‘ಹ್ಯಾಟ್ರಿಕ್ ಹೀರೋ’ ಶಿವರಾಜ್ಕುಮಾರ್ ನಟಿಸುತ್ತಿರುವ ಸಿನಿಮಾಗಳಲ್ಲಿ ‘ಭೈರತಿ ರಣಗಲ್’ ಸಿನಿಮಾ ಬಹಳ ನಿರೀಕ್ಷೆ ಮೂಡಿಸಿದೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಈ ಸಿನಿಮಾ ಇದೇ ತಿಂಗಳು ಬಿಡುಗಡೆ ಆಗಬೇಕಿತ್ತು. ಆದರೆ ಕೆಲಸಗಳು ಇನ್ನೂ ಬಾಕಿ ಇದ್ದ ಕಾರಣದಿಂದ ಬಿಡುಗಡೆ ದಿನಾಂಕವನ್ನು ಸೆಪ್ಟೆಂಬರ್ಗೆ ಮುಂದೂಡಲಾಯಿತು. ಈಗ ಸಿನಿಮಾದ ಪ್ರಚಾರ ಕಾರ್ಯ ಆರಂಭಿಸಲಾಗಿದೆ. ನಿರ್ದೇಶಕ ನರ್ತನ್ ಅವರು ಈ ಚಿತ್ರಕ್ಕೆ ಆ್ಯಕ್ಷನ್-ಕಟ್ ಹೇಳಿದ್ದಾರೆ. ಇಂದು (ಆಗಸ್ಟ್ 10) ‘ಭೈರತಿ ರಣಗಲ್’ ಸಿನಿಮಾದ ಟೈಟಲ್ ಸಾಂಗ್ ಬಿಡುಗಡೆ ಮಾಡಲಾಗಿದೆ. ಇದರಲ್ಲಿ ಕಥಾನಾಯಕನ ಗುಣಗಾನ ಮಾಡಲಾಗಿದೆ.
‘ಮಫ್ತಿ’ ಸಿನಿಮಾದಲ್ಲಿ ಶಿವರಾಜ್ಕುಮಾರ್ ಮತ್ತು ನರ್ತನ್ ಅವರು ಜೊತೆಯಾಗಿ ಕೆಲಸ ಮಾಡಿದ್ದರು. ಅವರ ಕಾಂಬಿನೇಷನ್ ಜನರಿಗೆ ಇಷ್ಟ ಆಯಿತು. ಆ ಸಿನಿಮಾದಲ್ಲಿ ಇದ್ದ ಭೈರತಿ ರಣಗಲ್ ಪಾತ್ರ ಸಖತ್ ಹೈಲೈಟ್ ಆಯಿತು. ಈಗ ಅದೇ ಪಾತ್ರದ ಮೇಲೆ ‘ಭೈರತಿ ರಣಗಲ್’ ಸಿನಿಮಾ ಮೂಡಿಬರುತ್ತಿದೆ. ಈ ಸಿನಿಮಾಗೆ ರವಿ ಬಸ್ರೂರು ಸಂಗೀತ ನಿರ್ದೇಶನ ಮಾಡಿದ್ದು, ಶೀರ್ಷಿಕೆ ಗೀತೆ ಮೂಲಕ ಅವರು ನಿರೀಕ್ಷೆ ಹೆಚ್ಚಿಸಿದ್ದಾರೆ.
#BhairathiRanagal Title Track OUT NOW on @aanandaaudiohttps://t.co/qV8EpTXJmQ
#Narthan @GeethaPictures @rukminitweets @RahulBose1 @actorshabeer @RaviBasrur #NaveenKumarI @Dhilipaction @The_BigLittle #GeethaPictures #RanagalInSeptember #RanagalFirstSingle pic.twitter.com/iksECLmm4O
— DrShivaRajkumar (@NimmaShivanna) August 10, 2024
ಆನಂದ್ ಆಡಿಯೋ ಮೂಲಕ ‘ಭೈರತಿ ರಣಗಲ್’ ಟೈಟಲ್ ಸಾಂಗ್ ರಿಲೀಸ್ ಮಾಡಲಾಗಿದೆ. ಕಿನ್ನಳರಾಜ್ ಅವರು ಈ ಹಾಡಿಗೆ ಸಾಹಿತ್ಯ ಬರೆಸಿದ್ದಾರೆ. ಭೈರತಿ ರಣಗಲ್ ವ್ಯಕ್ತಿತ್ವ ಎಂಥದ್ದು ಎಂಬುದನ್ನು ತಿಳಿಸುವಂತಹ ಸಾಲುಗಳನ್ನು ಅವರು ಬರೆದಿದ್ದಾರೆ. ಸಂತೋಷ್ ವೆಂಕಿ ಅವರ ಧ್ವನಿಯಲ್ಲಿ ಈ ಹಾಡು ಮೂಡಿಬಂದಿದೆ. ಲಿರಿಕಲ್ ವಿಡಿಯೋ ನೋಡಿ ಶಿವರಾಜ್ಕುಮಾರ್ ಅಭಿಮಾನಿಗಳು ಪಾಸಿಟಿವ್ ಆಗಿ ಕಮೆಂಟ್ ಮಾಡುತ್ತಿದ್ದಾರೆ.
‘ಗೀತಾ ಪಿಕ್ಚರ್ಸ್’ ಮೂಲಕ ಗೀತಾ ಶಿವರಾಜ್ಕುಮಾರ್ ಅವರು ‘ಭೈರತಿ ರಣಗಲ್’ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಶಿವರಾಜ್ಕುಮಾರ್ ಜೊತೆ ನಟಿ ರುಕ್ಮಿಣಿ ವಸಂತ್ ಅವರಿಗೆ ಪ್ರಮುಖ ಪಾತ್ರವಿದೆ. ‘ಮಫ್ತಿ’ ನೋಡಿ ಇಷ್ಟಪಟ್ಟಿದ್ದ ಪ್ರೇಕ್ಷಕರೆಲ್ಲ ಈಗ ‘ಭೈರತಿ ರಣಗಲ್’ ನೋಡಲು ಕಾದಿದ್ದಾರೆ.
ಇದನ್ನೂ ಓದಿ: ಶಿವರಾಜ್ ಕುಮಾರ್ ಸಿನಿಮಾದ ಕ್ಯಾರೆಕ್ಟರ್ ಟೀಸರ್ ಬಿಡುಗಡೆ ಮಾಡಿದ ರಿಷಬ್ ಶೆಟ್ಟಿ
ಶಿವರಾಜ್ಕುಮಾರ್ ಅವರ ಲುಕ್ ಗಮನ ಸೆಳೆಯುತ್ತಿದೆ. ಸೆಪ್ಟೆಂಬರ್ನಲ್ಲಿ ಈ ಸಿನಿಮಾ ರಿಲೀಸ್ ಆಗಲಿದೆ. ಈಗಾಗಲೇ ಫಸ್ಟ್ ವರ್ಡಿಕ್ಟ್ ಟೀಸರ್ ನೋಡಿ ಫ್ಯಾನ್ಸ್ ಫಿದಾ ಆಗಿದ್ದಾರೆ. ಅದ್ದೂರಿಯಾಗಿ ಈ ಸಿನಿಮಾ ನಿರ್ಮಾಣ ಆಗಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.