‘ಘೋಸ್ಟ್’ ಸಿನಿಮಾ ಸುದ್ದಿಗೋಷ್ಠಿ: ಲೈವ್ ಇಲ್ಲಿ ನೋಡಿ

Updated on: Oct 15, 2023 | 10:22 PM

Ghost: ಶಿವರಾಜ್ ಕುಮಾರ್ ನಟನೆಯ 'ಘೋಸ್ಟ್' ಸಿನಿಮಾದ ಸುದ್ದಿಗೋಷ್ಠಿ ಬೆಂಗಳೂರಿನಲ್ಲಿ ನಡೆಯುತ್ತಿದ್ದು, ಶಿವರಾಜ್ ಕುಮಾರ್, ಬಾಲಿವುಡ್ ನಟ ಅನುಪಮ್ ಖೇರ್ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ. ಸುದ್ದಿಗೋಷ್ಠಿಯ ಲೈವ್ ಇಲ್ಲಿ ನೋಡಿ.

ಶಿವರಾಜ್ ಕುಮಾರ್ (Shiva Rajkumar) ನಟನೆಯ ಬಹುನಿರೀಕ್ಷಿತ ಸಿನಿಮಾ ‘ಘೋಸ್ಟ್’ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಇದು ಪ್ಯಾನ್ ಇಂಡಿಯಾ ಸಿನಿಮಾ ಆಗಿದ್ದು, ಕನ್ನಡ ಸೇರಿದಂತೆ ಇನ್ನೂ ಹಲವು ಭಾಷೆಗಳಲ್ಲಿ ಸಿನಿಮಾದ ಬಿಡುಗಡೆ ಆಗಲಿದೆ. ಇತ್ತೀಚೆಗಷ್ಟೆ ‘ಘೋಸ್ಟ್’ ಸಿನಿಮಾದ ಪ್ರಚಾರವನ್ನು ಮುಂಬೈನಲ್ಲಿ ಮಾಡಲಾಗಿದೆ. ಇದೀಗ ಬೆಂಗಳೂರಿನಲ್ಲಿ ಅದ್ಧೂರಿಯಾಗಿ ಸಿನಿಮಾದ ಸುದ್ದಿಗೋಷ್ಠಿ ಆಯೋಜಿಸಲಾಗಿದೆ. ಪ್ರೆಸ್ ಮೀಟ್​ನಲ್ಲಿ ಶಿವರಾಜ್ ಕುಮಾರ್, ನಿರ್ದೇಶಕ ಶ್ರೀನಿ, ನಿರ್ಮಾಪಕ ಸಂದೇಶ್ ನಾಗರಾಜ್ ಇನ್ನೂ ಹಲವರು ಭಾಗಿಯಾಗಿದ್ದಾರೆ. ಸುದ್ದಿಗೋಷ್ಠಿಯ ಲೈವ್ ಇಲ್ಲಿ ನೋಡಿ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Published on: Oct 15, 2023 06:26 PM
Follow Us
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More