AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

6 ಸರ್ಜರಿ, 190 ಹೊಲಿಗೆ: ಶಿವರಾಜ್​ಕುಮಾರ್ ಚಿಕಿತ್ಸೆ ಬಗ್ಗೆ ಇಲ್ಲಿದೆ ಪೂರ್ತಿ ಮಾಹಿತಿ

ಶಿವರಾಜ್​ಕುಮಾರ್​ ಅವರಿಗೆ ಅಮೆರಿಕದಲ್ಲಿ ಶಸ್ತ್ರ ಚಿಕಿತ್ಸೆ ಮಾಡಲಾಯಿತು. ಸರ್ಜರಿ ಆದ ಬಳಿಕ ಶಿವಣ್ಣ ಅವರ ಆರೋಗ್ಯ ಸ್ಥಿತಿ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಕೆಲವು ಅಂತೆ-ಕಂತೆಗಳು ಹಬ್ಬಿದ್ದವು. ಅವುಗಳಿಗೆಲ್ಲ ಈಗ ಮಧು ಬಂಗಾರಪ್ಪ ಅವರು ಸ್ಪಷ್ಟನೆ ನೀಡಿದ್ದಾರೆ. ಶಿವರಾಜ್​ಕುಮಾರ್​ ಅವರಿಗೆ ಮಾಡಿರುವ ಆಪರೇಷನ್ ಯಾವ ರೀತಿ ಇತ್ತು ಎಂಬುದನ್ನು ಅವರು ತಿಳಿಸಿದ್ದಾರೆ.

6 ಸರ್ಜರಿ, 190 ಹೊಲಿಗೆ: ಶಿವರಾಜ್​ಕುಮಾರ್ ಚಿಕಿತ್ಸೆ ಬಗ್ಗೆ ಇಲ್ಲಿದೆ ಪೂರ್ತಿ ಮಾಹಿತಿ
Madhu Bangarappa, Shivarajkumar
ಮದನ್​ ಕುಮಾರ್​
|

Updated on: Jan 15, 2025 | 3:20 PM

Share

ನಟ ಶಿವರಾಜ್​ಕುಮಾರ್​ ಅವರು ಕ್ಯಾನ್ಸರ್​ ಮುಕ್ತವಾಗಿದ್ದಾರೆ. ಯಶಸ್ವಿಯಾಗಿ ಶಸ್ತ್ರ ಚಿಕಿತ್ಸೆ ಮುಗಿಸಿದ್ದರಿಂದ ಎಲ್ಲರೂ ನಿಟ್ಟುಸಿರು ಬಿಟ್ಟಿದ್ದಾರೆ. ಶಿವಣ್ಣ ಅವರಿಗೆ ಯಾವ ರೀತಿಯ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ ಎಂಬುದನ್ನು ಅವರ ಸಂಬಂಧಿ ಮಧು ಬಂಗಾರಪ್ಪ ವಿವರಿಸಿದ್ದಾರೆ. ‘ನಡೆದಿರುವುದು ತುಂಬ ದೊಡ್ಡ ಆಪರೇಷನ್​. ಹಾಗಾಗಿಯೇ ನಾನು ಅವರ ಜೊತೆ ಅಲ್ಲಿಗೆ ಹೋಗಿದ್ದು. ಯಶಸ್ವಿಯಾಗಿ ಸರ್ಜರಿ ನಡೆದಿದೆ’ ಎಂದು ಹೇಳಿದ್ದಾರೆ. ಒಟ್ಟು 6 ಸರ್ಜರಿ ಮಾಡಿದ್ದು, 190 ಹೊಲಿಗೆ ಹಾಕಲಾಗಿದೆ ಎಂದು ಕೂಡ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

‘ಏಕಕಾಲಕ್ಕೆ 6 ಆಪರೇಷನ್​ ನಡೆಯಿತು. ಕರುಳಿನ ಒಂದು ಭಾಗವನ್ನು ತೆಗೆದು, ಅದನ್ನೇ ಯೂರಿನ್ ಬ್ಲಾಡರ್ ಆಗಿ ಮಾಡುತ್ತಾರೆ. ಒಳಗಿನಿಂದ 190 ಹೊಲಿಗೆ ಹಾಕಲಾಗಿದೆ. ನಾವು ಇದನ್ನೆಲ್ಲ ವಿವರವಾಗಿ ಹೇಳಿರಲಿಲ್ಲ. ಐದೂವರೆ ಗಂಟೆ ಸರ್ಜರಿ ಪ್ಲ್ಯಾನ್ ಮಾಡಲಾಗಿತ್ತು. 5 ಗಂಟೆ ಒಳಗೆ ಮುಗಿಸಿದರು. ಯಾವುದೇ ತೊಂದರೆ ಆಗಲಿಲ್ಲ. 4 ಗಂಟೆ ಒಳಗೆ ನಾವು ಹೋಗಿ ಮಾತನಾಡಿಸಿದೆವು’ ಎಂದು ಮಧು ಬಂಗಾರಪ್ಪ ಅವರು ಮಾಹಿತಿ ನೀಡಿದ್ದಾರೆ.

‘ಎಲ್ಲರ ಹಾರೈಕೆಯಿಂದ, ಉತ್ತಮ ವೈದ್ಯರಿಂದ ಎಲ್ಲವೂ ಚೆನ್ನಾಗಿ ಆಗಿದೆ. ಎಲ್ಲರೂ ಶಿವಣ್ಣನ ಬಗ್ಗೆ ಕಾಳಜಿ ವ್ಯಕ್ತಪಡಿಸಿದ್ದಾರೆ. ಆದರೆ ಸೋಶಿಯಲ್ ಮೀಡಿಯಾದಲ್ಲಿ ಹರಡಿರುವ ವದಂತಿಗಳು ನಿಲ್ಲಬೇಕು. ಆಗಿರುವುದು ಬ್ಲಾಡರ್​ ರಿಕನ್​ಸ್ಟ್ರಕ್ಷನ್. ಕಿಡ್ನಿ ವೈಫಲ್ಯ ಅಂತ ಹೇಳುವುದು ತಪ್ಪಾಗುತ್ತದೆ. ಸರಿಯಾಗಿ ಗೊತ್ತಿಲ್ಲದೇ ಕೆಲವರು ತಪ್ಪು ಮಾಹಿತಿ ಹಬ್ಬಿಸುತ್ತಾರೆ. ಹಾಗೆ ಮಾಡಬಾರದು’ ಎಂದಿದ್ದಾರೆ ಮಧು ಬಂಗಾರಪ್ಪ.

‘ಶಿವರಾಜ್​ಕುಮಾರ್​ ಅವರಿಗೆ ಬ್ರೇನ್​ನಲ್ಲಿ ಒಂದು ಸ್ಟಂಟ್ ಇದೆ. ಅವರಿಗೆ ಒಮ್ಮೆ ಚಿಕ್ಕ ಹಾರ್ಟ್​ ಅಟ್ಯಾಕ್ ಕೂಡ ಆಗಿತ್ತು. ಮತ್ತೆ ಅವರಿಗೆ ಯಾಕೆ ಈ ಆರೋಗ್ಯ ಸಮಸ್ಯೆ ಎಂಬ ಬೇಸರ ಎಲ್ಲರಿಗೂ ಇತ್ತು. ಈಗ ಶಿವಣ್ಣ ಚೆನ್ನಾಗಿ ಇದ್ದಾರೆ. ಜನವರಿ 25ರಂದು ವಾಪಸ್ ಬರುತ್ತಾರೆ. ಮೊದಲಿಗಿಂತಲೂ ಜಾಸ್ತಿ ಜೋಶ್​ನಲ್ಲಿ ಬರುತ್ತಾರೆ. ಅಲ್ಲಿ ನಾನು ಮತ್ತು ಅವರು ಪ್ರತಿ ದಿನ 3-4 ಕಿಮೀ ವಾಕಿಂಗ್ ಮಾಡುತ್ತಿದ್ದೆವು. ಅವರು ತುಂಬಾ ಫಿಟ್ ಆಗಿದ್ದಾರೆ’ ಎಂದು ಮಧು ಬಂಗಾರಪ್ಪ ಹೇಳಿದ್ದಾರೆ.

ಇದನ್ನೂ ಓದಿ: ಶಿವಣ್ಣನ ಆಪರೇಷನ್ ಹೇಗಾಯ್ತು? ವೈದ್ಯರೇ ನೀಡಿದ ಮಾಹಿತಿಯ ವಿಡಿಯೋ ನೋಡಿ

‘ಅತ್ಯುತ್ತಮ ಆಸ್ಪತ್ರೆಯಲ್ಲಿ ಸರ್ಜರಿ ಮಾಡಿಸಲು ನಿರ್ಧರಿಸಿದ್ದು ಒಳ್ಳೆಯದೇ ಆಯಿತು. ಶಿವರಾಜ್​ಕುಮಾರ್​ ಅವರ ಆತ್ಮಸ್ಥೈರ್ಯ ದೊಡ್ಡದು. ಅವರು 36 ವರ್ಷದವರ ರೀತಿ ವಾಪಸ್ ಬರುತ್ತಾರೆ. ಪೂರ್ತಿ ಗುಣಮುಖರಾಗಿ ಅವರು ಬರಲಿದ್ದಾರೆ. ಅಭಿಮಾನಿಗಳು ಹಾಗೂ ತಂದೆ-ತಾಯಿ ಆಶೀರ್ವಾದ ಇದ್ದಿದ್ದರಿಂದ ಶಿವಣ್ಣ ಚೆನ್ನಾಗಿದ್ದಾರೆ’ ಎಂದು ಮಧು ಬಂಗಾರಪ್ಪ ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ