ಶಿವರಾಜ್​ಕುಮಾರ್​ಗೆ ಕ್ಯಾನ್ಸರ್ ತಗುಲಿದ್ದು ದೇಹದ ಈ ಭಾಗಕ್ಕೆ; ವೈದ್ಯರು ಮಾಡಿದ ಪ್ರಕ್ರಿಯೆ ಏನು? ಇಲ್ಲಿದೆ ವಿವರ

| Updated By: ರಾಜೇಶ್ ದುಗ್ಗುಮನೆ

Updated on: Dec 25, 2024 | 10:35 AM

ಶಿವರಾಜ್ ಕುಮಾರ್ ಅವರಿಗೆ ಮಿಯಾಮಿಯ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಡಿಸೆಂಬರ್ 24 ರಂದು ಕ್ಯಾನ್ಸರ್ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನಡೆದಿದೆ. ಶಸ್ತ್ರಚಿಕಿತ್ಸೆಯಲ್ಲಿ ಕ್ಯಾನ್ಸರ್‌ಗ್ರಸ್ತ ಭಾಗವನ್ನು ತೆಗೆದು ಹಾಕಲಾಗಿದೆ. ಅವರು ಚೇತರಿಸಿಕೊಳ್ಳುತ್ತಿದ್ದಾರೆ ಮತ್ತು ಸ್ಥಿರವಾಗಿ ಇದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಕುಟುಂಬ ಮತ್ತು ಅಭಿಮಾನಿಗಳಿಗೆ ವೈದ್ಯರ ಭರವಸೆ ನೀಡಿದ್ದಾರೆ.

ಶಿವರಾಜ್​ಕುಮಾರ್​ಗೆ ಕ್ಯಾನ್ಸರ್ ತಗುಲಿದ್ದು ದೇಹದ ಈ ಭಾಗಕ್ಕೆ; ವೈದ್ಯರು ಮಾಡಿದ ಪ್ರಕ್ರಿಯೆ ಏನು? ಇಲ್ಲಿದೆ ವಿವರ
ಶಿವರಾಜ್​ಕುಮಾರ್
Follow us on

ಶಿವರಾಜ್​ಕುಮಾರ್ ಅಮೆರಿಕದ ಮಿಯಾಮಿ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಡಿಸೆಂಬರ್ 24ರಂದು ಅವರಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಈ ವೇಳೆ ಏನು ಮಾಡಲಾಯಿತು ಎಂಬುದರ ಕುರಿತು ವೈದ್ಯರು ಮಾಹಿತಿ ನೀಡಿದ್ದಾರೆ. ಇದೆಲ್ಲದರ ಜೊತೆಗೆ ಅವರ ಆರೋಗ್ಯದ ಬಗ್ಗೆಯೂ ಅಪ್​ಡೇಟ್ ನೀಡಲಾಗಿದೆ. ಆ ಎಲ್ಲದರ ಕುರಿತು ಇಲ್ಲಿದೆ ಮಾಹಿತಿ.

ಶಿವರಾಜ್​ಕುಮಾರ್ ಅವರು ಮೊದಲು ಕ್ಯಾನ್ಸರ್ ಇರುವ ವಿಚಾರವನ್ನು ರಿವೀಲ್ ಮಾಡಲಾಗಿರಲಿಲ್ಲ. ಅನಾರೋಗ್ಯ ಎಂದಷ್ಟೇ ಅವರು ಹೇಳಿದ್ದರು. ಅಮೆರಿಕಕ್ಕೆ ತೆರಳುವುದಕ್ಕೂ ಮೊದಲು ಅವರು ಈ ಬಗ್ಗೆ ಮಾಹಿತಿ ನೀಡಿದರು. ತಮಗೆ ಕ್ಯಾನ್ಸರ್ ಇರುವ ವಿಚಾರವನ್ನು ಅವರು ಒಪ್ಪಿಕೊಂಡರು. ಶಿವರಾಜ್​ಕುಮಾರ್ ಅವರಿಗೆ ಮೂತ್ರಪಿಂಡದ ಕ್ಯಾನ್ಸರ್ ಇತ್ತು ಎಂಬುದು ನಂತರ ರಿವೀಲ್ ಆಯಿತು.

‘ಸದ್ಯ ಕ್ಯಾನ್ಸರ್ ತಗುಲಿದ ಮೂತ್ರ ಪಿಂಡವನ್ನ ತೆಗೆದು ಹಾಕಲಾಗಿದೆ. ಶಸ್ತ್ರಚಿಕಿತ್ಸೆ ನಂತರ ಕರುಳನ್ನು ಬಳಸಿ ಕೃತಕ ಮೂತ್ರ ಪಿಂಡವನ್ನ ಅಳವಡಿಸಲಾಗಿದೆ. ಶಿವರಾಜ್​ಕುಮಾರ್ ದೈಹಿಕವಾಗಿ ಹಾಗೂ ಮಾನಸಿಕವಾಗಿ ಆರೋಗ್ಯವಾಗಿದ್ದಾರೆ’ ಎಂದು ವೈದ್ಯರು ಮಾಹಿತಿ ಹಂಚಿಕೊಂಡಿದ್ದಾರೆ.

ಶಿವಣ್ಣನ ಆರೋಗ್ಯದ ಬಗ್ಗೆ ಗೀತಕ್ಕ ಕೂಡ ಮಾಹಿತಿ ನೀಡಿದ್ದಾರೆ. ‘ಅಭಿಮಾನಿಗಳು ಹೇಗೆ ದೇವರೋ ಹಾಗೆ ಡಾಕ್ಟರ್ ಕೂಡ ದೇವರ ರೀತಿ ಬಂದಿದ್ದಾರೆ. ಸದ್ಯ ಶಿವರಾಜ್​ಕುಮಾರ್ ಐಸಿಯುನಲ್ಲಿದ್ದಾರೆ. ಎಲ್ಲವೂ ಯಶಸ್ವಿಯಾಗಿದೆ. ಸದ್ಯದಲ್ಲಿಯೇ ಶಿವರಾಜ್​ಕುಮಾರ್ ನಿಮ್ಮ ಬಳಿ ಮಾತನಾಡುತ್ತಾರೆ’ ಎಂದು ಗೀತಾ ಅವರು ಮಾಹಿತಿ ನೀಡಿದ್ದಾರೆ.

ಪ್ರೆಸ್​ನೋಟ್​ನಲ್ಲಿ ಏನಿದೆ?

‘ಶಿವರಾಜ್‌ಕುಮಾ‌ರ್ ಅವರ ಇತ್ತೀಚಿನ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಅವರು ಈಗ ಸ್ಥಿರ ಪರಿಸ್ಥಿತಿಯಲ್ಲಿ ಇದ್ದು ಚೇತರಿಸಿಕೊಳ್ಳುತ್ತಿದ್ದಾರೆ. ಈ ಶಸ್ತ್ರಚಿಕಿತ್ಸೆಯನ್ನು ಡಾ. ಮುರುಗೇಶ್ ಮನೋಹರನ್ ಅವರ ಮಾರ್ಗದರ್ಶನದಲ್ಲಿ ಯಶಸ್ವಿಯಾಗಿ ನೆರವೇರಿಸಲಾಗಿದೆ. ಶಸ್ತ್ರಚಿಕಿತ್ಸೆಯ ವೇಳೆ ಮತ್ತು ಶಸ್ತ್ರಚಿಕಿತ್ಸೆ ನಂತರದ ಆರೈಕೆ ಸಮಯದಲ್ಲಿ ಡಾ. ಶಿವರಾಜ್‌ಕುಮಾ‌ರ್ ಅವರ ಆರೋಗ್ಯ ಸ್ಥಿತಿಯು ಸ್ಥಿರವಾಗಿದೆ’ ಎಂದು ಪ್ರೆಸ್​ನೋಟ್​ನಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಆಪರೇಷನ್ ಬಳಿಕ ಶಿವರಾಜ್​ಕುಮಾರ್ ಹೆಲ್ತ್​ಅಪ್​ಡೇಟ್ ನೀಡಿದ ವೈದ್ಯರು

‘ಶಿವರಾಜ್​ಕುಮಾರ್ ಪ್ರಸ್ತುತ ತೀವ್ರ ನಿರೀಕ್ಷಣೆಯಲ್ಲಿದ್ದಾರೆ. ಪರಿಣಿತ ವೈದ್ಯರು ಹಾಗೂ ಆರೋಗ್ಯ ಸಿಬ್ಬಂದಿ ತಂಡದಿಂದ ಅತ್ಯುತ್ತಮ ಆರೈಕೆ ಪಡೆಯುತ್ತಿದ್ದಾರೆ. ಶಿವರಾಜ್‌ಕುಮಾರ್ ಅವರ ಅಭಿಮಾನಿಗಳು, ಸಹೋದ್ಯೋಗಿಗಳು, ಶುಭಚಿಂತಕರು ಮತ್ತು ಮಾಧ್ಯಮಗಳು ಈ ಸಂದರ್ಭದಲ್ಲಿ ತೋರಿಸಿದ ನಿರಂತರ ಬೆಂಬಲ, ಪ್ರಾರ್ಥನೆ ಮತ್ತು ಮೆಚ್ಚುಗೆ ಸಂದೇಶಗಳಿಗೆ ಹೃತ್ತೂರ್ವಕ ಧನ್ಯವಾದಗಳನ್ನು ತಿಳಿಸುತ್ತೇವೆ. ನಿಮ್ಮ ಪ್ರೋತ್ಸಾಹವು ಡಾ. ಶಿವರಾಜ್‌ಕುಮಾರ್ ಮತ್ತು ಅವರ ಕುಟುಂಬಕ್ಕೆ ದೊಡ್ಡ ಶಕ್ತಿ ಒದಗಿಸಿದೆ. ಅವರ ಚೇತರಿಕೆ ಕುರಿತು ಮುಂದಿನ ಮಾಹಿತಿಯನ್ನು ಸಮಯಕ್ಕೆ ಸರಿಯಾಗಿ ಹಂಚಿಕೊಳ್ಳಲಾಗುವುದು’ ಎಂದು ಪ್ರೆಸ್​ನೋಟ್​ನಲ್ಲಿ ತಿಳಿಸಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:32 am, Wed, 25 December 24