AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂದು ಸುಲೋಚನಾ, ಇಂದು ಶಿವಣ್ಣ; ‘45’ ಟ್ರೇಲರ್​ಗೆ ಭಾರಿ ಮೆಚ್ಚುಗೆ

ನಟ ಶಿವರಾಜ್‌ಕುಮಾರ್ ಅವರ '45' ಚಿತ್ರದ ಟ್ರೇಲರ್ ಬಿಡುಗಡೆಯಾಗಿ ಭಾರಿ ಮೆಚ್ಚುಗೆ ಗಳಿಸಿದೆ. ಸೀರೆ ಉಟ್ಟು ಕಾಣಿಸಿಕೊಂಡಿರುವ ಶಿವಣ್ಣನ ಪಾತ್ರ ಎಲ್ಲರ ಗಮನ ಸೆಳೆದಿದೆ. ಈ ಹಿಂದೆ 'ಸು ಫ್ರಮ್ ಸೋ' ಚಿತ್ರದಲ್ಲಿ ಜೆಪಿ ತುಮ್ಮಿನಾಡು ಸೀರೆ ಲುಕ್ ಪ್ರಸಿದ್ಧವಾಗಿತ್ತು. ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ನಿರ್ದೇಶನದ ಚೊಚ್ಚಲ ಚಿತ್ರ ‘45’ ಡಿಸೆಂಬರ್ 25ಕ್ಕೆ ತೆರೆಗೆ ಬರಲಿದೆ.

ಅಂದು ಸುಲೋಚನಾ, ಇಂದು ಶಿವಣ್ಣ; ‘45’ ಟ್ರೇಲರ್​ಗೆ ಭಾರಿ ಮೆಚ್ಚುಗೆ
45 Movie
ರಾಜೇಶ್ ದುಗ್ಗುಮನೆ
|

Updated on: Dec 16, 2025 | 6:56 AM

Share

‘ಸು ಫ್ರಮ್ ಸೋ’ ಸಿನಿಮಾ ಈ ವರ್ಷದ ಅತಿ ಯಶಸ್ವಿ ಚಿತ್ರಗಳಲ್ಲಿ ಒಂದು. ಈ ಸಿನಿಮಾ 100 ಕೋಟಿ ರೂಪಾಯಿ ಗಳಿಕೆ ಮಾಡಿ ದಾಖಲೆ ಬರೆದಿದೆ. ಈ ಸಿನಿಮಾದಲ್ಲಿ ಕಥಾ ನಾಯಕ ಜೆಪಿ ತುಮ್ಮಿನಾಡು ಅವರು ಸೀರೆ ಉಟ್ಟು ಬರುತ್ತಾರೆ. ಈ ದೃಶ್ಯ ಸಾಕಷ್ಟು ಗಮನ ಸೆಳೆದಿತ್ತು. ಈಗ ಕನ್ನಡದ ಖ್ಯಾತ ನಟ ಶಿವರಾಜ್​ಕುಮಾರ್ ಅವರು ‘45’ ಚಿತ್ರಕ್ಕಾಗಿ (45 Movie) ಇದೇ ರೀತಿಯ ಅವತಾರ ತಾಳಿದ್ದಾರೆ. ಈ ಸಿನಿಮಾದ ಟ್ರೇಲರ್ ರಿಲೀಸ್ ಆಗಿ ಗಮನ ಸೆಳೆದಿದೆ. ಇಡೀ ಚಿತ್ರದಲ್ಲಿ ಈ ದೃಶ್ಯವೇ ಹೈಲೈಟ್.

‘45’ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಈ ಚಿತ್ರದ ಮೂಲಕ ಸಂಗೀತ ಸಂಯೋಜಕ ಅರ್ಜುನ್ ಜನ್ಯ ಅವರು ಡೈರೆಕ್ಟರ್ ಆಗಿದ್ದಾರೆ. ಅವರು ಪ್ರಥಮ ಸಿನಿಮಾದಲ್ಲೇ ಗೆಲ್ಲುವ ಸೂಚನೆ ನೀಡಿದ್ದಾರೆ. ಈ ಚಿತ್ರದ ಟ್ರೇಲರ್ ಅದ್ಭುತವಾಗಿ ಮೂಡಿ ಬಂದಿದೆ. ಹುಟ್ಟು ಹಾಗೂ ಸಾವಿನ ನಡುವಿನ ಕಥೆ ಇದು ಎಂದು ಹೇಳಲಾಗುತ್ತಾ ಇದೆ.

ಇದನ್ನೂ ಓದಿ:‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು? 

ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಆಗಸ್ಟ್ ತಿಂಗಳಲ್ಲೇ ‘45’ ಸಿನಿಮಾ ರಿಲೀಸ್ ಆಗಬೇಕಿತ್ತು. ಆದರೆ, ಗ್ರಾಫಿಕ್ಸ್ ಕೆಲಸಗಳ ಕಾರಣಕ್ಕೆ ಸಿನಿಮಾದ ರಿಲೀಸ್ ದಿನಾಂಕ ಮುಂದಕ್ಕೆ ಹೋಗಿತ್ತು. ಈಗ ಟ್ರೇಲರ್ ನೋಡಿದವರಿಗೆ ಅದು ಸ್ಪಷ್ಟವಾಗಿದೆ. ‘45’ ಚಿತ್ರದ ಟ್ರೇಲರ್ ಉದ್ದಕ್ಕೂ ಗ್ರಾಫಿಕ್ಸ್ ಹೈಲೈಟ್ ಆಗಿದೆ. ಡಿಸೆಂಬರ್ 25ರಂದು ಸಿನಿಮಾ ತೆರೆಗೆ ಬರುತ್ತಿದೆ.

45 ಟ್ರೇಲರ್

ರಾಜ್ ಬಿ ಶೆಟ್ಟಿ, ಶಿವರಾಜ್​ಕುಮಾರ್ ಹಾಗೂ ಉಪೇಂದ್ರ ಪಾತ್ರಗಳು ಟ್ರೇಲರ್​ನಲ್ಲಿ ಹೈಲೈಟ್ ಆಗಿವೆ. ಗೋರಿ ಮೇಲೆ ಹುಟ್ಟಿದ ದಿನಾಂಕ, ಹಾಗೂ ಸಾಯುವ ದಿನಾಂಕ ಬರೆದಿರುತ್ತಾರೆ. ಮಧ್ಯದಲ್ಲಿ ಒಂದು ಸಣ್ಣ ಗೆರೆ ಇರುತ್ತೇ. ಅದುವೇ ಜೀವನ ಎಂದು ಉಪ್ಪಿ ಹೇಳುವ ಡೈಲಾಗ್ ಗಮನ ಸೆಳೆದಿದೆ. ಟ್ರೇಲರ್ ಕೊನೆಯಲ್ಲಿ ಶಿವರಾಜ್​ಕುಮಾರ್ ತಾಳುವ ಅವತಾರ ಮೆಚ್ಚುಗೆ ಪಡೆದಿದೆ. ಈಗಾಗೇ ‘ಮಾರ್ಕ್’ ಸಿನಿಮಾ ಟ್ರೇಲರ್ ಭರ್ಜರಿ ಮೆಚ್ಚುಗೆ ಪಡೆದಿದೆ. ಈ ಚಿತ್ರ ಕೂಡ ಡಿಸೆಂಬರ್ 25ರಂದು ಬರುತ್ತಿದೆ. ಅದರ ಜೊತೆಗೆ ‘45’ ಸಿನಿಮಾ ಕೂಡ ಟ್ರೇಲರ್ ಮೂಲಕ ಗಮನ ಸೆಳೆದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ಕೋಗಿಲು ಕದನ: ಬಿಜೆಪಿ ವಿರುದ್ಧ ಕೃಷ್ಣಭೈರೇಗೌಡ ಸ್ಫೋಟಕ ಆರೋಪ
ಕೋಗಿಲು ಕದನ: ಬಿಜೆಪಿ ವಿರುದ್ಧ ಕೃಷ್ಣಭೈರೇಗೌಡ ಸ್ಫೋಟಕ ಆರೋಪ
ರಣರೋಚಕ ಪಂದ್ಯ, ಇಬ್ಬರು ರಿಟೈರ್ಡ್​ ಔಟ್, ಮ್ಯಾಚ್ ಟೈ
ರಣರೋಚಕ ಪಂದ್ಯ, ಇಬ್ಬರು ರಿಟೈರ್ಡ್​ ಔಟ್, ಮ್ಯಾಚ್ ಟೈ
ಕನ್ನಡ ಮಾತನಾಡದಂತೆ ವಾರ್ಡನ್ ಧಮ್ಕಿ: ಕಾಲೇಜು ಮುಂಭಾಗ ಭಾರಿ ಪ್ರತಿಭಟನೆ
ಕನ್ನಡ ಮಾತನಾಡದಂತೆ ವಾರ್ಡನ್ ಧಮ್ಕಿ: ಕಾಲೇಜು ಮುಂಭಾಗ ಭಾರಿ ಪ್ರತಿಭಟನೆ
ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ; ಜೆಜೆ ನಗರ ಠಾಣೆಗೆ ಜಮೀರ್ ಭೇಟಿ
ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ; ಜೆಜೆ ನಗರ ಠಾಣೆಗೆ ಜಮೀರ್ ಭೇಟಿ
ಬಳ್ಳಾರಿ ದಂಗಲ್​​​: ಜನಾರ್ದನ ರೆಡ್ಡಿ ಮನೆಯಲ್ಲಿ ರಾಶಿ ರಾಶಿ ದೊಣ್ಣೆ ಪತ್ತೆ
ಬಳ್ಳಾರಿ ದಂಗಲ್​​​: ಜನಾರ್ದನ ರೆಡ್ಡಿ ಮನೆಯಲ್ಲಿ ರಾಶಿ ರಾಶಿ ದೊಣ್ಣೆ ಪತ್ತೆ