ಚೊಚ್ಚಲ ಬಾರಿಗೆ ಒಂದಾದ ಶಿವಣ್ಣ-ಶೆಟ್ರು: ಸ್ಯಾಂಡಲ್​ವುಡ್​ನಲ್ಲಿ ಶುರುವಾಗಿದೆ ಹೊಸ ಸಂಚಲನ

‘ರಿಕ್ಕಿ’, ‘ಕಿರಿಕ್​ ಪಾರ್ಟಿ’, ‘ಸ.ಹಿ.ಪ್ರಾ. ಶಾಲೆ ಕಾಸರಗೋಡು’ ಅಂಥ ಸಿನಿಮಾಗಳನ್ನು ನಿರ್ದೇಶನ ಮಾಡಿ ರಿಷಬ್​ ಶೆಟ್ಟಿ ಭೇಷ್​ ಎನಿಸಿಕೊಂಡಿದ್ದಾರೆ. ಸದ್ಯ, ರುದ್ರಪ್ರಯಾಗ್​ ಚಿತ್ರದ ಕೆಲಸಗಳಲ್ಲಿ ಅವರು ಬ್ಯುಸಿ ಇದ್ದಾರೆ.

ಚೊಚ್ಚಲ ಬಾರಿಗೆ ಒಂದಾದ ಶಿವಣ್ಣ-ಶೆಟ್ರು: ಸ್ಯಾಂಡಲ್​ವುಡ್​ನಲ್ಲಿ ಶುರುವಾಗಿದೆ ಹೊಸ ಸಂಚಲನ
ಶಿವರಾಜ್ ಕುಮಾರ್
Follow us
| Updated By: ರಾಜೇಶ್ ದುಗ್ಗುಮನೆ

Updated on:Jul 10, 2021 | 4:01 PM

ನಟ ಶಿವರಾಜ್​ಕುಮಾರ್​ ಅವರು ಜುಲೈ 12ರಂದು 59ನೇ ವಯಸ್ಸಿಗೆ ಕಾಲಿಡುತ್ತಿದ್ದಾರೆ. ಜನ್ಮದಿನಕ್ಕೂ ಮೊದಲು ಅವರ ಮುಂದಿನ ಸಿನಿಮಾಗಳ ಬಗ್ಗೆ ಸಾಕಷ್ಟು ಅಪ್​ಡೇಟ್​ಗಳು ಕೇಳಿ ಬರುತ್ತಿವೆ. ಈಗ ಕೇಳಿ ಬರುತ್ತಿರುವ ಲೇಟೆಸ್ಟ್​ ಮಾಹಿತಿ ಎಂದರೆ, ಶಿವರಾಜ್​ಕುಮಾರ್​ 126ನೇ ಸಿನಿಮಾಗೆ ಕನ್ನಡದ ಖ್ಯಾತ ನಿರ್ದೇಶಕ ರಿಷಬ್​ ಶೆಟ್ಟಿ ಆ್ಯಕ್ಷನ್​ ಕಟ್​ ಹೇಳಲಿದ್ದಾರಂತೆ.

‘ರಿಕ್ಕಿ’, ‘ಕಿರಿಕ್​ ಪಾರ್ಟಿ’, ‘ಸ.ಹಿ.ಪ್ರಾ. ಶಾಲೆ ಕಾಸರಗೋಡು’ ಅಂಥ ಸಿನಿಮಾಗಳನ್ನು ನಿರ್ದೇಶನ ಮಾಡಿ ರಿಷಬ್​ ಶೆಟ್ಟಿ ಭೇಷ್​ ಎನಿಸಿಕೊಂಡಿದ್ದಾರೆ. ಸದ್ಯ, ರುದ್ರಪ್ರಯಾಗ್​ ಚಿತ್ರದ ಕೆಲಸಗಳಲ್ಲಿ ಅವರು ಬ್ಯುಸಿ ಇದ್ದಾರೆ. ಈ ಮಧ್ಯೆ ಶಿವಣ್ಣ ಅವರ 126ನೇ ಚಿತ್ರಕ್ಕೆ ರಿಷಬ್​ ನಿರ್ದೇಶನ ಇರಲಿದೆಯಂತೆ. ಶಿವರಾಜ್​ಕುಮಾರ್​ ಬರ್ತ್​ಡೇ ದಿನ ಈ ವಿಚಾರ ಅಧಿಕೃತ ಆಗಲಿದೆ.

ರಿಷಬ್​-ಶಿವರಾಜ್​ಕುಮಾರ್​ ಕಾಂಬಿನೇಷನ್​ನಲ್ಲಿ ಮೂಡಿ ಬರುತ್ತಿರುವ ಚಿತ್ರಕ್ಕೆ ಜಯಣ್ಣ ಫಿಲ್ಮ್ಸ್​ ಬಂಡವಾಳ ಹೂಡುತ್ತಿದೆ ಎನ್ನಲಾಗಿದೆ. ಸದ್ಯ, ಈ ವಿಚಾರ ಕೇಳಿ ಅಭಿಮಾನಿಗಳು ಸಖತ್​ ಥ್ರಿಲ್​ ಆಗಿದ್ದಾರೆ. ಸಿನಿಮಾ ಹೇಗಿರಲಿದೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಹೆಚ್ಚಾಗಿದೆ.

ಇನ್ನು, ಶಿವರಾಜ್​ಕುಮಾರ್​ 123ನೇ ಸಿನಿಮಾ ಫಸ್ಟ್​ ಪೋಸ್ಟರ್​ ಇಂದು ರಿಲೀಸ್ ಆಗಿದೆ. ಈ ಸಿನಿಮಾದಲ್ಲಿ ಶಿವರಾಜ್​ಕುಮಾರ್​ ಭಿನ್ನವಾಗಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾದ ಟೈಟಲ್​ ಶಿವಣ್ಣ  ಬರ್ತ್​ಡೇ ದಿನ ಅನಾವರಣಗೊಳ್ಳಲಿದೆ. ಈ ಚಿತ್ರದಲ್ಲಿ ಡಾಲಿ ಧನಂಜಯ್​ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಅಪಾರ ಅಭಿಮಾನಿಗಳನ್ನು ಸಂಪಾದಿಸಿರುವ ಶಿವರಾಜ್​ಕುಮಾರ್​ ಅವರು ಹಲವು ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಅವರ ಜನ್ಮದಿನವನ್ನು ಅದ್ದೂರಿಯಾಗಿ ಆಚರಿಸೋಕೆ ಲಕ್ಷಾಂತರ ಅಭಿಮಾನಿಗಳು ಕಾದಿದ್ದಾರೆ. ಆದರೆ ಈ ಬಾರಿ ತಾವು ಹುಟ್ಟುಹಬ್ಬ ಆಚರಿಸಿಕೊಳ್ಳೋದಿಲ್ಲ ಎಂದು ಶಿವರಾಜ್​ಕುಮಾರ್​ ಹೇಳಿದ್ದಾರೆ. ಅವರ ಈ ಮಹತ್ವದ ನಿರ್ಧಾರಕ್ಕೆ ಕೊರೊನಾ ಕಾರಣ. ಜು.12ರಂದು ಶಿವಣ್ಣನ ಜನ್ಮದಿನ. ಆದರೆ ಅಂದು ತಾವು ಬೆಂಗಳೂರಿನಲ್ಲಿ ಇರುವುದಿಲ್ಲ ಎಂದು ಮುಂಚಿತವಾಗಿಯೇ ಅಭಿಮಾನಿಗಳಿಗೆ ಅವರು ಮಾಹಿತಿ ನೀಡಿದ್ದಾರೆ. ಎಲ್ಲರೂ ಸೇಫ್​ ಆಗಿ ಇರುವಂತೆ ಮನವಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ‘ನಾನು ಬೆಂಗಳೂರಲ್ಲಿ ಇರಲ್ಲ; ಬೇಜಾರು ಮಾಡ್ಕೋಬೇಡಿ’: ಶಿವಣ್ಣ ಮಹತ್ವದ ನಿರ್ಧಾರ

ಕಷ್ಟಕಾಲದಲ್ಲಿ ಸಿನಿಮಾ ಕಾರ್ಮಿಕರ ಕೈ ಹಿಡಿದ ಶಿವರಾಜ್​ಕುಮಾರ್​; 10 ಲಕ್ಷ ರೂ. ನೆರವು

Published On - 3:57 pm, Sat, 10 July 21

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ