AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಈ ಮರುಜನ್ಮ ನಿಮಗೆ ಅರ್ಪಣೆ’: ಬಹಿರಂಗ ಆಗುತ್ತಿದೆ ಶಿವಣ್ಣ ಕಷ್ಟದ ದಿನಗಳ ಪೂರ್ತಿ ಮಾಹಿತಿ

ನಟ ಶಿವರಾಜ್​ಕುಮಾರ್ ಅವರು ಅನಾರೋಗ್ಯವನ್ನು ಎದುರಿಸಿ ಮತ್ತೆ ಮೊದಲಿನಂತೆ ಆ್ಯಕ್ಟೀವ್ ಆಗಿದ್ದಾರೆ. ಆದರೆ ಆ ಜರ್ನಿ ಅಷ್ಟು ಸುಲಭದ್ದಾಗಿರಲಿಲ್ಲ. ಈ ಕುರಿತು ಸ್ವತಃ ಶಿವಣ್ಣ ಮಾತನಾಡಿದ್ದಾರೆ. ‘ಸರ್ವೈವರ್’ ಸಾಕ್ಷ್ಯಚಿತ್ರದ ಪ್ರೋಮೋ ಹಂಚಿಕೊಂಡಿರುವ ಅವರು ‘ಈ ಮರುಜನ್ಮ ನಿಮಗೆ ಅರ್ಪಣೆ’ ಎಂದು ಕ್ಯಾಪ್ಷನ್ ನೀಡಿದ್ದಾರೆ.

‘ಈ ಮರುಜನ್ಮ ನಿಮಗೆ ಅರ್ಪಣೆ’: ಬಹಿರಂಗ ಆಗುತ್ತಿದೆ ಶಿವಣ್ಣ ಕಷ್ಟದ ದಿನಗಳ ಪೂರ್ತಿ ಮಾಹಿತಿ
Shiva RajkumarImage Credit source: Geetha Pictures
ಮದನ್​ ಕುಮಾರ್​
|

Updated on: Jul 12, 2026 | 8:38 AM

Share

ಮುಖ್ಯಾಂಶಗಳು

  • ಗಂಭೀರ ಆರೋಗ್ಯ ಸಮಸ್ಯೆ ಎದುರಿಸಿದ್ದ ನಟ ಶಿವರಾಜ್​ಕುಮಾರ್.
  • ಕುಟುಂಬದವರು ಮತ್ತು ವೈದ್ಯರ ಮಾತುಗಳನ್ನು ಒಳಗೊಂಡ ಸಾಕ್ಷ್ಯಚಿತ್ರ.
  • ವಿದೇಶದಲ್ಲಿ ಚಿಕಿತ್ಸೆ ಪಡೆದ ಆ ದಿನಗಳನ್ನು ಮೆಲುಕು ಹಾಕಿದ ಶಿವಣ್ಣ.

ಹ್ಯಾಟ್ರಿಕ್ ಹೀರೋ ಶಿವರಾಜ್​ಕುಮಾರ್ (Shivarajkumar) ಅವರು ಇಂದು (ಜುಲೈ 12) ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಅಭಿಮಾನಿಗಳು ಜನಪರ ಕಾರ್ಯಗಳ ಮೂಲಕ ಜನ್ಮದಿನವನ್ನು ವಿಶೇಷವಾಗಿಸುತ್ತಿದ್ದಾರೆ. ಇದರ ನಡುವೆ ಒಂದು ವಿಶೇಷ ಪ್ರೋಮೋ ಹಂಚಿಕೊಳ್ಳಲಾಗಿದೆ. ಶಿವರಾಜ್​ಕುಮಾರ್ ಅವರು ಅನಾರೋಗ್ಯದ ಕಾರಣದಿಂದ ಒಂದಷ್ಟು ದಿನಗಳ ಕಾಲ ಬ್ರೇಕ್ ತೆಗೆದುಕೊಂಡಿದ್ದರು. ವಿದೇಶಕ್ಕೆ ತೆರಳಿ ಚಿಕಿತ್ಸೆ ಪಡೆದು, ಸಂಪೂರ್ಣ ಗುಣಮುಖರಾಗಿ ಮರಳಿದರು. ಆದರೆ ಆ ಜರ್ನಿ ಹೇಗಿತ್ತು ಎಂಬುದು ಅಭಿಮಾನಿಗಳಿಗೆ ತಿಳಿದಿಲ್ಲ. ಆ ಬಗ್ಗೆ ಮೊದಲ ಬಾರಿಗೆ ಶಿವಣ್ಣ ಮತ್ತು ಅವರ ಕುಟುಂಬದವರು ಮಾತನಾಡಿದ್ದಾರೆ. ‘ಸರ್ವೈವರ್’ (Survivor) ಶೀರ್ಷಿಕೆಯಲ್ಲಿ ಸಾಕ್ಷ್ಯಚಿತ್ರ ಸಿದ್ಧವಾಗಿದೆ. ಶೀಘ್ರದಲ್ಲೇ ಅದು ಬಿಡುಗಡೆ ಆಗಲಿದೆ.

‘ಗೀತಾ ಪಿಕ್ಚರ್ಸ್’ ಮೂಲಕ ನಿರ್ಮಾಣ:

ಗೀತಾ ಶಿವರಾಜ್​ಕುಮಾರ್ ಒಡೆತನದ ‘ಗೀತಾ ಪಿಕ್ಚರ್ಸ್’ ಮೂಲಕ ಈ ಸಾಕ್ಷ್ಯಚಿತ್ರ ನಿರ್ಮಾಣ ಆಗಿದೆ. ಹುಟ್ಟುಹಬ್ಬದ ಪ್ರಯುಕ್ತ ಅದರ ಪ್ರೋಮೋ ರಿಲೀಸ್ ಮಾಡಲಾಗಿದ್ದು, ಶಿವಣ್ಣ ಅವರ ಜೀವನದ ಕೆಲವು ಮಹತ್ವ ಘಟನೆಗಳನ್ನು ಇದರಲ್ಲಿ ಮೆಲುಕು ಹಾಕಲಾಗಿದೆ. ಗೀತಾ ಶಿವರಾಜ್​ಕುಮಾರ್, ಮಧು ಬಂಗಾರಪ್ಪ, ನಿವೇದಿತಾ ಶಿವರಾಜ್​ಕುಮಾರ್ ಮುಂತಾದವರು ಇದರಲ್ಲಿ ಮಾತನಾಡಿದ್ದಾರೆ.

ಶಿವರಾಜ್​ಕುಮಾರ್ ಆಪ್ತರ ಮಾತುಗಳು:

ಶಿವಣ್ಣ ಅವರನ್ನು ಹತ್ತಿರದಿಂದ ಕಂಡಿರುವ ಕಿಚ್ಚ ಸುದೀಪ್, ಸಾಯಿ ಕುಮಾರ್, ಕಮಲ್ ಹಾಸನ್, ನಾಗಾರ್ಜುನ, ದುನಿಯಾ ವಿಜಯ್, ಡಾಲಿ ಧನಂಜಯ ಸೇರಿದಂತೆ ಹಲವರು ಕೂಡ ತಮ್ಮ ಮಾತುಗಳನ್ನು ಹಂಚಿಕೊಂಡಿದ್ದಾರೆ. ಅನಾರೋಗ್ಯದ ಸಂದರ್ಭದಲ್ಲಿ ಶಿವರಾಜ್​ಕುಮಾರ್ ಅವರಿಗೆ ಚಿಕಿತ್ಸೆ ನೀಡಿದ ವೈದ್ಯರ ಮಾತುಗಳು ಕೂಡ ಈ ಸಾಕ್ಷ್ಯಚಿತ್ರದಲ್ಲಿವೆ.

ಆಸ್ಪತ್ರೆಯೊಳಗಿನ ದೃಶ್ಯಗಳು ಸಹ ಇರಲಿವೆ:

ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾಗ ಶಿವರಾಜ್​ಕುಮಾರ್ ಅವರು ಯಾವ ರೀತಿ ಇದ್ದರು ಎಂಬುದು ಅಭಿಮಾನಿಗಳಿಗೆ ತಿಳಿದಿಲ್ಲ. ಆ ಬಗ್ಗೆ ಕೂಡ ‘ಸರ್ವೈವರ್’ ಸಾಕ್ಷ್ಯಚಿತ್ರದಲ್ಲಿ ವಿವರ ನೀಡಲಾಗುತ್ತಿದೆ. ಆಸ್ಪತ್ರೆಯೊಳಗಿನ ದೃಶ್ಯಗಳು ಕೂಡ ಇದರಲ್ಲಿ ಇವೆ. ಸದ್ಯಕ್ಕೆ ಇದರ ಪ್ರೋಮೋ ಮಾತ್ರ ಬಿಡುಗಡೆ ಆಗಿದ್ದು, ಶೀಘ್ರದಲ್ಲೇ ‘ಗೀತಾ ಪಿಕ್ಚರ್ಸ್’ ಮೂಲಕ ಈ ಸಾಕ್ಷ್ಯಚಿತ್ರ ವೀಕ್ಷಣೆಗೆ ಲಭ್ಯವಾಗಲಿದೆ.

ಇದನ್ನೂ ಓದಿ: ಮತ್ತೆ ಲಾಯರ್ ಪಾತ್ರ ಮಾಡಿದ ಶಿವರಾಜ್​ಕುಮಾರ್; ‘ಮಹಾನ್’ ಸಿನಿಮಾದಲ್ಲಿ ನಟನೆ

ಶಿವರಾಜ್​ಕುಮಾರ್ ಅವರ ಎನರ್ಜಿಗೆ ಎಲ್ಲರೂ ಫಿದಾ ಆಗುತ್ತಾರೆ. ಅನಾರೋಗ್ಯ ಬಂದರೂ ಕೂಡ ಶಿವಣ್ಣ ಕುಗ್ಗಲಿಲ್ಲ. ಎಲ್ಲವನ್ನೂ ಎದುರಿಸಿ ಬಂದ ಅವರು ಮತ್ತೆ ಮೊದಲಿನಂತೆ ಆ್ಯಕ್ಟೀವ್ ಆಗಿದ್ದಾರೆ. ಅವರ ಈ ಜರ್ನಿಯು ಅನೇಕರಿಗೆ ಸ್ಫೂರ್ತಿ ತುಂಬುವಂತಿದೆ. ತಮ್ಮ ಕಷ್ಟದ ದಿನಗಳ ಬಗ್ಗೆ ಸ್ವತಃ ಶಿವರಾಜ್​ಕುಮಾರ್ ಅವರು ಮಾತನಾಡಿರುವ ಈ ಸಾಕ್ಷ್ಯಚಿತ್ರವನ್ನು ನೋಡಲು ಅಭಿಮಾನಿಗಳು ಕಾದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ