AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕರಟಕ ಧಮನಕ’ ಇದು ಎರಡು ಗುಳ್ಳೆ ನರಿಗಳ ಕತೆ: ಪೋಸ್ಟರ್ ಬಿಡುಗಡೆ

Yogaraj Bhatt: ಶಿವರಾಜ್ ಕುಮಾರ್, ಪ್ರಭುದೇವ ನಟನೆಯ 'ಕರಟಕ ಧಮನಕ' ಸಿನಿಮಾದ ಪೋಸ್ಟರ್ ಬಿಡುಗಡೆ ಆಗಿದೆ. ಈ ಸಿನಿಮಾ ಎರಡು ಗುಳ್ಳೆನರಿಗಳ ಕತೆಯಂತೆ.

'ಕರಟಕ ಧಮನಕ' ಇದು ಎರಡು ಗುಳ್ಳೆ ನರಿಗಳ ಕತೆ: ಪೋಸ್ಟರ್ ಬಿಡುಗಡೆ
ಶಿವರಾಜ್ ಕುಮಾರ್-ಪ್ರಭುದೇವ
ಮಂಜುನಾಥ ಸಿ.
|

Updated on: Jul 14, 2023 | 3:39 PM

Share

ಯೋಗರಾಜ್ ಭಟ್ (Yogaraj Bhatt) ನಿರ್ದೇಶಿಸಿ, ಶಿವರಾಜ್ ಕುಮಾರ್ (Shiva Rajkumar), ಪ್ರಭುದೇವ (Prabhu Deva) ಒಟ್ಟಿಗೆ ನಟಿಸಿರುವ ‘ಕರಟಕ ಧಮನಕ’ ಸಿನಿಮಾದ ಪೋಸ್ಟರ್ ಬಿಡುಗಡೆ ಆಗಿದ್ದು, ರೆಟ್ರೋ ಮಾದರಿಯಲ್ಲಿರುವ ಪೋಸ್ಟರ್ ಗಮನ ಸೆಳೆಯುತ್ತಿದೆ. ಪೋಸ್ಟರ್ ಜೊತೆಗೆ ವಿಡಿಯೋ ಸಹ ಒಂದನ್ನು ಬಿಡುಗಡೆ ಮಾಡಲಾಗಿದ್ದು, ವಿಡಿಯೋನಲ್ಲಿ ನಿರ್ದೇಶಕ ಯೋಗರಾಜ್ ಭಟ್ ತಮ್ಮ ಸಿನಿಮಾದ ಬಗ್ಗೆ ಮಾತನಾಡಿದ್ದಾರೆ. ಅಂದಹಾಗೆ ಈ ಸಿನಿಮಾ ಎರಡು ಗುಳ್ಳೆ ನರಿಗಳ ಕತೆಯಂತೆ!

ನರಿ ಬುದ್ಧಿ ಎನ್ನುವುದು ಮನುಷ್ಯನಲ್ಲಿ ಇದ್ದೇ ಇದೆ. ಕೆಲವರಲ್ಲಿ ಹೆಚ್ಚು, ಕೆಲವರಲ್ಲಿ ಕಡಿಮೆ ಒಟ್ಟಾರೆ ತಲೆ ತಲಾಂತರಗಳಿಂದಲೂ ನರಿ ಬುದ್ಧಿ ಎಂಬುದು ಮನುಷ್ಯನ ರಕ್ತದಲ್ಲಿ ಸೇರಿಕೊಂಡಿದೆ. ಅತ್ಯಂತ ನೀಚ ಬುದ್ಧಿಯ, ಕುತಂತ್ರೀ ಬುದ್ಧಿಯ ನರಿಗಳನ್ನು ಕರಟಕ, ಧಮನಕ ಎಂದು ಕರೆಯುತ್ತಿದ್ದರೆಂದು ಪುರಾಣಗಳಲ್ಲಿ ಉಲ್ಲೇಖಗಳಿವೆ. ನಮ್ಮ ಸಿನಿಮಾ ಸಹ ಅಂಥಹದೇ ಕುತಂತ್ರಿಗಳಿಬ್ಬರ ಕತೆಯಾಗಿರುವ ಕಾರಣ ಅದೇ ಹೆಸರನ್ನು ನಾವು ಇಟ್ಟಿದ್ದೇವೆ ಎಂದಿದ್ದಾರೆ ಭಟ್ಟರು.

ಇಂದು ಬಿಡುಗಡೆ ಆಗಿರುವ ಪೋಸ್ಟರ್​ನಲ್ಲಿ ಸಹ ಶಿವರಾಜ್ ಕುಮಾರ್ ಹಾಗೂ ಪ್ರಭುದೇವ ಅವರ ಜೊತೆಗೆ ಎರಡು ನರಿಗಳ ಚಿತ್ರಗಳು ಸಹ ಇವೆ. ಜೊತೆಗೆ ”’ಒಂದಾನೊಂದು ಕಾಲದಲ್ಲಿ ಎರಡು ಕುತಂತ್ರಿ ನರಿಗಳಿದ್ದವು. ಒಂದರ ಹೆಸರು “ಕರಟಕ” ಇನ್ನೊಂದರ ಹೆಸರು “ದಮನಕ”. ಈ ಎರಡೂ ನರಿಗಳು ಕಾಡು ಮತ್ತು ನಾಡಿನ ತಲೆ ಕೆಡಿಸಿ ಇತಿಹಾಸವಾದವು. ಆ ಕುತಂತ್ರಿ ನರಿಗಳು ಇಂದು ಇಲ್ಲಿ ಮಾನವ ರೂಪ ತಾಳಿವೆ. ಎಚ್ಚರಿಕೆ” ಎಂಬ ಬರಹವೂ ಇದೆ.

ಇದನ್ನೂ ಓದಿ:ಶಿವರಾಜ್ ಕುಮಾರ್ ಹುಟ್ಟುಹಬ್ಬದಂದು ಘೋಷಣೆಯಾದ ಸಿನಿಮಾಗಳ ಪಟ್ಟಿ ಇಲ್ಲಿದೆ

ಸಿನಿಮಾವನ್ನು ಬೆಂಗಳೂರು ಗ್ರಾಮಾಂತರ, ಕೋಲಾರ, ಗೌರಿಬಿದನೂರು ಹಾಗೂ ಉತ್ತರ ಕರ್ನಾಟಕದಲ್ಲಿ ಚಿತ್ರೀಕರಣ ನಡೆದಿದೆ. ಶಿವರಾಜಕುಮಾರ್, ಪ್ರಭುದೇವ, ರವಿಶಂಕರ್, ತನಿಕೆಲ್ಲ ಭರಣಿ, ರಂಗಾಯಣ ರಘು, ಪ್ರಿಯಾ ಆನಂದ್, ನಿಶ್ವಿಕಾ ನಾಯ್ಡು ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ. ವಿ.ಹರಿಕೃಷ್ಣ ಸಂಗೀತ ನಿರ್ದೇಶನ ನೀಡಿರುವ ಈ ಸಿನಿಮಾವನ್ನು ರಾಕ್​ಲೈನ್ ವೆಂಕಟೇಶ್ ನಿರ್ಮಾಣ ಮಾಡಿದ್ದಾರೆ. ಸಂತೋಷ್ ರೈ ಪಾತಾಜೆ ಛಾಯಾಗ್ರಹಣ ಹಾಗೂ ಕೆ.ಎಂ.ಪ್ರಕಾಶ್ ಅವರ ಸಂಕಲನ ಈ ಚಿತ್ರಕ್ಕಿದೆ. ಯೋಗರಾಜ್ ಭಟ್ ಹಾಗೂ ರವಿ ಈ ಚಿತ್ರಕ್ಕೆ ಕಥೆ ರಚಿಸಿದ್ದು, ಚಿತ್ರಕಥೆಯನ್ನು ಯೋಗರಾಜ್ ಭಟ್, ರವಿ ಹಾಗೂ ಸುಬ್ರಹ್ಮಣ್ಯ ಬರೆದಿದ್ದಾರೆ.

‘ಕರಟಕ ಧಮನಕ’ ಸಿನಿಮಾ 80-90 ರ ದಶಕದಲ್ಲಿ ನಡೆಯುವ ಕತೆಯನ್ನು ಹೊಂದಿದ್ದು, ಇಬ್ಬರು ನಟೋರಿಯಸ್ ವ್ಯಕ್ತಿಗಳು ತಂತ್ರ-ಕುತಂತ್ರದಿಂದ ಜನರನ್ನು ಮೋಸ ಮಾಡಿ ಬದುಕುವುದನ್ನೇ ವೃತ್ತಿ ಮಾಡಿಕೊಂಡಿರುತ್ತಾರೆ. ಅವರ ಕತೆಯನ್ನೇ ಕರಟಕ-ಧಮನಕ ಸಿನಿಮಾದಲ್ಲಿ ಭಟ್ಟರು ಹೇಳುತ್ತಿದ್ದಾರೆ.

ಯೋಗರಾಜ್ ಭಟ್ಟರು ಈ ಹಿಂದೆ ಗಾಳಿಪಟ 2 ಸಿನಿಮಾ ನಿರ್ದೇಶನ ಮಾಡಿದ್ದರು. ಆ ಸಿನಿಮಾ ಸೂಪರ್ ಹಿಟ್ ಆಗಿತ್ತು. ಅದರ ಬೆನ್ನಲ್ಲೆ ಈಗ ‘ಕರಟಕ ಧಮನಕ’ ನಿರ್ದೇಶಿಸಿ ಬಿಡುಗಡೆ ಮಾಡುತ್ತಿದ್ದಾರೆ. ಇದಾದ ಬಳಿಕ ಭಟ್ಟರು ನಿರ್ದೇಶಿಸಿರುವ ಕುಸ್ತಿಗೆ ಸಂಬಂಧಿಸಿದ ಸಿನಿಮಾ ಬಿಡುಗಡೆ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ