ಸಂಕ್ರಾಂತಿ ಹಬ್ಬದಲ್ಲಿ ಪುನೀತ್​ ರಾಜ್​ಕುಮಾರ್​ ನೆನಪು; ಫ್ಯಾನ್ಸ್​ ಜೊತೆ ಹೊಸ ಸುದ್ದಿ ಹಂಚಿಕೊಂಡ ಶಿವಣ್ಣ

‘ಇನ್ನು ಕೆಲವೇ ಗಂಟೆಗಳಲ್ಲಿ ಇನ್ನೊಂದು ಸರ್ಪ್ರೈಸ್​ ಕಾದಿದೆ. ಅಪ್ಪು ಐ ಲವ್​ ಯೂ’ ಎಂದು ಶಿವರಾಜ್​ಕುಮಾರ್​ ಹೇಳಿದ್ದಾರೆ.

ಸಂಕ್ರಾಂತಿ ಹಬ್ಬದಲ್ಲಿ ಪುನೀತ್​ ರಾಜ್​ಕುಮಾರ್​ ನೆನಪು; ಫ್ಯಾನ್ಸ್​ ಜೊತೆ ಹೊಸ ಸುದ್ದಿ ಹಂಚಿಕೊಂಡ ಶಿವಣ್ಣ
ಶಿವರಾಜ್​ಕುಮಾರ್​, ಬೈರಾಗಿ ಪೋಸ್ಟರ್​, ಪುನೀತ್​ ರಾಜ್​ಕುಮಾರ್
Follow us
TV9 Web
| Updated By: ಮದನ್​ ಕುಮಾರ್​

Updated on: Jan 15, 2022 | 1:33 PM

ವರ್ಷದ ಮೊದಲ ಹಬ್ಬ ಸಂಕ್ರಾಂತಿ. ಈ ಬಾರಿ ಕೊರೊನಾ ಹಾವಳಿ ನಡುವೆ ಸಿಂಪಲ್​ ಆಗಿ ಹಬ್ಬ ಆಚರಿಸಲಾಗುತ್ತಿದೆ. ನೈಟ್​ ಕರ್ಫ್ಯೂ, ವೀಕೆಂಡ್​​ ಕರ್ಫ್ಯೂ ಕಾರಣಗಳಿಂದ ಕನ್ನಡದಲ್ಲಿ ಯಾವುದೇ ಸಿನಿಮಾ ರಿಲೀಸ್​ ಆಗಿಲ್ಲ. ಹಾಗಾಗಿ ಸಂಕ್ರಾಂತಿಯ (Sankranti 2022) ಈ ಸಂದರ್ಭದಲ್ಲಿ ಕನ್ನಡ ಚಿತ್ರರಂಗದಲ್ಲಿ ಹೇಳಿಕೊಳ್ಳುವಂತಹ ಕಳೆ ಇಲ್ಲ. ಅದರ ನಡುವೆಯೂ ಭರವಸೆಯ ಬೆಳಕನ್ನು ಹುಡುಕುತ್ತ ಮುನ್ನಡೆಯಲೇ ಬೇಕಾಗಿದೆ. ನಟ ಶಿವರಾಜ್​ಕುಮಾರ್​​ (Shivarajkumar) ಅವರು ಎಲ್ಲರಿಗೂ ಸಂಕ್ರಾಂತಿ ಹಬ್ಬದ ಶುಭಾಶಯ ಕೋರಿದ್ದಾರೆ. ಈ ವೇಳೆ ಪುನೀತ್​ ರಾಜ್​ಕುಮಾರ್​  (Puneeth Rajkumar) ಅವರನ್ನು ಶಿವಣ್ಣ ನೆನಪು ಮಾಡಿಕೊಂಡಿದ್ದಾರೆ. ಜೊತೆಗೊಂದು ಗುಡ್​ ನ್ಯೂಸ್​ ಸಹ ನೀಡಿದ್ದಾರೆ. ಶಿವರಾಜ್​ಕುಮಾರ್​ ನಟನೆಯ ‘ಬೈರಾಗಿ’ ಚಿತ್ರದ ಶೂಟಿಂಗ್​ ಮಗಿದಿರುವುದೇ ಆ ಸಿಹಿ ಸುದ್ದಿ. ಶೀಘ್ರದಲ್ಲೇ ಈ ಸಿನಿಮಾದ ಟೀಸರ್​ ಕೂಡ ರಿಲೀಸ್​ ಆಗಲಿದೆ ಎಂದು ಶಿವಣ್ಣ ಹೇಳಿದ್ದಾರೆ. ಒಂದು ಸರ್ಪ್ರೈಸ್​ ಕೂಡ ಇದೆ ಅಂತ ಅವರು ತಿಳಿಸಿದ್ದಾರೆ.

‘ಪ್ರತಿಯೊಬ್ಬರಿಗೂ ಸಂಕ್ರಾಂತಿ ಹಬ್ಬದ ಶುಭಾಶಯಗಳು. ಬೈರಾಗಿ ಸಿನಿಮಾದ ಶೂಟಿಂಗ್ ಮುಕ್ತಾಯ ಆಯ್ತು. ಆದಷ್ಟು ಬೇಗ ನಿಮ್ಮ ಮುಂದೆ ಬರಲಿದೆ. ಈ ವರ್ಷದ ಮೊದಲ ಬೈರಾಗಿ ಪೋಸ್ಟರ್​ ಅನ್ನು ನನ್ನ ಪೇಜ್​ನಿಂದ ರಿಲೀಸ್​ ಮಾಡುತ್ತಿದ್ದೇನೆ. ನೋಡಿ ಆನಂದಿಸಿ. ಇನ್ನು ಕೆಲವೇ ಗಂಟೆಗಳಲ್ಲಿ ಇನ್ನೊಂದು ಸರ್ಪ್ರೈಸ್​ ಕಾದಿದೆ. ಅಪ್ಪು ಐ ಲವ್​ ಯೂ’ ಎಂದು ಶಿವರಾಜ್​ಕುಮಾರ್​ ಹೇಳಿದ್ದಾರೆ.

​ಬೈರಾಗಿ ಸಿನಿಮಾದಲ್ಲಿ ಶಿವರಾಜ್​ಕುಮಾರ್​ ಜೊತೆ ಡಾಲಿ ಧನಂಜಯ್​ ಕೂಡ ಕಾಣಿಸಿಕೊಳ್ಳಲಿರುವುದು ವಿಶೇಷ. ‘ಟಗರು’ ಸಿನಿಮಾ ನಂತರ ಇವರಿಬ್ಬರ ಕಾಂಬಿನೇಷನ್​ ಮೇಲೆ ಪ್ರೇಕ್ಷಕರಿಗೆ ನಿರೀಕ್ಷೆ ಹೆಚ್ಚಿದೆ. ಕಾಲಿವುಡ್​ ಮೂಲದ ನಿರ್ದೇಶಕ ವಿಜಯ್​ ಮಿಲ್ಟನ್​ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ಮೊದಲ ಲಾಕ್​ಡೌನ್​ ಮುಗಿದ ಬಳಿಕ ‘ಬೈರಾಗಿ’ ಲಾಂಚ್ ಆಗಿತ್ತು. ಈಗ ಶೂಟಿಂಗ್​ ಪೂರ್ಣಗೊಳಿಸಿಕೊಂಡಿದೆ.

ಕೃಷ್ಣ ಸಾರ್ಥಕ್​ ಅವರು ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ಸಂಕ್ರಾಂತಿ ಪ್ರಯುಕ್ತ ಬಿಡುಗಡೆ ಆಗಿರುವ ಹೊಸ ಪೋಸ್ಟರ್ ಸಖತ್​ ವೈರಲ್​ ಆಗುತ್ತಿದೆ. ಯಶ್​ ಶಿವಕುಮಾರ್​, ಅಂಜಲಿ, ಪೃಥ್ವಿ ಅಂಬರ್​ ಮುಂತಾದ ಕಲಾವಿದರು ಈ ಸಿನಿಮಾದಲ್ಲಿದ್ದಾರೆ. ಈ ಎಲ್ಲ ಕಾರಣಗಳಿಂದಾಗಿ ‘ಬೈರಾಗಿ’ ಚಿತ್ರ ಹೈಪ್​ ಸೃಷ್ಟಿ ಮಾಡಿದೆ. ಆದಷ್ಟು ಬೇಗ ಈ ಸಿನಿಮಾವನ್ನು ನೋಡಲು ಫ್ಯಾನ್ಸ್​ ಕಾದಿದ್ದಾರೆ.​

ಇದನ್ನೂ ಓದಿ:

ಪುನೀತ್​ ಒಂದು ಹೃದಯ, ಆತ ಎಲ್ಲರ ಹೃದಯದಲ್ಲೂ ಬೆರೆತು ಹೋಗಿದ್ದಾನೆ; ತಮ್ಮನನ್ನು ನೆನೆದು ಭಾವುಕರಾದ ನಟ ಶಿವರಾಜ್​ಕುಮಾರ್

ಪುನೀತ್​ಗೆ ತಮಿಳುನಾಡು ವಿಧಾನಸಭೆ ಅಧಿವೇಶನದಲ್ಲಿ ಗೌರವ; ಮೊದಲ ದಿನವೇ ಅಪ್ಪು ಬಗ್ಗೆ ಮಾತು

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ