AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನ್ನ ಜನ್ಮದಿನಕ್ಕೆ ನಿಮಗೆ ವಿಶೇಷ ಗಿಫ್ಟ್ ಕೊಡ್ತೀನಿ’: ‘45’ ಸಿನಿಮಾ ಬಗ್ಗೆ ಶಿವಣ್ಣನ ಸರ್ಪ್ರೈಸ್

ಅರ್ಜುನ್​ ಜನ್ಯ ಅವರ ಮೊದಲ ನಿರ್ದೇಶನದಲ್ಲಿ ‘45’ ಸಿನಿಮಾ ಸಿದ್ಧವಾಗುತ್ತಿದೆ. ರಮೇಶ್​ ರೆಡ್ಡಿ ಅವರು ಈ ಸಿನಿಮಾವನ್ನು ನಿರ್ಮಿಸುತ್ತಿದ್ದಾರೆ. ಶಿವರಾಜ್​ಕುಮಾರ್​, ರಾಜ್​ ಬಿ. ಶೆಟ್ಟಿ, ಉಪೇಂದ್ರ ಕೂಡ ಈ ಸಿಮಾದಲ್ಲಿ ನಟಿಸುತ್ತಿದ್ದಾರೆ. ಶಿವರಾಜ್​ಕುಮಾರ್​ ಅವರ ಜನ್ಮದಿನದ ಪ್ರಯುಕ್ತ ಅಭಿಮಾನಿಗಳಿಗೆ ವಿಶೇಷ ಗಿಫ್ಟ್​ ನೀಡಲು ಚಿತ್ರತಂಡ ತಯಾರಿ ಮಾಡಿಕೊಂಡಿದೆ.

‘ನನ್ನ ಜನ್ಮದಿನಕ್ಕೆ ನಿಮಗೆ ವಿಶೇಷ ಗಿಫ್ಟ್ ಕೊಡ್ತೀನಿ’: ‘45’ ಸಿನಿಮಾ ಬಗ್ಗೆ ಶಿವಣ್ಣನ ಸರ್ಪ್ರೈಸ್
ರಮೇಶ್​ ರೆಡ್ಡಿ, ಶಿವರಾಜ್​ಕುಮಾರ್​, ಅರ್ಜುನ್​ ಜನ್ಯ
ಮದನ್​ ಕುಮಾರ್​
|

Updated on: Jul 10, 2024 | 9:46 PM

Share

‘ಹ್ಯಾಟ್ರಿಕ್​ ಹೀರೋ’ ಶಿವರಾಜ್​ಕುಮಾರ್ ಅವರು ಜುಲೈ 12ರಂದು ಹುಟ್ಟುಹಬ್ಬ ಆಚರಿಸಿಕೊಳ್ಳಲಿದ್ದಾರೆ. ಅದಕ್ಕಾಗಿ ಅಭಿಮಾನಿಗಳು ಸಕಲ ತಯಾರಿ ಮಾಡಿಕೊಂಡಿದ್ದಾರೆ.​ ಅದಕ್ಕೂ ಮುನ್ನ ಶಿವಣ್ಣ ಒಂದು ಹೊಸ ಅನೌನ್ಸ್​ಮೆಂಟ್​ ಮಾಡಿದ್ದಾರೆ. ‘45’ ಸಿನಿಮಾದ ಬಗ್ಗೆ ಅವರು ಒಂದು ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಇದಕ್ಕಾಗಿ ಚಿತ್ರತಂಡದ ಕಡೆಯಿಂದ ವಿಶೇಷ ವಿಡಿಯೋ ಬಿಡುಗಡೆ ಮಾಡಲಾಗಿದೆ. ಈ ಸಿನಿಮಾಗೆ ರಮೇಶ್​ ರೆಡ್ಡಿ ಅವರು ಬಂಡವಾಳ ಹೂಡಿದ್ದು, ಅರ್ಜುನ್​ ಜನ್ಯ ಅವರು ನಿರ್ದೇಶನ ಮಾಡುತ್ತಿದ್ದಾರೆ. ಶಿವಣ್ಣನ ಹುಟ್ಟುಹಬ್ಬಕ್ಕೆ ‘45’ ಸಿನಿಮಾ ತಂಡದಿಂದ ಸ್ಪೆಷಲ್​ ಗಿಫ್ಟ್​ ಸಿಗಲಿದೆ.

‘ಹುಟ್ಟುಹಬ್ಬ ಎನ್ನುವುದು ತಂದೆ-ತಾಯಿ ನಮಗೆ ನೀಡಿರುವ ಗಿಫ್ಟ್. ಅವರಿಗೆ ನಾವು ಯಾವಾಗಲೂ ಚಿರಋಣಿ ಆಗಿರಬೇಕು. ಇದೇ ಜುಲೈ 12, ನನ್ನ 62ನೇ ಜನ್ಮದಿನ. ಇಷ್ಟು ವರ್ಷಗಳಿಂದ ಸಾವಿರಾರು ಅಭಿಮಾನಿಗಳು ನಮ್ಮ ಮನೆಗೆ ಬಂದು ನನ್ನ ಬರ್ತ್​ಡೇ ಸಂಭ್ರಮಿಸಿದ್ದೀರಿ. ನಿಮ್ಮ ಅಭಿಮಾನಕ್ಕೆ ನನ್ನ ಧನ್ಯವಾದಗಳು. ಈ ಬಾರಿ ಹುಟ್ಟುಹಬ್ಬಕ್ಕೆ ನಾನು ನಿಮಗೆ ಒಂದು ವಿಶೇಷವಾದ ಗಿಫ್ಟ್ ಕೊಡಲಿದ್ದೇನೆ’ ಎಂದು ಶಿವರಾಜ್​ಕುಮಾರ್​ ಹೇಳಿದ್ದಾರೆ.

ಅಪಘಾತದಲ್ಲಿ ಮೃತಪಟ್ಟ 13 ಜನರ ಕುಟುಂಬಕ್ಕೆ ತಲಾ 1 ಲಕ್ಷ ರೂ. ನೀಡಿದ ಶಿವಣ್ಣ-ಗೀತಾ

‘ಆ ಗಿಫ್ಟ್​ ಏನೆಂದರೆ, ನನ್ನ ಹುಟ್ಟುಹಬ್ಬದ ದಿನ ಬಹುನಿರೀಕ್ಷಿತ ‘45’ ಸಿನಿಮಾದಿಂದ ನನ್ನ ಫಸ್ಟ್ ಲುಕ್ ರಿಲೀಸ್ ಆಗಲಿದೆ. ರಮೇಶ್ ರೆಡ್ಡಿ ಅವರ ನಿರ್ಮಾಣದಲ್ಲಿ ಹಾಗೂ ಅರ್ಜುನ್ ಜನ್ಯ ಅವರ ಚೊಚ್ಚಲ ನಿರ್ದೇಶನದಲ್ಲಿ ಅದ್ದೂರಿಯಾಗಿ ಮೂಡಿಬರುತ್ತಿರುವ ಈ ಚಿತ್ರದಲ್ಲಿ ನಾನು, ಉಪೇಂದ್ರ ಮತ್ತು ರಾಜ್ ಬಿ. ಶೆಟ್ಟಿ ಒಟ್ಟಿಗೆ ನಟಿಸಿದ್ದೇವೆ. ಈ ಸಿನಿಮಾ ಇಂಡಿಯನ್ ಸ್ಕ್ರೀನ್​ನಲ್ಲೇ ಉತ್ತಮ ಚಿತ್ರವಾಗಲಿದೆ. ಅದಕ್ಕೆ ದೇವರ ಆಶೀರ್ವಾದ ಬೇಕು. ಆ ದೇವರು ಎಂದರೆ ಅಪ್ಪಾಜಿ ಹೇಳಿದ ಹಾಗೆ ಅಭಿಮಾನಿಗಳು. ಅಭಿಮಾನಿ ದೇವರುಗಳು ಈ ಸಿನಿಮಾವನ್ನು ನೋಡಿ ಹಾರೈಸಿ’ ಎಂದಿದ್ದಾರೆ ಶಿವಣ್ಣ.

ಸ್ಯಾಂಡಲ್​ವುಡ್​ನಲ್ಲಿ ಸದಭಿರುಚಿಯ ಸಿನಿಮಾಗಳನ್ನು ನೀಡಿರುವ ‘ಸೂರಜ್ ಪ್ರೊಡಕ್ಷನ್ಸ್’ ಮೂಲಕ ಶ್ರೀಮತಿ ಉಮಾ ರಮೇಶ್ ರೆಡ್ಡಿ ಅವರು ನಿರ್ಮಿಸುತ್ತಿರುವ ‘45’ ಸಿನಿಮಾದ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಇದೆ. ಬಹುಕೋಟಿ ಬಜೆಟ್​ನಲ್ಲಿ ಅದ್ದೂರಿಯಾಗಿ ಈ ಸಿನಿಮಾ ನಿರ್ಮಾಣ ಆಗುತ್ತಿದೆ‌. ಶೀಘ್ರದಲ್ಲೇ ಕ್ಲೈಮ್ಯಾಕ್ಸ್ ಭಾಗದ ಸಾಹಸ ಸನ್ನಿವೇಶವನ್ನು 30 ದಿನಗಳ ಕಾಲ ಬೆಂಗಳೂರಿನಲ್ಲಿ ಚಿತ್ರಿಸಲು ಪ್ಲ್ಯಾನ್​ ನಡೆದಿದೆ. ಇಷ್ಟು ದೀರ್ಘವಾಗಿ ಹಾಗೂ ಅದ್ದೂರಿಯಾಗಿ ಕ್ಲೈಮ್ಯಾಕ್ಸ್​ನ ಚಿತ್ರೀಕರಣ ನಡೆಯಲಿರುವುದು ಕನ್ನಡ ಚಿತ್ರರಂಗದ ಇತಿಹಾಸದಲ್ಲಿ ಇದೇ ಮೊದಲಿರಬಹುದು ಎನ್ನುತ್ತಿದೆ ಚಿತ್ರತಂಡ. ಸೆಪ್ಟೆಂಬರ್ ತಿಂಗಳಲ್ಲಿ ‘45’ ಬಿಡುಗಡೆ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ