AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಖಿಲ್​ ಕುಮಾರ್​ ಸಿನಿಮಾದ ಸೆಟ್​ಗೆ ಭೇಟಿ ನೀಡಿದ ಶಿವರಾಜ್​ಕುಮಾರ್​; ಫೋಟೋ ವೈರಲ್​

ಹಳೇ ಕಟ್ಟಡವೊಂದರಲ್ಲಿ ನಿಖಿಲ್ ಕುಮಾರ್​ ಅವರ ಸಿನಿಮಾದ ಚಿತ್ರೀಕರಣ ನಡೆಯುತ್ತಿತ್ತು. ಈ ವೇಳೆ ಶೂಟಿಂಗ್ ಸೆಟ್​ಗೆ ಶಿವಣ್ಣ ಭೇಟಿ ನೀಡಿದರು. ಸಿನಿಮಾ ಮಾತ್ರವಲ್ಲದೇ ಒಂದಿಷ್ಟು ವೈಯಕ್ತಿಕ ವಿಚಾರಗಳ ಬಗ್ಗೆಯೂ ಅವರಿಬ್ಬರು ಚರ್ಚೆ ಮಾಡಿದ್ದಾರೆ. ‘ಲೈಕಾ ಪ್ರೊಡಕ್ಷನ್ಸ್​’ ಸಂಸ್ಥೆ ನಿರ್ಮಾಣ ಮಾಡುತ್ತಿರುವ ಈ ಸಿನಿಮಾ ಬಗ್ಗೆ ಶಿವಣ್ಣ ಮಾಹಿತಿ ಪಡೆದುಕೊಂಡರು.

ನಿಖಿಲ್​ ಕುಮಾರ್​ ಸಿನಿಮಾದ ಸೆಟ್​ಗೆ ಭೇಟಿ ನೀಡಿದ ಶಿವರಾಜ್​ಕುಮಾರ್​; ಫೋಟೋ ವೈರಲ್​
ನಿಖಿಲ್ ಕುಮಾರ್​, ಗೀತಾ ಶಿವರಾಜ್​ಕುಮಾರ್​, ಶಿವರಾಜ್​ಕುಮಾರ್​
ಮದನ್​ ಕುಮಾರ್​
|

Updated on: Sep 16, 2023 | 10:05 AM

Share

ನಟ-ರಾಜಕಾರಣಿ ನಿಖಿಲ್​ ಕುಮಾರ್​ (Nikhil Kumar) ಅವರು ಹೊಸ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಸಿನಿಮಾಗೆ ಲೈಕಾ ಪ್ರೊಡಕ್ಷನ್ಸ್​ ಸಂಸ್ಥೆ ಬಂಡವಾಳ ಹೂಡುತ್ತಿದೆ. ಇನ್ನೂ ಶೀರ್ಷಿಕೆ ಅಂತಿಮವಾಗದ ಈ ಚಿತ್ರಕ್ಕೆ ಶೂಟಿಂಗ್​ ಭರದಿಂದ ಸಾಗುತ್ತಿದೆ. ವಿಶೇಷ ಏನೆಂದರೆ, ಈ ಚಿತ್ರದ ಶೂಟಿಂಗ್​ ಸೆಟ್​ಗೆ ‘ಹ್ಯಾಟ್ರಿಕ್ ಹೀರೋ’ ಶಿವರಾಜ್​ಕುಮಾರ್ (Shivarajkumar) ಅವರು ಭೇಟಿ ನೀಡಿದ್ದಾರೆ. ಇತ್ತೀಚೆಗೆ ಶಿವಣ್ಣ ಅಮೆರಿಕಕ್ಕೆ ತೆರಳಿದ್ದರು. ಅಲ್ಲಿಂದ ವಾಪಸ್​ ಬರುತ್ತಿದ್ದಂತೆಯೇ ಅವರು ನಿಖಿಲ್​ ಕುಮಾರ್​ ನಟನೆಯ ಸಿನಿಮಾದ ಶೂಟಿಂಗ್​ ಸೆಟ್​ಗೆ ಭೇಟಿ ನೀಡಿದ್ದಾರೆ. ಅವರ ಜೊತೆ ಪತ್ನಿ ಗೀತಾ ಶಿವರಾಜ್​ಕುಮಾರ್​ (Geetha Shivarajkumar) ಕೂಡ ಸಾಥ್​ ನೀಡಿದರು.

ಸಾಕಷ್ಟು ದಿನಗಳ ಬಳಿಕ ನಿಖಿಲ್ ಕುಮಾರ್​ ಮತ್ತು ಶಿವರಾಜ್​ಕುಮಾರ್​ ಅವರು ಪರಸ್ಪರ ಭೇಟಿ ಮಾಡಿದ್ದಾರೆ. ಇಬ್ಬರೂ ಒಂದಿಷ್ಟು ಸಮಯ ಒಟ್ಟಿಗೆ ಕಳೆಯುವ ಮೂಲಕ ಉಭಯ ಕುಶಲೋಪರಿ ವಿಚಾರಿಸಿದ್ದಾರೆ. ಸಿನಿಮಾ ಮಾತ್ರವಲ್ಲದೇ ಒಂದಿಷ್ಟು ವೈಯಕ್ತಿಕ ವಿಚಾರಗಳ ಬಗ್ಗೆಯೂ ಅವರಿಬ್ಬರು ಚರ್ಚೆ ಮಾಡಿದ್ದಾರೆ. ಈ ವೇಳೆ ‘ಲೈಕಾ ಪ್ರೊಡಕ್ಷನ್ಸ್​’ ಸಂಸ್ಥೆ ನಿರ್ಮಾಣ ಮಾಡುತ್ತಿರುವ ನಿಖಿಲ್​ ಅವರ ಈ ಹೊಸ ಸಿನಿಮಾ ಬಗ್ಗೆ ಶಿವರಾಜ್​ಕುಮಾರ್​ ಅವರು ಮಾಹಿತಿ ಪಡೆದುಕೊಂಡರು. ಆ ಸಂದರ್ಭದ ಫೋಟೋಗಳು ಲಭ್ಯವಾಗಿವೆ.

ಇದನ್ನೂ ಓದಿ: ನಿಖಿಲ್ ಕುಮಾರಸ್ವಾಮಿಗಾಗಿ ಬೆಂಗಳೂರಿಗೆ ಬಂದ ಲೈಕಾ ಕುಟುಂಬ, ಅದ್ಧೂರಿ ಮುಹೂರ್ತ

ಹಳೇ ಕಟ್ಟಡವೊಂದರಲ್ಲಿ ನಿಖಿಲ್ ಕುಮಾರ್​ ಅವರ ಸಿನಿಮಾದ ಚಿತ್ರೀಕರಣ ನಡೆಯುತ್ತಿತ್ತು. ಈ ವೇಳೆ ಶೂಟಿಂಗ್ ಸೆಟ್​ಗೆ ಶಿವಣ್ಣ ಭೇಟಿ ನೀಡಿದರು. ಅಲ್ಲಿ ಲಿಫ್ಟ್​ ಇರಲಿಲ್ಲ. ಗೀತಾ ಮತ್ತು ಶಿವರಾಜ್​ಕುಮಾರ್​ ಅವರು ಮೆಟ್ಟಿಲು ಹತ್ತಿಕೊಂಡು ಬಂದು ನಿಖಿಲ್ ಕುಮಾರ್​ ಅವರನ್ನು ಭೇಟಿ ಮಾಡಿದ್ದಾರೆ. ಚಿತ್ರತಂಡದವರನ್ನು ಮಾತನಾಡಿಸಿ ಎಲ್ಲರಿಗೂ ಶುಭ ಕೋರಿದ್ದಾರೆ. ಈ ದಂಪತಿ ಪ್ರೀತಿಯಿಂದ ಬಂದು ಶೂಟಿಂಗ್​ ಸೆಟ್​ನಲ್ಲಿ ಕಾಲ ಕಳೆದಿದ್ದು ನಿಖಿಲ್​ ಕುಮಾರ್​ ಅವರಿಗೆ ಖುಷಿ ನೀಡಿತು. ಬಳಿಕ ಅವರನ್ನು ಆತ್ಮೀಯವಾಗಿ ಬೀಳ್ಕೊಡಲಾಯಿತು.

ಇದನ್ನೂ ಓದಿ: ಹಿಂದಿ ಪ್ರೇಕ್ಷಕರ ಮನಗೆದ್ದ ನಿಖಿಲ್​ ಕುಮಾರ್​; ‘ರೈಡರ್’ ಚಿತ್ರಕ್ಕೆ 100 ಮಿಲಿಯನ್​ ವೀಕ್ಷಣೆ

ಡಾ. ರಾಜ್​ಕುಮಾರ್​ ಮತ್ತು ದೇವೇಗೌಡರ ಕುಟುಂಬದ ನಡುವೆ ಮೊದಲಿನಿಂದಲೂ ಆಪ್ತತೆ ಇದೆ. ನಿಖಿಲ್​ ಕುಮಾರ್​ ಅವರ ಕಾಲಕ್ಕೂ ಅದು ಮುಂದುವರಿದಿದೆ. ಶಿವಣ್ಣ ಅವರು ನಿಖಿಲ್​ ನಟನೆಯ ಸಿನಿಮಾ ಸೆಟ್​ಗೆ ಭೇಟಿ ನೀಡಿದ್ದೇ ಅದಕ್ಕೆ ಸಾಕ್ಷಿ. ಪುನೀತ್​ ರಾಜ್​ಕುಮಾರ್ ಅವರು ಕೆಲಸದ ಬಗ್ಗೆ ತೋರುತ್ತಿದ್ದ ಡೆಡಿಕೇಷನ್​ ಎಂದರೆ ನಿಖಿಲ್​ಗೆ ಸ್ಫೂರ್ತಿ. ಇಷ್ಟು ದಿನಗಳ ಕಾಲ ರಾಜಕೀಯದ ಕೆಲಸಗಳ ಬ್ಯುಸಿ ನಡುವೆ ನಿಖಿಲ್​ ಅವರು ಸಿನಿಮಾ ಕೆಲಸಗಳಿಂದ ಕೊಂಚ ಅಂತರ ಕಾಯ್ದುಕೊಂಡಿದ್ದರು. ಈಗ ಮತ್ತೆ ಅವರು ನಟನೆಯಲ್ಲಿ ಸಕ್ರಿಯರಾಗಿದ್ದಾರೆ.

ಇದನ್ನೂ ಓದಿ: ‘ರಾಜಕಾರಣದಿಂದ ಒಂದು ಹೆಜ್ಜೆ ಹೊರಗೆ ಇಟ್ಟಿದ್ದೇನೆ ಎಂಬ ಭಾವನೆ ಯಾರಿಗೂ ಬೇಡ’: ನಿಖಿಲ್​ ಕುಮಾರ್​ ಸ್ಪಷ್ಟನೆ

ಈ ಸಿನಿಮಾಗೆ ಲಕ್ಷ್ಮಣ್ ನಿರ್ದೇಶನ ಮಾಡುತ್ತಿದ್ದಾರೆ. ಇದು ಲೈಕಾ ಸಂಸ್ಥೆಯ ಮೊದಲ ಕನ್ನಡ ಸಿನಿಮಾ ಎಂಬುದು ವಿಶೇಷ. ಈ ಸಿನಿಮಾಗೆ ಮೊದಲ ಶೆಡ್ಯೂಲ್ ಚಿತ್ರೀಕರಣ ಕೆಲವೇ ದಿನಗಳ ಹಿಂದೆ ಶುರುವಾಗಿದೆ. ನಿಖಿಲ್​ಗೆ ಜೋಡಿಯಾಗಿ ಯುಕ್ತಿ ತರೇಜಾ ನಟಿಸುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?