ಶಿವಣ್ಣ, ಉಪ್ಪಿ, ರಾಜ್ ಬಿ. ಶೆಟ್ಟಿ ನಟನೆಯ ‘45’ ಸಿನಿಮಾ ಆ.15ಕ್ಕೆ ಬಿಡುಗಡೆ

ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರು ‘45’ ಸಿನಿಮಾ ಮೂಲಕ ಡೈರೆಕ್ಟರ್ ಆಗಿದ್ದಾರೆ. ಈ ಸಿನಿಮಾವನ್ನು ರಮೇಶ್ ರೆಡ್ಡಿ ನಿರ್ಮಾಣ ಮಾಡಿದ್ದಾರೆ. ಶಿವರಾಜ್​ಕುಮಾರ್​, ಉಪೇಂದ್ರ, ರಾಜ್ ಬಿ. ಶೆಟ್ಟಿ ಅವರು ಈ ಚಿತ್ರದಲ್ಲಿ ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ಸಂಕ್ರಾಂತಿ ಶುಭ ಸಂದರ್ಭದಲ್ಲಿ ‘45’ ಸಿನಿಮಾದ ಬಿಡುಗಡೆ ದಿನಾಂಕ ಘೋಷಿಸಲಾಗಿದೆ.

ಶಿವಣ್ಣ, ಉಪ್ಪಿ, ರಾಜ್ ಬಿ. ಶೆಟ್ಟಿ ನಟನೆಯ ‘45’ ಸಿನಿಮಾ ಆ.15ಕ್ಕೆ ಬಿಡುಗಡೆ
Upendra, Ramesh Reddy, Raj B Shetty
Follow us
ಮದನ್​ ಕುಮಾರ್​
|

Updated on: Jan 15, 2025 | 10:59 PM

ಹಲವು ಕಾರಣಗಳಿಂದಾಗಿ ‘45’ ಸಿನಿಮಾ ನಿರೀಕ್ಷೆ ಮೂಡಿಸಿದೆ. ಈ ವರ್ಷದ ಬಹುನಿರೀಕ್ಷಿತ ಸಿನಿಮಾದಲ್ಲಿ ಈ ಚಿತ್ರ ಕೂಡ ಇದೆ. ಆಗಸ್ಟ್​ 15ರಂದು ಈ ಸಿನಿಮಾ ರಿಲೀಸ್ ಆಗಲಿದೆ. ಇತ್ತೀಚೆಗೆ ಚಿತ್ರತಂಡದವರು ಬಿಡುಗಡೆ ದಿನಾಂಕ ಘೋಷಿಸಿದರು. ಅದ್ದೂರಿ ಸಮಾರಂಭ ನಡೆಸಿ ರಿಲೀಸ್ ಡೇಟ್ ಘೋಷಣೆ ಮಾಡಲಾಯಿತು. ಸಚಿವ ರಾಮಲಿಂಗ ರೆಡ್ಡಿ, ಕೆ.ವಿ.ಎನ್. ಪ್ರೊಡಕ್ಷನ್ಸ್​ ಸಂಸ್ಥೆಯ ವೆಂಕಟ್ ನಾರಾಯಣ್, ಮಾಜಿ ಶಾಸಕ ರಾಮಚಂದ್ರೇಗೌಡ, ಇಂದ್ರಜಿತ್ ಲಂಕೇಶ್, ಸಂಜಯ್ ಗೌಡ, ಆನಂದ್ ಆಡಿಯೋ ಸಂಸ್ಥೆಯ ಶ್ಯಾಮ್, ಆನಂದ್, ಕೆ.ಮಂಜು, ಶ್ರೇಯಸ್ ಮಂಜು ಮುಂತಾದವರು ಈ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು.

ನಿರ್ಮಾಪಕ ರಮೇಶ್ ರೆಡ್ಡಿ ಅವರ ಪುತ್ರ ಸೂರಜ್ ಅವರು ರಿಲೀಸ್ ಡೇಟ್​ ಕುರಿತು ಮಾಹಿತಿ ಇರುವ ವಿಡಿಯೋ ಅನಾವರಣ ಮಾಡಿದರು. ಸೂರಜ್ ಅವರ ಜನ್ಮದಿನದಂದೇ ‘45’ ಸಿನಿಮಾದ ರಿಲೀಸ್ ಡೇಟ್ ಅನೌನ್ಸ್ ಆಗಿದ್ದು ವಿಶೇಷ. ನಿರ್ಮಾಪಕ ಎಂ. ರಮೇಶ್ ರೆಡ್ಡಿ ಅವರು ಮಾತನಾಡಿ, ‘ಸಿನಿಮಾದಲ್ಲಿ ಕಂಟೆಂಟ್ ಹೇಗಿದೆ ಎಂಬುದೇ ಮುಖ್ಯ. ಸಿನಿಮಾ ಸಾವಿರ ಕೋಟಿ ರೂಪಾಯಿ ಮಾಡುತ್ತೋ, ನೂರು ಕೋಟಿ ರೂ. ಗಳಿಸುತ್ತೋ ಅಥವಾ 50 ಕೋಟಿ ರೂಪಾಯಿ ಮಾಡುತ್ತೋ ದೇವರಿಗೆ ಗೊತ್ತು. ಆದರೆ ಸಿನಿಮಾ ಎಲ್ಲರಿಗೂ ಇಷ್ಟ ಆಗಲಿದೆ’ ಎಂದರು.

‘45’ ಸಿನಿಮಾದ ಶೂಟಿಂಗ್ ಮುಕ್ತಾಯ ಆಗಿದೆ. ಅಲ್ಲದೇ, ಡಬ್ಬಿಂಗ್ ಕೂಡ ಮುಗಿದಿದೆ. ಈಗ ವಿಎಫ್​ಎಕ್ಸ್​ ಕೆಲಸಗಳು ನಡೆಯುತ್ತಿವೆ. ‘ಕೆನಡಾದ MARZ ಸಂಸ್ಥೆ ವಿಎಫ್​ಎಕ್ಸ್ ಮಾಡಲಿದೆ. ಮೇ ತಿಂಗಳ ಅಂತ್ಯದ ವೇಳೆಗೆ ಗ್ರಾಫಿಕ್ ಕೆಲಸ ಮುಗಿಯಲಿದೆ. ಹಾಗಾಗಿ ಆಗಸ್ಟ್ 15ಕ್ಕೆ ಬಿಡುಗಡೆ ದಿನಾಂಕ ಘೋಷಣೆ ಮಾಡಿದ್ದೇವೆ. ನನ್ನ ಮೊದಲ ನಿರ್ದೇಶನದ ಸಿನಿಮಾದಲ್ಲೇ ಶಿವರಾಜ್​ಕುಮಾರ್, ಉಪೇಂದ್ರ ಮತ್ತು ರಾಜ್ ಬಿ. ಶೆಟ್ಟಿ ನಟಿಸಿದ್ದಾರೆ ಎಂಬುದನ್ನು ಈಗಲೂ ನಂಬಲಾಗುತ್ತಿಲ್ಲ‌’ ಎಂದು ಅರ್ಜುನ್ ಜನ್ಯ ಹೇಳಿದರು.

ಇದನ್ನೂ ಓದಿ: 6 ಸರ್ಜರಿ, 190 ಹೊಲಿಗೆ: ಶಿವರಾಜ್​ಕುಮಾರ್ ಚಿಕಿತ್ಸೆ ಬಗ್ಗೆ ಇಲ್ಲಿದೆ ಪೂರ್ತಿ ಮಾಹಿತಿ

ನಿರ್ಮಾಪಕ ರಮೇಶ್ ರೆಡ್ಡಿ ಹಾಗೂ ನಿರ್ದೇಶಕ ಅರ್ಜುನ್ ಜನ್ಯ ಅವರ ಕಾಂಬಿನೇಷನ್​ ಬಗ್ಗೆ ಉಪೇಂದ್ರ ಮೆಚ್ಚುಗೆ ಸೂಚಿಸಿದರು. ‘ಈ ಕಾರ್ಯಕ್ರಮ ನೋಡಿದರೆ ಸಿನಿಮಾದ ಬಿಡುಗಡೆ ದಿನಾಂಕ ಪ್ರಕಟಣೆ ಮಾಡುವ ಸಮಾರಂಭದ ಹಾಗಿಲ್ಲ. ಬದಲಾಗಿ ಸಿನಿಮಾ ಸಕ್ಸಸ್ ಮೀಟ್ ರೀತಿ ಇದೆ’ ಎಂದು ಉಪೇಂದ್ರ ಹೇಳಿದರು. ನಟ ರಾಜ್ ಬಿ. ಶೆಟ್ಟಿ, ಸಾಹಸ ನಿರ್ದೇಶಕರಾದ ಡಿಫರೆಂಟ್ ಡ್ಯಾನಿ, ರವಿವರ್ಮ, ಛಾಯಾಗ್ರಾಹಕ ಸತ್ಯ ಹಗಡೆ ಮುಂತಾದವರು ಕೂಡ ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಕೊಪ್ಪಳ ಗವಿಸಿದ್ದೇಶ್ವರನ ರಥ ಎಳೆದು ಪುನೀತರಾದ ಭಕ್ತ ಸಾಗರ: ವಿಡಿಯೋ ನೋಡಿ
ಕೊಪ್ಪಳ ಗವಿಸಿದ್ದೇಶ್ವರನ ರಥ ಎಳೆದು ಪುನೀತರಾದ ಭಕ್ತ ಸಾಗರ: ವಿಡಿಯೋ ನೋಡಿ
ಬಹಳ ಎಚ್ಚರವಹಿಸಬೇಕೆಂದು ಹೇಳುತ್ತಾರೆ ಪ್ರಯಾಗ್​ರಾಜ್​ಗೆ ಬಂದಿರುವ ಕನ್ನಡಿಗ
ಬಹಳ ಎಚ್ಚರವಹಿಸಬೇಕೆಂದು ಹೇಳುತ್ತಾರೆ ಪ್ರಯಾಗ್​ರಾಜ್​ಗೆ ಬಂದಿರುವ ಕನ್ನಡಿಗ
ಕೊಪ್ಪಳ ಗವಿಮಠದ ಅಜ್ಜನ ಜಾತ್ರೆಗೆ ಹರಿದು ಬಂದ ಜನ ಸಾಗರದ ವಿಡಿಯೋ ನೋಡಿ
ಕೊಪ್ಪಳ ಗವಿಮಠದ ಅಜ್ಜನ ಜಾತ್ರೆಗೆ ಹರಿದು ಬಂದ ಜನ ಸಾಗರದ ವಿಡಿಯೋ ನೋಡಿ
ಯಡಿಯೂರಪ್ಪ ಕಾಲಿಗೆ ಚಕ್ರ ಕಟ್ಟಿಕೊಂಡು ಪಕ್ಷ ಸಂಘಟನೆ ಮಾಡಿದ್ದಾರೆ: ಬಿವೈವಿ
ಯಡಿಯೂರಪ್ಪ ಕಾಲಿಗೆ ಚಕ್ರ ಕಟ್ಟಿಕೊಂಡು ಪಕ್ಷ ಸಂಘಟನೆ ಮಾಡಿದ್ದಾರೆ: ಬಿವೈವಿ
ಮೂಕ ಪ್ರಾಣಿಯ ಕೆಚ್ಚಲು ಕೊಯ್ಯುವುದು ತಾಯಿಗೆ ದ್ರೋಗ ಬಗೆದಂತೆ: ತನ್ವೀರ್ ಸೇಟ
ಮೂಕ ಪ್ರಾಣಿಯ ಕೆಚ್ಚಲು ಕೊಯ್ಯುವುದು ತಾಯಿಗೆ ದ್ರೋಗ ಬಗೆದಂತೆ: ತನ್ವೀರ್ ಸೇಟ
ಆರತಿ ಉಕ್ಕಡಕ್ಕೆ ಭೇಟಿ ನೀಡಿದ ದರ್ಶನ್; ಅಹಲ್ಯ ದೇವಿಗೆ ವಿಶೇಷ ಪೂಜೆ
ಆರತಿ ಉಕ್ಕಡಕ್ಕೆ ಭೇಟಿ ನೀಡಿದ ದರ್ಶನ್; ಅಹಲ್ಯ ದೇವಿಗೆ ವಿಶೇಷ ಪೂಜೆ
ನವಿ ಮುಂಬೈನಲ್ಲಿ ಏಷ್ಯಾದ 2ನೇ ದೊಡ್ಡ ಇಸ್ಕಾನ್ ದೇವಾಲಯ ಉದ್ಘಾಟಿಸಿದ ಮೋದಿ
ನವಿ ಮುಂಬೈನಲ್ಲಿ ಏಷ್ಯಾದ 2ನೇ ದೊಡ್ಡ ಇಸ್ಕಾನ್ ದೇವಾಲಯ ಉದ್ಘಾಟಿಸಿದ ಮೋದಿ
ದೇವರಾಜ ಮಾರ್ಕೆಟ್ ಡೆಮಾಲಿಶ್ ಮಾಡಲು ನ್ಯಾಯಾಲಯ ಆದೇಶಿಸಿದೆ: ಮಹದೇವಪ್ಪ
ದೇವರಾಜ ಮಾರ್ಕೆಟ್ ಡೆಮಾಲಿಶ್ ಮಾಡಲು ನ್ಯಾಯಾಲಯ ಆದೇಶಿಸಿದೆ: ಮಹದೇವಪ್ಪ
ಮಹಾಕುಂಭದಲ್ಲಿ ಭಕ್ತಸಾಗರ; ಕಣ್ಸೆಳೆಯುತ್ತಿದೆ ವಿಹಂಗಮ ನೋಟ
ಮಹಾಕುಂಭದಲ್ಲಿ ಭಕ್ತಸಾಗರ; ಕಣ್ಸೆಳೆಯುತ್ತಿದೆ ವಿಹಂಗಮ ನೋಟ
ನಾಳೆಯಲ್ಲ, ಮುಂದಿನ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿ ಮಂಡನೆ: ಸಿದ್ದರಾಮಯ್ಯ
ನಾಳೆಯಲ್ಲ, ಮುಂದಿನ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿ ಮಂಡನೆ: ಸಿದ್ದರಾಮಯ್ಯ