ಕೊನೆಗೂ ಮುಗಿಯಿತು ‘ಭೈರತಿ ರಣಗಲ್’ ಚಿತ್ರೀಕರಣ, ಬಿಡುಗಡೆ ದಿನಾಂಕ ಬದಲು?

ಆಗಸ್ಟ್ 15 ರಂದು ಬಿಡುಗಡೆ ಆಗಲಿದೆ ಎನ್ನಲಾಗಿದ್ದ ಶಿವರಾಜ್ ಕುಮಾರ್ ನಟನೆಯ ‘ಭೈರತಿ ರಣಗಲ್’ ಸಿನಿಮಾದ ಬಿಡುಗಡೆ ಮುಂದಕ್ಕೆ ಹೋಗುವ ಸಾಧ್ಯತೆ ದಟ್ಟವಾಗಿದೆ. ಸಿನಿಮಾದ ಚಿತ್ರೀಕರಣ ಇತ್ತೀಚೆಗಷ್ಟೆ ಮುಗಿದಿದ್ದು ಪೋಸ್ಟ್ ಪ್ರೊಡಕ್ಷನ್ ಕಾರ್ಯ ಬಾಕಿ ಇದೆ.

ಕೊನೆಗೂ ಮುಗಿಯಿತು ‘ಭೈರತಿ ರಣಗಲ್’ ಚಿತ್ರೀಕರಣ, ಬಿಡುಗಡೆ ದಿನಾಂಕ ಬದಲು?
Follow us
|

Updated on: Jul 05, 2024 | 1:22 PM

ಶಿವರಾಜ್ ಕುಮಾರ್ ನಟನೆಯ ಹಲವು ಸಿನಿಮಾಗಳು ಪ್ರೊಡಕ್ಷನ್, ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿವೆ. ಈ ಸಿನಿಮಾಗಳು ಪ್ರೇಕ್ಷಕರಲ್ಲಿ ದೊಡ್ಡ ಮಟ್ಟಿಗಿನ ನಿರೀಕ್ಷೆ ಮೂಡಿಸಿವೆ. ನಿರೀಕ್ಷೆ ಮೂಡಿಸಿದ ಸಿನಿಮಾಗಳಲ್ಲಿ ಶಿವರಾಜ್ ಕುಮಾರ್ ನಟನೆಯ ‘ಭೈರತಿ ರಣಗಲ್’ ಸಿನಿಮಾ ಸಹ ಒಂದು. ಈ ಸಿನಿಮಾದ ಘೋಷಣೆಯಾಗಿ ತಿಂಗಳುಗಲೇ ಕಳೆದಿವೆ. ಆದರೆ ಯಾಕೋ ಏನೋ ಚಿತ್ರೀಕರಣ ತಡವಾಗಿತ್ತು. ಇದೀಗ ಭೈರತಿ ರಣಗಲ್ ಚಿತ್ರೀಕರಣ ಪೂರ್ಣಗೊಂಡಿದೆ.

2017ರಲ್ಲಿ ಬಿಡುಗಡೆ ಆಗಿದ್ದ ‘ಮಫ್ತಿ’ ಸಿನಿಮಾ ಭಾರಿ ಹಿಟ್ ಆಗಿತ್ತು. ಸಿನಿಮಾದಲ್ಲಿ ‘ಭೈರತಿ ರಣಗಲ್’ ಪಾತ್ರದಲ್ಲಿ ಶಿವರಾಜ್ ಕುಮಾರ್ ಮಿಂಚಿದ್ದರು. ಈ ಪಾತ್ರ ಸಖತ್ ಜನಪ್ರಿಯತೆ ಗಳಿಸಿತ್ತು. ಇದೀಗ ಅದೇ ಪಾತ್ರವನ್ನು ಪ್ರಧಾನವಾಗಿ ಇರಿಸಿಕೊಂಡು ‘ಭೈರತಿ ರಣಗಲ್’ ಸಿನಿಮಾ ಮಾಡಲಾಗುತ್ತಿದೆ. ‘ಮಫ್ತಿ’ ಸಿನಿಮಾದಲ್ಲಿ ನಡೆದ ಕತೆಗಿಂತಲೂ ಹಿಂದಿನ ಕತೆಯನ್ನು ‘ಭೈರತಿ ರಣಗಲ್’ ಸಿನಿಮಾನಲ್ಲಿ ಹೇಳಲಾಗುತ್ತದೆ.

ಸಿನಿಮಾದ ಚಿತ್ರೀಕರಣ ಇತ್ತೀಚೆಗಷ್ಟೆ ಮುಗಿದಿದ್ದು, ಚಿತ್ರತಂಡ ಕುಂಬಳಕಾಯಿ ಒಡೆದಿದೆ. ಸಿನಿಮಾದ ಚಿತ್ರೀಕರಣಕ್ಕೆ ತುಸು ಹೆಚ್ಚೇ ಸಮಯವನ್ನು ನಿರ್ದೇಶಕ ನರ್ತನ್ ತೆಗೆದುಕೊಂಡಿದ್ದಾರೆ. ಕೊನೆಗೂ ಸಿನಿಮಾದ ಚಿತ್ರೀಕರಣ ಮುಗಿಸಿದ್ದು, ಪೋಸ್ಟ್ ಪ್ರೊಡಕ್ಷನ್ ಕಾರ್ಯಗಳು ಶೀಘ್ರವೇ ಆರಂಭವಾಗಲಿವೆ. ಎಡಿಟಿಂಗ್, ಸೌಂಡ್ ಮಿಕ್ಸಿಂಗ್, ಕಲರ್ ಗ್ರೇಡಿಂಗ್, ಡಿಟಿಎಸ್ ಮಿಕ್ಸಿಂಗ್, ಕಲರ್ ಕರೆಕ್ಷನ್ ಹಾಗೂ ಡಬ್ಬಿಂಗ್ ಎಲ್ಲವನ್ನೂ ಪೂರ್ಣಗೊಳಿಸಿದ ಬಳಿಕ ಸಿನಿಮಾದ ಬಿಡುಗಡೆ ಆಗಲಿದೆ.

ಇದನ್ನೂ ಓದಿ:ನಿರ್ಮಾಪಕಿ ಗೀತಾ ಶಿವರಾಜ್ ಕುಮಾರ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ಆಗಸ್ 15ಕ್ಕೆ ‘ಭೈರತಿ ರಣಗಲ್’ ಸಿನಿಮಾ ಬಿಡುಗಡೆ ಆಗಲಿದೆ ಎಂದು ಹೇಳಲಾಗಿತ್ತು. ಕೆಲವು ಪೋಸ್ಟರ್​ಗಳು ಸಹ ಈ ಕುರಿತು ಹರಿದಾಡಿದ್ದವು. ಆದರೆ ಸಿನಿಮಾದ ಚಿತ್ರೀಕರಣ ಮುಗಿಯಲು ಹೆಚ್ಚು ಸಮಯ ಹಿಡಿದಿರುವ ಕಾರಣ ಸಿನಿಮಾದ ಬಿಡುಗಡೆ ಮುಂದಕ್ಕೆ ಹೋಗುವ ಸಾಧ್ಯತೆ ದಟ್ಟವಾಗಿದೆ.

‘ಮಫ್ತಿ’ ಸಿನಿಮಾದಲ್ಲಿದ್ದ ಕೆಲವು ಪಾತ್ರಗಳು ‘ಭೈರತಿ ರಣಗಲ್’ ಸಿನಿಮಾನಲ್ಲಿಯೂ ಇರಲಿವೆ. ಗುರುದೇಶಪಾಂಡೆ, ಬಾಬು ಹಿರಣ್ಣಯ್ಯ, ಛಾಯಾ ಸಿಂಗ್ ಇನ್ನೂ ಕೆಲವರು ಈ ಸಿನಿಮಾದಲ್ಲಿಯೂ ಇರಲಿದ್ದಾರೆ. ಇವರ ಜೊತೆಗೆ ರುಕ್ಮಿಣಿ ವಸಂತ್, ರಾಹುಲ್ ಬೋಸ್ ಇನ್ನಿತರೆ ಕೆಲವು ಪಾತ್ರಗಳು ಸೇರಿಕೊಂಡಿವೆ. ಸಿನಿಮಾವನ್ನು ನರ್ತನ್ ನಿರ್ದೇಶನ ಮಾಡಿದ್ದು, ಗೀತಾ ಶಿವರಾಜ್ ಕುಮಾರ್ ನಿರ್ಮಾಣ ಮಾಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಹೊಸ ಅತಿಥಿ; ಮರಿ ಆನೆ ತುಂಟಾಟ ನೋಡಿ
ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಹೊಸ ಅತಿಥಿ; ಮರಿ ಆನೆ ತುಂಟಾಟ ನೋಡಿ
ಮನೆಯಲ್ಲಿ ಹನುಮನ ಫೋಟೋ ಇರಲೇಬೇಕು ಯಾಕೆ ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ಹನುಮನ ಫೋಟೋ ಇರಲೇಬೇಕು ಯಾಕೆ ಗೊತ್ತಾ? ವಿಡಿಯೋ ನೋಡಿ
ಈ ರಾಶಿಯ ರಾಜಕಾರಣಿಗಳು ಬಹಳ ಜಾಗರೂಕತೆಯಿಂದ ಜವಾಬ್ದಾರಿಯನ್ನು ನಿರ್ವಹಿಸಿ
ಈ ರಾಶಿಯ ರಾಜಕಾರಣಿಗಳು ಬಹಳ ಜಾಗರೂಕತೆಯಿಂದ ಜವಾಬ್ದಾರಿಯನ್ನು ನಿರ್ವಹಿಸಿ
‘ಪ್ರಕೃತಿ ವಿಕೋಪದಲ್ಲಿ ನೂರಾರು ಜನ ಸಾಯ್ತಾರೆ, ಯಾರಿಗೆ ಶಿಕ್ಷೆ ಸಿಗುತ್ತೆ?’
‘ಪ್ರಕೃತಿ ವಿಕೋಪದಲ್ಲಿ ನೂರಾರು ಜನ ಸಾಯ್ತಾರೆ, ಯಾರಿಗೆ ಶಿಕ್ಷೆ ಸಿಗುತ್ತೆ?’
ಡ್ರೋನ್​ ಕಣ್ಣಲ್ಲಿ ವಿಶ್ವದ ಅತಿ ದೊಡ್ಡ ಪುರಿ ಜಗನ್ನಾಥ ರಥಯಾತ್ರೆ: ವಿಡಿಯೋ
ಡ್ರೋನ್​ ಕಣ್ಣಲ್ಲಿ ವಿಶ್ವದ ಅತಿ ದೊಡ್ಡ ಪುರಿ ಜಗನ್ನಾಥ ರಥಯಾತ್ರೆ: ವಿಡಿಯೋ
ಮುಂಗಾರು ಮಳೆಗೆ ಚಾರ್ಮಾಡಿ ಘಾಟ್​ನಲ್ಲಿ ಜಲವೈಭವ; ನೂರಾರು ಜಲಪಾತಗಳ ಸೃಷ್ಟಿ
ಮುಂಗಾರು ಮಳೆಗೆ ಚಾರ್ಮಾಡಿ ಘಾಟ್​ನಲ್ಲಿ ಜಲವೈಭವ; ನೂರಾರು ಜಲಪಾತಗಳ ಸೃಷ್ಟಿ
ಸತತ ಮಳೆ; ಜಿಗಣೆ ಕಾಟಕ್ಕೆ ಹೈರಾಣಾದ ಪ್ರವಾಹ ತಂಡದ ಅಧಿಕಾರಿಗಳು
ಸತತ ಮಳೆ; ಜಿಗಣೆ ಕಾಟಕ್ಕೆ ಹೈರಾಣಾದ ಪ್ರವಾಹ ತಂಡದ ಅಧಿಕಾರಿಗಳು
ಸುಧಾಕರ್ ಅಭಿನಂದನಾ ಕಾರ್ಯಕ್ರಮದಲ್ಲಿ ಬಾಡೂಟ: ಡ್ರಿಂಕ್ಸ್​​ಗೆ ಮುಗಿಬಿದ್ದ ಜನ
ಸುಧಾಕರ್ ಅಭಿನಂದನಾ ಕಾರ್ಯಕ್ರಮದಲ್ಲಿ ಬಾಡೂಟ: ಡ್ರಿಂಕ್ಸ್​​ಗೆ ಮುಗಿಬಿದ್ದ ಜನ
ಜಲಾವೃತವಾದ ಸೇತುವೆ ಮೇಲೆ ಸಂಚಾರ;ನೀರು ರಭಸವಾಗಿ ಹರಿಯುತ್ತಿದ್ದರೂ ಡೋಂಟ್​ಕೇರ
ಜಲಾವೃತವಾದ ಸೇತುವೆ ಮೇಲೆ ಸಂಚಾರ;ನೀರು ರಭಸವಾಗಿ ಹರಿಯುತ್ತಿದ್ದರೂ ಡೋಂಟ್​ಕೇರ
ಗೋಕಾಕ್ ಜಲಪಾತದಲ್ಲಿ ಪ್ರವಾಸಿಗರ ಹುಚ್ಚಾಟ; ಸ್ವಲ್ಪ ಯಾಮಾರಿದ್ರು ಅಪಾಯ ಖಚಿತ
ಗೋಕಾಕ್ ಜಲಪಾತದಲ್ಲಿ ಪ್ರವಾಸಿಗರ ಹುಚ್ಚಾಟ; ಸ್ವಲ್ಪ ಯಾಮಾರಿದ್ರು ಅಪಾಯ ಖಚಿತ