Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ‘ಇನ್​ಸ್ಪೆಕ್ಟರ್ ವಿಕ್ರಂ‘ ಆಗುತ್ತಿರುವ ಶಿವರಾಜ್ ಕುಮಾರ್

Shiva Rajkumar: ಮತ್ತೆ ಇನ್​ಸ್ಪೆಕ್ಟರ್ ವಿಕ್ರಂ ಆಗಲಿದ್ದಾರೆ ಶಿವರಾಜ್ ಕುಮಾರ್. ಶಿವರಾಜ್ ಕುಮಾರ್ ‘ಐವಿ ರಿಟರ್ನ್ಸ್’ ಸಿನಿಮಾವನ್ನು ಲಕ್ಕಿ ಗೋಪಾಲ್ ನಿರ್ದೇಶನ ಮಾಡುತ್ತಿದ್ದು, ದೊಡ್ಡ ತಂತ್ರಜ್ಞರ ಬಳಗ ಸಿನಿಮಾದಲ್ಲಿದೆ.

ಮತ್ತೆ ‘ಇನ್​ಸ್ಪೆಕ್ಟರ್ ವಿಕ್ರಂ‘ ಆಗುತ್ತಿರುವ ಶಿವರಾಜ್ ಕುಮಾರ್
Follow us
ಮಂಜುನಾಥ ಸಿ.
|

Updated on: Feb 04, 2024 | 11:21 PM

‘ಇನ್​ಸ್ಪೆಕ್ಟರ್ ವಿಕ್ರಂ’ ಸಿನಿಮಾವನ್ನು ಕನ್ನಡ ಸಿನಿಮಾ ಪ್ರೇಮಿಗಳು ಮರೆಯುವಂತಿಲ್ಲ. ಶಿವರಾಜ್ ಕುಮಾರ್ (Shiva Rajkumar) ನಟಿಸಿದ್ದ ಈ ಹಾಸ್ಯಪ್ರಧಾನ ಆಕ್ಷನ್ ಸಿನಿಮಾ 1989 ರಲ್ಲಿ ಬಿಡುಗಡೆ ಆಗಿ ಸೂಪರ್-ಡೂಪರ್ ಹಿಟ್ ಆಗಿತ್ತು. ಆ ಸಿನಿಮಾವನ್ನು ಆಧಾರವಾಗಿಟ್ಟುಕೊಂಡು ಹಲವು ಸಿನಿಮಾಗಳು ಬಂದಿವೆ. ಅದೇ ಹೆಸರನ್ನು ಇಟ್ಟುಕೊಂಡು ಸಹ ಈಗಾಗಲೇ ಒಂದು ಸಿನಿಮಾ ಬಂದಿದೆ. ಇದೀಗ ಮತ್ತೊಮ್ಮೆ ಅದೇ ಹೆಸರಿನ ಸಿನಿಮಾ ಬಿಡುಗಡೆ ಆಗಲಿದ್ದು, ಸಿನಿಮಾಕ್ಕೆ ‘ಐವಿ ರಿಟರ್ನ್ಸ್​’ (ಇನ್​ಸ್ಪೆಕ್ಟರ್ ವಿಕ್ರಂ ರಿಟರ್ನ್ಸ್​) ಎಂದು ಹೆಸರಿಡಲಾಗಿದೆ.

ಕೆಲವೊಂದು ಸಿನಿಮಾಗಳು ಸೆಟ್ಟೇರುವುದಕ್ಕೂ ಮುನ್ನವೇ ಭರ್ಜರಿ ಸೌಂಡು ಮಾಡುತ್ತವೆ. ಮೇಕಿಂಗ್‌, ಬಜೆಟ್‌, ಬೃಹತ್‌ ತಾರಾಗಣ, ನೂರಾರು ದಿನಗಳ ಚಿತ್ರೀಕರಣ, ಸ್ಟಾರ್‌ ಮಟ್ಟದ ತಾಂತ್ರಿಕ ಬಳಗ. ಹೀಗೆ ನಾನಾ ಕಾರಣಗಳಿಂದಾಗಿ ಪ್ರೇಕ್ಷಕರ ಗಮನ ಸೆಳೆಯುತ್ತವೆ. ಈಗ ‘ ಐವಿ ರಿರ್ಟನ್ಸ್’ ಸಿನಿಮಾ ಹೀಗೆಯೇ ತನ್ನ ಗಟ್ಟಿ ತಾಂತ್ರಿಕ ವರ್ಗ ಹಾಗೂ ಸಿನಿಮಾದ ನಟ-ನಟಿಯರಿಂದ ಸೆಟ್ಟೇರುವ ಮುನ್ನವೇ ಗಮನ ಸೆಳೆಯುತ್ತಿದೆ.

ಲಕ್ಕಿ ಗೋಪಾಲ್ ಮೊದಲ ನಿರ್ದೇಶನದ ಸಿನಿಮಾ ‘ಐವಿ ರಿರ್ಟನ್ಸ್’. ಮೊದಲ ಸಿನಿಮಾದಲ್ಲಿಯೇ ಶಿವರಾಜ್ ಕುಮಾರ್ ಅವರಂಥಹಾ ದೊಡ್ಡ ನಟರಿಗೆ ಆಕ್ಷನ್ ಕಟ್ ಹೇಳಲಿದ್ದಾರೆ ಲಕ್ಕಿ ಗೋಪಾಲ್. ಈ ಸಿನಿಮಾದಲ್ಲಿ ಹೆಸರಾಂತ ಟೆಕ್ನಿಷಿಯನ್‌ ಕೆಲಸ ಮಾಡಲಿದ್ದಾರೆ. ಹೀಗಾಗಿ ಈ ಸಿನಿಮಾ ತಾಂತ್ರಿಕವಾಗಿ ಶ್ರೀಮಂತಿಕೆಯಿಂದ ಕೂಡಿರಲಿದೆ. ತಮಿಳಿನ ಹೆಸರಾಂತ ಸಂಗೀತ ನಿರ್ದೇಶಕ ಅಮ್ರಿಷ್ ಈ ಸಿನಿಮಾದ ಹಾಡುಗಳನ್ನು ಕಂಪೋಸ್‌ ಮಾಡಿದ್ದು, ‘ರುಸ್ತುಂ’, ‘ಘೋಸ್ಟ್’ ಸಿನಿಮಾದ ಖ್ಯಾತಿಯ ಮಹೇನ್ ಸಿಂಹ ಸಿನಿಮಾಟೋಗ್ರಫಿಯಲ್ಲಿ ‘ಐವಿ ರಿರ್ಟನ್ಸ್’ ಸಿನಿಮಾ ಮೂಡಿ ಬರಲಿದೆ. ಸೂರಿ ಅವರ ಚಿತ್ರಗಳಿಗೆ ಕತ್ತರಿ ಪ್ರಯೋಗ ಮಾಡಿರುವ ದೀಪು ಎಸ್ ಕುಮಾರ್ ಚಿತ್ರಕ್ಕೆ ಸಂಕಲನಕಾರರಾಗಿ ಕೆಲಸ ಮಾಡಿದ್ದಾರೆ. ವಿದ್ಯಾಧರಣ್ ಕಥೆ, ಮಾಸ್ತಿ ಪಂಚಿಂಗ್ ಮಾತು, ಚೇತನ್ ಡಿಸೋಜಾ ಅವರ ಸಾಹಸ ನಿರ್ದೇಶನ ಚಿತ್ರಕ್ಕೆ ಮತ್ತಷ್ಟು ರಂಗು ತುಂಬಲಿದೆ. ವೇಣುಗೋಪಾಲ್ ಅಸೋಸಿಯೇಟ್ ಡೈರೆಕ್ಟರ್ ಆಗಿ, ರೇಣುಕಾ ಪ್ರಸಾದ್ ಎಕ್ಸಿಕ್ಯೂಟಿವ್ ಪ್ರೊಡ್ಯೂಸರ್ ಆಗಿ, ಮೈಸೂರು ರಮೇಶ್ ಪ್ರೊಡಕ್ಷನ್ ಮ್ಯಾನೇಜರ್ ಜವಾಬ್ದಾರಿ ಹೊತ್ತುಕೊಂಡಿದ್ದಾರೆ.

ಇದನ್ನೂ ಓದಿ:ಶಿವರಾಜ್ ಕುಮಾರ್-ರಾಮ್ ಚರಣ್ ಸಿನಿಮಾಕ್ಕೆ ಎಆರ್ ರೆಹಮಾನ್ ಸಂಗೀತ

1989 ರಲ್ಲಿ ಬಿಡುಗಡೆ ಆಗಿದ್ದ ‘ಇನ್ಸ್‌ಪೆಕ್ಟರ್‌ ವಿಕ್ರಂ’ ಸಿನಿಮಾ ಶಿವರಾಜ್‌ಕುಮಾರ್‌ ಕರಿಯರ್‌ನಲ್ಲಿ ಅತ್ಯಂತ ವಿಶೇಷವಾಗಿತ್ತು. ಅವರು ತರಲೆ ಪೊಲೀಸ್‌ ಆಗಿ ನಟಿಸಿದ್ದ ಈ ಸಿನಿಮಾ ಆ ಕಾಲಕ್ಕೆ ಸೂಪರ್‌ ಡ್ಯೂಪರ್‌ ಹಿಟ್‌ ಆಗಿತ್ತು. ಈಗ ಅವರು ಮತ್ತೆ ಅಂತಹದ್ದೇ ಕಥೆಯೊಂದಿಗೆ ‘ಐವಿ ರಿಟರ್ನ್ಸ್’ ಸಿನಿಮಾ ಮೂಲಕ ಪ್ರೇಕ್ಷಕರ ಮುಂದೆ ಬರಲಿದ್ದಾರೆ. 34 ವರ್ಷಗಳ ಹಿಂದೆ ದಿನೇಶ್‌ ಬಾಬು ‘ಇನ್ಸ್‌ಪೆಕ್ಟರ್‌ ವಿಕ್ರಂ’ ಚಿತ್ರಕ್ಕೆ ಆ್ಯಕ್ಷನ್‌ ಕಟ್‌ ಹೇಳಿದ್ದರು. ‘ಐವಿ ರಿಟರ್ನ್ಸ್’ ಸಿನಿಮಾದಲ್ಲಿ ಶಿವರಾಜ್‌ಕುಮಾರ್‌ ಸೋದರ ಸಂಬಂಧಿ ಲಕ್ಕಿ ಗೋಪಾಲ್‌ ನಿರ್ದೇಶನದ ಕ್ಯಾಪ್‌ ತೊಟ್ಟಿದ್ದಾರೆ. ಈ ಚಿತ್ರದಲ್ಲಿ ಶಿವಣ್ಣ ಖಾಕಿ ಖದರ್ ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರಕ್ಕೆ ಮೈಲಾರಿ ಎಂ ಹಣ ಹಾಕುತ್ತಿದ್ದಾರೆ. ಪ್ರೀ ಪ್ರೊಡಕ್ಷನ್ ಕೆಲಸ ಮುಗಿದಿದ್ದು, ಶೀಘ್ರದಲ್ಲೇ ಇನ್ಸ್ ಪೆಕ್ಟರ್ ವಿಕ್ರಂ ರಿಪೋರ್ಟಿಂಗ್ ಶುರು ಮಾಡಲಿದ್ದಾರೆ. ಅಂದರೆ ಚಿತ್ರೀಕರಣ ಶೀಘ್ರದಲ್ಲೇ ಪ್ರಾರಂಭವಾಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಉಗ್ರರ ದಾಳಿಗೆ ಬಲಿಯಾದ ಲೆ. ವಿನಯ್ ನರ್ವಾಲ್​ಗೆ ಪತ್ನಿಯಿಂದ ಭಾವುಕ ವಿದಾಯ
ಉಗ್ರರ ದಾಳಿಗೆ ಬಲಿಯಾದ ಲೆ. ವಿನಯ್ ನರ್ವಾಲ್​ಗೆ ಪತ್ನಿಯಿಂದ ಭಾವುಕ ವಿದಾಯ