ಮುಗಿಯಿತು ‘45’ ಸಿನಿಮಾ ಶೂಟಿಂಗ್; ಶಿವಣ್ಣ, ಉಪ್ಪಿ, ರಾಜ್ ಬಿ. ಶೆಟ್ಟಿಗೆ ಅರ್ಜುನ್​ ಜನ್ಯ ನಿರ್ದೇಶನ

ಸಂಗೀತ ನಿರ್ದೇಶಕ ಅರ್ಜುನ್​ ಜನ್ಯ ಅವರು ಮೊದಲ ಬಾರಿಗೆ ಆ್ಯಕ್ಷನ್​-ಕಟ್​ ಹೇಳಿರುವ ‘45’ ಸಿನಿಮಾದ ಚಿತ್ರೀಕರಣ ಮುಕ್ತಾಯ ಆಗಿದೆ. ಉಪೇಂದ್ರ, ಶಿವರಾಜ್​ಕುಮಾರ್​, ರಾಜ್​ ಬಿ. ಶೆಟ್ಟಿ ಅವರು ಈ ಸಿನಿಮಾದಲ್ಲಿ ಅಭಿನಯಿಸಿದ್ದು, ಸತ್ಯ ಹೆಗಡೆ ಛಾಯಾಗ್ರಹಣ ಮಾಡಿದ್ದಾರೆ. ನಿರ್ಮಾಪಕ ರಮೇಶ್​ ರೆಡ್ಡಿ ಅವರು ಈ ಸಿನಿಮಾವನ್ನು ಅದ್ದೂರಿಯಾಗಿ ನಿರ್ಮಾಣ ಮಾಡಿದ್ದಾರೆ.

ಮುಗಿಯಿತು ‘45’ ಸಿನಿಮಾ ಶೂಟಿಂಗ್; ಶಿವಣ್ಣ, ಉಪ್ಪಿ, ರಾಜ್ ಬಿ. ಶೆಟ್ಟಿಗೆ ಅರ್ಜುನ್​ ಜನ್ಯ ನಿರ್ದೇಶನ
‘45’ ಸಿನಿಮಾ ತಂಡ
Follow us
|

Updated on: Sep 29, 2024 | 8:59 PM

ಒಂದಷ್ಟು ಕಾರಣಗಳಿಂದ ‘45’ ಸಿನಿಮಾ ಕೌತುಕ ಸೃಷ್ಟಿ ಮಾಡಿದೆ. ‘ಹ್ಯಾಟ್ರಿಕ್​ ಹೀರೋ’ ಶಿವರಾಜ್​ಕುಮಾರ್, ಉಪೇಂದ್ರ ಮತ್ತು ರಾಜ್ ಬಿ. ಶೆಟ್ಟಿ ಅವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಖ್ಯಾತ ಮ್ಯೂಸಿಕ್​ ಡೈರೆಕ್ಟರ್ ಅರ್ಜುನ್ ಜನ್ಯ ಅವರು ನಿರ್ದೇಶನ ಮಾಡುತ್ತಿರುವ ಮೊದಲ ಸಿನಿಮಾ ಇದು. ಈ ಚಿತ್ರಕ್ಕೆ ‘ಸೂರಜ್ ಪ್ರೊಡಕ್ಷನ್ಸ್’ ಮೂಲಕ ಶ್ರೀಮತಿ ಉಮಾ ರಮೇಶ್ ರೆಡ್ಡಿ ಅವರು ಬಂಡವಾಳ ಹೂಡಿದ್ದಾರೆ. ಮೊದಲಿನಿಂದಲೂ ನಿರೀಕ್ಷೆ ಮೂಡಿಸಿರುವ ಈ ಸಿನಿಮಾ ತಂಡದಿಂದ ಈಗೊಂದು ಅಪ್​ಡೇಟ್​ ಸಿಕ್ಕಿದೆ. ಏನದು? ಶೂಟಿಂಗ್​ ಕಂಪ್ಲೀಟ್​. ಹೌದು, ‘45’ ಸಿನಿಮಾದ ಚಿತ್ರೀಕರಣ ಪೂರ್ಣಗೊಂಡಿದೆ.

ಅದ್ದೂರಿ ಬಜೆಟ್​ನಲ್ಲಿ ‘45’ ಸಿನಿಮಾ ನಿರ್ಮಾಣ ಆಗುತ್ತಿದೆ. ಈ ಅದ್ದೂರಿ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಿಡುಗಡೆ ಆಗಲಿದೆ. ಚಿತ್ರೀಕರಣ ಮುಗಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ಚಿತ್ರತಂಡ ಸುದ್ದಿಗೋಷ್ಠಿ ಆಯೋಜಿಸಿತ್ತು. ಅದರಲ್ಲಿ ಶಿವರಾಜ್​ಕುಮಾರ್​, ಉಪೇಂದ್ರ, ರಾಜ್ ಬಿ. ಶೆಟ್ಟಿ, ರಮೇಶ್​ ರೆಡ್ಡಿ ಮುಂತಾದವರು ಭಾಗಿ ಆಗಿದ್ದರು. ಈ ವೇಳೆ ಶಿವರಾಜ್​ಕುಮಾರ್​ ಅವರು ಸಿನಿಮಾದ ವಿಶೇಷತೆ ಬಗ್ಗೆ ಮಾತನಾಡಿದರು.

‘ಈ ಸಿನಿಮಾದ ಶೂಟಿಂಗ್​ನಲ್ಲಿ ಪಾಲ್ಗೊಂಡಿದ್ದು ಬಹಳ ಖುಷಿಯಾಗಿದೆ. ನಾವು ಮೂವರು ಅಭಿನಯಿಸಿದ್ದೇವೆ. ಇಲ್ಲಿ ನಾವೆಲ್ಲರೂ ಒಂದೇ. ಉಪೇಂದ್ರ ಅವರ ಜೊತೆ ಅಭಿನಯಿಸಲು ನಾನು ಯಾವಾಗ್ಲೂ ರೆಡಿ. ರಾಜ್ ಬಿ. ಶೆಟ್ಟಿ ಅವರ ಜೊತೆಗೆ ತೆರೆ ಹಂಚಿಕೊಂಡಿದ್ದಕ್ಕೂ ಖುಷಿ ಆಗಿದೆ. ಇದು ಅರ್ಜುನ್ ಜನ್ಯ ಅವರ ನಿರ್ದೇಶನದ ಮೊದಲ ಸಿನಿಮಾ ಎಂದು ಹೇಳೋಕೆ ಆಗಲ್ಲ. ಅಷ್ಟು ಚೆನ್ನಾಗಿ ನಿರ್ದೇಶನ ಮಾಡಿದ್ದಾರೆ. ರಮೇಶ್ ರೆಡ್ಡಿ ಅವರು ಅದ್ದೂರಿಯಾಗಿ ನಿರ್ಮಾಣ ಮಾಡಿದ್ದಾರೆ. ರವಿವರ್ಮ ಅವರ ಸಾಹಸ ನಿರ್ದೇಶನ ಚೆನ್ನಾಗಿದೆ. ದೇಶವೇ ಮುಚ್ಚುವಂತಹ ಸಿನಿಮಾ ಇದಾಗಲಿದೆ’ ಎಂದಿದ್ದಾರೆ ಶಿವಣ್ಣ.

ಅರ್ಜುನ್​ ಜನ್ಯ ಬಗ್ಗೆ ಉಪೇಂದ್ರ ಕೂಡ ಮೆಚ್ಚುಗೆಯ ಮಾತುಗಳನ್ನು ಆಡಿದರು. ‘ಕಥೆಯನ್ನು ಆ್ಯನಿಮೇಷನ್‌ ಮೂಲಕ ಹೇಳೋದನ್ನು ನಾನು ಹಾಲಿವುಡ್​ನಲ್ಲಿ ಕೇಳಿದ್ದೆ. ಆದರೆ ಅರ್ಜುನ್ ಜನ್ಯ ಅವರು ಕನ್ನಡದಲ್ಲೇ ಇದನ್ನು ಮಾಡಿ ತೋರಿಸಿದ್ದಾರೆ. ಆ್ಯನಿಮೇಷನ್​ನಲ್ಲಿ ಹೇಳಿದ ರೀತಿಯಲ್ಲೇ ಸಿನಿಮಾ ಮಾಡಿದ್ದಾರೆ. ಅವರ ಆಲೋಚನೆಗೆ ನಿರ್ಮಾಪಕ ರಮೇಶ್ ರೆಡ್ಡಿ ಬೆಂಬಲ ನೀಡಿದ್ದಾರೆ. ಆದಷ್ಟು ಬೇಗ ಸಿನಿಮಾ ಬಿಡುಗಡೆ ಆಗಲಿದೆ’ ಎಂದರು ಉಪೇಂದ್ರ.

ಇದನ್ನೂ ಓದಿ: ಅನುಶ್ರೀ ಕಿವಿಯಲ್ಲಿ ‘ಯುಐ’ ರಿಲೀಸ್ ಡೇಟ್ ರಿವೀಲ್ ಮಾಡಿದ ಉಪೇಂದ್ರ?

‘ನಾನು ಶಿವರಾಜ್​ಕುಮಾರ್​ ಮತ್ತು ಉಪೇಂದ್ರ ಅವರ ಅಭಿಮಾನಿ. ಈಗ ಅವರ ಜೊತೆ ಅಭಿನಯಿಸಿದ್ದು ನನ್ನ ಪಾಲಿನ ಭಾಗ್ಯ. ಕನ್ನಡಿಗರು ಹೆಮ್ಮೆಪಡುವಂತಹ ಸಿನಿಮಾ ಇದಾಗಲಿದೆ. ಈ ಚಿತ್ರದಲ್ಲಿ ನಟಿಸಿದ್ದಕ್ಕೆ ನನಗೆ ಹೆಮ್ಮ ಇದೆ’ ಎಂದು ರಾಜ್​ ಬಿ. ಶೆಟ್ಟಿ ಹೇಳಿದ್ದಾರೆ. ‘ಈ ಸಿನಿಮಾ ಒಂದು ದೇವಾಲಯದ. ಇದರಲ್ಲಿ ಶಿವರಾಜ್​ಕುಮಾರ್, ಉಪೇಂದ್ರ ಮತ್ತು ರಾಜ್ ಬಿ. ಶೆಟ್ಟಿ ಅವರು ಬ್ರಹ್ಮ-ವಿಷ್ಣು-ಮಹೇಶ್ವರ ಇದ್ದಂತೆ. ರಮೇಶ್ ರೆಡ್ಡಿ ಈ ದೇವಸ್ಥಾನ ಕಟ್ಟಿದ್ದಾರೆ’ ಎಂದು ನಿರ್ದೇಶಕ ಅರ್ಜುನ್​ ಜನ್ಯ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

45 ಲಕ್ಷ ರೂ. ನೋಟುಗಳಿಂದ ದುರ್ಗಾದೇವಿಗೆ ಅಲಂಕಾರ! ಬೆರಗಾದ ಭಕ್ತರು
45 ಲಕ್ಷ ರೂ. ನೋಟುಗಳಿಂದ ದುರ್ಗಾದೇವಿಗೆ ಅಲಂಕಾರ! ಬೆರಗಾದ ಭಕ್ತರು
ನವರಾತ್ರಿ ಉತ್ಸವದಲ್ಲಿ ಕಣ್ಮನ ಸೆಳೆದ ಕಾಂತಾರ ಚಿತ್ರದ ಪಂಜುರ್ಲಿ ನೃತ್ಯ
ನವರಾತ್ರಿ ಉತ್ಸವದಲ್ಲಿ ಕಣ್ಮನ ಸೆಳೆದ ಕಾಂತಾರ ಚಿತ್ರದ ಪಂಜುರ್ಲಿ ನೃತ್ಯ
ಇದು ಮೌನವಾಗಿರುವ ಕಾಲ: ಜೈಲಿಂದ ಹೊರಬಂದ ಮುರುಘಾಶ್ರೀ ಮೊದಲ ಮಾತು
ಇದು ಮೌನವಾಗಿರುವ ಕಾಲ: ಜೈಲಿಂದ ಹೊರಬಂದ ಮುರುಘಾಶ್ರೀ ಮೊದಲ ಮಾತು
ಒಳ ಉಡುಪಿನ ವಿಷಯ ಪ್ರಸ್ತಾಪಿಸಿ ಮಹಿಳಾ ಸ್ಪರ್ಧಿಗಳಿಗೆ ಮುಜುಗರ ತಂದ ಜಗದೀಶ್
ಒಳ ಉಡುಪಿನ ವಿಷಯ ಪ್ರಸ್ತಾಪಿಸಿ ಮಹಿಳಾ ಸ್ಪರ್ಧಿಗಳಿಗೆ ಮುಜುಗರ ತಂದ ಜಗದೀಶ್
ಬೆಂಗಳೂರು: ನಿಂತಿದ್ದ ಮಹಿಳೆ ಮೇಲೆ ವಿದ್ಯುತ್ ಲೈನ್ ಬಿದ್ದು ಸಾವು
ಬೆಂಗಳೂರು: ನಿಂತಿದ್ದ ಮಹಿಳೆ ಮೇಲೆ ವಿದ್ಯುತ್ ಲೈನ್ ಬಿದ್ದು ಸಾವು
ರೋಹಿತ್ ಶರ್ಮಾ ಸ್ಟೈಲ್​ನಲ್ಲಿ ಟ್ರೋಫಿ ಎತ್ತಿ ಹಿಡಿದ ಫಾಫ್ ಡುಪ್ಲೆಸಿಸ್
ರೋಹಿತ್ ಶರ್ಮಾ ಸ್ಟೈಲ್​ನಲ್ಲಿ ಟ್ರೋಫಿ ಎತ್ತಿ ಹಿಡಿದ ಫಾಫ್ ಡುಪ್ಲೆಸಿಸ್
ದರ್ಶನ್​ಗೆ ಬೆನ್ನು ನೋವು; ಪತಿಯನ್ನು ನೋಡಲು ಜೈಲಿಗೆ ಬಂದ ವಿಜಯಲಕ್ಷ್ಮೀ  
ದರ್ಶನ್​ಗೆ ಬೆನ್ನು ನೋವು; ಪತಿಯನ್ನು ನೋಡಲು ಜೈಲಿಗೆ ಬಂದ ವಿಜಯಲಕ್ಷ್ಮೀ  
ಉಡುಪಿ ಹೆಬ್ರಿಯಲ್ಲಿ ಮೇಘ ಸ್ಫೋಟ: ಮನೆ, ಕೃಷಿ ಜಮೀನಿಗೆ ನೀರು ನುಗ್ಗಿ ಅವಾಂತರ
ಉಡುಪಿ ಹೆಬ್ರಿಯಲ್ಲಿ ಮೇಘ ಸ್ಫೋಟ: ಮನೆ, ಕೃಷಿ ಜಮೀನಿಗೆ ನೀರು ನುಗ್ಗಿ ಅವಾಂತರ
ಬಿಗ್ ಬಾಸ್​ನಲ್ಲಿ ಮಸಿ ಬಳಿಯೋ ಟಾಸ್ಕ್; ಮತ್ತದೇ ಕಿರುಚಾಟ, ಕಿತ್ತಾಟ
ಬಿಗ್ ಬಾಸ್​ನಲ್ಲಿ ಮಸಿ ಬಳಿಯೋ ಟಾಸ್ಕ್; ಮತ್ತದೇ ಕಿರುಚಾಟ, ಕಿತ್ತಾಟ
ಚೆನ್ನೈ ಏರ್​ ಶೋ, ಉಸಿರುಗಟ್ಟಿ 5 ಮಂದಿ ಸಾವು
ಚೆನ್ನೈ ಏರ್​ ಶೋ, ಉಸಿರುಗಟ್ಟಿ 5 ಮಂದಿ ಸಾವು