AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಭಾಷಿಗರಿಗೂ ಹತ್ತಿರವಾದ ಶಿವರಾಜ್​ಕುಮಾರ್; ಹ್ಯಾಟ್ರಿಕ್ ಹೀರೋಈ ಖದರ್​ಗೆ ಭರಪೂರ ಮೆಚ್ಚುಗೆ

ಶಿವರಾಜ್​ಕುಮಾರ್ ಅವರು ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. 125ಕ್ಕೂ ಅಧಿಕ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ಈ ಪೈಕಿ ಅವರ ಖಾತೆಯಲ್ಲಿ ಹಲವು ಸೂಪರ್ ಹಿಟ್ ಚಿತ್ರಗಳು ಇವೆ. ಅವರು ರಗಡ್ ಪಾತ್ರ ಮಾಡಿದರೆ ಅಭಿಮಾನಿಗಳಿಗೆ ಸಾಕಷ್ಟು ಇಷ್ಟವಾಗುತ್ತದೆ

ಪರಭಾಷಿಗರಿಗೂ ಹತ್ತಿರವಾದ ಶಿವರಾಜ್​ಕುಮಾರ್; ಹ್ಯಾಟ್ರಿಕ್ ಹೀರೋಈ ಖದರ್​ಗೆ ಭರಪೂರ ಮೆಚ್ಚುಗೆ
ಶಿವಣ್ಣ
ರಾಜೇಶ್ ದುಗ್ಗುಮನೆ
|

Updated on: Aug 11, 2023 | 11:14 AM

Share

ರಜನಿಕಾಂತ್ ನಟನೆಯ ‘ಜೈಲರ್’ ಸಿನಿಮಾ (Jailer Movie) ಸೂಪರ್ ಹಿಟ್ ಆಗಿದೆ. ಈ ಚಿತ್ರದ ಮೂಲಕ ರಜನಿಕಾಂತ್ ಮತ್ತೊಂದು ಗೆಲುವು ಕಂಡಿದ್ದಾರೆ. ಈ ಚಿತ್ರದಲ್ಲಿ ಶಿವರಾಜ್​ಕುಮಾರ್ ಅವರು ಮಂಡ್ಯದ ಡಾನ್ ಆಗಿ ಮಿಂಚಿದ್ದಾರೆ. ಅವರ ಸ್ಕ್ರೀನ್​ ಪ್ರೆಸೆನ್ಸ್ ಬಗ್ಗೆ ಭರಪೂರ ಮೆಚ್ಚುಗೆ ಸಿಗುತ್ತಿದೆ. ಕೆಲವೇ ನಿಮಿಷ ತೆರೆಮೇಲೆ ಕಾಣಿಸಿಕೊಂಡರೂ ಅವರ ನಟನೆಗೆ ಎಲ್ಲರ ಗಮನ ಸೆಳೆದಿದೆ. ಪರಭಾಷಿಗರು ಶಿವಣ್ಣ (Shivanna Movie) ಅವರನ್ನು ಹಾಡಿ ಹೊಗಳುತ್ತಿದ್ದಾರೆ. ಶಿವರಾಜ್​ಕುಮಾರ್ ಖದರ್​ನೆಸ್​ ನೋಡಿ ಅನೇಕರು ಭೇಷ್ ಎನ್ನುತ್ತಿದ್ದಾರೆ.

ಶಿವರಾಜ್​ಕುಮಾರ್ ಅವರು ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. 125ಕ್ಕೂ ಅಧಿಕ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ಈ ಪೈಕಿ ಅವರ ಖಾತೆಯಲ್ಲಿ ಹಲವು ಸೂಪರ್ ಹಿಟ್ ಚಿತ್ರಗಳು ಇವೆ. ಶಿವರಾಜ್​ಕುಮಾರ್ ಅವರು ಹಲವು ರೀತಿಯ ಪಾತ್ರಗಳನ್ನು ಮಾಡಿದ್ದಾರೆ. ಅವರು ರಗಡ್ ಪಾತ್ರ ಮಾಡಿದರೆ ಅಭಿಮಾನಿಗಳಿಗೆ ಸಾಕಷ್ಟು ಇಷ್ಟವಾಗುತ್ತದೆ. ‘ಜೈಲರ್’ ಸಿನಿಮಾ ಇದಕ್ಕೆ ಉತ್ತಮ ಉದಾಹರಣೆ. ಅವರು ಮಾಡಿರುವ ನರಸಿಂಹ ಪಾತ್ರ ಜನರಿಗೆ ಇಷ್ಟವಾಗಿದೆ.

ಇದನ್ನೂ ಓದಿ: ಬಾಕ್ಸ್ ಆಫೀಸ್​​ನಲ್ಲಿ ಅಬ್ಬರಿಸಿದ ‘ಜೈಲರ್’ ಸಿನಿಮಾ; ಮೊದಲ ದಿನದ ಕಲೆಕ್ಷನ್ ವಿವರ ಇಲ್ಲಿದೆ

ಟ್ವಿಟರ್​ನಲ್ಲಿ ಶಿವರಾಜ್​ಕುಮಾರ್ ಪಾತ್ರದ ಬಗ್ಗೆ ಸಾಕಷ್ಟು ಚರ್ಚೆ ಆಗುತ್ತಿದೆ. ಕ್ಲೈಮ್ಯಾಕ್ಸ್​ನಲ್ಲಿ ಅವರು ಕಾಣಿಸಿಕೊಳ್ಳುವ ರೀತಿಗೆ ಜನರು ಭೇಷ್ ಎಂದಿದ್ದಾರೆ. ಕೆಲ ಪರಭಾಷಿಗರು ಶಿವರಾಜ್​ಕುಮಾರ್ ನಟನೆಯ ಬೆಸ್ಟ್ ಸಿನಿಮಾಗಳು ಯಾವವು ಎಂಬುದರ ಲಿಸ್ಟ್ ತೆಗೆದಿದ್ದಾರೆ.

‘ಜೈಲರ್’ ಸಿನಿಮಾ ಭಾರತದಲ್ಲಿ ಮೊದಲ ದಿನ 50+ ಕೋಟಿ ರೂಪಾಯಿ ಬಾಚಿಕೊಂಡಿದೆ. ಈ ಮೂಲಕ ಎಲ್ಲಾ ದಾಖಲೆಗಳನ್ನು ಉಡೀಸ್ ಮಾಡಿದೆ. ಶಿವರಾಜ್​ಕುಮಾರ್ ಇರುವ ಕಾರಣಕ್ಕೆ ಕರ್ನಾಕಟದಲ್ಲಿ ಹಾಗೂ ಮೋಹನ್​ಲಾಲ್ ಇರುವುದಕ್ಕೆ ಕೇರಳದಲ್ಲಿ ಸಿನಿಮಾ ಉತ್ತಮ ಕಮಾಯಿ ಮಾಡುತ್ತಿದೆ.

Follow Us
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ