AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮದರ್ ಪ್ರಾಮಿಸ್’ ಸಿನಿಮಾ ನೋಡಿದ ಶಿವಣ್ಣ, ಹೇಳಿದ್ದೇನು?

Shiva Rajkumar-Daali Dhananjay: ಹಾಸ್ಯ ಪ್ರಧಾನ ಕೌಟುಂಬಿಕ ಸಿನಿಮಾ ಆಗಿರುವ ‘ಮದರ್ ಪ್ರಾಮಿಸ್’ ಅನ್ನು ಕುಟುಂಬಗಳು ಒಟ್ಟಿಗೆ ಹೋಗಿ ವೀಕ್ಷಿಸುತ್ತಿವೆ. ಆದರೆ ಕೆಲವರು ಸಿನಿಮಾಕ್ಕೆ ಉದ್ದೇಶಪೂರ್ವಕವಾಗಿ ಹಾನಿ ಮಾಡುವ ಯತ್ನಗಳನ್ನು ಮಾಡುತ್ತಿದ್ದಾರೆಂದು ಚಿತ್ರತಂಡ ಆರೋಪಿಸಿದೆ. ಇದರ ನಡುವೆ ಸಿನಿಮಾಕ್ಕೆ ಶಿವರಾಜ್ ಕುಮಾರ್ ಅವರ ಬೆಂಬಲ ದೊರೆತಿದೆ. ‘ಮದರ್ ಪ್ರಾಮಿಸ್’ ನೋಡಿರುವ ಶಿವರಾಜ್ ಕುಮಾರ್, ಸಿನಿಮಾದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

‘ಮದರ್ ಪ್ರಾಮಿಸ್’ ಸಿನಿಮಾ ನೋಡಿದ ಶಿವಣ್ಣ, ಹೇಳಿದ್ದೇನು?
Shiva Rajkumar Mother Promise
ಮಂಜುನಾಥ ಸಿ.
|

Updated on: Jul 18, 2026 | 12:46 PM

Share

ಡಾಲಿ ಧನಂಜಯ್ (Daali Dhananjaya) ನಿರ್ಮಿಸಿ, ನಟನೆ ಸಹ ಮಾಡಿರುವ ‘ಮದರ್ ಪ್ರಾಮಿಸ್’ ಸಿನಿಮಾ ಕಳೆದ ವಾರವಷ್ಟೆ ಬಿಡುಗಡೆ ಆಗಿದ್ದು, ಉತ್ತಮ ಪ್ರದರ್ಶನ ಕಾಣುತ್ತಿದೆ. ವಿಮರ್ಶಕರು ಸಹ ಸಿನಿಮಾದ ಬಗ್ಗೆ ಉತ್ತಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಹಾಸ್ಯ ಪ್ರಧಾನ ಕೌಟುಂಬಿಕ ಸಿನಿಮಾ ಆಗಿರುವ ‘ಮದರ್ ಪ್ರಾಮಿಸ್’ ಅನ್ನು ಕುಟುಂಬಗಳು ಒಟ್ಟಿಗೆ ಹೋಗಿ ವೀಕ್ಷಿಸುತ್ತಿವೆ. ಆದರೆ ಕೆಲವರು ಸಿನಿಮಾಕ್ಕೆ ಉದ್ದೇಶಪೂರ್ವಕವಾಗಿ ಹಾನಿ ಮಾಡುವ ಯತ್ನಗಳನ್ನು ಮಾಡುತ್ತಿದ್ದಾರೆಂದು ಚಿತ್ರತಂಡ ಆರೋಪಿಸಿದೆ. ಇದರ ನಡುವೆ ಸಿನಿಮಾಕ್ಕೆ ಶಿವರಾಜ್ ಕುಮಾರ್ ಅವರ ಬೆಂಬಲ ದೊರೆತಿದೆ. ‘ಮದರ್ ಪ್ರಾಮಿಸ್’ ನೋಡಿರುವ ಶಿವರಾಜ್ ಕುಮಾರ್, ಸಿನಿಮಾದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಶಿವರಾಜ್ ಕುಮಾರ್ ಅವರು ‘ಮದರ್ ಪ್ರಾಮಿಸ್’ ವೀಕ್ಷಿಸಿದ್ದು ಸಿನಿಮಾದ ಬಗ್ಗೆ ಟ್ವಿಟ್ಟರ್​​ನಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ‘ಮದರ್ ಪ್ರಾಮಿಸ್’ ತುಂಬ ಒಳ್ಳೆಯ ಚಿತ್ರ. ತುಂಬಾ ಜನರ ಮೆಚ್ಚುಗೆ ಪಡೆದ ಚಿತ್ರ. ಎಷ್ಟೇ ಒಳ್ಳೆಯ ಚಿತ್ರಗಳು ಬಂದರೂ ಪ್ರೇಕ್ಷಕರು ಥಿಯೇಟರ್‌ಗೆ ಬಂದು ಬೆಂಬಲಿಸಿದರೆ ಮಾತ್ರ ಚಿತ್ರಗಳು ಉಳಿಯುವುದಕ್ಕೆ ಸಾಧ್ಯ. ಧನಂಜಯ, ಅವರು ಹೊಸ ಪ್ರತಿಭೆಗಳನ್ನು ಚಿತ್ರರಂಗಕ್ಕೆ ಪರಿಚಯಿಸುತ್ತ ಬಂದಿದ್ದಾರೆ. ಡಾಲಿ ಪಿಚ್ಚರ್ಸ್‌ನಿಂದ ಇಂತಹ ಪ್ರಯತ್ನಗಳು ನಿರಂತರವಾಗಿ ನಡೆಯುತ್ತಿರಬೇಕು ಎಂಬುದು ನನ್ನ ಆಶಯ’ ಎಂದಿದ್ದಾರೆ.

ಡಾಲಿ ಧನಂಜಯ್ ಅವರ ಪ್ರಯತ್ನಗಳಿಗೆ ಮೊದಲಿನಿಂದಲೂ ಶಿವರಾಜ್ ಕುಮಾರ್ ಅವರು ಬೆಂಬಲ ನೀಡುತ್ತಲೇ ಬಂದಿದ್ದಾರೆ. ಧನಂಜಯ್ ಸಹ ಶಿವರಾಜ್ ಕುಮಾರ್ ಅವರನ್ನು ಹಿರಿಯ ಸಹೋದರನಂತೆ ಕಾಣುತ್ತಾರೆ. ಇಬ್ಬರ ನಡುವೆ ಪರಸ್ಪರ ಪ್ರೀತಿ, ಗೌರವಗಳಿವೆ. ಈಗ ಧನಂಜಯ್ ಸಿನಿಮಾಕ್ಕೆ ಕೆಲವರು ಸಮಸ್ಯೆ ಮಾಡುತ್ತಿದ್ದಾರೆ ಎನ್ನುವ ಸಮಯದಲ್ಲಿ ಶಿವರಾಜ್ ಕುಮಾರ್ ಅವರು ಸಿನಿಮಾದ ಪರವಾಗಿ ನಿಂತಿದ್ದಾರೆ. ಖುದ್ದು ಸಿನಿಮಾ ವೀಕ್ಷಿಸಿ ಸಿನಿಮಾದ ಬಗ್ಗೆ ಒಳ್ಳೆಯ ಮಾತುಗಳನ್ನಾಡಿದ್ದಾರೆ.

ಇದನ್ನೂ ಓದಿ:ಶಿವರಾಜ್ ಕುಮಾರ್ ಸ್ಟೈಲ್​ ನೋಡಿ, ಊಟಕ್ಕೆ ಹೋದಾಗಲೂ ತಮಾಷೆ ಬಿಡರು

ಮುಖ್ಯವಾಗಿ, ಇತ್ತೀಚೆಗೆ ಡಾಲಿ ಧನಂಜಯ್ ನಡೆಸಿದ ಸುದ್ದಿಗೋಷ್ಠಿಯಲ್ಲಿ, ‘ಇದು ನಿರ್ಮಾಪಕನಾಗಿ ನನ್ನ ಕೊನೆಯ ಸಿನಿಮಾ’ ಎಂದು ಬೇಸರದಿಂದ ನುಡಿದಿದ್ದರು. ಒಳ್ಳೆಯ ಸಿನಿಮಾ ಅನ್ನು ಕೊಲ್ಲಲು ನಡೆಸಲಾಗುತ್ತಿರುವ ಪ್ರಯತ್ನದ ಬಗ್ಗೆ ತಮಗೆ ಸಬೇಸರವಾಗಿದ್ದು, ಇದೇ ಕಾರಣಕ್ಕೆ ತಾವು ಸಿನಿಮಾ ನಿರ್ಮಾಣವನ್ನೇ ನಿಲ್ಲಿಸುವ ಯೋಚನೆ ಮಾಡಿರುವುದಾಗಿ ಅವರು ಹೇಳಿಕೊಂಡಿದ್ದರು. ಇದೀಗ ಶಿವರಾಜ್ ಕುಮಾರ್ ಅವರು ಸಿನಿಮಾ ನೋಡಿದ ಬಳಿಕ ‘ಡಾಲಿ ಪಿಚ್ಚರ್ಸ್‌ನಿಂದ ಇಂತಹ ಪ್ರಯತ್ನಗಳು ನಿರಂತರವಾಗಿ ನಡೆಯುತ್ತಿರಬೇಕು ಎಂಬುದು ನನ್ನ ಆಶಯ’ ಎಂದಿದ್ದಾರೆ. ಆ ಮೂಲಕ ಧನಂಜಯ್ ಅವರು ಸಿನಿಮಾ ನಿರ್ಮಾಣ ನಿಲ್ಲಿಸಬಾರದು’ ಎಂದಿದ್ದಾರೆ.

‘ಮದರ್ ಪ್ರಾಮಿಸ್’ ಸಿನಿಮಾ ಅನ್ನು ಮೈಸೂರು ಪೂರ್ಣ ನಿರ್ದೇಶನ ಮಾಡಿದ್ದಾರೆ. ಸಿನಿಮಾನಲ್ಲಿ ಡಾಲಿ ಧನಂಜಯ್, ಮೈಸೂರು ಪೂರ್ಣ, ನಾಗಭೂಷಣ್, ವಿನಯಾ ಪ್ರಸಾದ್, ಗೀತಾ, ಚಿ ಗುರುದತ್ ಇನ್ನೂ ಹಲವರು ನಟಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರಸ್ತೆ ಮಧ್ಯೆ ದೊಡ್ಡ ಕಂದಕ; ಇದು 'ನರಕದ ಹಾದಿ' ಎಂದು ನೆಟ್ಟಿಗರ ಆಕ್ರೋಶ
ರಸ್ತೆ ಮಧ್ಯೆ ದೊಡ್ಡ ಕಂದಕ; ಇದು 'ನರಕದ ಹಾದಿ' ಎಂದು ನೆಟ್ಟಿಗರ ಆಕ್ರೋಶ
ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್‌ಒಪಿ
ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್‌ಒಪಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ದಿಲ್ಲಿಯತ್ತ ಡಿಕೆಶಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ದಿಲ್ಲಿಯತ್ತ ಡಿಕೆಶಿ
ಕಾರ್ಕಳದಲ್ಲಿ ವಯನಾಡು ಮಾದರಿ ದುರಂತದ ಭೀತಿ: ಗುಡ್ಡಕುಸಿತದ ಆತಂಕದಲ್ಲಿ ಜನರು
ಕಾರ್ಕಳದಲ್ಲಿ ವಯನಾಡು ಮಾದರಿ ದುರಂತದ ಭೀತಿ: ಗುಡ್ಡಕುಸಿತದ ಆತಂಕದಲ್ಲಿ ಜನರು
ಬಸವರಾಜ ಹೊರಟ್ಟಿ ರಾಜೀನಾಮೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?
ಬಸವರಾಜ ಹೊರಟ್ಟಿ ರಾಜೀನಾಮೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?
ಪರಿಷತ್ ಸದಸ್ಯೆಯಾಗಿ ಗಾಯತ್ರಿ ಶಾಂತೇಗೌಡ ಪ್ರಮಾಣವಚನ ಸ್ವೀಕಾರ
ಪರಿಷತ್ ಸದಸ್ಯೆಯಾಗಿ ಗಾಯತ್ರಿ ಶಾಂತೇಗೌಡ ಪ್ರಮಾಣವಚನ ಸ್ವೀಕಾರ
ಹೈಕಮಾಂಡ್​​ ಹೇಳಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ: ಪ್ರಿಯಾಂಕ್​​ ಖರ್ಗೆ
ಹೈಕಮಾಂಡ್​​ ಹೇಳಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ: ಪ್ರಿಯಾಂಕ್​​ ಖರ್ಗೆ
ಕೆಆರ್ ಮಾರುಕಟ್ಟೆ ಫ್ಲೈಓವರ್ ಮೂಲಕ ಚಾಮರಾಜಪೇಟೆಗೆ ಹೋಗುವ ಲೂಪ್ ರಸ್ತೆ ಬಂದ್
ಕೆಆರ್ ಮಾರುಕಟ್ಟೆ ಫ್ಲೈಓವರ್ ಮೂಲಕ ಚಾಮರಾಜಪೇಟೆಗೆ ಹೋಗುವ ಲೂಪ್ ರಸ್ತೆ ಬಂದ್
ಕೊನೆಯ ಆಷಾಢ ಶುಕ್ರವಾರ; ಚಾಮುಂಡಿ ದರ್ಶನ ಪಡೆದ ತೆಲುಗು ನಟ ಸುನಿಲ್
ಕೊನೆಯ ಆಷಾಢ ಶುಕ್ರವಾರ; ಚಾಮುಂಡಿ ದರ್ಶನ ಪಡೆದ ತೆಲುಗು ನಟ ಸುನಿಲ್
ಸುರಂಗ ರಸ್ತೆ ಯೋಜನೆ ಪ್ರಶ್ನಿಸಿ ಪಿಐಎಲ್: ಹೈಕೋರ್ಟ್​​ನಿಂದ ನೋಟಿಸ್​​
ಸುರಂಗ ರಸ್ತೆ ಯೋಜನೆ ಪ್ರಶ್ನಿಸಿ ಪಿಐಎಲ್: ಹೈಕೋರ್ಟ್​​ನಿಂದ ನೋಟಿಸ್​​