AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shivaraj K R Pete: ಟ್ರೇಲರ್​ ಮೂಲಕ ‘ಧಮಾಕ’ ಮಾಡಿದ ಶಿವರಾಜ್​ ಕೆ.ಆರ್​. ಪೇಟೆ-ನಯನಾ; ಇದು ಕಾಮಿಡಿ ಕಿಲಾಡಿಗಳ ಚಿತ್ರ

Dhamaka Kannada Movie: ಕಾಮಿಡಿ ವಿಚಾರದಲ್ಲಿ ಶಿವರಾಜ್ ಕೆ.ಆರ್. ಪೇಟೆ ಈಗಾಗಲೇ ತಮ್ಮ ಪ್ರತಿಭೆ ಏನು ಎಂಬುದನ್ನು ಸಾಬೀತುಪಡಿಸಿದ್ದಾರೆ. ಅವರು ‘ಧಮಾಕ’ ಚಿತ್ರದಲ್ಲಿ ಹೀರೋ ಆಗಿ ಜನರನ್ನು ನಕ್ಕು ನಗಿಸಲು ಬರುತ್ತಿದ್ದಾರೆ.

Shivaraj K R Pete: ಟ್ರೇಲರ್​ ಮೂಲಕ ‘ಧಮಾಕ’ ಮಾಡಿದ ಶಿವರಾಜ್​ ಕೆ.ಆರ್​. ಪೇಟೆ-ನಯನಾ; ಇದು ಕಾಮಿಡಿ ಕಿಲಾಡಿಗಳ ಚಿತ್ರ
ನಯನಾ, ಶಿವರಾಜ್ ಕೆ.ಆರ್. ಪೇಟೆ
TV9 Web
| Edited By: |

Updated on:Aug 21, 2022 | 10:47 PM

Share

ಸಿನಿಮಾ ನೋಡಲು ಬರುವ ಪ್ರೇಕ್ಷಕರಿಗೆ ಭರಪೂರ ಮನರಂಜನೆಯ ನಿರೀಕ್ಷೆ ಇರುತ್ತದೆ. ಯಾವುದೇ ಚಿತ್ರದಲ್ಲಿ ಕಾಮಿಡಿ ದೃಶ್ಯಗಳಿದ್ದರೆ ಜನರು ಸಖತ್​ ಎಂಜಾಯ್​ ಮಾಡುತ್ತಾರೆ. ಇಡೀ ಸಿನಿಮಾ ಹಾಸ್ಯಮಯವಾಗಿದ್ದರೆ ಬಂಪರ್ ಮನರಂಜನೆ ಸಿಗುತ್ತದೆ. ಆ ರೀತಿ ಭರವಸೆಯೊಂದಿಗೆ ಮೂಡಿಬರುತ್ತಿದೆ ‘ಧಮಾಕ’ ಸಿನಿಮಾ (Dhamaka Kannada Movie). ಕನ್ನಡದ ಈ ಚಿತ್ರವೀಗ ಟ್ರೇಲರ್​ ಮೂಲಕ ಗಮನ ಸೆಳೆಯುತ್ತಿದೆ. ಇತ್ತೀಚೆಗಷ್ಟೇ ಟ್ರೇಲರ್​ ಬಿಡುಗಡೆ ಮಾಡಲಾಗಿದ್ದು, ಲಕ್ಷಾಂತರ ಬಾರಿ ವೀಕ್ಷಣೆ ಕಂಡಿದೆ. ಇಷ್ಟು ದಿನ ಹಾಡಿನ ಮೂಲಕ ನಿರೀಕ್ಷೆ ಹೆಚ್ಚಿಸಿದ್ದ ಈ ಚಿತ್ರತಂಡ ಈಗ ಟ್ರೇಲರ್ ​ಅನಾವರಣ ಮಾಡಿ ಕೌತುಕ ಸೃಷ್ಟಿ ಮಾಡಿದೆ. ಈ ಸಿನಿಮಾದಲ್ಲಿ ಕಾಮಿಡಿ ಕಿಲಾಡಿಗಳು ಖ್ಯಾತಿಯ ಶಿವರಾಜ್​ ಕೆ.ಆರ್​. ಪೇಟೆ (Shivaraj K R Pete) ಹಾಗೂ ನಯನಾ (Comedy Khiladigalu Nayana) ಜೋಡಿಯಾಗಿ ನಟಿಸಿದ್ದಾರೆ.

ಮಧ್ಯಮ ವರ್ಗದ ಕುಟುಂಬದಲ್ಲಿ ನಡೆಯುವ ಕಥೆಯನ್ನು ‘ಧಮಾಕ’ ಸಿನಿಮಾ ಒಳಗೊಂಡಿದೆ ಎಂಬುದಕ್ಕೆ ಟ್ರೇಲರ್​ನಲ್ಲಿ ಸುಳಿವು ನೀಡಲಾಗಿದೆ. ಒಂದಷ್ಟು ಸಸ್ಪೆನ್ಸ್​ ಕೂಡ ಇದೆ ಎಂಬುದನ್ನು ತಿಳಿಸಲಾಗಿದೆ. ಹಾಸ್ಯ ನಟ ಚಿಕ್ಕಣ್ಣ ಅವರ ಹಿನ್ನೆಲೆ ಧ್ವನಿಯಲ್ಲಿ ಇದರ ಕಥೆ ನಿರೂಪಿತವಾಗಿರುವುದು ವಿಶೇಷ. ಇಂಥ ಹಲವು ವಿಶೇಷಗಳ ಮೂಲಕ ಜನರನ್ನು ರಂಜಿಸಲು ಪ್ರಯತ್ನಿಸಿದ್ದಾರೆ ನಿರ್ದೇಶಕ ಲಕ್ಷ್ಮಿ ರಮೇಶ್. ಟ್ರೇಲರ್ ನೋಡಿದ ಸಿನಿಪ್ರಿಯರು ಪಾಸಿಟಿವ್​ ಆಗಿ ಕಮೆಂಟ್​ ಮಾಡುತ್ತಿದ್ದಾರೆ.

ಕಾಮಿಡಿ ವಿಚಾರದಲ್ಲಿ ಶಿವರಾಜ್ ಕೆ.ಆರ್. ಪೇಟೆ ಅವರು ಈಗಾಗಲೇ ತಮ್ಮ ಪ್ರತಿಭೆ ಏನು ಎಂಬುದನ್ನು ಸಾಬೀತುಪಡಿಸಿದ್ದಾರೆ. ಅವರು ‘ಧಮಾಕ’ ಚಿತ್ರದಲ್ಲಿ ಹೀರೋ ಆಗಿ ಜನರನ್ನು ನಕ್ಕು ನಗಿಸಲು ಬರುತ್ತಿದ್ದಾರೆ. ತಮ್ಮದೇ ಮ್ಯಾನರಿಸಂ ಮೂಲಕ ಅವರು ಕಾಣಿಸಿಕೊಳ್ಳುತ್ತಿದ್ದಾರೆ. ಅವರಿಗೆ ಜೋಡಿಯಾಗಿ ನಯನಾ ಸಾಥ್​ ನೀಡಿದ್ದಾರೆ. ಮೋಹನ್ ಜುನೇಜಾ, ಕೋಟೆ ಪ್ರಭಾಕರ್, ಮಿಮಿಕ್ರಿ ಗೋಪಾಲ್, ಅರುಣಾ ಬಾಲರಾಜ್, ಸಿದ್ಧು ಮೂಲಿಮನಿ, ಪ್ರಿಯಾ ಜೆ. ಆಚಾರ್​ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ
Image
SIIMA Awards: ಮೊದಲ ಬಾರಿ ಬೆಂಗಳೂರಲ್ಲಿ ಸೈಮಾ ಪ್ರಶಸ್ತಿ ಪ್ರದಾನ ಸಮಾರಂಭ; ಪುನೀತ್​ಗೆ ವಿಶೇಷ ಗೌರವಾರ್ಪಣೆ
Image
ಮನೋರಂಜನ್​ ರವಿಚಂದ್ರನ್​-ಸಂಗೀತಾ ಮದುವೆಗೆ ಬಂದು ಶುಭಕೋರಿದ ಸೆಲೆಬ್ರಿಟಿಗಳ ಫೋಟೋ ಗ್ಯಾಲರಿ
Image
‘ಲವ್​ 360’ ಚಿತ್ರದ ಉಳಿವಿಗಾಗಿ ಪ್ರೇಕ್ಷಕರಲ್ಲಿ ಶಶಾಂಕ್​ ವಿನಂತಿ​; ಸಾಥ್​ ನೀಡಿದ ‘ಗಾಳಿಪಟ 2’ ತಂಡ
Image
Puneeth Rajkumar: ಅಭಿಮಾನಿಯ ಮಗುವಿಗೆ ಅಪ್ಪು ಎಂದು ಹೆಸರಿಟ್ಟ ಶಿವಣ್ಣ

‘ಧಮಾಕ’ ಚಿತ್ರವನ್ನು ಎಸ್.ಆರ್​. ಮೀಡಿಯಾ ಪ್ರೊಡಕ್ಷನ್ ಬ್ಯಾನರ್ ನಡಿ ಸುನೀಲ್ ಎಸ್. ರಾಜ್ ಮತ್ತು ಅನ್ನಪೂರ್ಣ ಪಾಟೀಲ ನಿರ್ಮಾಣ ಮಾಡಿದ್ದಾರೆ. ಹಾಲೇಶ್ ಎಸ್. ಛಾಯಾಗ್ರಹಣ, ವಿಕಾಸ್ ವಸಿಷ್ಠ ಸಂಗೀತ ನಿರ್ದೇಶನ, ರಘು ಆರ್.ಜೆ. ನೃತ್ಯ ನಿರ್ದೇಶನ ಹಾಗೂ ವಿನಯ್ ಕೂರ್ಗ್ ಅವರ ಸಂಕಲನ ಈ ಸಿನಿಮಾಗಿದೆ‌. ಸಿನಿಮಾ ಬಿಡುಗಡೆ ಮಾಡಲು ತಂಡ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 10:47 pm, Sun, 21 August 22

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?