅದರ ಮಹತ್ವ ತಿಳಿಯಿರಿ
ತಾಳಿ ಕಟ್ಟುವಾಗ ಮೂರು ಗಂಟು ಹಾಕುವುದು ಏಕೆ? ಅದರ ಮಹತ್ವ ತಿಳಿಯಿರಿ
Daily Horoscope: ವೃಷಭ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭ ಫಲವಿದೆ
Daily Horoscope: ವೃಷಭ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭ ಫಲವಿದೆ
ಬಿಗ್ ಬಾಸ್ ಮನೆ ಎದುರು ಹನುಮಂತನ ಅಭಿಮಾನಿಗಳ ಸಂಭ್ರಮಾಚರಣೆ
ಬಿಗ್ ಬಾಸ್ ಮನೆ ಎದುರು ಹನುಮಂತನ ಅಭಿಮಾನಿಗಳ ಸಂಭ್ರಮಾಚರಣೆ
ಸ್ಪರ್ಧೆ ಖಚಿತ, ಗೆಲುವು ನಿಶ್ಚಿತ, ಠೇವಣಿ ಉಚಿತ ಎಂದ ಶಾಸಕ ಯತ್ನಾಳ್
ಸ್ಪರ್ಧೆ ಖಚಿತ, ಗೆಲುವು ನಿಶ್ಚಿತ, ಠೇವಣಿ ಉಚಿತ ಎಂದ ಶಾಸಕ ಯತ್ನಾಳ್
ಹಣದಾಸೆಗೆ ಟ್ರೋಫಿ ತ್ಯಾಗ? ಬಿಗ್ ಬಾಸ್ ಮನೆಗೆ ಬಂತು ಸೂಟ್ ಕೇಸ್ ತುಂಬ ದುಡ್ಡು
ಹಣದಾಸೆಗೆ ಟ್ರೋಫಿ ತ್ಯಾಗ? ಬಿಗ್ ಬಾಸ್ ಮನೆಗೆ ಬಂತು ಸೂಟ್ ಕೇಸ್ ತುಂಬ ದುಡ್ಡು
‘ರಜತ್ ರೀತಿಯ ಮಗನಿರಬಾರದು’; ಸುದೀಪ್​ ಎದುರು ಹೇಳಿದ ಹನುಮಂತ
‘ರಜತ್ ರೀತಿಯ ಮಗನಿರಬಾರದು’; ಸುದೀಪ್​ ಎದುರು ಹೇಳಿದ ಹನುಮಂತ
‘ಮಜಾ ಟಾಕೀಸ್​​’ನಲ್ಲಿ ಭರ್ಜರಿ ಡಬಲ್​ ಮೀನಿಂಗ್ ಡೈಲಾಗ್ಸ್; ದೊಡ್ಡದಾಗಿದೆ ನಗ
‘ಮಜಾ ಟಾಕೀಸ್​​’ನಲ್ಲಿ ಭರ್ಜರಿ ಡಬಲ್​ ಮೀನಿಂಗ್ ಡೈಲಾಗ್ಸ್; ದೊಡ್ಡದಾಗಿದೆ ನಗ