ಕೆವಿಎನ್ ನಿರ್ಮಾಣದ ‘ಬೇಲ್’ ಸಿನಿಮಾ; ಟೀಸರ್ ಮೂಲಕ ಗಮನ ಸೆಳೆದ ಶಿವಣ್ಣ

ಪವನ್ ಒಡೆಯರ್ ನಿರ್ದೇಶನದ ‘ಬೇಲ್’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಅವರು ಪೊಲೀಸ್ ಅಧಿಕಾರಿಯ ಪಾತ್ರ ಮಾಡಿದ್ದಾರೆ. ಆ ಕಾರಣದಿಂದ ಅಭಿಮಾನಿಗಳಿಗೆ ಹೆಚ್ಚು ನಿರೀಕ್ಷೆ ಇದೆ. ಈಗ ಟೀಸರ್ ಬಿಡುಗಡೆ ಮಾಡಲಾಗಿದೆ. ಅಕ್ಟೋಬರ್ 2ರಂದು ‘ಬೇಲ್’ ಸಿನಿಮಾ ರಿಲೀಸ್ ಆಗಲಿದೆ. ಚಿತ್ರದ ಬಗ್ಗೆ ಇಲ್ಲಿದೆ ಮಾಹಿತಿ..

ಕೆವಿಎನ್ ನಿರ್ಮಾಣದ ‘ಬೇಲ್’ ಸಿನಿಮಾ; ಟೀಸರ್ ಮೂಲಕ ಗಮನ ಸೆಳೆದ ಶಿವಣ್ಣ
Shiva Rajkumar

Updated on: Aug 28, 2026 | 9:25 PM

‘ಕೆವಿಎನ್ ಪ್ರೊಡಕ್ಷನ್ಸ್’ (KVN Productions) ಸಂಸ್ಥೆ ಬ್ಯಾಕ್ ಟು ಬ್ಯಾಕ್ ಸಿನಿಮಾಗಳನ್ನು ನಿರ್ಮಾಣ ಮಾಡುತ್ತಿದೆ. ಇತ್ತೀಚೆಗಷ್ಟೇ ಈ ಸಂಸ್ಥೆಯ ‘ಟಾಕ್ಸಿಕ್’ ಚಿತ್ರ ತೆರೆಕಂಡಿತು. ಈಗ ಇನ್ನೊಂದು ಸಿನಿಮಾ ‘ಬೇಲ್’ ಕೂಡ ಬಿಡುಗಡೆಗೆ ಸಿದ್ಧವಾಗುತ್ತಿದೆ. ‘ಹ್ಯಾಟ್ರಿಕ್ ಹೀರೋ’ ಶಿವರಾಜ್‌ಕುಮಾರ್ (Shivarajkumar) ಅವರು ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಇಂದು (ಆಗಸ್ಟ್ 28) ಈ ಚಿತ್ರದ ಅಧಿಕೃತ ಟೀಸರ್ ಬಿಡುಗಡೆಯಾಗಿದೆ. ಪವನ್ ಒಡೆಯರ್ ಅವರು ‘ಬೇಲ್’ (Bail) ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ‘ಬೇಲ್’ ಸಿನಿಮಾದ ಟೀಸರ್ ಧೂಳೆಬ್ಬಿಸುತ್ತಿದೆ. ನಿರ್ದೇಶಕ ಪವನ್ ಒಡೆಯರ್ ಅವರು ಸಖತ್ ಕುತೂಹಲಭರಿತವಾಗಿ ಈ ಸಿನಿಮಾವನ್ನು ನಿರ್ದೇಶಿಸಿದ್ದಾರೆ ಎಂಬುದಕ್ಕೆ ಟೀಸರ್ ಸಾಕ್ಷಿಯಾಗಿದೆ. ಈ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಅವರು ಖಡಕ್ ಆಗಿ ಕಾಣಿಸಿಕೊಂಡಿದ್ದಾರೆ. ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ಅವರು ನಟಿಸಿದ್ದಾರೆ.

ಬೇಲ್ ಸಿನಿಮಾ ಟೀಸರ್:

Bail - Official Teaser | Dr. Shiva Rajkumar | Pavan Wadeyar | KVN Productions

ಅದ್ದೂರಿಯಾಗಿ ಮೂಡಿಬರುತ್ತಿದೆ ‘ಬೇಲ್’ ಸಿನಿಮಾ:

ನಿರ್ಮಾಪಕ ವೆಂಕಟ್ ಕೆ. ನಾರಾಯಣ ಅವರು ‘ಕೆವಿಎನ್ ಪ್ರೊಡಕ್ಷನ್ಸ್’ ಬ್ಯಾನರ್ ಅಡಿಯಲ್ಲಿ ‘ಬೇಲ್’ ಸಿನಿಮಾವನ್ನು ನಿರ್ಮಿಸಿದ್ದಾರೆ. ಬೃಹತ್ ಬಜೆಟ್‌ನಲ್ಲಿ ಈ ಸಿನಿಮಾ ನಿರ್ಮಾಣ ಆಗುತ್ತಿದೆ. ಪವನ್ ಒಡೆಯರ್ ಅವರು ನಿರ್ದೇಶನದ ಜೊತೆಗೆ ಕಥೆ, ಚಿತ್ರಕಥೆ ಮತ್ತು ಸಂಭಾಷಣೆ ಬರೆದಿದ್ದಾರೆ. ಟೀಸರ್ ಬಿಡುಗಡೆ ಆದ ಬಳಿಕ ‘ಬೇಲ್’ ಸಿನಿಮಾದ ಮೇಲಿನ ನಿರೀಕ್ಷೆ ಡಬಲ್ ಆಗಿದೆ.

‘ಬೇಲ್’ ಸಿನಿಮಾದ ಪಾತ್ರವರ್ಗ:

ಈ ಸಿನಿಮಾದಲ್ಲಿ ಶಿವರಾಜ್‌ಕುಮಾರ್ ಅವರ ಜೊತೆಗೆ ಮಲಯಾಳಂನ ಖ್ಯಾತ ನಟ ಜಯರಾಮ್, ಸಾಯಿ ಕುಮಾರ್, ಲೂಸ್ ಮಾದ ಯೋಗಿ, ದೀಕ್ಷಿತ್ ಶೆಟ್ಟಿ, ಸಂಜನಾ ಆನಂದ್, ಕಿರಣ್ ಶ್ರೀನಿವಾಸ್ ಮುಂತಾದ ಕಲಾವಿದರು ನಟಿಸಿದ್ದಾರೆ. ಈ ಪಾತ್ರವರ್ಗದ ಕಾರಣದಿಂದ ಸಿನಿಮಾ ಗಮನ ಸೆಳೆದಿದೆ. ಲೂಸ್ ಮಾದ ಯೋಗಿ ಅವರ ಪಾತ್ರದ ಬಗ್ಗೆ ಜನರಿಗೆ ಕುತೂಹಲ ಹೆಚ್ಚಿದೆ.

ಇದನ್ನೂ ಓದಿ: ತಮಿಳಿನಲ್ಲಿ ಶಿವರಾಜ್​ಕುಮಾರ್ 4ನೇ ಸಿನಿಮಾಗೆ ಮುಹೂರ್ತ; ಭರ್ಜರಿ ಡಿಮ್ಯಾಂಡ್

ಬಿ. ಅಜನೀಶ್ ಲೋಕನಾಥ್ ಅವರು ‘ಬೇಲ್’ ಸಿನಿಮಾಗೆ ಸಂಗೀತ ಸಂಯೋಜಿಸಿದ್ದಾರೆ. ಟೀಸರ್‌ನಲ್ಲಿನ ಹಿನ್ನೆಲೆ ಸಂಗೀತ ಹೈಲೈಟ್ ಆಗಿದೆ. ವೈದಿ ಅವರು ಛಾಯಾಗ್ರಹಣ ಮಾಡಿದ್ದಾರೆ. ಶಶಾಂಕ್ ನಾರಾಯಣ ಅವರ ಸಂಕಲನ ಈ ಚಿತ್ರಕ್ಕಿದೆ. ಟೀಸರ್ ಮೂಲಕ ಕುತೂಹಲ ಮೂಡಿಸಿರುವ ‘ಬೇಲ್’ ಸಿನಿಮಾ ಅಕ್ಟೋಬರ್ 2ರಂದು ರಾಜ್ಯಾದ್ಯಂತ ಬಿಡುಗಡೆ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Loading...
Unable to load recommendations.
Follow Us