AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shivarajkumar: ಶಿವರಾಜ್​ಕುಮಾರ್ ಈಗ ‘ಮಾಲೀಕ’; ಹೇಗಿದೆ ನೋಡಿ ‘ಉತ್ತರಕಾಂಡ’ ಲುಕ್

Uttarakaanda Movie: ನಿರ್ಮಾಪಕರಾದ ಕಾರ್ತಿಕ್​ ಗೌಡ, ಯೋಗಿ ಜಿ. ರಾಜ್​ ಹಾಗೂ ನಟ ಡಾಲಿ ಧನಂಜಯ್ ಅವರು ‘ರತ್ನನ್ ಪ್ರಪಂಚ’ ಹಾಗೂ ‘ಗುರುದೇವ ಹೊಯ್ಸಳ’ ಸಿನಿಮಾದಲ್ಲಿ ಒಟ್ಟಾಗಿ ಕೆಲಸ ಮಾಡಿದ್ದರು. ಈಗ ಇವರ ಕಾಂಬಿನೇಷನ್​ನಲ್ಲಿ ‘ಉತ್ತರಕಾಂಡ’ ಸಿನಿಮಾ ಮೂಡಿಬರುತ್ತಿದೆ. ಈ ಸಿನಿಮಾದಲ್ಲಿ ಶಿವಣ್ಣ ಕೂಡ ನಟಿಸುತ್ತಿದ್ದಾರೆ. ಅವರ ಲುಕ್ ರಿವೀಲ್ ಆಗಿದೆ.

Shivarajkumar: ಶಿವರಾಜ್​ಕುಮಾರ್ ಈಗ ‘ಮಾಲೀಕ’; ಹೇಗಿದೆ ನೋಡಿ ‘ಉತ್ತರಕಾಂಡ’ ಲುಕ್
ಶಿವರಾಜ್​ಕುಮಾರ್
ರಾಜೇಶ್ ದುಗ್ಗುಮನೆ
|

Updated on: Jul 11, 2024 | 12:04 PM

Share

ಶಿವರಾಜ್​ಕುಮಾರ್ ಸಿನಿಮಾ ರಂಗದಲ್ಲಿ ಹಲವು ವರ್ಷಗಳಿಂದ ಆ್ಯಕ್ಟೀವ್ ಆಗಿದ್ದಾರೆ. ಹಲವು ಸೂಪರ್ ಹಿಟ್ ಚಿತ್ರಗಳನ್ನು ಅವರು ನೀಡಿದ್ದಾರೆ. ಅವರು ವೈಲೆಂಟ್ ಲುಕ್​ನಲ್ಲಿ ಕಾಣಿಸಿಕೊಂಡರೆ ಸಿನಿಮಾ ಹಿಟ್ ಆಗುತ್ತದೆ ಎನ್ನುವ ನಂಬಿಕೆ ಅನೇಕರಲ್ಲಿ ಇದೆ. ಇದು ಸತ್ಯ ಕೂಡ. ಈಗ ಅವರ ನಟನೆಯ ‘ಉತ್ತರಕಾಂಡ’ ಸಿನಿಮಾದ ಲುಕ್ ರಿವೀಲ್ ಆಗಿದೆ. ಈ ಲುಕ್ ಸಖತ್ ರಗಡ್ ಆಗಿದೆ. ಅವರ ಬರ್ತ್​ಡೇಗೆ ಸಿಕ್ಕಿರುವ ಬೆಸ್ಟ್​ ಗಿಫ್ಟ್ ಎಂದು ಫ್ಯಾನ್ಸ್ ಹೇಳುತ್ತಿದ್ದಾರೆ.

ಶಿವರಾಜ್​ಕುಮಾರ್ ಅವರು ‘ಉತ್ತರಕಾಂಡ’ ಚಿತ್ರದಲ್ಲಿ ‘ಮಾಲಿಕ್’ ಹೆಸರಿನ ಪಾತ್ರ ಮಾಡುತ್ತಿದ್ದಾರೆ. ಅವರ ಮುಖದ ಒಂದು ಭಾಗಕ್ಕೆ ರಕ್ತ ಬಡಿದಿದೆ. ಶರ್ಟ್​ಗಳ ಮೇಲೂ ರಕ್ತದ ಕಲೆಗಳು ಇವೆ. ಮೈಮೇಲೆ ಬುಲೆಟ್​ಗಳ ಸರಮಾಲೆ ಇದೆ. ಕೈಯಲ್ಲಿ ಅವರು ಸಿಗಾರ್ ಹಿಡಿದುಕೊಂಡಿದ್ದಾರೆ. ಅವರ ಪಕ್ಕದಲ್ಲೇ ಬಾಂಗ್​ಗಳ ಬಾಕ್ಸ್ ಇದೆ. ಅವರ ಲುಕ್ ಫ್ಯಾನ್ಸ್​ಗೆ ಸಖತ್ ಇಷ್ಟ ಆಗಿದೆ.

ಶಿವರಾಜ್​ಕುಮಾರ್ ಅವರಿಗೆ ಜುಲೈ 12ರಂದು ಜನ್ಮದಿನ. ಈ ವಿಶೇಷ ದಿನ ಸಮೀಪಿಸಿರುವುದರಿಂದ ಅವರ ಸಿನಿಮಾಗಳ ತಂಡದಿಂದ ಹೊಸ ಹೊಸ ಲುಕ್​ಗಳು ರಿವೀಲ್ ಆಗುತ್ತಿವೆ. ‘ಉತ್ತರಕಾಂಡ’ ಲುಕ್ ಎಲ್ಲರಿಗೂ ಇಷ್ಟ ಆಗಿದೆ. ಈ ಚಿತ್ರಕ್ಕಾಗಿ ಫ್ಯಾನ್ಸ್ ಕಾದಿದ್ದಾರೆ.

‘ಉತ್ತರಕಾಂಡ’ ಆ್ಯಕ್ಷನ್‌ ಡ್ರಾಮಾ ಶೈಲಿಯಲ್ಲಿ ಮೂಡಿ ಬರುತ್ತಿದೆ. ರೋಹಿತ್‌ ಪದಕಿ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಅಮಿತ್‌ ತ್ರಿವೇದಿ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ, ಅಧ್ವೈತ ಗುರುಮೂರ್ತಿ ಛಾಯಾಗ್ರಹಣ ಚಿತ್ರಕ್ಕೆ ಇದೆ. ವಿಶ್ವಾಸ್‌ ಕಶ್ಯಪ್‌ ಪ್ರೊಡಕ್ಷನ್‌ ವಿನ್ಯಾಸ ಮಾಡಿದ್ದು, ಅನಿಲ್ ಅನಿರುದ್ಧ್ ಮುಖ್ಯ ಸಂಕಲನಕಾರರಾಗಿರುತ್ತಾರೆ. ಕೆಆರ್​ಜಿ ಸ್ಟೂಡಿಯೋಸ್‌ ಬ್ಯಾನರ್‌ ಅಡಿಯಲ್ಲಿ ಕಾರ್ತಿಕ್‌ ಗೌಡ ಮತ್ತು ಯೋಗಿ ಜಿ ರಾಜ್‌ ಚಿತ್ರವನ್ನು ನಿರ್ಮಿಸಿದ್ದಾರೆ.

ಇದನ್ನೂ ಓದಿ: ಎಲ್ಲೆಲ್ಲೂ ಶಿವಣ್ಣ; ‘ಉತ್ತರಕಾಂಡ’ ಸೆಟ್​ನಲ್ಲಿ ಶಿವರಾಜ್​ಕುಮಾರ್​ಗೆ ಅದ್ದೂರಿ ಸ್ವಾಗತ

ಈ ಸಿನಿಮಾದಲ್ಲಿ ದೊಡ್ಡ ಪಾತ್ರವರ್ಗ ಇದೆ. ಶಿವರಾಜ್​ಕುಮಾರ್, ಡಾಲಿ ಧನಂಜಯ, ಭಾವನಾ ಮೆನನ್‌, ಐಶ್ವರ್ಯ ರಾಜೇಶ್‌, ದಿಗಂತ್‌ ಮುಂತಾದವರು ಚಿತ್ರದಲ್ಲಿ ಬಣ್ಣ ಹಚ್ಚಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ