AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವರಾಜ್​ಕುಮಾರ್​ ಕಂಠದಲ್ಲಿ ಮೂಡಿ ಬಂದ ‘ಕನ್ನಡಿಗ’ ಹಾಡು; ರವಿಚಂದ್ರನ್​ ಸಿನಿಮಾಗೆ ಶಿವಣ್ಣನ ಬೆಂಬಲ

ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರ್​ ಅವರು ಈ ಹಾಡಿಗೆ ಸಂಗೀತ ಸಂಯೋಜನೆ ಮಾಡಿದ್ದಾರೆ. ‘ಕೆಜಿಎಫ್​’ನಂತಹ ಹಿಟ್​ ಚಿತ್ರಗಳಿಗೆ ಸಂಗೀತ ಸಂಯೋಜನೆ ಮಾಡಿದ ಖ್ಯಾತಿ ಅವರಿಗೆ ಇದೆ. ‘

ಶಿವರಾಜ್​ಕುಮಾರ್​ ಕಂಠದಲ್ಲಿ ಮೂಡಿ ಬಂದ ‘ಕನ್ನಡಿಗ’ ಹಾಡು; ರವಿಚಂದ್ರನ್​ ಸಿನಿಮಾಗೆ ಶಿವಣ್ಣನ ಬೆಂಬಲ
ಶಿವರಾಜ್​ಕುಮಾರ್​-ರವಿಚಂದ್ರನ್
TV9 Web
| Edited By: |

Updated on:Nov 23, 2021 | 5:49 PM

Share

ನಟ ಶಿವರಾಜ್​ಕುಮಾರ್​ ಅವರು ನಟನೆಯ ಜತೆಗೆ ಕೆಲ ಹಾಡುಗಳನ್ನು ಕೂಡ ಹಾಡಿದ್ದಾರೆ. ಅವರ ಕಂಠ ಅನೇಕರಿಗೆ ಇಷ್ಟವಾಗುತ್ತದೆ. ಶಿವಣ್ಣ ಸಾಕಷ್ಟು ಹಾಡುಗಳಿಗೆ ಧ್ವನಿಯಾಗಿದ್ದಾರೆ. ಈಗ ರವಿಚಂದ್ರನ್​ ಅಭಿನಯದ ‘ಕನ್ನಡಿಗ’ ಸಿನಿಮಾದ ಟೈಟಲ್​ ಟ್ರ್ಯಾಕ್​ಅನ್ನು ಶಿವರಾಜ್​ಕುಮಾರ್​ ಹಾಡಿದ್ದಾರೆ. ಈ ಸಾಂಗ್​ ಅದ್ಭುತವಾಗಿ ಮೂಡಿ ಬಂದಿದ್ದು, ಸಿನಿಪ್ರಿಯರಿಗೆ ಇಷ್ಟವಾಗಿದೆ.

ಓಂಕಾರ್​ ಮೂವೀಸ್​ ಬ್ಯಾನರ್​ ಅಡಿಯಲ್ಲಿ ‘ಕನ್ನಡಿಗ’ ಸಿನಿಮಾ ಸಿದ್ಧವಾಗಿದೆ. ಎನ್​.ಎಸ್​. ರಾಜ್​ಕುಮಾರ್​ ಅವರು ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಬಿ.ಎಂ. ಗಿರಿರಾಜ್​ ಅವರು ಈ ಸಿನಿಮಾದ ಕಥೆಯನ್ನು ಬರೆದು ನಿರ್ದೇಶನ ಮಾಡುತ್ತಿದ್ದಾರೆ. ರವಿಂದ್ರನ್​, ಪಾವನಾ, ಜೀವಿಕಾ ಜಗದೀಶ್​ ಮೈತ್ರಿ, ಬಾಲಾಜಿ ಮನನೋಹರ್​, ಅಚ್ಯುತ್​ ಕುಮಾರ್​ ಮೊದಲಾದವರು ಸಿನಿಮಾದಲ್ಲಿ ನಟಿಸಿದ್ದಾರೆ. ಈ ಸಿನಿಮಾದ ಟೈಟಲ್​ ಟ್ರ್ಯಾಕ್​ ಶಿವರಾಜ್​ಕುಮಾರ್​​ ಕಂಠದಿಂದ ಮೂಡಿ ಬಂದಿದೆ.

ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರ್​ ಅವರು ಈ ಹಾಡಿಗೆ ಸಂಗೀತ ಸಂಯೋಜನೆ ಮಾಡಿದ್ದಾರೆ. ‘ಕೆಜಿಎಫ್​’ನಂತಹ ಹಿಟ್​ ಚಿತ್ರಗಳಿಗೆ ಸಂಗೀತ ಸಂಯೋಜನೆ ಮಾಡಿದ ಖ್ಯಾತಿ ಅವರಿಗೆ ಇದೆ. ‘ಕೆಜಿಎಫ್​’ ಸಿನಿಮಾ ಮೂಲಕ ಅವರ ಜನಪ್ರಿಯತೆ ಹೆಚ್ಚಾಗಿದೆ. ಈಗ ‘ಕನ್ನಡಿಗ’ ಚಿತ್ರಕ್ಕೂ ಅವರೇ ಸಂಗೀತ ಸಂಯೋಜನೆ ಮಾಡಿದ್ದಾರೆ. ಈ ಹಾಡಿಗೆ ಖ್ಯಾತ ನಿರ್ದೇಶಕ ಸಂತೋಷ್​ ಆನಂದ್​ರಾಮ್​ ಅವರು ಸಾಹಿತ್ಯ ಬರೆದಿದ್ದಾರೆ.

ರವಿಚಂದ್ರನ್​ ಅವರು ಸಾಲುಸಾಲು ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ. ‘ಕನ್ನಡಿಗ’ ಚಿತ್ರ ಹೆಸರೇ ಹೇಳುವಂತೆ ಇದೊಂದು ಕನ್ನಡಿಗನ ಕಥೆ ಹೇಳುತ್ತದೆ ಎಂಬುದು ಗೊತ್ತಾಗುತ್ತದೆ. ‘ಕನ್ನಡಿಗ’ ಯಾವ ರೀತಿಯಲ್ಲಿ ಮೂಡಿ ಬಂದಿದೆ ಎಂಬುದನ್ನು ಕಾದು ನೋಡಬೇಕಿದೆ. ಈ ಸಿನಿಮಾ ಯಾವಾಗ ರಿಲೀಸ್​ ಆಗಲಿದೆ ಎನ್ನುವ ವಿಚಾರಕ್ಕೆ ಚಿತ್ರತಂಡದಿಂದಲೇ ಉತ್ತರ ಸಿಗಬೇಕಿದೆ.

ಪುನೀತ್​ ರಾಜ್​ಕುಮಾರ್​ ಅವರು ಅಕ್ಟೋಬರ್​ 29ರಂದು ಮೃತಪಟ್ಟರು. ಅವರ ಅಕಾಲಿಕ ಮರಣದಿಂದ ರಾಜ್​ಕುಮಾರ್​ ಕುಟುಂಬಕ್ಕೆ ಶಾಕ್​ ಉಂಟಾಗಿದೆ. ಶಿವರಾಜ್​ಕುಮಾರ್​ ಅವರು ಯಾವುದೇ ಸಿನಿಮಾ ಕೆಲಸಗಳಲ್ಲೂ ತೊಡಗಿಕೊಳ್ಳುತ್ತಿಲ್ಲ. ಅವರು ಈ ಹಾಡನ್ನು ಪುನೀತ್​ ನಿಧನ ಹೊಂದುವುದಕ್ಕೂ ಮೊದಲೇ ಹಾಡಿದ್ದರು.

ಇದನ್ನೂ ಓದಿ: ‘ಭಜರಂಗಿ 2’ ಸಿನಿಮಾ ನೋಡಿದ ನಂತರ ಮಹತ್ವದ ಘೋಷಣೆ ಮಾಡಿದ ಶಿವರಾಜ್​ಕುಮಾರ್​

‘ಸಾಧು ನನ್ನ ಕೈಗೆ ಸಿಕ್ಕಿದ್ದರೆ ಒಂದೆರಡು ಏಟು ಚೆನ್ನಾಗಿ ಬಿದ್ದಿರುತ್ತಿತ್ತು’: ರವಿಚಂದ್ರನ್​

Published On - 5:31 pm, Tue, 23 November 21

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್