AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಭೈರತಿ ರಣಗಲ್​’ ಗುಣಗಾನ ಮಾಡುವ ಟೈಟಲ್​ ಸಾಂಗ್​ ರಿಲೀಸ್​; ಶಿವಣ್ಣ ಫ್ಯಾನ್ಸ್​ ಖುಷ್​

ಬಹುನಿರೀಕ್ಷಿತ ‘ಭೈರತಿ ರಣಗಲ್​’ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ಶಿವರಾಜ್​ಕುಮಾರ್​ ಹಾಗೂ ನರ್ತನ್​ ಅವರ ಕಾಂಬಿನೇಷನ್​ನಲ್ಲಿ ಮೂಡಿಬರುತ್ತಿರುವ ಈ ಸಿನಿಮಾದ ಶೀರ್ಷಿಕೆ ಗೀತೆ ಈಗ ಬಿಡುಗಡೆ ಮಾಡಲಾಗಿದೆ. ರವಿ ಬಸ್ರೂರು ಅವರು ಈ ಸಿನಿಮಾಗೆ ಸಂಗೀತ ನೀಡಿದ್ದಾರೆ. ಟೈಟಲ್​ ಟ್ರ್ಯಾಕ್​ ನೋಡಿದ ಬಳಿಕ ಅಭಿಮಾನಿಗಳಿಗೆ ಸಿನಿಮಾ ಮೇಲಿನ ನಿರೀಕ್ಷೆ ಹೆಚ್ಚಾಗಿದೆ.

‘ಭೈರತಿ ರಣಗಲ್​’ ಗುಣಗಾನ ಮಾಡುವ ಟೈಟಲ್​ ಸಾಂಗ್​ ರಿಲೀಸ್​; ಶಿವಣ್ಣ ಫ್ಯಾನ್ಸ್​ ಖುಷ್​
ಶಿವರಾಜ್​ಕುಮಾರ್​
ಮದನ್​ ಕುಮಾರ್​
|

Updated on: Aug 10, 2024 | 7:37 PM

Share

‘ಹ್ಯಾಟ್ರಿಕ್​ ಹೀರೋ’ ಶಿವರಾಜ್​ಕುಮಾರ್ ನಟಿಸುತ್ತಿರುವ ಸಿನಿಮಾಗಳಲ್ಲಿ ‘ಭೈರತಿ ರಣಗಲ್​’ ಸಿನಿಮಾ ಬಹಳ ನಿರೀಕ್ಷೆ ಮೂಡಿಸಿದೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಈ ಸಿನಿಮಾ ಇದೇ ತಿಂಗಳು ಬಿಡುಗಡೆ ಆಗಬೇಕಿತ್ತು. ಆದರೆ ಕೆಲಸಗಳು ಇನ್ನೂ ಬಾಕಿ ಇದ್ದ ಕಾರಣದಿಂದ ಬಿಡುಗಡೆ ದಿನಾಂಕವನ್ನು ಸೆಪ್ಟೆಂಬರ್​ಗೆ ಮುಂದೂಡಲಾಯಿತು. ಈಗ ಸಿನಿಮಾದ ಪ್ರಚಾರ ಕಾರ್ಯ ಆರಂಭಿಸಲಾಗಿದೆ. ನಿರ್ದೇಶಕ ನರ್ತನ್​ ಅವರು ಈ ಚಿತ್ರಕ್ಕೆ ಆ್ಯಕ್ಷನ್​-ಕಟ್​ ಹೇಳಿದ್ದಾರೆ. ಇಂದು (ಆಗಸ್ಟ್​ 10) ‘ಭೈರತಿ ರಣಗಲ್​’ ಸಿನಿಮಾದ ಟೈಟಲ್​ ಸಾಂಗ್​ ಬಿಡುಗಡೆ ಮಾಡಲಾಗಿದೆ. ಇದರಲ್ಲಿ ಕಥಾನಾಯಕನ ಗುಣಗಾನ ಮಾಡಲಾಗಿದೆ.

‘ಮಫ್ತಿ’ ಸಿನಿಮಾದಲ್ಲಿ ಶಿವರಾಜ್​ಕುಮಾರ್​ ಮತ್ತು ನರ್ತನ್​ ಅವರು ಜೊತೆಯಾಗಿ ಕೆಲಸ ಮಾಡಿದ್ದರು. ಅವರ ಕಾಂಬಿನೇಷನ್​ ಜನರಿಗೆ ಇಷ್ಟ ಆಯಿತು. ಆ ಸಿನಿಮಾದಲ್ಲಿ ಇದ್ದ ಭೈರತಿ ರಣಗಲ್​ ಪಾತ್ರ ಸಖತ್​ ಹೈಲೈಟ್​ ಆಯಿತು. ಈಗ ಅದೇ ಪಾತ್ರದ ಮೇಲೆ ‘ಭೈರತಿ ರಣಗಲ್​’ ಸಿನಿಮಾ ಮೂಡಿಬರುತ್ತಿದೆ. ಈ ಸಿನಿಮಾಗೆ ರವಿ ಬಸ್ರೂರು ಸಂಗೀತ ನಿರ್ದೇಶನ ಮಾಡಿದ್ದು, ಶೀರ್ಷಿಕೆ ಗೀತೆ ಮೂಲಕ ಅವರು ನಿರೀಕ್ಷೆ ಹೆಚ್ಚಿಸಿದ್ದಾರೆ.

ಆನಂದ್​ ಆಡಿಯೋ ಮೂಲಕ ‘ಭೈರತಿ ರಣಗಲ್​’ ಟೈಟಲ್​ ಸಾಂಗ್ ರಿಲೀಸ್​ ಮಾಡಲಾಗಿದೆ. ಕಿನ್ನಳರಾಜ್​ ಅವರು ಈ ಹಾಡಿಗೆ ಸಾಹಿತ್ಯ ಬರೆಸಿದ್ದಾರೆ. ಭೈರತಿ ರಣಗಲ್​ ವ್ಯಕ್ತಿತ್ವ ಎಂಥದ್ದು ಎಂಬುದನ್ನು ತಿಳಿಸುವಂತಹ ಸಾಲುಗಳನ್ನು ಅವರು ಬರೆದಿದ್ದಾರೆ. ಸಂತೋಷ್​ ವೆಂಕಿ ಅವರ ಧ್ವನಿಯಲ್ಲಿ ಈ ಹಾಡು ಮೂಡಿಬಂದಿದೆ. ಲಿರಿಕಲ್​ ವಿಡಿಯೋ ನೋಡಿ ಶಿವರಾಜ್​ಕುಮಾರ್​ ಅಭಿಮಾನಿಗಳು ಪಾಸಿಟಿವ್​ ಆಗಿ ಕಮೆಂಟ್​ ಮಾಡುತ್ತಿದ್ದಾರೆ.

‘ಗೀತಾ ಪಿಕ್ಚರ್ಸ್​’ ಮೂಲಕ ಗೀತಾ ಶಿವರಾಜ್​ಕುಮಾರ್​ ಅವರು ‘ಭೈರತಿ ರಣಗಲ್​’ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಶಿವರಾಜ್​ಕುಮಾರ್​ ಜೊತೆ ನಟಿ ರುಕ್ಮಿಣಿ ವಸಂತ್​ ಅವರಿಗೆ ಪ್ರಮುಖ ಪಾತ್ರವಿದೆ. ‘ಮಫ್ತಿ’ ನೋಡಿ ಇಷ್ಟಪಟ್ಟಿದ್ದ ಪ್ರೇಕ್ಷಕರೆಲ್ಲ ಈಗ ‘ಭೈರತಿ ರಣಗಲ್​’ ನೋಡಲು ಕಾದಿದ್ದಾರೆ.

ಇದನ್ನೂ ಓದಿ: ಶಿವರಾಜ್ ಕುಮಾರ್ ಸಿನಿಮಾದ ಕ್ಯಾರೆಕ್ಟರ್ ಟೀಸರ್ ಬಿಡುಗಡೆ ಮಾಡಿದ ರಿಷಬ್ ಶೆಟ್ಟಿ

ಶಿವರಾಜ್​ಕುಮಾರ್​ ಅವರ ಲುಕ್​ ಗಮನ ಸೆಳೆಯುತ್ತಿದೆ. ಸೆಪ್ಟೆಂಬರ್​ನಲ್ಲಿ ಈ ಸಿನಿಮಾ ರಿಲೀಸ್​ ಆಗಲಿದೆ. ಈಗಾಗಲೇ ಫಸ್ಟ್​ ವರ್ಡಿಕ್ಟ್​ ಟೀಸರ್ ನೋಡಿ ಫ್ಯಾನ್ಸ್​ ಫಿದಾ ಆಗಿದ್ದಾರೆ. ಅದ್ದೂರಿಯಾಗಿ ಈ ಸಿನಿಮಾ ನಿರ್ಮಾಣ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!