AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

100 ಕೋಟಿ ರೂಪಾಯಿ ಬಜೆಟ್​​ನಲ್ಲಿ ಸಿದ್ಧವಾಯ್ತು ‘45’ ಸಿನಿಮಾ?

ಬಹುನಿರೀಕ್ಷಿತ ‘45’ ಸಿನಿಮಾದ ಬಿಡುಗಡೆಗೆ ದಿನಗಣನೆ ಶುರುವಾಗಿದೆ. ಇದು ಪ್ಯಾನ್ ಇಂಡಿಯಾ ಸಿನಿಮಾ. ಗುಣಮಟ್ಟದಲ್ಲಿ ಯಾವುದೇ ರಾಜಿ ಇಲ್ಲದಂತೆ ಸಿನಿಮಾ ನಿರ್ಮಾಣ ಮಾಡಿರುವುದಾಗಿ ಚಿತ್ರತಂಡ ಹೇಳಿದೆ. ಈ ಚಿತ್ರದ ಬಜೆಟ್ 100 ಕೋಟಿ ರೂಪಾಯಿ ಎಂದು ಹೇಳಲಾಗುತ್ತಿದೆ. ಡಿ.25ಕ್ಕೆ ‘45’ ರಿಲೀಸ್ ಆಗಲಿದೆ.

100 ಕೋಟಿ ರೂಪಾಯಿ ಬಜೆಟ್​​ನಲ್ಲಿ ಸಿದ್ಧವಾಯ್ತು ‘45’ ಸಿನಿಮಾ?
Upendra, Raj B Shetty, Shivarajkumar
ಮದನ್​ ಕುಮಾರ್​
|

Updated on: Dec 03, 2025 | 7:23 PM

Share

ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳ ಪಟ್ಟಿಯಲ್ಲಿ ಕನ್ನಡದ ‘45’ ಚಿತ್ರ (45 Movie) ಕೂಡ ಇದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಈ ಸಿನಿಮಾ ರಿಲೀಸ್ ಆಗಲಿದೆ. ಉಪೇಂದ್ರ, ಶಿವರಾಜ್​ಕುಮಾರ್, ರಾಜ್ ಬಿ. ಶೆಟ್ಟಿ ಅವರು ಈ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಅರ್ಜುನ್ ಜನ್ಯ (Arjun Janya) ಅವರ ಮೊದಲ ನಿರ್ದೇಶನದ ಸಿನಿಮಾ ಎಂಬುದು ವಿಶೇಷ. ದೊಡ್ಡ ಬಜೆಟ್​​ನಲ್ಲಿ ನಿರ್ಮಾಪಕ ರಮೇಶ್ ರೆಡ್ಡಿ ಅವರು ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಡಿಸೆಂಬರ್ 25ರಂದು ಕ್ರಿಸ್ಮಸ್ ಪ್ರಯುಕ್ತ ಬಿಡುಗಡೆ ಆಗಲಿರುವ ಈ ಚಿತ್ರದ ಬಜೆಟ್ ಬರೋಬ್ಬರಿ 100 ಕೋಟಿ ರೂಪಾಯಿ ಎನ್ನಲಾಗಿದೆ.

ತುಂಬಾ ಅದ್ದೂರಿಯಾಗಿ ‘45’ ಸಿನಿಮಾ ನಿರ್ಮಾಣ ಮಾಡಲಾಗಿದೆ. ಈಗಾಗಲೇ ಬಿಡುಗಡೆ ಆಗಿರುವ ಆಫ್ರೋ ಟಪ್ಪಾಂಗ್ ಹಾಡು ಎಲ್ಲರಿಗೂ ಇಷ್ಟ ಆಗಿದೆ. ರಾಜ್ ಬಿ. ಶೆಟ್ಟಿ, ಶಿವರಾಜ್​​ಕುಮಾರ್ ಮತ್ತು ಉಪೇಂದ್ರ ಅವರ ಕಾಂಬಿನೇಷನ್ ಆದ್ದರಿಂದ ಹೈಪ್ ಜೋರಾಗಿದೆ. ಚಿತ್ರದ ಕಥೆಯ ಮೇಲೆ ‘45’ ತಂಡಕ್ಕೆ ಸಖತ್ ಭರವಸೆ ಇದೆ. ಅದಕ್ಕೆ ತಕ್ಕಂತೆಯೇ ಬಜೆಟ್ ಸುರಿಯಲಾಗಿದೆ.

‘ನಿರ್ಮಾಪಕ ರಮೇಶ್ ಅವರು ಸಂಪೂರ್ಣ ಸಹಕಾರ ನೀಡಿದ್ದಾರೆ. ಯಾವುದೇ ರಾಜಿ ಇಲ್ಲದೇ ಸಿನಿಮಾ ಮಾಡಿದ್ದೇವೆ. ಹೆಚ್ಚು ಸಮಯ ನೀಡಿ ಸಿಜಿ ಕೆಲಸ ಮಾಡಲಾಗಿದೆ’ ಎಂದು ಅರ್ಜುನ್ ಜನ್ಯ ಅವರು ಹೇಳಿದ್ದಾರೆ. ಇಡೀ ಸಿನಿಮಾದಲ್ಲಿ ಶೇಕಡ 45 ಭಾಗ ಗ್ರಾಫಿಕ್ಸ್ ಇರಲಿದೆ. ಈ ಎಲ್ಲ ಕಾರಣಗಳಿಂದಾಗಿ ‘45’ ಸಿನಿಮಾ ಮೇಲೆ ಅಭಿಮಾನಿಗಳಿಗೆ ನಿರೀಕ್ಷೆ ಜಾಸ್ತಿ ಇದೆ.

‘45’ ಸಿನಿಮಾಗೆ ಒಟ್ಟು ಎಷ್ಟು ಖರ್ಚಾಗಿದೆ ಎಂಬುದನ್ನು ಚಿತ್ರತಂಡದವರು ಅಧಿಕೃತವಾಗಿ ಹೇಳಿಲ್ಲ. ಆದರೆ ಅಂದಾಜು 100 ಕೋಟಿ ರೂಪಾಯಿ ಎನ್ನುತ್ತಿವೆ ಮೂಲಗಳು. ಈ ಮೊದಲು ಬಜೆಟ್ ಬಗ್ಗೆ ರಮೇಶ್ ರೆಡ್ಡಿ ಅವರಿಗೆ ಪ್ರಶ್ನೆ ಎದುರಾಗಿತ್ತು. ‘ಸಿನಿಮಾಗೆ ನಾವು ಎಷ್ಟು ಬಜೆಟ್ ಹಾಕಿದ್ದೇವೆ ಎಂಬುದನ್ನು ನೀವೇ ಸಿನಿಮಾ ನೋಡಿ ಹೇಳಬೇಕು. ಕಥೆಗೆ ಎಷ್ಟು ಬೇಕೋ ಅಷ್ಟು ಖರ್ಚಾಗಿದೆ. ಇದರಲ್ಲಿ ಯೂನಿವರ್ಸಲ್ ಸಬ್ಜೆಕ್ಟ್ ಇದೆ’ ಎಂದು ಈ ಮೊದಲು ನಡೆದ ಸುದ್ದಿಗೋಷ್ಟಿಯಲ್ಲಿ ನಿರ್ಮಾಪಕ ರಮೇಶ್ ರೆಡ್ಡಿ ಅವರು ಹೇಳಿದ್ದರು.

ಇದನ್ನೂ ಓದಿ: ಹೂವಿನ ಬಾಣದಂತೆ: ನಿತ್ಯಶ್ರೀ ರೀತಿಯೇ ವೇದಿಕೆಯಲ್ಲಿ ಹಾಡಿದ ಅರ್ಜುನ್ ಜನ್ಯ

ಈ ಸಿನಿಮಾಗೆ ಅರ್ಜುನ್ ಜನ್ಯ ಅವರು ನಿರ್ದೇಶನ ಮಾಡುವುದರ ಜೊತೆಗೆ ಸಂಗೀತ ಸಂಯೋಜಿಸಿದ್ದಾರೆ. ಸತ್ಯ ಹೆಗಡೆ ಛಾಯಾಗ್ರಹಣ ಮಾಡಿದ್ದಾರೆ. ಉಪೇಂದ್ರ ಮತ್ತು ಶಿವಣ್ಣ ಅವರದ್ದು ಹಿಟ್ ಕಾಂಬಿನೇಷನ್. ಅವರ ಜೊತೆಗೆ ‘45’ ಸಿನಿಮಾದಲ್ಲಿ ರಾಜ್ ಬಿ. ಶೆಟ್ಟಿ ಕೂಡ ಸೇರ್ಪಡೆ ಆಗಿದ್ದರಿಂದ ಅಭಿಮಾನಿಗಳು ಈ ಸಿನಿಮಾವನ್ನು ನೋಡಲು ಕಾತರದಿಂದ ಕಾಯುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ