‘ತಮ್ಮನನ್ನು ಕಳೆದುಕೊಂಡು ತಿಂಗಳಾಗಿದೆ; ಮತ್ತೆ ದೇವರು ಯಾಕೆ ನೋವು ಕೊಡ್ತಾನೋ ಗೊತ್ತಿಲ್ಲ’: ಶಿವರಾಂ ಬಗ್ಗೆ ಶಿವಣ್ಣನ ಮಾತು

Shivaram Health Update: ಡಾ. ರಾಜ್​ಕುಮಾರ್ ಕುಟುಂಬ​ದ ಜತೆ ಶಿವರಾಂ ಅವರಿಗೆ ಆಪ್ತ ಒಡನಾಟ ಇದೆ. ಶಿವರಾಂ ಆರೋಗ್ಯ ಪರಿಸ್ಥಿತಿ ಈಗ ಗಂಭೀರವಾಗಿದ್ದು, ನಟ ಶಿವರಾಜ್​ಕುಮಾರ್​ ಅವರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

‘ತಮ್ಮನನ್ನು ಕಳೆದುಕೊಂಡು ತಿಂಗಳಾಗಿದೆ; ಮತ್ತೆ ದೇವರು ಯಾಕೆ ನೋವು ಕೊಡ್ತಾನೋ ಗೊತ್ತಿಲ್ಲ’: ಶಿವರಾಂ ಬಗ್ಗೆ ಶಿವಣ್ಣನ ಮಾತು
ಶಿವರಾಜ್​ಕುಮಾರ್​, ಶಿವರಾಂ
Follow us
TV9 Web
| Updated By: ಮದನ್​ ಕುಮಾರ್​

Updated on:Dec 04, 2021 | 4:12 PM

ನಟ ಶಿವರಾಜ್​ಕುಮಾರ್ (Shivarajkumar)​ ಅವರು ಕಳೆದ ಕೆಲವು ದಿನಗಳಿಂದ ತೀವ್ರ ನೋವಿನಲ್ಲಿದ್ದಾರೆ. ಪುನೀತ್​ ರಾಜ್​ಕುಮಾರ್​ (Puneeth Rajkumar) ಅವರ ನಿಧನದಿಂದ ಇಡೀ ರಾಜ್​ ಕುಟುಂಬ ಕಣ್ಣೀರು ಸುರಿಸುತ್ತಿದೆ. ಅಪ್ಪು ಇಹಲೋಕ ತ್ಯಜಿಸಿ ಒಂದು ತಿಂಗಳು ಕಳೆದಿದೆ. ಅಷ್ಟರೊಳಗೆ ಮತ್ತೊಂದು ಕಹಿ ಸುದ್ದಿ ಕೇಳಿಬಂದಿದೆ. ಡಾ. ರಾಜ್​ಕುಮಾರ್​ ಕುಟುಂಬಕ್ಕೆ ತುಂಬ ಆಪ್ತರಾಗಿದ್ದ ಹಿರಿಯ ನಟ ಶಿವರಾಂ (Senior Actor Shivaram) ಅವರು ತೀವ್ರ ಅನಾರೋಗ್ಯದಿಂದ ಆಸ್ಪತ್ರೆ ಸೇರಿರುವುದು ಶಿವರಾಜ್​ಕುಮಾರ್​ ಅವರಿಗೆ ನೋವುಂಟು ಮಾಡಿದೆ. ಬೆಂಗಳೂರಿನ ಬ್ಯಾಂಕ್​ ಕಾಲೋನಿಯ ಖಾಸಗಿ ಆಸ್ಪತ್ರೆಯಲ್ಲಿ ಶಿವರಾಂ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆಗೆ ಭೇಟಿ ನೀಡಿದ ಬಳಿಕ ಶಿವಣ್ಣ ಕೆಲವು ಮಾತುಗಳನ್ನು ಹಂಚಿಕೊಂಡಿದ್ದಾರೆ. ಶಿವರಾಂ ಅವರು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ.

ಡಾ. ರಾಜ್​ಕುಮಾರ್ ಕುಟುಂಬ​ದ ಜತೆ ಶಿವರಾಂ ಅವರಿಗೆ ಆಪ್ತ ಒಡನಾಟ ಇದೆ. ಆ ಬಗ್ಗೆ ಶಿವಣ್ಣ ಮಾತನಾಡಿದ್ದಾರೆ. ‘ಅವರ ಫ್ಯಾಮಿಲಿಗೆ ಧೈರ್ಯ ಹೇಳುತ್ತೇನೆ. ನಾನು ಕೂಡ ಅವರ ಕುಟುಂಬದ ಸದಸ್ಯ ಆಗಿರುವುದರಿಂದ ನಮಗೂ ಎಲ್ಲರೂ ಧೈರ್ಯ ಹೇಳಬೇಕು. ಒಂದು ತಿಂಗಳ ಹಿಂದಷ್ಟೇ ತಮ್ಮನನ್ನು ಕಳೆದುಕೊಂಡಿದ್ದೇನೆ. ದೇವರು ಪದೇಪದೇ ಯಾಕೆ ಈ ರೀತಿ ನೋವು ಕೊಡುತ್ತಾನೆ ಅಂತ ನಮಗೂ ಅರ್ಥ ಆಗುವುದಿಲ್ಲ’ ಎಂದಿದ್ದಾರೆ ಶಿವಣ್ಣ.

ಶಿವರಾಜ್​ಕುಮಾರ್​ ಮತ್ತು ಶಿವರಾಂ ಅವರು ಅನೇಕ ಬಾರಿ ಒಟ್ಟಾಗಿ ಶಬರಿಮಲೆಗೆ ಹೋಗಿ ಬಂದಿದ್ದುಂಟು. ಅದನ್ನು ಶಿವಣ್ಣ ಮೆಲುಕು ಹಾಕಿದ್ದಾರೆ. ‘ಒಂದು ವರ್ಷದಲ್ಲಿ ಮೂರು-ನಾಲ್ಕು ಬಾರಿ ಶಿವರಾಂ ಅವರು ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ಹೋಗುತ್ತಾರೆ. ನಮ್ಮ ಜೊತೆಯೂ ಹೋಗಿ ಬರುತ್ತಿದ್ದರು. ಸ್ನೇಹಿತರು ಯಾರಾದರೂ ಅಯ್ಯಪ್ಪ ಸ್ವಾಮಿ ಪೂಜೆ ಮಾಡಿದಾಗಲೂ ಹೋಗುತ್ತಾರೆ. ಅಯ್ಯಪ್ಪ ಸ್ವಾಮಿ ಎಂದರೆ ಶಿವರಾಂ ಅವರಿಗೆ ಏನೋ ವಿಶೇಷ ಪ್ರೀತಿ. ಮೂರು ವರ್ಷದ ಹಿಂದೆ ಶಬರಿಮಲೆಗೆ ಹೋಗಿದ್ವಿ. ಕೋವಿಡ್​ ಬಂದ ನಂತರ ಹೋಗಲು ಸಾಧ್ಯವಾಗಿರಲಿಲ್ಲ. ಆಗ ಅವರಿಗೆ 81 ವರ್ಷ. ಆ ವಯಸ್ಸಿನಲ್ಲೂ ಅವರು ಬೆಟ್ಟ ಹತ್ತುತ್ತಿದ್ದರು. ಅವರಲ್ಲಿ ಇರುವ ಆ ಮನೋಬಲವೇ ಅವರನ್ನು ಕಾಪಾಡುತ್ತದೆ ಎಂದುಕೊಂಡಿದ್ದೇನೆ. ಆ ದೇವರು ಅವರನ್ನು ಕಾಪಾಡಬೇಕು ಎಂಬುದೇ ನಮ್ಮ ಆಸೆ. ಕರ್ನಾಟಕದ ಜನತೆಯ ಪ್ರೀತಿ-ಅಭಿಮಾನದಿಂದ ಅವರು ಗುಣಮುಖರಾಗುತ್ತಾರೆ’ ಎಂದು ಶಿವಣ್ಣ ಹೇಳಿದ್ದಾರೆ.

ಇದನ್ನೂ ಓದಿ:

Shivaram Health Update: ನಟ ಶಿವರಾಂ​ ಆರೋಗ್ಯ ಇನ್ನಷ್ಟು ಗಂಭೀರ; ಮಿದುಳು ನಿಷ್ಕ್ರಿಯಗೊಂಡು ಕೋಮಾದಲ್ಲಿ ಹಿರಿಯ ಕಲಾವಿದ

ಹಿರಿಯ ನಟ ಶಿವರಾಂ​ ಅವರಿಗೆ ಆಗಿದ್ದೇನು? ಇಂಚಿಂಚೂ ವಿವರ ನೀಡಿದ ವೈದ್ಯರು

Published On - 1:06 pm, Fri, 3 December 21

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು