Shiva Rajkumar: ‘ಜೇಮ್ಸ್’ನಲ್ಲಿ ಪುನೀತ್ ಪಾತ್ರಕ್ಕೆ ಯಾರ ಧ್ವನಿ? ಅಭಿಮಾನಿಗಳ ಪ್ರಶ್ನೆಗೆ ಇಲ್ಲಿದೆ ಉತ್ತರ

Puneeth Rajkumar | James: ಹ್ಯಾಟ್ರಿಕ್ ಹೀರೋ ಶಿವರಾಜ್​ಕುಮಾರ್ ‘ಜೇಮ್ಸ್’ ಚಿತ್ರದಲ್ಲಿ ಪುನೀತ್ ಪಾತ್ರಕ್ಕೆ ಧ್ವನಿ ನೀಡಿದ್ದಾರೆ. ಈ ಕುರಿತು ಶಿವಣ್ಣ ಸ್ವತಃ ಮಾಹಿತಿ ಹಂಚಿಕೊಂಡಿದ್ದಾರೆ.

Shiva Rajkumar: ‘ಜೇಮ್ಸ್’ನಲ್ಲಿ ಪುನೀತ್ ಪಾತ್ರಕ್ಕೆ ಯಾರ ಧ್ವನಿ? ಅಭಿಮಾನಿಗಳ ಪ್ರಶ್ನೆಗೆ ಇಲ್ಲಿದೆ ಉತ್ತರ
ಶಿವರಾಜ್​ ಕುಮಾರ್, ಪುನೀತ್ ರಾಜ್​ಕುಮಾರ್
Follow us
TV9 Web
| Updated By: shivaprasad.hs

Updated on: Feb 02, 2022 | 2:52 PM

ಪುನೀತ್ ರಾಜ್​ಕುಮಾರ್ (Puneeth Rajkumar) ನಟನೆಯ ‘ಜೇಮ್ಸ್’ (James) ಅಪ್ಪು ಅವರ ಕೊನೆಯ ಚಿತ್ರ. ಪುನೀತ್ ಇನ್ನಿಲ್ಲ ಎಂಬ ಕೊರಗಿನ ನಡುವೆಯೂ ಅಭಿಮಾನಿಗಳು ‘ಜೇಮ್ಸ್’ ಆಗಮನವನ್ನು ಸ್ವಾಗತಿಸಲು ಎದುರು ನೋಡುತ್ತಿದ್ದಾರೆ. ಮಾರ್ಚ್ 17ರಂದು ಪುನೀತ್ ಜನ್ಮದಿನ. ಅಂದೇ ಚಿತ್ರ ರಿಲೀಸ್ ಆಗಲಿದೆ. ಈ ಕುರಿತು ನಿರ್ಮಾಪಕ ಕಿಶೋರ್ ಪತ್ತಿಕೊಂಡ ಈ ಹಿಂದೆ ಮಾಹಿತಿ ನೀಡಿದ್ದರು. ‘ಜೇಮ್ಸ್​’ನಲ್ಲಿ ಪುನೀತ್ ಪಾತ್ರದ ಚಿತ್ರೀಕರಣ ಈ ಹಿಂದೆಯೇ ಮುಕ್ತಾಯವಾಗಿತ್ತು. ಆದರೆ ಡಬ್ಬಿಂಗ್ ಕೆಲಸಗಳು ಆಗಿರಲಿಲ್ಲ. ಇದೇ ಕಾರಣಕ್ಕೆ ಅಪ್ಪು ಪಾತ್ರಕ್ಕೆ ಯಾರು ಧ್ವನಿ ನೀಡಬಹುದು ಎಂಬ ಕುತೂಹಲ ಇತ್ತು. ಇದೀಗ ಈ ಕುತೂಹಲಕ್ಕೆ ಉತ್ತರ ಸಿಕ್ಕಿದೆ. ಹೌದು. ಪುನೀತ್ ಪಾತ್ರಕ್ಕೆ ಸಹೋದರ ಶಿವರಾಜ್​ಕುಮಾರ್ (Shiva Rajkumar) ಡಬ್ ಮಾಡಿದ್ದಾರೆ. ಈ ಕುರಿತು ಸ್ವತಃ ಅವರೇ ಮಾಹಿತಿ ನೀಡಿದ್ದು, ಚಿತ್ರದ ಕುರಿತು, ಡಬ್ಬಿಂಗ್ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ.

ಪುನೀತ್ ಪಾತ್ರಕ್ಕೆ ಧ್ವನಿ ನೀಡಿದ ಹ್ಯಾಟ್ರಿಕ್ ಹೀರೋ:

ಶಿವರಾಜ್​ಕುಮಾರ್ ಅವರು ‘ಜೇಮ್ಸ್​​’ಗೆ ಡಬ್ ಮಾಡಿದ್ದರ ಕುರಿತು ಮಾತನಾಡಿದ್ದಾರೆ. ಎರಡೂವರೆ ದಿನಗಳ ಕಾಲ ಡಬ್ ಮಾಡಿರುವ ಶಿವರಾಜ್​ಕುಮಾರ್, ಪುನೀತ್ ಪಾತ್ರದ ಡಬ್ಬಿಂಗ್ ಕೆಲಸವನ್ನು ಪೂರ್ಣ ಮಾಡಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ಇದು ಬಹಳ ಕಷ್ಟ. ಕಾರಣ, ತಮ್ಮನ ಮುಖ ನೋಡಿ ಧ್ವನಿ ನೀಡುವುದು ಬಹಳ ಸವಾಲಿನ ಕೆಲಸ. ಆದರೆ ಎಲ್ಲರೂ ಕೇಳಿದಾಗ ಇಲ್ಲ ಎನ್ನಲು ಆಗಲಿಲ್ಲ. ಡಬ್ ಮಾಡಿ ಮುಗಿಸಿದ್ದೇನೆ ಎಂದು ನುಡಿದಿದ್ದಾರೆ.

ಡಬ್ಬಿಂಗ್ ಸಮಯದಲ್ಲಿನ ಸವಾಲಿನ ಕುರಿತು ಮಾತನಾಡಿದ ಅವರು, ಪುನೀತ್ ಧ್ವನಿಯನ್ನು ಹೊಂದಿಸುವುದು ಬಹಳ ಕಷ್ಟ. ಬೇರೆಯವರಿಗೆ ಹಾಡಬಹುದು. ಅಥವಾ ನನ್ನ ಪಾತ್ರಕ್ಕೇ ಡಬ್ ಮಾಡಬಹುದು. ಆದರೆ ಮತ್ತೊಬ್ಬ ಕಲಾವಿದರನ್ನು ಪ್ರವೇಶಿಸಿ ಧ್ವನಿ ನೀಡುವುದು ಬಹಳ ಕಷ್ಟ ಎಂದಿದ್ದಾರೆ. ಅದಾಗ್ಯೂ ಪ್ರಯತ್ನಪಟ್ಟಿದ್ದೇನೆ ಎಂದಿರುವ ಶಿವಣ್ಣ, ಎಲ್ಲರಿಗೂ ಇಷ್ಟವಾಗಬಹುದು ಎಂಬ ಭರವಸೆಯನ್ನೂ ವ್ಯಕ್ತಪಡಿಸಿದ್ದಾರೆ.

ನಟ ಶಿವರಾಜ್​ಕುಮಾರ್ ಮಾತು ಇಲ್ಲಿದೆ:

‘ಜೇಮ್ಸ್​’ಗೆ ಚೇತನ್ ಕುಮಾರ್ ಆಕ್ಷನ್ ಕಟ್ ಹೇಳಿದ್ದು, ಪುನೀತ್ ರಾಜ್​ಕುಮಾರ್ ಅವರಿಗೆ ಜೋಡಿಯಾಗಿ ಪ್ರಿಯಾ ಆನಂದ್ ಕಾಣಿಸಿಕೊಂಡಿದ್ದಾರೆ. ಚಿತ್ರಕ್ಕೆ ಚರಣ್ ರಾಜ್ ಸಂಗೀತ ನೀಡಿದ್ದಾರೆ. ಇತ್ತೀಚೆಗೆ ಗಣರಾಜ್ಯೋತ್ಸವದಂದು ಪುನೀತ್ ಸೈನಿಕನ ಪಾತ್ರದಲ್ಲಿ ಕಾಣಿಸಿಕೊಂಡಿರುವ ಹೊಸ ಪೋಸ್ಟರ್​ ಅನ್ನು ಚಿತ್ರತಂಡ ರಿಲೀಸ್ ಮಾಡಿತ್ತು. ಇದು ಚಿತ್ರದ ಕುರಿತು ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿತ್ತು.

ಇದನ್ನೂ ಓದಿ:

‘ಜೇಮ್ಸ್’ ರಿಲೀಸ್ ಡೇಟ್ ಬಗ್ಗೆ ಇದ್ದ ಅನುಮಾನಗಳು ಕ್ಲಿಯರ್; ನಿರ್ಮಾಪಕರು ಹೇಳಿದ್ದೇನು? ಇಲ್ಲಿದೆ ಪೂರ್ಣ ಮಾಹಿತಿ

James Special Poster: ‘ಜೇಮ್ಸ್’​ ಹೊಸ ಪೋಸ್ಟರ್​ ರಿಲೀಸ್​; ಪುನೀತ್​ ಫ್ಯಾನ್ಸ್​ಗೆ ಗಣರಾಜ್ಯೋತ್ಸವದ ಗಿಫ್ಟ್

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ