ಅರ್ಜುನ್​ ಜನ್ಯ ನಿರ್ದೇಶನ ಮಾಡಲಿರುವ ಶಿವಣ್ಣನ ಚಿತ್ರಕ್ಕೆ ಟೈಟಲ್​ ಅನೌನ್ಸ್​; ಕೌತುಕ ಮೂಡಿಸಿದ ‘45’

Shivarajkumar | 45 Movie: ಅರ್ಜುನ್​ ಜನ್ಯ-ಶಿವರಾಜ್​ಕುಮಾರ್​ ಕಾಂಬಿನೇಷನ್​ ಚಿತ್ರಕ್ಕೆ ‘45’ ಎಂದು ಹೆಸರು ಇಡಲಾಗಿದೆ. ಕನ್ನಡ, ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆಗಳಲ್ಲಿ ಈ ಸಿನಿಮಾ ಮೂಡಿಬರಲಿದೆ.

ಅರ್ಜುನ್​ ಜನ್ಯ ನಿರ್ದೇಶನ ಮಾಡಲಿರುವ ಶಿವಣ್ಣನ ಚಿತ್ರಕ್ಕೆ ಟೈಟಲ್​ ಅನೌನ್ಸ್​; ಕೌತುಕ ಮೂಡಿಸಿದ ‘45’
45 ಟೈಟಲ್​ ಪೋಸ್ಟರ್​
Follow us
TV9 Web
| Updated By: ಮದನ್​ ಕುಮಾರ್​

Updated on:Jul 12, 2022 | 9:32 AM

‘ಹ್ಯಾಟ್ರಿಕ್​ ಹೀರೋ’ ಶಿವರಾಜ್​ಕುಮಾರ್​ (Shivarajkumar) ಅವರ ಜನ್ಮದಿನದ ಪ್ರಯುಕ್ತ ಒಂದಷ್ಟು ಹೊಸ ಸುದ್ದಿಗಳು ಹೊರಬಂದಿವೆ. ಅದರಲ್ಲೂ ಅವರ ಹೊಸ ಚಿತ್ರದ ಬಗ್ಗೆ ಸಿಕ್ಕಿರುವ ಅಪ್​ಡೇಟ್​ ಕೇಳಿ ಫ್ಯಾನ್ಸ್​ ಖುಷಿ ಆಗಿದ್ದಾರೆ. ಸಂಗೀತ ನಿರ್ದೇಶಕ ಅರ್ಜುನ್​ ಜನ್ಯ (Arjun Janya) ಅವರು ಶಿವರಾಜ್​ಕುಮಾರ್​ ಜೊತೆ ಸಿನಿಮಾ ಮಾಡಲು ಸಿದ್ಧತೆ ಮಾಡಿಕೊಂಡಿದ್ದಾರೆ. ಇದೇ ಮೊದಲ ಬಾರಿಗೆ ಅವರು ಡೈರೆಕ್ಟರ್​ ಕ್ಯಾಪ್​ ಧರಿಸುತ್ತಿರುವುದು ವಿಶೇಷ. ಈ ಚಿತ್ರಕ್ಕೆ ಈಗ ಟೈಟಲ್​ ಅನೌನ್ಸ್​ ಆಗಿದೆ. ‘45’ ಎಂದು ಇದಕ್ಕೆ ಶೀರ್ಷಿಕೆ ಇಡಲಾಗಿದೆ. ಆ ಮೂಲಕ ಕುತೂಹಲ ಮೂಡಿಸಲಾಗಿದೆ. ಕನ್ನಡದಲ್ಲಿ ಶಿವರಾಜ್​ಕುಮಾರ್​ ಅವರೇ ಟೈಟಲ್​ ಲಾಂಚ್​ ಮಾಡಿದ್ದಾರೆ. ಇನ್ನಿತರ ಭಾಷೆಯಲ್ಲಿ ಅಲ್ಲಿನ ಸ್ಟಾರ್​ ಸೆಲೆಬ್ರಿಟಿಗಳು ಶೀರ್ಷಿಕೆ ಅನಾವರಣ ಮಾಡಿದ್ದಾರೆ. ಏನಿದು ‘45’ (45 Movie) ಅಂತ ಅಭಿಮಾನಿಗಳು ತಲೆಗೆ ಹುಳ ಬಿಟ್ಟುಕೊಂಡಿದ್ದಾರೆ.

ಈವರೆಗೂ ಸಂಗೀತ ನಿರ್ದೇಶನದ ಮೂಲಕ ಗಮನ ಸೆಳೆದ ಅರ್ಜುನ್​ ಜನ್ಯ ಅವರು ಶಿವರಾಜ್​ಕುಮಾರ್​ ಸಿನಿಮಾಗೆ ಆ್ಯಕ್ಷನ್​-ಕಟ್​ ಹೇಳುತ್ತಾರೆ ಎಂಬ ಸುದ್ದಿ ಹೊರಬಿದ್ದಾಗಲೇ ಅಭಿಮಾನಿಗಳಿಗೆ ಅಚ್ಚರಿ ಮೂಡಿತು. ಈಗ ಟೈಟಲ್​ ಕೇಳಿ ಫ್ಯಾನ್ಸ್​ ಕಾತರ ಹೆಚ್ಚಿದೆ. ಚೊಚ್ಚಲ ಡೈರೆಕ್ಷನ್​ ಪ್ರಾಜೆಕ್ಟ್​ನಲ್ಲಿ ಅರ್ಜುನ್​ ಜನ್ಯ ಅವರು ಯಾವ ರೀತಿಯ ಕಥೆ ಹೇಳಲಿದ್ದಾರೆ ಎಂಬ ಕೌತುಕ ಮನೆ ಮಾಡಿದೆ.

ಕನ್ನಡ, ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆಗಳಲ್ಲಿ ಈ ಸಿನಿಮಾ ಮೂಡಿಬರಲಿದೆ. ತೆಲುಗಿನಲ್ಲಿ ಅಕ್ಕಿನೇನಿ ನಾಗಾರ್ಜುನ, ತಮಿಳಿನಲ್ಲಿ ಶಿವ ಕಾರ್ತಿಕೇಯನ್​, ಮಲಯಾಳಂನಲ್ಲಿ ಪೃಥ್ವಿರಾಜ್​ ಸುಕುಮಾರ್​ ಅವರು ‘45’ ಚಿತ್ರದ ಶೀರ್ಷಿಕೆ ಅನಾವರಣ ಮಾಡಿದ್ದಾರೆ. ಅವರೆಲ್ಲರಿಗೂ ಸೋಶಿಯಲ್​ ಮೀಡಿಯಾ ಮೂಲಕ ಶಿವರಾಜ್​ಕುಮಾರ್​ ಧನ್ಯವಾದ ತಿಳಿಸಿದ್ದಾರೆ.

ಇದನ್ನೂ ಓದಿ
Image
‘ಓಂ’ ಸಿನಿಮಾ ಸ್ಟೈಲ್​ನಲ್ಲಿ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ಗೆ ಶಿವರಾಜ್​ಕುಮಾರ್ ಎಂಟ್ರಿ; ಇಲ್ಲಿದೆ ವಿಡಿಯೋ
Image
‘ಪಾಸ್​ಪೋರ್ಟ್​ನಲ್ಲಿ ನನ್ನ ಹೆಸರು ಹೀಗಿಲ್ಲ’; ಅಸಲಿ ಹೆಸರು ರಿವೀಲ್ ಮಾಡಿದ ಶಿವರಾಜ್​ಕುಮಾರ್
Image
ಶಕ್ತಿಧಾಮದ ಮಕ್ಕಳ ಜತೆ ‘ಬೈರಾಗಿ’ ಹಾಡಿಗೆ ಡ್ಯಾನ್ಸ್ ಮಾಡಿದ ಶಿವರಾಜ್​ಕುಮಾರ್
Image
Sudeep: ‘ನಾನು-ಶಿವಣ್ಣ ಕೆಲವು ಸಮಯ ಮಾತಾಡ್ತಾ ಇರಲಿಲ್ಲ, ಕಾರಣ ಹುಡುಕ್ತಾ ಹೋದ್ರೆ..’; ಸುದೀಪ್​ ನೇರ ಮಾತು

‘45’ ಸಿನಿಮಾಗೆ ನಿರ್ಮಾಪಕ ಎಂ. ರಮೇಶ್​ ರೆಡ್ಡಿ ಅವರು ಬಂಡವಾಳ ಹೂಡುತ್ತಿದ್ದಾರೆ. ‘ಗಾಳಿಪಟ 2’, ‘100’, ‘ನಾತಿಚರಾಮಿ’ ಮುಂತಾದ ಸಿನಿಮಾಗಳನ್ನು ನಿರ್ಮಿಸಿರುವ ಅವರು ಈಗ ಈ ಹೊಸ ಪ್ರಾಜೆಕ್ಟ್​ ಆರಂಭಿಸಿದ್ದಾರೆ. ಚಿತ್ರದ ಬಗ್ಗೆ ಇನ್ನಷ್ಟೇ ಹೆಚ್ಚಿನ ಮಾಹಿತಿ ಸಿಗಬೇಕಿದೆ. ಇಂದು (ಜುಲೈ 12) ಶಿವರಾಜ್​ಕುಮಾರ್​ ಅವರು 60ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ‘45’ ಟೈಟಲ್​ ಪೋಸ್ಟರ್​ ಮೂಲಕ ಅವರಿಗೆ ಶುಭ ಕೋರಲಾಗುತ್ತಿದೆ.

Published On - 9:32 am, Tue, 12 July 22

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ