AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bhajarangi 2: ರಿಲೀಸ್​ ದಿನಾಂಕ​ ಘೋಷಣೆ ಮಾಡಿ ಟ್ವಿಟರ್​ನಲ್ಲಿ ಟ್ರೆಂಡ್​ ಆದ ‘ಭಜರಂಗಿ 2’; ಇದು ಶಿವಣ್ಣನ ಹವಾ

Bhajarangi 2 Release Date: ‘ಭಜರಂಗಿ 2’ ಸಿನಿಮಾ ಅ.29ರಂದು ಬಿಡುಗಡೆ ಆಗಲಿದೆ ಎಂಬ ಸುದ್ದಿ ಹೊರಬೀಳುತ್ತಿದ್ದಂತೆಯೇ ಅಭಿಮಾನಿಗಳು ಅದನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸುತ್ತಿದ್ದಾರೆ. ಪರಿಣಾಮವಾಗಿ ಟ್ವಿಟರ್​ನಲ್ಲಿ ‘ಭಜರಂಗಿ 2’ ಟ್ರೆಂಡ್​ ಆಗುತ್ತಿದೆ.

Bhajarangi 2: ರಿಲೀಸ್​ ದಿನಾಂಕ​ ಘೋಷಣೆ ಮಾಡಿ ಟ್ವಿಟರ್​ನಲ್ಲಿ ಟ್ರೆಂಡ್​ ಆದ ‘ಭಜರಂಗಿ 2’; ಇದು ಶಿವಣ್ಣನ ಹವಾ
‘ಭಜರಂಗಿ 2’ ಚಿತ್ರದ ರಿಲೀಸ್​ ದಿನಾಂಕ ಘೋಷಣೆ
TV9 Web
| Updated By: ಮದನ್​ ಕುಮಾರ್​|

Updated on: Sep 26, 2021 | 2:04 PM

Share

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಗಣೇಶ ಚತುರ್ಥಿಗೆ ‘ಭಜರಂಗಿ 2’ ಸಿನಿಮಾ ಬಿಡುಗಡೆ ಆಗಬೇಕಿತ್ತು. ಆದರೆ ಚಿತ್ರಮಂದಿರದಲ್ಲಿ ಶೇ.50ರಷ್ಟು ಆಸನ ಭರ್ತಿಗೆ ಮಾತ್ರ ಅವಕಾಶ ಇದ್ದಿದ್ದರಿಂದ ಬಿಡುಗಡೆ ದಿನಾಂಕ ಮುಂದೂಡಲಾಗಿತ್ತು. ಶಿವರಾಜ್​ಕುಮಾರ್​ ನಟನೆಯ ಈ ಬಹುನಿರೀಕ್ಷಿತ ಚಿತ್ರದ ಹೊಸ ರಿಲೀಸ್​ ಡೇಟ್​ ತಿಳಿದುಕೊಳ್ಳಲು ಅಭಿಮಾನಿಗಳು ತುದಿಗಾಲಿನಲ್ಲಿ ನಿಂತು ಕಾಯುತ್ತಿದ್ದರು. ಅಂಥ ಅಪ್ಪಟ ಅಭಿಮಾನಿಗಳಿಗೆಲ್ಲ ಇಂದು (ಸೆ.26) ‘ಭಜರಂಗಿ 2’ ತಂಡ ಗುಡ್​ ನ್ಯೂಸ್​ ನೀಡಿದೆ. ಚಿತ್ರತಂಡ ರಿಲೀಸ್​ ಡೇಟ್​ ಅನೌನ್ಸ್​ ಮಾಡಿದೆ. ಅಲ್ಲದೆ, ಟ್ವಿಟರ್​ನಲ್ಲೂ ಟ್ರೆಂಡ್​ ಆಗುತ್ತಿದೆ. ಈ ಚಿತ್ರ ಅ.29ರಂದು ಬಿಡುಗಡೆ ಆಗಲಿದೆ.

ನಿರ್ದೇಶಕ ಎ. ಹರ್ಷ ಮತ್ತು ಶಿವರಾಜ್​ಕುಮಾರ್​ ಅವರ ಕಾಂಬಿನೇಷನ್​ನಲ್ಲಿ ಮೂಡಿಬರುತ್ತಿರುವ ಮೂರನೇ ಸಿನಿಮಾ ಇದಾಗಿದ್ದು, ನಿರೀಕ್ಷೆ ದೊಡ್ಡ ಮಟ್ಟದಲ್ಲಿದೆ. ಈ ಹಿಂದೆ ತೆರೆಕಂಡಿದ್ದ ‘ಭಜರಂಗಿ’ ಚಿತ್ರ ಸೂಪರ್​ ಹಿಟ್​ ಆಗಿತ್ತು. ಹಾಗಾಗಿ ‘ಭಜರಂಗಿ 2’ ಈಗ ಸಖತ್​ ಹೈಪ್​ ಸೃಷ್ಟಿ ಮಾಡಿದೆ. ಈ ಬಾರಿ ಎ. ಹರ್ಷ ಯಾವ ರೀತಿ ಮೋಡಿ ಮಾಡಿದ್ದಾರೆ ಎಂಬುದನ್ನು ಚಿತ್ರಮಂದಿರದಲ್ಲಿ ನೋಡಿ ತಿಳಿದುಕೊಳ್ಳಲು ಪ್ರೇಕ್ಷಕರು ಕಾಯುತ್ತಿದ್ದಾರೆ.

‘ಭಜರಂಗಿ 2’ ಸಿನಿಮಾ ಅ.29ರಂದು ಬಿಡುಗಡೆ ಆಗಲಿದೆ ಎಂಬ ಸುದ್ದಿ ಹೊರಬೀಳುತ್ತಿದ್ದಂತೆಯೇ ಅಭಿಮಾನಿಗಳು ಅದನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸುತ್ತಿದ್ದಾರೆ. ಪರಿಣಾಮವಾಗಿ ಟ್ವಿಟರ್​ನಲ್ಲಿ ‘ಭಜರಂಗಿ 2’ ಟ್ರೆಂಡ್​ ಆಗುತ್ತಿದೆ. ಈ ಸಿನಿಮಾದಲ್ಲಿ ಭಾವನಾ ಮೆನನ್​ ಅವರು ಶಿವರಾಜ್​ಕುಮಾರ್​ಗೆ ಜೋಡಿಯಾಗಿ ನಟಿಸಿದ್ದಾರೆ. ಮಂಜು ಪಾವಗಡ, ಹಿರಿಯ ನಟಿ ಶ್ರುತಿ, ಭಜರಂಗಿ ಲೋಕಿ, ಶಿವರಾಜ್​ ಕೆ.ಆರ್​. ಪೇಟೆ ಮುಂತಾದವರು ನಟಿಸಿದ್ದಾರೆ. ಈಗಾಗಲೇ ಬಿಡುಗಡೆ ಆಗಿರುವ ಟೀಸರ್​ ಮತ್ತು ಪೋಸ್ಟರ್​ಗಳು ಅಭಿಮಾನಿಗಳನ್ನು ಹುಚ್ಚೆಬ್ಬಿಸಿವೆ.

ಜಯಣ್ಣ ಕಂಬೈನ್ಸ್​ ಬ್ಯಾನರ್​ನಲ್ಲಿ ‘ಭಜರಂಗಿ 2’ ನಿರ್ಮಾಣ ಆಗಿದೆ. ಅ.1ರಿಂದ ಚಿತ್ರಮಂದಿರಗಳಲ್ಲಿ ಹೌಸ್​ಫುಲ್​ ಪ್ರದರ್ಶನಕ್ಕೆ ಸರ್ಕಾರ ಅನುಮತಿ ನೀಡಿದೆ. ಈ ಹಿನ್ನೆಲೆಯಲ್ಲಿ ಬಹುನಿರೀಕ್ಷಿತ ಸ್ಟಾರ್​ ಸಿನಿಮಾಗಳೆಲ್ಲ ಸಾಲು ಸಾಲಾಗಿ ಬಿಡುಗಡೆ ಆಗಲಿವೆ. ‘ಭಜರಂಗಿ 2’ ಮಾತ್ರವಲ್ಲದೇ, ದುನಿಯಾ ವಿಜಯ್​ ನಟನೆಯ ‘ಸಲಗ’, ಕಿಚ್ಚ ಸುದೀಪ್​ ಅಭಿನಯದ ‘ಕೋಟಿಗೊಬ್ಬ 3’ ಚಿತ್ರಗಳು ಕೂಡ ಅಕ್ಟೋಬರ್​ನಲ್ಲೇ ತೆರೆಕಾಣಲಿವೆ.

ಇದನ್ನೂ ಓದಿ:

ಶಿವರಾಜ್​ಕುಮಾರ್​ 124ನೇ ಚಿತ್ರಕ್ಕೆ ಅಪ್ಪಟ ಕನ್ನಡ ಶೀರ್ಷಿಕೆ ‘ನೀ ಸಿಗೋವರೆಗೂ’; ಮುಹೂರ್ತಕ್ಕೆ ಕಿಚ್ಚ ಅತಿಥಿ

ಯುವ ನಟನಿಗೆ ಮಚ್ಚು ಹಿಡಿಯುವ ಪಾಠ ಮಾಡಿದ ಶಿವರಾಜ್​ಕುಮಾರ್​

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!