ಮಧ್ಯರಾತ್ರಿಯಿಂದಲೇ ಶುರುವಾಗಲಿದೆ ‘ಘೋಸ್ಟ್’ ಅಬ್ಬರ, ಶಿವಣ್ಣನಂತೆ ಅಭಿಮಾನಿಗಳಲ್ಲೂ ಉತ್ಸಾಹ

Shiva Rajkumar: ಶಿವರಾಜ್ ಕುಮಾರ್ ಅಭಿನಯದ 'ಘೋಸ್ಟ್' ಸಿನಿಮಾ ಅಕ್ಟೋಬರ್ 19ಕ್ಕೆ ತೆರೆಗೆ ಬರಲಿದ್ದು, ಸಿನಿಮಾವನ್ನು ಮಧ್ಯರಾತ್ರಿಯೇ ಅದ್ಧೂರಿಯಾಗಿ ಸ್ವಾಗತಿಸಲು ಅಭಿಮಾನಿಗಳು ತಯಾರಾಗಿದ್ದಾರೆ.

ಮಧ್ಯರಾತ್ರಿಯಿಂದಲೇ ಶುರುವಾಗಲಿದೆ 'ಘೋಸ್ಟ್' ಅಬ್ಬರ, ಶಿವಣ್ಣನಂತೆ ಅಭಿಮಾನಿಗಳಲ್ಲೂ ಉತ್ಸಾಹ
ಘೋಸ್ಟ್
Follow us
ಮಂಜುನಾಥ ಸಿ.
|

Updated on: Oct 07, 2023 | 10:34 PM

ಜೈಲರ್‘ (Jailer) ಸಿನಿಮಾದ ಸಣ್ಣ ಝಲಕ್​ನಿಂದಲೇ ಪ್ಯಾನ್ ಇಂಡಿಯಾ ಲೆವೆಲ್​ನಲ್ಲಿ ಸದ್ದು ಮಾಡಿದ್ದಾರೆ ಶಿವರಾಜ್ ಕುಮಾರ್. ಇದೀಗ ಅವರ ನಟನೆಯ ‘ಘೋಸ್ಟ್’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗುತ್ತಿದ್ದು, ಸಿನಿಮಾದ ಟೀಸರ್ ಈಗಾಗಲೇ ವೈರಲ್ ಆಗಿದ್ದು, ಸಿನಿಮಾ ಬಗೆಗಿನ ನಿರೀಕ್ಷೆಯನ್ನು ದುಪ್ಪಟ್ಟುಗೊಳಿಸಿದೆ. ಸಿನಿಮಾವು ಅಕ್ಟೋಬರ್ 19ರಂದು ಬಿಡುಗಡೆ ಆಗಲಿದ್ದು, ಅಭಿಮಾನಿಗಳಿಗೆ ಮಧ್ಯರಾತ್ರಿಯಿಂದಲೇ ವಿಶೇಷ ಶೋಗಳನ್ನು ಆಯೋಜಿಸಲಾಗಿದೆ.

ಸಂದೇಶ್ ಪ್ರೊಡಕ್ಷನ್ಸ್ ನಿರ್ಮಾಣ ಸಂಸ್ಥೆಯ ಮೂಲಕ ಸಂದೇಶ್ ನಾಗರಾಜ್ ನಿರ್ಮಿಸುತ್ತಿರುವ ಶ್ರೀನಿ ನಿರ್ದೇಶನದ “ಘೋಸ್ಟ್” ಸಿನಿಮಾವನ್ನು ಅದ್ಧೂರಿಯಾಗಿ ಅಕ್ಟೋಬರ್ 19 ರಂದು ತೆರೆಗೆ ತರಲಾಗುತ್ತಿದೆ. ಇದೇ ಮೊದಲ ಬಾರಿಗೆ ಕೆ.ಜಿ.ರಸ್ತೆಯ ಪ್ರಮುಖ ಚಿತ್ರಮಂದಿರದಲ್ಲಿ ಅಕ್ಟೋಬರ್ 18 ರ ಮಧ್ಯರಾತ್ರಿ 12 ಕ್ಕೆ ಭರ್ಜರಿ ಫ್ಯಾನ್ಸ್ ಶೋ ಆಯೋಜಿಸಲಾಗಿದೆ. ಬಹು ನಿರೀಕ್ಷಿತ ಈ ಚಿತ್ರವನ್ನು ಅಭಿಮಾನಿಗಳು ಅದ್ದೂರಿಯಾಗಿ ಬರಮಾಡಿಕೊಳ್ಳಲು ಅಣಿಯಾಗುತ್ತಿದ್ದಾರೆ. ಶಿವಣ್ಣ ಅಭಿನಯದ ‘ಭಜರಂಗಿ’ ಚಿತ್ರದ ಪ್ರದರ್ಶನ ಬೆಳಿಗ್ಗೆ 6ರಿಂದ ಆರಂಭವಾಗಿತ್ತು. ಆದರೆ ಮಧ್ಯರಾತ್ರಿಯಿಂದಲೇ ಪ್ರದರ್ಶನ ಕಾಣುತ್ತಿರುವ ಮೊದಲ ಚಿತ್ರ ‘ಘೋಸ್ಟ್’ ಆಗಿದೆ.

ಇದನ್ನೂ ಓದಿ:ಬಾಲಿವುಡ್​ನಲ್ಲಿ ಹವಾ ಎಬ್ಬಿಸಲು ಶಿವರಾಜ್ ಕುಮಾರ್ ರೆಡಿ: ಏನಿದು ಹೊಸ ಸುದ್ದಿ?

ಶಿವಣ್ಣ ಅವರ ಹುಟ್ಟುಹಬ್ಬಕ್ಕೆ ” Big daddy” ಟೀಸರ್ ಬಿಡುಗಡೆಯಾಗಿ, ಸಾಕಷ್ಟು ಜನಪ್ರಿಯವಾಗಿದೆ. ‘ಘೋಸ್ಟ್’ ಸಿನಿಮಾವನ್ನು ನೋಡಲು ಬರೀ ಭಾರತೀಯರಷ್ಟೇ ಅಲ್ಲ. ವಿದೇಶಿಗರು ಕಾತುರದಿಂದ ಕಾಯುತ್ತಿದ್ದಾರೆ. ಇತ್ತೀಚೆಗೆ ವಿದೇಶಿ ಅಭಿಮಾನಿಗಳು ತಾವು ಕೂಡ ಈ ಚಿತ್ರದ ಬಿಡುಗಡೆಗೆ ಕಾತುರದಿಂದ ಕಾಯುತ್ತಿರುವುದಾಗಿ ವಿಡಿಯೋ ಮೂಲಕ ಹೇಳಿಕೊಂಡಿದ್ದು ಸಖತ್ ವೈರಲ್ ಆಗಿತ್ತು. ಶಿವರಾಜಕುಮಾರ್, ಅನುಪಮ್ ಖೇರ್, ಜಯರಾಂ, ಸತ್ಯಪ್ರಕಾಶ್, ಪ್ರಶಾಂತ್ ನಾರಾಯಣನ್, ದತ್ತಣ್ಣ, ಅಭಿಜಿತ್, ಶ್ರೀನಿ ಮುಂತಾದವರು “ಘೋಸ್ಟ್” ಚಿತ್ರದ ತಾರಾಬಳಗದಲ್ಲಿದ್ದಾರೆ.

ಹಲವು ಸಿನಿಮಾಗಳಲ್ಲಿ ಶಿವರಾಜ್ ಕುಮಾರ್ ಪ್ರಸ್ತುತ ಬ್ಯುಸಿಯಾಗಿದ್ದಾರೆ. ಅವರ ನಟನೆಯ ‘ಘೋಸ್ಟ್’ ಬಿಡುಗಡೆ ಬಳಿಕ ನರ್ತನ್ ನಿರ್ದೇಶನದ ‘ಭೈರತಿ ರಣಗಲ್’ ಸಿನಿಮಾ ಸಹ ತೆರೆಗೆ ಬರಲಿದೆ. ಇದರ ನಡುವೆ ತಮಿಳಿನಲ್ಲಿ ಧನುಶ್ ಜೊತೆ ನಟಿಸಿರುವ ‘ಕ್ಯಾಪ್ಟನ್ ಮಿಲ್ಲರ್’ ಸಿನಿಮಾ ಸಹ ಬಿಡುಗಡೆ ಆಗಲಿದೆ. ಅರ್ಜುನ್ ಜನ್ಯ ನಿರ್ದೇಶನದ ಸಿನಿಮಾದಲ್ಲಿ ರಾಜ್ ಬಿ ಶೆಟ್ಟಿ ಹಾಗೂ ಉಪೇಂದ್ರ ಜೊತೆ ಶಿವಣ್ಣ ನಟಿಸುತ್ತಿದ್ದು ಆ ಸಿನಿಮಾ ಸಹ ಶೀಘ್ರದಲ್ಲಿಯೇ ತೆರೆಗೆ ಬರಲಿದೆ. ಯೋಗರಾಜ್ ಭಟ್ ನಿರ್ದೇಶನದ ‘ಕರಟಕ ದಮನಕ’ ಸಿನಿಮಾದಲ್ಲಿ ಪ್ರಭುದೇವ ಜೊತೆ ಶಿವಣ್ಣ ನಟಿಸಿದ್ದಾರೆ ಆ ಸಿನಿಮಾದ ಚಿತ್ರೀಕರಣವು ಬಹುತೇಕ ಅಂತ್ಯವಾಗಿದೆ. ಒಟ್ಟಾರೆಯಾಗಿ ಹಲವಾರು ಸಿನಿಮಾಗಳಲ್ಲಿ ಶಿವರಾಜ್ ಕುಮಾರ್ ಸಖತ್ ಬ್ಯುಸಿಯಾಗಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ