AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bhajarangi 2: ಖುದ್ದು ಅಖಾಡಕ್ಕಿಳಿದು ಅಭಿಮಾನಿಗಳ ಸಂಭ್ರಮಕ್ಕೆ ಜೊತೆಯಾದ ಶಿವಣ್ಣ; ಹೂಮಳೆಗರೆದು ಬರಮಾಡಿಕೊಂಡ ಫ್ಯಾನ್ಸ್

Shiva Rajkumar: ‘ಭಜರಂಗಿ 2’ ಚಿತ್ರವನ್ನು ಅಭಿಮಾನಿಗಳು ಅದ್ದೂರಿಯಾಗಿ ಸ್ವಾಗತಿಸಿದ್ದಾರೆ. ನಟ ಶಿವರಾಜ್ ಕುಮಾರ್ ಚಿತ್ರಮಂದಿರದಲ್ಲಿ ಅಭಿಮಾನಿಗಳೊಂದಿಗೆ ಚಿತ್ರ ವೀಕ್ಷಿಸಲು ಖುದ್ದು ಚಿತ್ರಮಂದಿರಕ್ಕೆ ತೆರಳಿದ್ದು, ಫ್ಯಾನ್ಸ್ ಸಂಭ್ರಮ ಇಮ್ಮಡಿಗೊಳಿಸಿದೆ.

Bhajarangi 2: ಖುದ್ದು ಅಖಾಡಕ್ಕಿಳಿದು ಅಭಿಮಾನಿಗಳ ಸಂಭ್ರಮಕ್ಕೆ ಜೊತೆಯಾದ ಶಿವಣ್ಣ; ಹೂಮಳೆಗರೆದು ಬರಮಾಡಿಕೊಂಡ ಫ್ಯಾನ್ಸ್
ಶಿವರಾಜ್ ಕುಮಾರ್ ಅವರನ್ನು ಹೂಮಳೆಗರೆದು ಸ್ವಾಗತಿಸಿದ ಫ್ಯಾನ್ಸ್
TV9 Web
| Edited By: |

Updated on:Oct 29, 2021 | 12:24 PM

Share

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ‘ಭಜರಂಗಿನ 2’ ಚಿತ್ರವನ್ನು ಅಭಿಮಾನಿಗಳು ಭರ್ಜರಿಯಾಗಿ ಸ್ವಾಗತಿಸುತ್ತಿದ್ದಾರೆ. ‘ನಮಗೆ ಇಂದೇ ದೀಪಾವಳಿ’ ಎಂದ ಅಭಿಮಾನಿಗಳು ಪಟಾಕಿ ಸಿಡಿಸಿ, ಶಿವರಾಜ್ ಕುಮಾರ್ ಕಟೌಟ್​ಗೆ ಹಾಲಿನ ಅಭಿಷೇಕ ಮಾಡಿ, ಕುಂಬಳಕಾಯಿ ಒಡೆದು ಸಂಭ್ರಮಾಚರಣೆ ನಡೆಸಿದ್ದಾರೆ. ಇದೀಗ ಅವರ ಸಂಭ್ರಮವನ್ನು ಮತ್ತಷ್ಟು ಹೆಚ್ಚಿಸಲು ಖುದ್ದು ಶಿವರಾಜ್ ಕುಮಾರ್ ಅಖಾಡಕ್ಕೆ ಇಳಿದಿದ್ದಾರೆ. ಹೌದು. ಅವರು ಗೌಡನಪಾಳ್ಯದ ಶ್ರೀನಿವಾಸ ಚಿತ್ರಮಂದಿರದಲ್ಲಿ ಅಭಿಮಾನಿಗಳೊಂದಿಗೆ ಚಿತ್ರ ವೀಕ್ಷಿಸಲು ತೆರಳಿದ್ದಾರೆ. ಇದಕ್ಕೂ ಮುನ್ನ ಅವರು ಸಿದ್ದೇಶ್ವರ ಚಿತ್ರಮಂದಿರಕ್ಕೆ ಭೇಟಿ ನೀಡಿದ್ದರು. ಶ್ರೀನಿವಾಸ ಚಿತ್ರಮಂದಿರದಲ್ಲಿ ಫ್ಯಾನ್ಸ್ ಅದ್ದೂರಿಯಾಗಿ ಶಿವಣ್ಣನನ್ನು ಬರಮಾಡಿಕೊಂಡಿದ್ದು, ಫ್ಯಾನ್ಸ್ ಸಖತ್ ಖುಷಿಯಾಗಿದ್ದಾರೆ.

ಶಿವರಾಜ್ ಕುಮಾರ್ ಅವರನ್ನು ಚಿತ್ರಮಂದಿರಕ್ಕೆ ಸ್ವಾಗತಿಸಿದ ಅಭಿಮಾನಿಗಳು:

ಭಜರಂಗಿ 2 ನೋಡಲು ಬಂದ ಶಿವಣ್ಣ ಹೇಳಿದ್ದೇನು? ದೂರದೂರಿನಿಂದ ಬಂದ ಅಭಿಮಾನಿಗಳ ಕುರಿತು ಶಿವರಾಜ್ ಕುಮಾರ್ ಬಹಳ ಸಂತಸ ವ್ಯಕ್ತಪಡಿಸಿದ್ದಾರೆ. ಒಂದೂವರೆ ವರ್ಷದ ನಂತರ ಚಿತ್ರ ತೆರೆಗೆ ಬರುತ್ತಿರುವುದಕ್ಕೂ ಶಿವರಾಜ್ ಕುಮಾರ್ ಖುಷಿ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಅವರು ಟಿವಿ9ನೊಂದಿಗೆ ಮಾತನಾಡುತ್ತಾ ದೇವರ ಬಗ್ಗೆ ಮಾತನಾಡಿದ್ದಾರೆ. ಅಭಿಮಾನಿಗಳ ಖುಷಿನೇ ನನ್ನ ಖುಷಿ ಎಂದು ಶಿವರಾಜ್ ಕುಮಾರ್ ನುಡಿದಿದ್ದಾರೆ.

ಶಿವರಾಜ್ ಕುಮಾರ್ ಸಂದರ್ಶನದ ವಿಡಿಯೋ ಇಲ್ಲಿದೆ:

‘ಭಜರಂಗಿ 2’ ಚಿತ್ರದ ಮೊದಲಾರ್ಧಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಚಿತ್ರವನ್ನು ಎ ಹರ್ಷ ನಿರ್ದೇಶಿಸಿದ್ದು, ಜಯಣ್ಣ ಫಿಲ್ಮ್ಸ್ ಬ್ಯಾನರ್​ನಲ್ಲಿ ನಿರ್ಮಿಸಲಾಗಿದೆ. ಶಿವರಾಜ್​ ಕುಮಾರ್, ಭಾವನಾ ಅವರೊಂದಿಗೆ ಶ್ರುತಿ, ಭಜರಂಗಿ ಲೋಕಿ, ಭಾವನಾ ಮೆನನ್​, ಶಿವರಾಜ್​ ಕೆ.ಆರ್​. ಪೇಟೆ, ಚೆಲುವ ರಾಜು ಮೊದಲಾದವರು ತೆರೆ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ:

Bhajarangi 2: ‘ಭಜರಂಗಿ 2’ ಹಬ್ಬ; ಚಿತ್ರಮಂದಿರಗಳ ಮುಂದೆ ದೀಪಾವಳಿ ಆಚರಿಸಿದ ಶಿವರಾಜ್​ಕುಮಾರ್​ ಫ್ಯಾನ್ಸ್​

Bhajarangi 2 Movie Review: ಫ್ಯಾಂಟಸಿ ಲೋಕದ ‘ಭಜರಂಗಿ 2’ ಕಥೆಯಲ್ಲಿ ಶಿವಣ್ಣನ ಎನರ್ಜಿಯೇ ಹೈಲೈಟ್

Published On - 8:17 am, Fri, 29 October 21

Follow Us
Web contact
Web contact

TV9 Kannada

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!