‘ಶಿವಾಜಿ ಸುರತ್ಕಲ್​ 2’ ಚಿತ್ರದಲ್ಲಿ ಮೇಘನಾ ಗಾಂವ್ಕರ್​ಗೆ ವಿಶೇಷ ಪಾತ್ರ; ರಮೇಶ್​ ಅರವಿಂದ್ ಜತೆ ​ನಟಿಸುವ ಚಾನ್ಸ್​

ಮೇಘನಾ ಗಾಂವ್ಕರ್​​ ಮಾತ್ರವಲ್ಲದೆ ಇನ್ನಷ್ಟು ಕಲಾವಿದರು ‘ಶಿವಾಜಿ ಸುರತ್ಕಲ್​ 2’ ಚಿತ್ರತಂಡವನ್ನು ಸೇರಿಕೊಳ್ಳಲಿದ್ದಾರೆ. ಆ ಬಗ್ಗೆ ಮುಂದಿನ ದಿನಗಳಲ್ಲಿ ಮಾಹಿತಿ ಹೊರಬೀಳಲಿದೆ. ಸದ್ಯ ಚಿತ್ರದ ಪ್ರೀ-ಪ್ರೊಡಕ್ಷನ್​ ಕೆಲಸಗಳು ನಡೆಯುತ್ತಿವೆ.

‘ಶಿವಾಜಿ ಸುರತ್ಕಲ್​ 2’ ಚಿತ್ರದಲ್ಲಿ ಮೇಘನಾ ಗಾಂವ್ಕರ್​ಗೆ ವಿಶೇಷ ಪಾತ್ರ; ರಮೇಶ್​ ಅರವಿಂದ್ ಜತೆ ​ನಟಿಸುವ ಚಾನ್ಸ್​
ಮೇಘನಾ ಗಾಂವ್ಕರ್​, ರಮೇಶ್​ ಅರವಿಂದ್​

ರಮೇಶ್​ ಅರವಿಂದ್​ ನಟನೆಯ ‘ಶಿವಾಜಿ ಸುರತ್ಕಲ್​’ ಸಿನಿಮಾಗೆ 2020ರ ಆರಂಭದಲ್ಲಿ ಭರ್ಜರಿ ಗೆಲುವು ಸಿಕ್ಕಿತ್ತು. ಈಗ ಅದರ ಸೀಕ್ವೆಲ್​ ಸಿದ್ಧವಾಗುತ್ತಿದೆ. ಅದೇ ತಂಡ ಸೇರಿಕೊಂಡು ‘ಶಿವಾಜಿ ಸುರತ್ಕಲ್​ 2’ ಮಾಡುತ್ತಿರುವುದು ಗೊತ್ತೇ ಇದೆ. ಆ ಚಿತ್ರತಂಡಕ್ಕೀಗ ನಟಿ ಮೇಘನಾ ಗಾಂವ್ಕರ್​ ಎಂಟ್ರಿ ನೀಡಿದ್ದಾರೆ. ಅವರ ಪಾತ್ರ ಹೇಗಿರಲಿದೆ ಎಂಬ ಬಗ್ಗೆಯೂ ಮಾಹಿತಿ ಹೊರಬಿದ್ದಿದೆ. ಇಷ್ಟು ದಿನ ಸಿನಿಮಾಗಳಲ್ಲಿ ಗ್ಲಾಮರಸ್​ ಆಗಿ ಕಾಣಿಸಿಕೊಳ್ಳುತ್ತಿದ್ದ ಮೇಘನಾ ಅವರು ಈಗ ‘ಶಿವಾಜಿ ಸುರತ್ಕಲ್​ 2’ ಚಿತ್ರದಲ್ಲಿ ಪೊಲೀಸ್​ ಅಧಿಕಾರಿಯಾಗಿ ನಟಿಸಲಿದ್ದಾರೆ.

ಮೊದಲ ಪಾರ್ಟ್​ನಲ್ಲಿ ಇದ್ದ ಹಲವು ಪಾತ್ರಗಳು ಈ ಸೀಕ್ವೆಲ್​ನಲ್ಲಿ ಮುಂದುವರಿಯುತ್ತಿವೆ. ರಮೇಶ್ ಅರವಿಂದ್ ಜೊತೆ ರಾಧಿಕಾ ನಾರಾಯಣ್, ರಾಘು ರಾಮನಕೊಪ್ಪ, ವಿದ್ಯಾ ಮೂರ್ತಿ ನಟಿಸಲಿದ್ದಾರೆ. ಅವರ ಜೊತೆ ಮೇಘನಾ ಗಾಂವ್ಕರ್​ ಹೊಸ ಸೇರ್ಪಡೆ ಆಗಿದ್ದಾರೆ.

ಡಿಸಿಪಿ ದೀಪಾ ಕಾಮತ್ ಎಂಬ ಪಾತ್ರವನ್ನು ಮೇಘನಾ ಗಾಂವ್ಕರ್​ ನಿಭಾಯಿಸಲಿದ್ದಾರೆ. ಬೆಂಗಳೂರು ಸೆಂಟ್ರಲ್ ಕ್ರೈಂ ಬ್ರಾಂಚ್ ಡಿಸಿಪಿಯಾಗಿ ಅವರು ಕಾಣಿಸಿಕೊಳ್ಳಲಿದ್ದಾರೆ. ಇದೇ ಮೊದಲ ಬಾರಿಗೆ ಅವರು ಟಫ್ ಕಾಪ್ ಆಗಿ ತೆರೆಮೇಲೆ ಕಾಣಿಸಿಕೊಳ್ಳಲಿರುವುದು ಅಭಿಮಾನಿಗಳಿಗೆ ಖುಷಿ ನೀಡಲಿದೆ. ಈ ಪಾತ್ರವು ಕಥಾನಾಯಕ ಶಿವಾಜಿ ಸುರತ್ಕಲ್​ಗೆ ಬೆನ್ನೆಲುಬಾಗಿ ನಿಲ್ಲಲಿದೆ.

ಇನ್ನಷ್ಟು ಕಲಾವಿದರು ಚಿತ್ರತಂಡವನ್ನು ಸೇರಿಕೊಳ್ಳಲಿದ್ದಾರೆ. ಆ ಬಗ್ಗೆ ಮುಂದಿನ ದಿನಗಳಲ್ಲಿ ಮಾಹಿತಿ ಹೊರಬೀಳಲಿದೆ. ಸದ್ಯ ಚಿತ್ರದ ಪ್ರೀ-ಪ್ರೊಡಕ್ಷನ್​ ಕೆಲಸಗಳು ನಡೆಯುತ್ತಿವೆ. ರಮೇಶ್ ಅರವಿಂದ್ ನಟನೆಯ 103ನೇ ಚಿತ್ರ ಇದಾಗಿದ್ದು, ಚಿತ್ರಕ್ಕೆ ಕಥೆ-ಚಿತ್ರಕಥೆ ಬರೆದು ಆಕಾಶ್ ಶ್ರಿವತ್ಸ ಅವರು ನಿರ್ದೇಶನ ಮಾಡುತ್ತಿದ್ದಾರೆ. ರೇಖಾ ಕೆ.ಎನ್. ಮತ್ತು ಅನುಪ್ ಗೌಡ ನಿರ್ಮಾಣ ಮಾಡುತ್ತಿದ್ದಾರೆ. ಕೆಲವೇ ದಿನದಲ್ಲಿ ಮುಹೂರ್ತ ಮಾಡಿ ಚಿತ್ರೀಕರಣ ಆರಂಭಿಸಬೇಕು ಎಂದು ಚಿತ್ರತಂಡ ಪ್ಲ್ಯಾನ್​ ಮಾಡಿಕೊಂಡಿದೆ.

ಸೆ.10ರಂದು ರಮೇಶ್​ ಅರವಿಂದ್​ ಜನ್ಮದಿನದ ಪ್ರಯುಕ್ತ ಈ ಸಿನಿಮಾದ ಫಸ್ಟ್​ಲುಕ್​ ಪೋಸ್ಟರ್ ಲಾಂಚ್​ ಆಗಿತ್ತು. ಮೊದಲ ಪಾರ್ಟ್​ಗೆ ‘ದಿ ಕೇಸ್​ ಆಫ್​ ರಣಗಿರಿ ರಹಸ್ಯ’ ಎಂಬ ಟ್ಯಾಗ್​ಲೈನ್​ ಇತ್ತು. ಈಗ ಎರಡನೇ ಪಾರ್ಟ್​ಗೆ ‘ದಿ ಮಿಸ್ಟೀರಿಯಸ್​ ಕೇಸ್​ ಆಫ್​ ಮಾಯಾವಿ’ ಎಂಬ ಟ್ಯಾಗ್​ಲೈನ್​ ಇದೆ. ಹಲವು ಗೆಟಪ್​ಗಳಲ್ಲಿ ರಮೇಶ್​ ಅರವಿಂದ್​ ಕಾಣಿಸಿಕೊಳ್ಳಲಿದ್ದಾರೆ. ಕರ್ನಾಟಕದ ಅನೇಕ ಕಡೆಗಳಲ್ಲಿ ಚಿತ್ರೀಕರಣ ನಡೆಯಲಿದೆ.

ಇದನ್ನೂ ಓದಿ:

Ramesh Aravind Birthday: ಕೈಕೋಳ ತೊಟ್ಟು ಬಂದ ಶಿವಾಜಿ ಸುರತ್ಕಲ್​; ಸೂಪರ್​ ಹಿಟ್​ ಚಿತ್ರದ ಸೀಕ್ವೆಲ್​ಗೆ ಸಿದ್ಧತೆ

Raayan Raj Sarja: ರಾಯನ್​ ರಾಜ್​ ಸರ್ಜಾ ಹುಟ್ಟುಹಬ್ಬಕ್ಕೆ ಧ್ರುವ ಬಂದಿಲ್ಲ; ಕಾರಣ ತಿಳಿಸಿದ ಮೇಘನಾ ರಾಜ್​

Click on your DTH Provider to Add TV9 Kannada