AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನೀ ಸಿಗೋವರೆಗೂ’ ಚಿತ್ರದ ಲವರ್ ಬಾಯ್ ಶಿವಣ್ಣ ಲುಕ್ ರಿಲೀಸ್; ಹ್ಯಾಟ್ರಿಕ್ ಹೀರೋಗೆ ವಯಸ್ಸೇ ಆಗೋಲ್ಲ ಎಂದ ಅಭಿಮಾನಿಗಳು

ಬಹುನಿರೀಕ್ಷಿತ ‘ನೀ ಸಿಗೋವರೆಗೂ’ ಚಿತ್ರದ ಶಿವರಾಜ್​ಕುಮಾರ್ ಅವರ ಲುಕ್ ಬಹಿರಂಗವಾಗಿದ್ದು, ಅವರ ಹೊಸ ಸ್ಟೈಲಿಶ್ ಲುಕ್ ನೋಡಿ ಅಭಿಮಾನಿಗಳು ಫಿದಾ ಆಗಿದ್ದಾರೆ.

‘ನೀ ಸಿಗೋವರೆಗೂ’ ಚಿತ್ರದ ಲವರ್ ಬಾಯ್ ಶಿವಣ್ಣ ಲುಕ್ ರಿಲೀಸ್; ಹ್ಯಾಟ್ರಿಕ್ ಹೀರೋಗೆ ವಯಸ್ಸೇ ಆಗೋಲ್ಲ ಎಂದ ಅಭಿಮಾನಿಗಳು
ಸಖತ್ ಸ್ಟೈಲಿಶ್ ಆಗಿ ಕಾಣಿಸಿಕೊಂಡಿರೋ ಶಿವರಾಜ್ ಕುಮಾರ್
Follow us
TV9 Web
| Updated By: shivaprasad.hs

Updated on: Aug 24, 2021 | 4:22 PM

ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್ ಸಾಲು ಸಾಲು ಚಿತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇತ್ತೀಚೆಗಷ್ಟೇ ಸೆಟ್ಟೇರಿದ್ದ, ನಟ ಸುದೀಪ್ ಕ್ಲಾಪ್ ಮಾಡಿದ್ದ ‘ನೀ ಸಿಗೋವರೆಗೂ’ ಚಿತ್ರದ ಶಿವರಾಜ್ ಕುಮಾರ್ ಪಾತ್ರದ ಲುಕ್ ರಿಲೀಸ್ ಆಗಿದೆ. ಸದ್ಯ ಈ ಚಿತ್ರ ಆನ್​ಲೈನ್​ನಲ್ಲಿ ಟ್ರೆಂಡ್ ಆಗಿದ್ದು, ಶಿವರಾಜ್ ಕುಮಾರ್ ಸ್ಟೈಲ್​ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. 59 ವರ್ಷದ ಶಿವಣ್ಣ ನೀ ಸಿಗೋವರೆಗೂ ಚಿತ್ರದಲ್ಲಿ ಲವರ್ ಬಾಯ್ ಅವತಾರ ಎತ್ತಿದ್ದು, ಅದಕ್ಕೆ ತಕ್ಕಂತೆ ಸಖತ್ ಸ್ಟೈಲಿಶ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈಗ ಚಿತ್ರದ ಸ್ಟಿಲ್ ಒಂದು ಲಭ್ಯವಾಗಿದ್ದು, ಅದರಲ್ಲಿ ಯುವಕರೂ ನಾಚುವಂತೆ ಶಿವರಾಜ್ ಕುಮಾರ್ ಮಿಂಚುತ್ತಿದ್ದಾರೆ. ಈ ಫೊಟೊ ಮುಖಾಂತರ ಚಿತ್ರದ ಕುರಿತು ಮತ್ತಷ್ಟು ನಿರೀಕ್ಷೆಗಳು, ಕುತೂಹಲಗಳು ಸಿನಿವಲಯದಲ್ಲಿ ಮೂಡಿದೆ.

‘ನೀ ಸಿಗೋವರೆಗೂ’ ಚಿತ್ರದ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ:

ಹಲವು ಸಿನಿಮಾಗಳಲ್ಲಿ ಶಿವರಾಜ್​ಕುಮಾರ್ ಬ್ಯುಸಿ ಆಗಿದ್ದಾರೆ. ಬೈರಾಗಿ, ವೇದಾ ಮುಂತಾದ ಚಿತ್ರಗಳಲ್ಲಿ ಅವರು ನಟಿಸುತ್ತಿದ್ದಾರೆ. ಶಿವಣ್ಣ ಅಭಿನಯಿಸಿರುವ ‘ಭಜರಂಗಿ 2’ ಚಿತ್ರ ಬಿಡುಗಡೆಗೆ ಸಜ್ಜಾಗಿದೆ. ಅವರ 124ನೇ ಚಿತ್ರವಾಗಿ ರಾಮ್​ ಧುಳಿಪುಡಿ ನಿರ್ದೇಶನ ಮಾಡುತ್ತಿರುವ ‘ನೀ ಸಿಗೋವರೆಗೂ’ ಸಿನಿಮಾ ಸೆಟ್ಟೇರಿದೆ. ಬಾಲ ಶ್ರೀರಾಮ ಸ್ಟುಡಿಯೋಸ್​ ಬ್ಯಾನರ್​ನಲ್ಲಿ ಈ ಚಿತ್ರ ನಿರ್ಮಾಣ ಆಗುತ್ತಿದ್ದು, ಈ ಸಿನಿಮಾದಲ್ಲಿ ಶಿವಣ್ಣ ಎರಡು ಡಿಫರೆಂಟ್​ ಲುಕ್​ಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಆ ಕಾರಣದಿಂದಲೂ ‘ನೀ ಸಿಗೋವರೆಗೂ’ ಚಿತ್ರದ ಮೇಲೆ ಅಭಿಮಾನಿಗಳಿಗೆ ನಿರೀಕ್ಷೆ ಹೆಚ್ಚಿದೆ.

ತೆಲುಗು ಮತ್ತು ತಮಿಳು ಚಿತ್ರರಂಗದಲ್ಲಿ ಖ್ಯಾತಿ ಪಡೆದಿರುವ ಮೆರ್ಹೀನ್​ ಪೀರ್ಜಾದಾ ಅವರು ‘ನೀ ಸಿಗೋವರೆಗೂ’ ಚಿತ್ರಕ್ಕೆ ನಾಯಕಿ. ಇದೇ ಮೊದಲ ಬಾರಿಗೆ ಅವರು ಕನ್ನಡ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ತಾರಾಗಣದ ಕಾರಣದಿಂದಲೂ ಈ ಚಿತ್ರ ಹೈಪ್​ ಪಡೆದುಕೊಂಡಿದೆ. ನಾಸಿರ್​, ಸಂಪತ್, ಸಾಧುಕೋಕಿಲ ಮುಂತಾದವರು ನಟಿಸಲಿದ್ದಾರೆ. ಆ.18ರಿಂದಲೇ ಈ ಸಿನಿಮಾದ ಚಿತ್ರೀಕರಣ ಆರಂಭವಾಗಿದೆ. ‘ಟಗರು’ ಚಿತ್ರಕ್ಕೆ ಸಂಗೀತ ನೀಡಿದ್ದ ಚರಣ್​ ರಾಜ್​ ಹಾಗೂ ಛಾಯಾಗ್ರಹಣ ಮಾಡಿದ್ದ ಮಹೇಂದ್ರ ಸಿಂಹ ಅವರು ‘ನೀ ಸಿಗೋವರೆಗೂ’ ಚಿತ್ರದಲ್ಲೂ ಜೊತೆಯಾಗಿದ್ದಾರೆ.

ಇದನ್ನೂ ಓದಿ:

‘ದಯವಿಟ್ಟು ಬಿಟ್ಟುಬಿಡಿ’; ಕೈ ಮುಗಿದು ಬೇಡಿಕೊಂಡ ಸಂಜನಾ ಗಲ್ರಾನಿ ತಾಯಿ ರೇಷ್ಮಾ ಗಲ್ರಾನಿ

ಬೆಂಗಳೂರು ಅಪರಾಧ ಜಗತ್ತಿನ ನಾಲ್ಕು ಮುಖ್ಯ ಪ್ರಕರಣಗಳನ್ನು ತೆರೆದಿಡಲಿದೆ ನೆಟ್​ಫ್ಲಿಕ್ಸ್​ನ ಈ ಡಾಕ್ಯುಮೆಂಟರಿ

(Shiva Rajkumar young and stylish look revealed from Nee Sigovaregu Movie)

ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಭಾರಿ ಮಳೆಯಿಂದ ಶಿರಾಡಿ ಘಾಟ್​​ ರಸ್ತೆಯಲ್ಲಿ ಭೂ ಕುಸಿತ
ಭಾರಿ ಮಳೆಯಿಂದ ಶಿರಾಡಿ ಘಾಟ್​​ ರಸ್ತೆಯಲ್ಲಿ ಭೂ ಕುಸಿತ
ರಶ್ಮಿಕಾಗೆ ಮೈಸೂರು ಸ್ಯಾಂಡಲ್​ ಅವಕಾಶ ಕೊಡಬಹುದಿತ್ತು: ಕುಮಾರ್ ಬಂಗಾರಪ್ಪ
ರಶ್ಮಿಕಾಗೆ ಮೈಸೂರು ಸ್ಯಾಂಡಲ್​ ಅವಕಾಶ ಕೊಡಬಹುದಿತ್ತು: ಕುಮಾರ್ ಬಂಗಾರಪ್ಪ
ಭಾರತದ ನೆಲದಲ್ಲಿ ಭಯೋತ್ಪಾದಕರ ಅಂತ್ಯಕ್ರಿಯೆಗೆ ಅವಕಾಶವಿಲ್ಲ: ಇಲ್ಯಾಸಿ
ಭಾರತದ ನೆಲದಲ್ಲಿ ಭಯೋತ್ಪಾದಕರ ಅಂತ್ಯಕ್ರಿಯೆಗೆ ಅವಕಾಶವಿಲ್ಲ: ಇಲ್ಯಾಸಿ