
ಚಂದನವನದ (Sandalwood) ನಟ, ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ (Shiva Rajkumar) ಅವರದ್ದು ನಿಷ್ಕಲ್ಮಶ ಮನಸ್ಸಿನ ವ್ಯಕ್ತಿತ್ವ. ಇದೇ ಕಾರಣಕ್ಕೆ ಇಡೀ ಕರುನಾಡು ಅವರ ಅಭಿಮಾನಿ. ಜತೆಗೆ ಬಹಳಷ್ಟು ಜನರಿಗೆ ಶಿವರಾಜ್ಕುಮಾರ್ ಆದರ್ಶವೂ ಹೌದು ಮತ್ತು ಅವರಿಗಿರುವ ಅಭಿಮಾನಿ ಬಳಗವೂ ದೊಡ್ಡದು. ಆದರೆ ಶಿವಣ್ಣ ಒಮ್ಮೆಯೂ ಸ್ಟಾರ್ ಎಂಬುದನ್ನು ಎಲ್ಲರೆದುರು ತೋರಿಸಿಕೊಂಡಿಲ್ಲ. ಸಾಧ್ಯವಾದಷ್ಟು ಜನರ ನಡುವೆ ಬೆರೆತು, ಅವರೊಡನೆ ಒಂದಾಗುತ್ತಾರೆ. ಇದಕ್ಕೆ ನಿದರ್ಶನವೆಂಬಂತೆ ಇತ್ತೀಚಿಗೆ ವಿಡಿಯೋವೊಂದು ವೈರಲ್ ಆಗಿದೆ. ಹೌದು. ಮಕ್ಕಳೊಂದಿಗೆ ಮಕ್ಕಳಾಗಿ ಬೆರೆತು ನಲಿಯುತ್ತಿರುವ ಶಿವರಾಜ್ಕುಮಾರ್ ಅವರ ಅಪರೂಪದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅದನ್ನುನೋಡಿದ ಅಭಿಮಾನಿಗಳು ಫಿದಾ ಆಗಿದ್ದಾರೆ.
ವಿಡಿಯೋದಲ್ಲಿ ಶಿವರಾಜ್ಕುಮಾರ್ ಮಕ್ಕಳೊಂದಿಗೆ ಖೋ ಖೋ ಆಟದಲ್ಲಿ ನಿರತರಾಗಿರುವುದನ್ನು ಕಾಣಬಹುದು. ಸ್ಟಾರ್ ನಟ ತಮ್ಮೊಂದಿಗೆ ಆಟವಾಡುತ್ತಿರುವುದಕ್ಕೆ ಸಖತ್ ಖುಷಿಯಾಗಿರುವ ಮಕ್ಕಳು ಉತ್ಸಾಹದಿಂದ ಆಟದಲ್ಲಿ ತೊಡಗಿಕೊಂಡಿದ್ದಾರೆ. ಸುತ್ತ ನೆರೆದಿರುವವರೂ ಕೂಡ ಸಂಭ್ರಮದಿಂದ ಪ್ರೋತ್ಸಾಹಿಸುತ್ತಿರುವುದು ವಿಡಿಯೋದಲ್ಲಿ ದಾಖಲಾಗಿದೆ. ವಿಡಿಯೋ ನೋಡಿದ ಅಭಿಮಾನಿಗಳು ಶಿವರಾಜ್ಕುಮಾರ್ ಅವರ ವ್ಯಕ್ತಿತ್ವಕ್ಕೆ ಮಾರುಹೋಗಿದ್ದಾರೆ.
ಶಿವರಾಜ್ಕುಮಾರ್ ಖೋ ಖೋ ಆಡುತ್ತಿರುವ ವೈರಲ್ ವಿಡಿಯೋ ಇಲ್ಲಿದೆ:
ಜೀ5ನಲ್ಲಿ ಪ್ರದರ್ಶನ ಕಾಣುತ್ತಿದೆ ‘ಭಜರಂಗಿ 2’:
ಚಿತ್ರಗಳ ವಿಷಯಕ್ಕೆ ಬಂದರೆ ಶಿವರಾಜ್ಕುಮಾರ್ ನಟನೆಯ ‘ಭಜರಂಗಿ 2’ ಜೀ5 ಒಟಿಟಿಯಲ್ಲಿ ಪ್ರದರ್ಶನ ಕಾಣುತ್ತಿದೆ. ಎ ಹರ್ಷ ನಿರ್ದೇಶನದ ಈ ಚಿತ್ರ ಅಕ್ಟೋಬರ್ 29ರಂದು ಚಿತ್ರಮಂದಿರಗಳಲ್ಲಿ ತೆರೆ ಕಂಡಿತ್ತು. ಈ ಚಿತ್ರದಲ್ಲಿ ನಾಯಕಿಯಾಗಿ ಭಾವನಾ ಮೆನನ್ ಅಭಿನಯಿಸಿದ್ದಾರೆ. ಭಜರಂಗಿ ಲೋಕಿ, ಶ್ರುತಿ, ಶಿವರಾಜ್ ಕೆ.ಆರ್. ಪೇಟೆ ಸೇರಿದಂತೆ ಅನೇಕ ಕಲಾವಿದರು ಬಣ್ಣ ಹಚ್ಚಿದ್ದಾರೆ. ಈ ಸಿನಿಮಾಗೆ ಖ್ಯಾತ ನಿರ್ಮಾಪಕರಾದ ಜಯಣ್ಣ-ಭೋಗೇಂದ್ರ ಬಂಡವಾಳ ಹೂಡಿದ್ದಾರೆ. ಅರ್ಜುನ್ ಜನ್ಯ ಸಂಗೀತ ನಿರ್ದೇಶನ ಮಾಡಿದ್ದಾರೆ.
ಇದನ್ನೂ ಓದಿ:
‘ಭಜರಂಗಿ 2’ ಚಿತ್ರವನ್ನು ಪುನೀತ್ ರಾಜ್ಕುಮಾರ್ಗೆ ಅರ್ಪಿಸಿದ ಶಿವರಾಜ್ಕುಮಾರ್
Year Ender 2021: ಈ ವರ್ಷ ಮದುವೆ ಆದ ಸ್ಯಾಂಡಲ್ವುಡ್ ಜೋಡಿಗಳ ಬಗ್ಗೆ ಇಲ್ಲಿದೆ ಮಾಹಿತಿ