ಸೇನಾಧಿಕಾರಿ ಲುಕ್​ನಲ್ಲಿ ಶಿವರಾಜ್​ಕುಮಾರ್​; ಹೊಸ ಲುಕ್​ ನೋಡಿ ಅಭಿಮಾನಿಗಳು ಫಿದಾ

‘ನೀ ಸಿಗೋವರೆಗೂ’ ಈಗಾಗಲೇ ಮೊದಲ ಹಂತದ ಚಿತ್ರೀಕರಣ ಮುಗಿಸಿಕೊಂಡಿದೆ. ಈ ಚಿತ್ರಕ್ಕೆ ಸದ್ಯದಲ್ಲೇ ಎರಡನೇ ಹಂತದ ಚಿತ್ರೀಕರಣ ಆರಂಭವಾಗಲಿದೆ.

ಸೇನಾಧಿಕಾರಿ ಲುಕ್​ನಲ್ಲಿ ಶಿವರಾಜ್​ಕುಮಾರ್​; ಹೊಸ ಲುಕ್​ ನೋಡಿ ಅಭಿಮಾನಿಗಳು ಫಿದಾ
ಶಿವರಾಜ್​ಕುಮಾರ್​
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Oct 15, 2021 | 9:51 PM

ಶಿವರಾಜ್​ಕುಮಾರ್​ ಅವರು ಸಿನಿಮಾದಿಂದ ಸಿನಿಮಾಗೆ ಭಿನ್ನ ಲುಕ್​ನಲ್ಲಿ ಕಾಣಿಸಿಕೊಳ್ಳುತ್ತಾರೆ. ಈಗ ಅವರು ‘ನೀ ಸಿಗೋವರೆಗೂ’ ಚಿತ್ರಕ್ಕಾಗಿ ಸೇನಾಧಿಕಾರಿಯ ಅವತಾರ ತಾಳಿದ್ದಾರೆ. ದಸರಾ ಹಬ್ಬದ ನಿಮಿತ್ತ ಈ ಲುಕ್​ ರಿಲೀಸ್​ ಆಗಿದೆ. ಇದನ್ನು​ ನೋಡಿ ಅಭಿಮಾನಿಗಳು ಖುಷಿಯಾಗಿದ್ದಾರೆ.

‘ನೀ ಸಿಗೋವರೆಗೂ’ ಈಗಾಗಲೇ ಮೊದಲ ಹಂತದ ಚಿತ್ರೀಕರಣ ಮುಗಿಸಿಕೊಂಡಿದೆ. ಈ ಚಿತ್ರಕ್ಕೆ ಸದ್ಯದಲ್ಲೇ ಎರಡನೇ ಹಂತದ ಚಿತ್ರೀಕರಣ ಆರಂಭವಾಗಲಿದೆ. ಬೆಂಗಳೂರು, ಚಿಕ್ಕಮಗಳೂರು, ಜಮ್ಮು ಮತ್ತು ಕಾಶ್ಮೀರ ಹಾಗೂ ಅಮೆರಿಕ ಮುಂತಾದ ಕಡೆ ಶೂಟಿಂಗ್​ ನಡೆಯಲಿದೆ ಅನ್ನೋದು ವಿಶೇಷ.

ಶಿವರಾಜ್​ಕುಮಾರ್ ಈ ಚಿತ್ರದಲ್ಲಿ ಸೇನಾ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ. ರಾಮ್ ಧೂಲಿಪುಡಿ ನಿರ್ದೇಶನ ಮಾಡುತ್ತಿದ್ದಾರೆ. ಮೆರ್ಹಿನ್ ಫಿರ್ಜಾದ ನಾಯಕಿಯಾಗಿ ನಟಿಸುತ್ತಿದ್ದಾರೆ. ನಾಜರ್, ಸಾಧುಕೋಕಿಲ, ಸಂಪತ್ ಕುಮಾರ್ ಮುಂತಾದವರು ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಈ ಚಿತ್ರದಲ್ಲಿ ಮಂಗ್ಲಿ ನಟಿಸುತ್ತಿರುವುದು ವಿಶೇಷ. ಇಷ್ಟು ದಿನ ‘ಕಣ್ಣೇ ಅದಿರಿಂದ’ ಹಾಡಿನ ಮೂಲಕ ಕರುನಾಡ ಜನತೆಯನ್ನು ತಮ್ಮತ್ತ ಸೆಳೆದುಕೊಂಡಿದ್ದ ಮಂಗ್ಲಿ ಈಗ ನಟನೆಯ ಮೂಲಕವೂ ಕನ್ನಡಿಗರಿಗೆ ಹತ್ತಿರ ಆಗಲು ಪ್ರಯತ್ನಿಸುತ್ತಿದ್ದಾರೆ. ಕನ್ನಡದ ಸಿನಿಮಾಗಳಲ್ಲಿ ನಟಿಸುವಂತೆ ಅವರಿಗೆ ಬೇಡಿಕೆ ಬರುತ್ತಿದೆ. ಆ ಪೈಕಿ ಅವರು ಈ  ಚಿತ್ರ ಒಪ್ಪಿಕೊಂಡಿದ್ದಾರೆ.

‘ಟಗರು’ ಖ್ಯಾತಿಯ ಚರಣ್ ರಾಜ್ ಸಂಗೀತ ನಿರ್ದೇಶನ ಮಾಡಿದ್ದಾರೆ. ಇದರಿಂದ ಸಿನಿಮಾಗೆ ದೊಡ್ಡ ಮಟ್ಟದ ಮೈಲೇಜ್​ ಸಿಗುವ ಸಾಧ್ಯತೆ ಇದೆ. ಮಹೇಂದ್ರ ಸಿಂಹ ಛಾಯಾಗ್ರಹಣ, ದೀಪು ಸಂಕಲನ ಹಾಗೂ ರವಿ ಸಂತೆಹಕ್ಲು ಕಲಾ ನಿರ್ದೇಶನ ಈ ಚಿತ್ರಕ್ಕಿದೆ. ಬಾಲಶ್ರೀರಾಮ್ ಸ್ಟುಡಿಯೋಸ್ ಲಾಂಛನದಲ್ಲಿ  ನರಾಲ ಶ್ರೀನಿವಾಸ್ ರೆಡ್ಡಿ,  ಶ್ರೀಕಾಂತ್ ಧುಲಿಪುಡಿ ಹಾಗೂ ಸ್ವಾತಿ ವನಪಲ್ಲಿ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಕನ್ನಡ ಹಾಗೂ ತೆಲುಗು ಎರಡು ಭಾಷೆಗಳಲ್ಲಿ ‘ನೀ ಸಿಗೋವರೆಗೂ’ ಸಿನಿಮಾ ತೆರೆಗೆ ಬರುತ್ತಿದೆ ಅನ್ನೋದು ವಿಶೇಷ.

ಇದನ್ನೂ ಓದಿ: ನಾನು ಮತ್ತು ಉಪೇಂದ್ರ ಲವರ್ಸ್​ ರೀತಿ ಆಗಿದ್ದೇವೆ ಎಂದ ಶಿವರಾಜ್​ಕುಮಾರ್​

Mangli: ಕಣ್ಣೇ ಅದಿರಿಂದಿ ಗಾಯಕಿ ಮಂಗ್ಲಿಗೆ ಶಿವರಾಜ್​ಕುಮಾರ್​ ಸಿನಿಮಾದಲ್ಲಿ ನಟಿಸುವ ಅವಕಾಶ 

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ