‘ಹಣೆಬರಹ, ಏನೂ ಮಾಡೋಕೆ ಆಗಲ್ಲ’: ದರ್ಶನ್ ಕೇಸ್ ಬಗ್ಗೆ ಶಿವಣ್ಣ ಪ್ರತಿಕ್ರಿಯೆ

|

Updated on: Jun 30, 2024 | 3:00 PM

ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬ ವ್ಯಕ್ತಿಯ ಕೊಲೆ ಕೇಸ್​ನಲ್ಲಿ ನಟ ದರ್ಶನ್​, ನಟಿ ಪವಿತ್ರಾ ಗೌಡ ಹಾಗೂ ಅವರ ಸಹಚರರು ಜೈಲು ಸೇರಿದ್ದಾರೆ. ಈ ಘಟನೆ ಬಗ್ಗೆ ಕನ್ನಡ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಈಗಾಗಲೇ ಮಾತನಾಡಿದ್ದಾರೆ. ಇಂದು (ಜೂನ್​ 30) ನಟ ಶಿವರಾಜ್​ಕುಮಾರ್​ ಕೂಡ ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಇಂಥ ಘಟನೆ ಆಗಿದ್ದಕ್ಕೆ ಶಿವಣ್ಣ ಬೇಸರ ವ್ಯಕ್ತಪಡಿಸಿದ್ದಾರೆ.

‘ಹಣೆಬರಹ, ಏನೂ ಮಾಡೋಕೆ ಆಗಲ್ಲ’: ದರ್ಶನ್ ಕೇಸ್ ಬಗ್ಗೆ ಶಿವಣ್ಣ ಪ್ರತಿಕ್ರಿಯೆ
ದರ್ಶನ್​, ಶಿವರಾಜ್​ಕುಮಾರ್​
Follow us on

ಕನ್ನಡ ಚಿತ್ರರಂಗದ ಸ್ಟಾರ್​ ನಟ ದರ್ಶನ್​ ಅವರು ಕೊಲೆ ಪ್ರಕರಣದ ಆರೋಪಿಗಾಗಿ ಜೈಲಿನಲ್ಲಿ ಇರುವುದು ಅವರ ಆಪ್ತರಿಗೆ ಬೇಸರ ಮೂಡಿಸಿದೆ. ಈ ಕೇಸ್​ಗೆ ಸಂಬಂಧಪಟ್ಟಂತೆ ಸ್ಯಾಂಡಲ್​ವುಡ್​ನ ಹಿರಿಯ ನಟ ಶಿವರಾಜ್​ಕುಮಾರ್​ ಪ್ರತಿಕ್ರಿಯೆ ನೀಡಿದ್ದಾರೆ. ಚಂದನವನದಲ್ಲಿ ಎಲ್ಲರ ಜೊತೆಗೂ ಶಿವಣ್ಣ ಒಡನಾಟ ಹೊಂದಿದ್ದಾರೆ. ದರ್ಶನ್​ ಅರೆಸ್ಟ್​ ಆಗಿರುವ ಬಗ್ಗೆ ಶಿವರಾಜ್​ಕುಮಾರ್​ ಅವರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ನ್ಯಾಯ ಸಿಗಬೇಕು ಎಂದು ಅವರು ಹೇಳಿದ್ದಾರೆ. ನಿರ್ಮಾಪಕರ ಸಂಘದ ಹೊಸ ಕಟ್ಟಡದ ಉದ್ಘಾಟನೆ ಬಳಿಕ ಅವರು ಮಾಧ್ಯಮಗಳ ಜೊತೆ ಮಾತನಾಡುವಾಗ ಈ ವಿಚಾರದ ಕುರಿತು ಪ್ರತಿಕ್ರಿಯಿಸಿದರು.

‘ಇಂಥ ಘಟನೆಗಳು ಆಗುತ್ತವೆ. ಏನೂ ಮಾಡೋಕೆ ಆಗಲ್ಲ. ಹಣೆಬರಹ ಅಂತ ಒಂದು ಇರುತ್ತದೆ. ಆ ವಿಚಾರ ಬಂದಾಗ ನಾವು ಏನೂ ಮಾಡೋಕೆ ಆಗುವುದಿಲ್ಲ. ಆದರೆ, ಮಾತಾಡೋಕೆ ಹೋದರೂ, ನಾವು ಮಾಡುತ್ತಿರುವುದು ಸರಿಯಾಗಿ ಇದೆಯಾ ಎಂಬುದನ್ನು ಮೊದಲು ಯೋಚನೆ ಮಾಡಬೇಕು. ಅದನ್ನು ಹೊರತುಪಡಿಸಿ ನಾವು ಏನೂ ಹೇಳೋಕೆ ಆಗಲ್ಲ’ ಎಂದು ಶಿವರಾಜ್​ಕುಮಾರ್​ ಹೇಳಿದ್ದಾರೆ.

ಇದನ್ನೂ ಓದಿ: ‘ನಾನು ದರ್ಶನ್​ ಅವರ ಸಂಬಂಧಿ’: ಭೇಟಿ ಮಾಡಲು ಪರಪ್ಪನ ಅಗ್ರಹಾರಕ್ಕೆ ಬಂದ ಯುವತಿ

‘ಈ ರೀತಿ ಆದಾಗ ನೋವಾಗುತ್ತದೆ. ಯಾಕಪ್ಪಾ ಹೀಗೆಲ್ಲ ಆಯಿತು ಅಂತ ಬೇಸರ ಆಗುತ್ತದೆ. ರೇಣುಕಾ ಸ್ವಾಮಿ ಕುಟುಂಬಕ್ಕೆ, ದರ್ಶನ್​ ಅವರ ಕುಟುಂಬಕ್ಕೆ ನೋವಾಗುತ್ತದೆ. ದರ್ಶನ್​ ಮಗನ ಬಗ್ಗೆ ಬೇಸರ ಆಗುತ್ತೆ. ನಾವು ಎಲ್ಲದನ್ನೂ ಎದುರಿಸಬೇಕು. ಈಗಾಗಲೇ ತನಿಖೆ ನಡೆದಾಗಿದೆ. ಏನಾಗುತ್ತದೋ ನೋಡೋಣ. ಏನಾಗಬೇಕೋ ಅದೇ ಆಗುತ್ತದೆ. ನ್ಯಾಯ ಏನಿದೆಯೋ ಅದೇ ಆಗುತ್ತದೆ. ಇದರ ಮೇಲೆ ಇನ್ನೇನೂ ಹೇಳಲು ನಾನು ಇಷ್ಟಪಡಲ್ಲ. ಎಲ್ಲವೂ ಹಣೆಬರಹ’ ಎಂದಿದ್ದಾರೆ ಶಿವರಾಜ್​ಕುಮಾರ್​.

ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಎಂಬಾತ ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳಿಸಿದ್ದಾನೆ ಎಂಬ ಕಾರಣಕ್ಕೆ ಆತನನ್ನು ಅಪಹರಣ ಮಾಡಿಕೊಂಡು ಬೆಂಗಳೂರಿಗೆ ಕರೆತಂದು ಸಾಯಿಸಿದ ಆರೋಪ ದರ್ಶನ್​ ಹಾಗೂ ಗ್ಯಾಂಗ್​ ಮೇಲಿದೆ. ತನಿಖೆ ನಡೆಯುತ್ತಿದ್ದು, ಪ್ರಮುಖ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ರೇಣುಕಾ ಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಲಿ ಎಂದು ಅನೇಕ ಸೆಲೆಬ್ರಿಟಿಗಳು ಒತ್ತಾಯಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.