AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಣ್ಣ-ಉಪ್ಪಿ-ರಾಜ್ ಬಿ ಶೆಟ್ಟಿ​ ನಟನೆಯ ‘45’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ

45 Kannada movie release date: ಶಿವರಾಜ್ ಕುಮಾರ್, ಉಪೇಂದ್ರ, ರಾಜ್ ಬಿ ಶೆಟ್ಟಿ ನಟಿಸಿ ಅರ್ಜುನ್ ಜನ್ಯ ಮೊದಲ ಬಾರಿಗೆ ನಿರ್ದೇಶನ ಮಾಡಿರುವ 45 ಕನ್ನಡ ಸಿನಿಮಾ ಆಗಸ್ಟ್ 15ರಂದೇ ಬಿಡುಗಡೆ ಆಗಬೇಕಿತ್ತು. ಆದರೆ ವಿಎಫ್​ಎಕ್ಸ್ ಕಾರಣಕ್ಕೆ ಬಿಡುಗಡೆ ವಿಳಂಬವಾಗಿದೆ. ಇದೀಗ ಸಿನಿಮಾ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಘೋಷಣೆ ಮಾಡಿದೆ.

ಶಿವಣ್ಣ-ಉಪ್ಪಿ-ರಾಜ್ ಬಿ ಶೆಟ್ಟಿ​ ನಟನೆಯ ‘45’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
45 Kannada Movie
ಮಂಜುನಾಥ ಸಿ.
|

Updated on:Aug 21, 2025 | 5:17 PM

Share

ಶಿವರಾಜ್ ಕುಮಾರ್ (Shiva Rajkumar), ಉಪೇಂದ್ರ ಮತ್ತು ರಾಜ್ ಬಿ ಶೆಟ್ಟಿ ನಟಿಸಿರುವ ‘45’ ಸಿನಿಮಾ ಕನ್ನಡದ ಬಹು ನಿರೀಕ್ಷಿತ ಸಿನಿಮಾಗಳಲ್ಲಿ ಒಂದು. ಸಿನಿಮಾ ಅನ್ನು ಸಂಗೀತ ನಿರ್ದೇಶಕ ಅರ್ಜುನ ಜನ್ಯ ನಿರ್ದೇಶನ ಮಾಡಿದ್ದು, ಇದು ಅವರ ಮೊದಲ ನಿರ್ದೇಶನದ ಸಿನಿಮಾ. ಈ ಸಿನಿಮಾ ಆಗಸ್ಟ್ 15 ರಂದು ಬಿಡುಗಡೆ ಆಗಲಿದೆ ಎಂದು ಈ ಮುಂಚೆ ಘೋಷಿಸಲಾಗಿತ್ತು. ಆದರೆ ಅನಿವಾರ್ಯ ಕಾರಣಗಳಿಂದಾಗಿ ಸಿನಿಮಾ ಬಿಡುಗಡೆ ನಿಗದಿತ ದಿನಾಂಕಕ್ಕೆ ಮಾಡಲಾಗಲಿಲ್ಲ. ಇದೀಗ ಸಿನಿಮಾದ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಘೋಷಣೆ ಮಾಡಿದೆ.

‘45’ ಕನ್ನಡ ಸಿನಿಮಾ ಡಿಸೆಂಬರ್ 25 ರಂದು ಬಿಡುಗಡೆ ಆಗಲಿದೆ. ಡಿಸೆಂಬರ್ ತಿಂಗಳಲ್ಲಿ ಬಿಡುಗಡೆ ಆಗುವ ಕನ್ನಡ ಸಿನಿಮಾಗಳು ದೊಡ್ಡ ಹಿಟ್ ಆದ ಉದಾಹರಣೆಗಳು ಕಳೆದ ಕೆಲ ವರ್ಷಗಳಲ್ಲಿ ಇವೆ. ಇದೀಗ ‘45’ ಸಿನಿಮಾ ಸಹ ಡಿಸೆಂಬರ್​​ ತಿಂಗಳಲ್ಲಿ ಬಿಡುಗಡೆಗೆ ಮುಂದಾಗಿದ್ದು, ಈ ಸಿನಿಮಾ ಸಹ ಹಿಟ್ ಆಗಲಿದೆಯೇ ಕಾದು ನೋಡಬೇಕಿದೆ. ಆದರೆ ಡಿಸೆಂಬರ್ ತಿಂಗಳಲ್ಲಿ ಕೆಲ ದೊಡ್ಡ ಸಿನಿಮಾಗಳು ಸಹ ಬಿಡುಗಡೆ ಆಗುತ್ತಿದ್ದು ‘45’ ಸಿನಿಮಾಕ್ಕೆ ಪ್ರಬಲ ಸ್ಪರ್ಧೆಯನ್ನು ಬಾಕ್ಸ್ ಆಫೀಸ್​​ನಲ್ಲಿ ಒಡ್ಡಲಿವೆ.

ಸಿನಿಮಾದ ನಿರ್ಮಾಪಕ ರಮೇಶ್ ರೆಡ್ಡಿ ಅವರು ಹೇಳಿರುವಂತೆ, ‘45’ ಸಿನಿಮಾದ ವಿತರಣೆ ಹಕ್ಕಿಗಾಗಿ ಮೈತ್ರಿ ಮೂವಿ ಮೇಕರ್ಸ್​ನವರು ಸಂಪರ್ಕ ಮಾಡಿದ್ದರಂತೆ. ಆದರೆ ಸಿನಿಮಾದ ಪೂರ್ಣ ಕೆಲಸ ಮುಗಿಸಿ, ಅದನ್ನು ವಿತರಕರಿಗೆ ತೋರಿಸದ ಬಳಿಕವಷ್ಟೆ ವಿತರಣೆ ಹಕ್ಕು ಮಾರಾಟ ಮಾಡುವ ಯೋಜನೆಯನ್ನು ನಿರ್ಮಾಪಕರು ಹಾಕಿಕೊಂಡಿದ್ದಾರೆ. ಹಾಗಾಗಿ ಈಗಲೇ ಯಾರಿಗೂ ಸಹ ವಿತರಣೆ ಹಕ್ಕು ನೀಡಿಲ್ಲ.

ಇದನ್ನೂ ಓದಿ:ಮಾಲಾಶ್ರೀ ಪುತ್ರಿ ಆರಾಧನಾಗೆ ‘ನೆಕ್ಸ್ಟ್ ಲೆವೆಲ್’ ಅವಕಾಶ; ಉಪೇಂದ್ರ ಜೊತೆ ಸಿನಿಮಾ

ಆಗಸ್ಟ್ 15ಕ್ಕೆ ಬಿಡುಗಡೆ ಆಗಬೇಕಿದ್ದ ಈ ಸಿನಿಮಾದ ಬಿಡುಗಡೆ ತಡವಾಗಲು ವಿಎಫ್​ಎಕ್ಸ್ ಕಾರಣವಂತೆ. ಅನೇಕ ಬ್ಲಾಕ್ ಬಸ್ಟರ್, ಆಸ್ಕರ್ ವಿಜೇತ ಹಾಲಿವುಡ್ ಸಿನಿಮಾಗಳಿಗೆ ವಿಎಫ್​ಎಕ್ಸ್ ಮಾಡಿರುವ ಮಾರ್ಜ್ ಸಂಸ್ಥೆ ‘45’ ಸಿನಿಮಾಕ್ಕೂ ವಿಎಫ್​ಎಕ್ಸ್ ಮಾಡುತ್ತಿದ್ದು, ಸಿನಿಮಾನಲ್ಲಿ ಗ್ರಾಫಿಕ್ಸ್ ಮತ್ತು ವಿಎಫ್​ಎಕ್ಸ್​ ಪ್ರಮುಖವಾಗಿದ್ದು ಇದೇ ಕಾರಣಕ್ಕೆ ಸಿನಿಮಾದ ಬಿಡುಗಡೆ ಆಗಸ್ಟ್ 15 ರಂದು ಆಗಲಿಲ್ಲವಂತೆ. ಮಾರ್ಜ್ ಸಂಸ್ಥೆ ಕೆನಡಾ ಮೂಲದ್ದಾಗಿದ್ದು ಈ ಸಂಸ್ಥೆಯ ಮುಖ್ಯ ತಂತ್ರಜ್ಞ ಯಶ್ ಗೌಡ ಸಹ ಈ ಬಗ್ಗೆ ಮಾತನಾಡಿದ್ದು, ‘45’ ನಮ್ಮ ಸಂಸ್ಥೆ ವಿಎಫ್​ಎಕ್ಸ್ ಮಾಡುತ್ತಿರುವ ಮೊದಲ ಕನ್ನಡ ಸಿನಿಮಾ ಆಗಿದೆ. ಕತೆಯಲ್ಲಿ ವಿಎಫ್​ಎಕ್ಸ್​ಗೆ ಮಹತ್ವದ ಪಾತ್ರ ಇರುವ ಕಾರಣದಿಂದಾಗಿ ಹೆಚ್ಚಿನ ಜಾಗೃತೆಯಿಂದ ಕೆಲಸ ನಡೆಯುತ್ತಿದೆ. ಸೆಪ್ಟೆಂಬರ್ 16ರ ಒಳಗೆ ಸಿನಿಮಾದ ಎಲ್ಲ ವಿಎಫ್​ಎಕ್ಸ್ ಕಾರ್ಯ ಪೂರ್ಣಗೊಳ್ಳಲಿದೆ, ಅದಾದ ಒಂದು ತಿಂಗಳಲ್ಲಿ ಇನ್ನೊಂದಿಷ್ಟು ಕೆಲಸಗಳು ಇರಲಿವೆ. ಸಿನಿಮಾದ ಬಿಡುಗಡೆ ತಡವಾದರೂ ಸಿನಿಮಾದ ಗುಣಮಟ್ಟ ಅತ್ಯದ್ಭುತವಾಗಿರಲಿದೆ’ ಎಂದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:09 pm, Thu, 21 August 25

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ