AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಶಿವಣ್ಣ, ನಾನು ದೇಹದಾನ ಮಾಡಿದ್ದೇವೆ’: ಅಪ್ಪು ನೆನಪಲ್ಲಿ ರಾಘಣ್ಣ ಹೇಳಿದ ಮಹತ್ವದ ವಿಚಾರಗಳು ಇಲ್ಲಿವೆ

Body Donation: ಪುನೀತ್​ ರಾಜ್​ಕುಮಾರ್​ ಸ್ಮರಣಾರ್ಥ ನೇತ್ರದಾನದ ಬಗ್ಗೆ ಅರಿವು ಮೂಡಿಸಲಾಗುತ್ತಿದೆ. ಅಲ್ಲದೇ ದೇಹದಾನದ ಬಗ್ಗೆಯೂ ಡಾ. ರಾಜ್​ಕುಮಾರ್​ ಕುಟುಂಬ ಜಾಗೃತಿ ಮೂಡಿಸುತ್ತಿದೆ. ಆ ಕುರಿತು ರಾಘಣ್ಣ ಮಾತನಾಡಿದ್ದಾರೆ.

‘ಶಿವಣ್ಣ, ನಾನು ದೇಹದಾನ ಮಾಡಿದ್ದೇವೆ’: ಅಪ್ಪು ನೆನಪಲ್ಲಿ ರಾಘಣ್ಣ ಹೇಳಿದ ಮಹತ್ವದ ವಿಚಾರಗಳು ಇಲ್ಲಿವೆ
ರಾಘವೇಂದ್ರ ರಾಜ್​ಕುಮಾರ್​, ಶಿವರಾಜ್​ಕುಮಾರ್​
TV9 Web
| Edited By: |

Updated on:Dec 29, 2021 | 12:47 PM

Share

ನಟ ಪುನೀತ್​ ರಾಜ್​ಕುಮಾರ್​ ( Puneeth Rajkumar) ಅವರು ಅನೇಕ ವಿಚಾರಗಳಲ್ಲಿ ಮಾದರಿ ಆಗಿದ್ದರು. ಅವರನ್ನು ಕಳೆದುಕೊಂಡಿದ್ದರಿಂದ ಕನ್ನಡ ಚಿತ್ರರಂಗಕ್ಕೆ ಮಾತ್ರವಲ್ಲದೇ ಇಡೀ ಸಮಾಜಕ್ಕೆ ನಷ್ಟ ಆಗಿದೆ. ನಿಧನದ ಬಳಿಕ ನೇತ್ರದಾನದ (Eye Donation) ಮೂಲಕ ಅಪ್ಪು ಸಾರ್ಥಕತೆ ಮೆರೆದರು. ಅವರಿಂದ ಪ್ರೇರಿತರಾಗಿ ಈಗ ಸಾವಿರಾರು ಜನರು ನೇತ್ರದಾನಕ್ಕೆ ಪ್ರತಿಜ್ಞೆ ಮಾಡುತ್ತಿದ್ದಾರೆ. ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿರುವ ಡಾ. ರಾಜ್​ಕುಮಾರ್​ ಕುಟುಂಬದವರು ದೇಹದಾನದ (Body Donation) ಬಗ್ಗೆ ನಿರ್ಧಾರ ತೆಗೆದುಕೊಂಡಿದ್ದಾರೆ. ಈ ಬಗ್ಗೆ ರಾಘವೇಂದ್ರ ರಾಜ್​ಕುಮಾರ್ (Raghavendra Rajkumar)​ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಪುನೀತ್​ ನಿಧನರಾಗಿ ಇಂದಿಗೆ (ಡಿ.29) ಎರಡು ತಿಂಗಳು ಕಳೆದಿದೆ. ಆ ಪ್ರಯುಕ್ತ ಅವರ ಸಮಾಧಿಗೆ ಪೂಜೆ ಸಲ್ಲಿಸಲಾಗಿದೆ.

ನೇತ್ರದಾನದ ಬಳಿಕ ದೇಹದಾನದ ಬಗ್ಗೆಯೂ ಡಾ. ರಾಜ್​ ಕುಟುಂಬ ಜಾಗೃತಿ ಮೂಡಿಸುತ್ತಿದೆ. ಆ ಕುರಿತು ರಾಘಣ್ಣ ಮಾತನಾಡಿದ್ದಾರೆ. ‘ಅಪ್ಪಾಜಿ ಹುಟ್ಟುಹಬ್ಬದ ದಿನ ನಾನು ಮತ್ತು ಶಿವಣ್ಣ ದೇಹದಾನ ಮಾಡಿದ್ದೇವೆ. ನಮ್ಮ ದೇಹ ಬೆಂಕಿಯಲ್ಲಿ ಅಥವಾ ಮಣ್ಣಲ್ಲಿ ಅಂತ್ಯವಾಗಿ ಹೋಗುವ ಬದಲು, ನಮ್ಮಿಂದ ನಾಲ್ಕು ಜನಕ್ಕೆ ಸಹಾಯ ಆಗುತ್ತೆ ಅನ್ನೋದಾದರೆ ನಾವೇಕೆ ದೇಹದಾನ ಮಾಡಬಾರದು? ನಮ್ಮ ತಂದೆಯವರ ಪ್ರೇರಣೆಯಿಂದ ನಾವು ಇದನ್ನು ಮಾಡಿದ್ದೇವೆ. ಈ ಬಗ್ಗೆ ನೀವು ವಿಚಾರ ಮಾಡಿ. ನಿಮ್ಮ ಮನಸ್ಸಿಗೆ ಸರಿ ಎನಿಸಿ, ನೀವೇ ದೇಹದಾನ ಮಾಡುತ್ತೀರಿ. ಆ ಬಗ್ಗೆ ಯಾರಿಗೂ ನಾವು ಬಲವಂತ ಮಾಡುವುದಿಲ್ಲ’ ಎಂದು ರಾಘವೇಂದ್ರ ರಾಜ್​ಕುಮಾರ್​ ಹೇಳಿದ್ದಾರೆ.

‘ಎಲ್ಲರೂ ನೇತ್ರದಾನ ಮಾಡಬೇಕು. ಅದರಿಂದ ಅಂಧರ ಬಾಳಿಗೆ ಬೆಳಕು ಬರುತ್ತದೆ. ಅವರ ಆಶೀರ್ವಾದ ನಮ್ಮ ಕುಟುಂಬದವರ ಮೇಲೆ ಇರುತ್ತದೆ. ಪುನೀತ್​ ನಿಧನದ ಬಳಿಕ 400ಕ್ಕೂ ಹೆಚ್ಚು ಕಣ್ಣುಗಳು ಬಂದಿವೆ. ನೇತ್ರದಾನದ ಬಗ್ಗೆ ನಾಲ್ಕು ಜನಕ್ಕೆ ಹೇಳಿ, ಸೋಶಿಯಲ್​ ಮೀಡಿಯಾದಲ್ಲಿ ಹಾಕಿ. ಅದರಿಂದ ಎಲ್ಲರಿಗೂ ಕಣ್ಣು ಸಿಗಲಿ. ಇಷ್ಟೊಂದು ಕಣ್ಣುಗಳು ಎಲ್ಲಿಂದ ಬಂತು ಎಂದು ಪ್ರಪಂಚ ಕೇಳಿದರೆ ಕರ್ನಾಟಕದಿಂದ ಬಂತು ಅಂತ ಹೆಮ್ಮೆಯಿಂದ ಹೇಳಬೇಕು. ಅದು ಪುನೀತ್​ಗೆ ಮತ್ತು ರಾಜ್​ಕುಮಾರ್​ ಅವರಿಗೆ ನಾವು ಕೊಡುವ ಗೌರವ’ ಎಂದು ರಾಘವೇಂದ್ರ ರಾಜ್​ಕುಮಾರ್​ ಹೇಳಿದ್ದಾರೆ. ಇದೇ ರೀತಿ ಇಡೀ ಪ್ರಪಂಚಕ್ಕೆ ಕಣ್ಣು ಸಿಗಲಿ’ ಎಂದು ರಾಘವೇಂದ್ರ ರಾಜ್​ಕುಮಾರ್​ ಹೇಳಿದ್ದಾರೆ.

ಪುನೀತ್​ ರಾಜ್​ಕುಮಾರ್​ ನಿಧನರಾಗಿ ಎರಡು ತಿಂಗಳು ಕಳೆದ ಹಿನ್ನೆಲೆಯಲ್ಲಿ ಇಡೀ ಕುಟುಂಬದವರು ಅಪ್ಪು ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ. ‘ಪುನೀತ್​ ಮಾಡುತ್ತಿದ್ದ ಕೆಲಸಗಳನ್ನು ಮುಂದುವರಿಸಿಕೊಂಡು ಹೋಗಲು ಅಭಿಮಾನಿಗಳೇ ನಮಗೆ ಶಕ್ತಿ ನೀಡಬೇಕು. ಅವನ ಸಿನಿಮಾಗಳೆಲ್ಲ ಈಗ ಬದಿಗೆ ಸರಿದಿವೆ. ಅವನು ಮಾಡಿದ ಸಾಮಾಜಿಕ ಕೆಲಸಗಳೇ ಮುಂದೆ ಬಂದಿವೆ’ ಎಂದು ರಾಘಣ್ಣ ಹೇಳಿದ್ದಾರೆ.

ಇದನ್ನೂ ಓದಿ:

ಅಪ್ಪು ಇಲ್ಲದೇ ಕಳೆಯಿತು 2 ತಿಂಗಳು; ನೇತ್ರದಾನದ ಬಗ್ಗೆ ವಿಶೇಷ ಮಾಹಿತಿ ಹಂಚಿಕೊಂಡ ರಾಘಣ್ಣ

Year Ender 2021: ಚಿತ್ರರಂಗದ ಪಾಲಿಗೆ ಕಪ್ಪು ಚುಕ್ಕೆಯಾದ 2021; ಮರೆಯೋಕೆ ಆಗಲ್ಲ ಪುನೀತ್​ ನಿಧನದ ನೋವು

Published On - 12:13 pm, Wed, 29 December 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್