AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shivarajkumar Birthday: 63ನೇ ವಯಸ್ಸಲ್ಲಿ ಶಿವರಾಜ್​ಕುಮಾರ್ ಕೈಯಲ್ಲಿದೆ ಒಂದು ಡಜನ್ ಸಿನಿಮಾ

ಶಿವರಾಜ್ ಕುಮಾರ್ ಅವರು ತಮ್ಮ 63ನೇ ವಯಸ್ಸಿನಲ್ಲೂ ಸಿನಿಮಾ ರಂಗದಲ್ಲಿ ಸಕ್ರಿಯರಾಗಿದ್ದಾರೆ. ಅವರ ಬರ್ತ್‌ಡೇ ಪ್ರಯುಕ್ತ ಹಲವು ಹೊಸ ಚಿತ್ರಗಳು ಘೋಷಣೆಯಾಗಿವೆ. 'ಟಗರು 2', 'ಜೈಲರ್ 2' ಮುಂತಾದ ಸೀಕ್ವೆಲ್‌ಗಳ ಜೊತೆಗೆ ಹೊಸ ಚಿತ್ರಗಳಲ್ಲೂ ಅವರು ನಟಿಸುತ್ತಿದ್ದಾರೆ. ಕನ್ನಡದ ಜೊತೆಗೆ ತೆಲುಗು ಮತ್ತು ತಮಿಳು ಚಿತ್ರಗಳಲ್ಲೂ ಅವರು ಬ್ಯುಸಿ ಇದ್ದಾರೆ.

Shivarajkumar Birthday: 63ನೇ ವಯಸ್ಸಲ್ಲಿ ಶಿವರಾಜ್​ಕುಮಾರ್ ಕೈಯಲ್ಲಿದೆ ಒಂದು ಡಜನ್ ಸಿನಿಮಾ
ಶಿವರಾಜ್​ಕುಮಾರ್ ಸಿನಿಮಾಗಳು
ರಾಜೇಶ್ ದುಗ್ಗುಮನೆ
|

Updated on:Jul 12, 2025 | 12:27 PM

Share

ನಟ ಶಿವರಾಜ್​ಕುಮಾರ್ (Shivarajkumar) ಅವರಿಗೆ ಇಂದು (ಜುಲೈ 12) ಜನ್ಮದಿನ. ನಟನ ಬರ್ತ್​​ಡೇ ದಿನಕ್ಕೆ ಹೊಸ ಹೊಸ ಸಿನಿಮಾಗಳು ಘೋಷಣೆ ಆಗುತ್ತಿವೆ. ಶಿವರಾಜ್​ಕುಮಾರ್​ಗೆ ಈಗ 63 ವರ್ಷ ವಯಸ್ಸು. ಅವರು ಈಗಲೂ ಸಿನಿಮಾ ಕೃಷಿ ಮುಂದುವರಿಸಿದ್ದಾರೆ. ಅವರ ಕೈಯಲ್ಲಿ ಇರುವ ಸಿನಿಮಾಗಳ ಸಂಖ್ಯೆ ಕೇಳಿದರೆ ನೀವು ಅಚ್ಚರಿಗೆ ಒಳಗಾಗೋದು ಗ್ಯಾರಂಟಿ. ಈ ವಯಸ್ಸಲ್ಲೂ ಅವರು ಇಷ್ಟೊಂದು ಸಿನಿಮಾ ಮಾಡುತ್ತಿದ್ದಾರಾ ಎಂದು ನಿಮಗೆ ಅನ್ನಿಸದರೆ ಇರದು. ಆ ಬಗ್ಗೆ ಇಲ್ಲಿದೆ ವಿವರ.

ಶಿವರಾಜ್​ಕುಮಾರ್ ಮೊದಲ ಸಿನಿಮಾ ಆರಂಭಿಸಿದ್ದು 23ನೇ ವಯಸ್ಸಿಗೆ. ಈಗ ಅವರಿಗೆ 63 ವರ್ಷ. ಕಳೆದ, 40 ವರ್ಷಗಳಿಂದ ಅವರು ನಿರಂತರವಾಗಿ ಸಿನಿಮಾಗಳು ಮಾಡುತ್ತಾ ಬರುತ್ತಿದ್ದಾರೆ. ನೂರಾರು ಚಿತ್ರಗಳನ್ನು ಅವರು ನೀಡಿದ್ದಾರೆ. ಈ ಪೈಕಿ ಅನೇಕ ಚಿತ್ರಗಳು ಸೂಪರ್ ಹಿಟ್ ಎನಿಸಿಕೊಂಡಿವೆ. ಬರ್ತ್​ಡೇ ಸಮಯದಲ್ಲಿ ಅವರ ನಟನೆಯ ಹಲವು ಚಿತ್ರಗಳು ಅನೌನ್ಸ್ ಆಗಿವೆ.

ಸೀಕ್ವೆಲ್ ಧಮಾಕಾ..

ಶಿವರಾಜ್​ಕುಮಾರ್ ಅವರು ಇತ್ತೀಚೆಗೆ ಸೀಕ್ವೆಲ್ ಸಿನಿಮಾಗಳಲ್ಲಿ ಹೆಚ್ಚು ಕಾಣಿಸಿಕೊಳ್ಳುತ್ತಿದ್ದಾರೆ ಎಂದರೂ ತಪ್ಪಾಗಲಾರದು. ‘ಮಫ್ತಿ’ ಚಿತ್ರದ ಪ್ರಿಕ್ವೆಲ್ ಆಗಿ ‘ಭೈರತಿ ರಣಗಲ್’ ಸಿನಿಮಾ ಮೂಡಿ ಬಂತು. ಅವರು ಈಗ ‘ಜೈಲರ್ 2’ ಸಿನಿಮಾ ಮಾಡುತ್ತಿದ್ದಾರೆ. 2023ರಲ್ಲಿ ರಿಲೀಸ್ ಆಗಿ ಸೂಪರ್ ಹಿಟ್ ಆದ ರಜನಿಕಾಂತ್ ನಟನೆಯ ಚಿತ್ರ ಇದು. ಇನ್ನು, ‘ಟಗರು’ ಸಿನಿಮಾಗೆ ಸೀಕ್ವೆಲ್ ಬರುತ್ತಿದೆ. ಶಿವಣ್ಣನ ಬರ್ತ್​ಡೇ ಪ್ರಯುಕ್ತ ‘ಟಗರು 2’ ಅನೌನ್ಸ್ ಆಗಿದೆ. ಟಗರು ಶಿವನ ಪಾತ್ರದಲ್ಲಿ ಅವರು ಮುಂದುವರಿಯುತ್ತಿದ್ದಾರೆ.

ಶಿವಣ್ಣ ಅಭಿಮಾನಿ ಬಳಗದ ಪೋಸ್ಟ್

ಹೊಸ ಸಿನಿಮಾಗಳ ಅಬ್ಬರ..

ಶಿವರಾಜ್​ಕುಮಾರ್ ಅವರು ‘45’ ಸಿನಿಮಾದಲ್ಲಿ ನಟಿಸಿಯಾಗಿದೆ. ಈ ಚಿತ್ರ ಆಗಸ್ಟ್ 14ರಂದು ತೆರೆಗೆ ಬರಲಿದೆ. ‘ಉತ್ತರಕಾಂಡ’, ‘ಭೈರವನ ಕೊನೆಯ ಪಾಠ’, ಶಿವರಾಜ್​ಕುಮಾರ್ 131ನೇ ಚಿತ್ರ, ‘666 ಆಪರೇಷನ್ ಡ್ರೀಮ್ ಥಿಯೇಟರ್’ ಹಾಗೂ ‘ಮಂಡ್ಯ ಬ್ರದರ್ಸ್’ ಹೆಸರಿನ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಇನ್ನು, ‘ಆನಂದ್’ ಹೆಸರಿನ ಸಿನಿಮಾ ಕೂಡ ಅನೌನ್ಸ್ ಆಗಿದ್ದು, ಗೀತಾ ಶಿವರಾಜ್​ಕುಮಾರ್ ನಿರ್ದೇಶನ ಮಾಡುತ್ತಿದ್ದಾರೆ.

ಇದನ್ನೂ ಓದಿ: ಶಿವಣ್ಣ ಹುಟ್ಟಿದ ಬಳಿಕ ಸಂಜೆಯಿಂದ ಬೆಳಗ್ಗಿನವರೆಗೆ ಸ್ವೀಟ್ ಹಂಚಿದ್ದ ರಾಜ್​ಕುಮಾರ್

ಪರಭಾಷೆಯಲ್ಲೂ ಬ್ಯುಸಿ

ಶಿವರಾಜ್​ಕುಮಾರ್ ಅವರು ಕನ್ನಡದ ಜೊತೆಗೆ ಪರಭಾಷೆಯಲ್ಲೂ ಬ್ಯುಸಿ ಆಗಿದ್ದಾರೆ.  ರಜನಿ ನಟನೆಯ ‘ಜೈಲರ್ 2’, ರಾಮ್ ಚರಣ್ ಅಭಿನಯದ ‘ಪೆದ್ದಿ’ ಸಿನಿಮಾಗಳು ಅವರ ಕೈಯಲ್ಲಿ ಇವೆ. ಮಮ್ಮುಟ್ಟಿ-ಮೋಹನ್​ಲಾಲ್ ಚಿತ್ರದ ಜೊತೆ ಅವರು ಮಾತುಕತೆ ನಡೆಸುತ್ತಿದ್ದಾರೆ ಎಂಬ ವರದಿ ಇದೆ. ‘ಜನ ನಾಯಕನ್’ ಚಿತ್ರದಲ್ಲಿ ಅವರು ನಟಿಸುತ್ತಾರೆ ಎಂದು ಹೇಳಲಾಗುತ್ತಿದೆ. ಇದೆಲ್ಲ ಸೇರಿದರೆ ಅವರ ಕೈಯಲ್ಲಿ ಈಗ ಒಂದು ಡಜನ್ ಸಿನಿಮಾ ಇದ್ದಂತೆ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:00 am, Sat, 12 July 25

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ನಮಗೆ ತಮಿಳುನಾಡು ಅನುಮತಿ ಬೇಡ, ಸಹಕಾರ ಬೇಕಷ್ಟೇ: ವಿಜಯ್​ಗೆ ಡಿಕೆಶಿ ಕೌಂಟರ್
ನಮಗೆ ತಮಿಳುನಾಡು ಅನುಮತಿ ಬೇಡ, ಸಹಕಾರ ಬೇಕಷ್ಟೇ: ವಿಜಯ್​ಗೆ ಡಿಕೆಶಿ ಕೌಂಟರ್
ಹೆಚ್​​ಡಿಕೆ ಆರೋಪಕ್ಕೆ ಡಿಸಿ ತಿರುಗೇಟು! ತನಿಖೆ ಮಾಡಿಸ್ತೇನೆ ಎಂದ ಅಧಿಕಾರಿ
ಹೆಚ್​​ಡಿಕೆ ಆರೋಪಕ್ಕೆ ಡಿಸಿ ತಿರುಗೇಟು! ತನಿಖೆ ಮಾಡಿಸ್ತೇನೆ ಎಂದ ಅಧಿಕಾರಿ
ಪಿತೃಕಾರ್ಯದಲ್ಲಿ ಭಾಗವಹಿಸಲು ಪ್ರದೋಷ್​ಗೆ ಸೀಮಿತ ಅನುಮತಿ ನೀಡಿದ ಕೋರ್ಟ್
ಪಿತೃಕಾರ್ಯದಲ್ಲಿ ಭಾಗವಹಿಸಲು ಪ್ರದೋಷ್​ಗೆ ಸೀಮಿತ ಅನುಮತಿ ನೀಡಿದ ಕೋರ್ಟ್
ಎಥೆನಾಲ್​ ಉತ್ಪಾದಿಸಲು ಹೇಳಿ, ಇದೀಗ ಖರೀದಿಸ್ತಿಲ್ಲ: ಸಚಿವ ಎಂಬಿ ಪಾಟೀಲ್​
ಎಥೆನಾಲ್​ ಉತ್ಪಾದಿಸಲು ಹೇಳಿ, ಇದೀಗ ಖರೀದಿಸ್ತಿಲ್ಲ: ಸಚಿವ ಎಂಬಿ ಪಾಟೀಲ್​
ದೇವಿರಮ್ಮ ದರ್ಶನಕ್ಕೆ ಭಕ್ತಸಾಗರ! ಬೆಟ್ಟದ ತುದಿಯಲ್ಲಿ ಕಂಬಿ ಮುರಿದು ದುರಂತ
ದೇವಿರಮ್ಮ ದರ್ಶನಕ್ಕೆ ಭಕ್ತಸಾಗರ! ಬೆಟ್ಟದ ತುದಿಯಲ್ಲಿ ಕಂಬಿ ಮುರಿದು ದುರಂತ
ಕಿಚ್ಚ ಸುದೀಪ್ ಆಡಿಸಿದ ಆಟಕ್ಕೆ ಬಿಗ್ ಬಾಸ್ ಸ್ಪರ್ಧಿಗಳ ತಲೆ ಗಿರಗಿರ
ಕಿಚ್ಚ ಸುದೀಪ್ ಆಡಿಸಿದ ಆಟಕ್ಕೆ ಬಿಗ್ ಬಾಸ್ ಸ್ಪರ್ಧಿಗಳ ತಲೆ ಗಿರಗಿರ
ಹಾಸನಾಂಬೆ ದರ್ಶನ ಪಡೆದ ಹೆಚ್​ಡಿಕೆ ದಂಪತಿ
ಹಾಸನಾಂಬೆ ದರ್ಶನ ಪಡೆದ ಹೆಚ್​ಡಿಕೆ ದಂಪತಿ
ಕುಟುಂಬ ಸಮೇತ ಹಾಸನಾಂಬೆ ದೇಗುಲಕ್ಕೆ ಭೇಟಿ ನೀಡಿದ ಡಿಕೆ ಶಿವಕುಮಾರ್
ಕುಟುಂಬ ಸಮೇತ ಹಾಸನಾಂಬೆ ದೇಗುಲಕ್ಕೆ ಭೇಟಿ ನೀಡಿದ ಡಿಕೆ ಶಿವಕುಮಾರ್
ಬೆಂಗಳೂರಲ್ಲಿ ವಿಮಾನ ಕ್ಯಾನ್ಸಲ್‌ಗೆ ಪ್ರಯಾಣಿಕರು ಗರಂ, ಸಿಬ್ಬಂದಿಗೆ ತರಾಟೆ
ಬೆಂಗಳೂರಲ್ಲಿ ವಿಮಾನ ಕ್ಯಾನ್ಸಲ್‌ಗೆ ಪ್ರಯಾಣಿಕರು ಗರಂ, ಸಿಬ್ಬಂದಿಗೆ ತರಾಟೆ
ಶಿವಮೊಗ್ಗದ ಬಿಜೆಪಿ ಕಚೇರಿ, ವಿಜಯೇಂದ್ರ ನಿವಾಸದ ಮುಂದೂ ಪೋಸ್ಟರ್​
ಶಿವಮೊಗ್ಗದ ಬಿಜೆಪಿ ಕಚೇರಿ, ವಿಜಯೇಂದ್ರ ನಿವಾಸದ ಮುಂದೂ ಪೋಸ್ಟರ್​