‘ಉತ್ತರಕಾಂಡ’ ಶೂಟಿಂಗ್ ಮುಗಿಸಿ ಸವದತ್ತಿ ಯಲ್ಲಮ್ಮನ ದರ್ಶನ ಪಡೆದ ಶಿವರಾಜ್ಕುಮಾರ್
‘ಹ್ಯಾಟ್ರಿಕ್ ಹೀರೋ’ ಶಿವರಾಜ್ಕುಮಾರ್ ಅವರು ‘ಉತ್ತರಕಾಂಡ’ ಸಿನಿಮಾದಲ್ಲಿ ಒಂದು ಮುಖ್ಯ ಪಾತ್ರ ಮಾಡುತ್ತಿದ್ದಾರೆ. ಈ ಸಿನಿಮಾದ ಚಿತ್ರೀಕರಣ ಬೆಳಗಾವಿಯಲ್ಲಿ ನಡೆಯುತ್ತಿದೆ. ಶಿವರಾಜ್ಕುಮಾರ್ ಕೂಡ ಇದರಲ್ಲಿ ಭಾಗಿ ಆಗಿದ್ದಾರೆ. ಶೂಟಿಂಗ್ ಮುಗಿಸಿದ ನಂತರ ಸವದತ್ತಿಯ ಯಲ್ಲಮ್ಮ ದೇವಸ್ಥಾನಕ್ಕೆ ಅವರು ತೆರಳಿದ್ದಾರೆ. ದೇವರ ದರ್ಶನ ಪಡೆದು ಬಂದಿದ್ದಾರೆ.
ನಟ ಶಿವರಾಜ್ಕುಮಾರ್ (Shivarajkumar) ಅವರು ಒಂದಷ್ಟು ದಿನಗಳ ಕಾಲ ಸಿನಿಮಾ ಕೆಲಸಗಳಿಗೆ ಬ್ರೇಕ್ ನೀಡಿದ್ದರು. ಪತ್ನಿ ಗೀತಾ ಶಿವರಾಜ್ಕುಮಾರ್ ಪರವಾಗಿ ಚುನಾವಣಾ ಪ್ರಚಾರದಲ್ಲಿ ಅವರು ಭಾಗಿ ಆಗಿದ್ದರು. ಶಿವಮೊಗ್ಗದಲ್ಲಿ ಎಲೆಕ್ಷನ್ ಮುಗಿದ ನಂತರ ಶಿವಣ್ಣ ಮತ್ತೆ ಸಿನಿಮಾ ಕೆಲಸಗಳಿಗೆ ಮರಳಿದರು. ಬಹುನಿರೀಕ್ಷಿತ ‘ಉತ್ತರಕಾಂಡ’ (Uttarakaanda) ಸಿನಿಮಾದಲ್ಲಿ ಅವರೊಂದು ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಶೂಟಿಂಗ್ ಮುಗಿದ ಬಳಿಕ ಶಿವರಾಜ್ಕುಮಾರ್ ಅವರು ಸವದತ್ತಿ ಯಲ್ಲಮ್ಮ (Savadatti Yallamma) ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಆ ಸಂದರ್ಭದ ಫೋಟೋಗಳು ಲಭ್ಯವಾಗಿವೆ.
‘ಉತ್ತರಕಾಂಡ’ ಸಿನಿಮಾದಲ್ಲಿ ಉತ್ತರ ಕರ್ನಾಟಕದ ಕಹಾನಿ ಇರಲಿದೆ. ಹಾಗಾಗಿ ಈ ಸಿನಿಮಾದ ಚಿತ್ರೀಕರಣವನ್ನು ಬೆಳಗಾವಿಯಲ್ಲಿ ಮಾಡಲಾಗುತ್ತಿದೆ. ಈ ಸಿನಿಮಾದ ಶೂಟಿಂಗ್ ಮುಗಿಸಿಕೊಂಡ ‘ಹ್ಯಾಟ್ರಿಕ್ ಹೀರೋ’ ಶಿವರಾಜ್ಕುಮಾರ್ ಅವರು ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ಭೇಟಿ ನೀಡಿ, ದೇವರ ದರ್ಶನ ಮಾಡಿದ್ದಾರೆ. ಅವರ ಪಾಲಿಗೆ ಈ ಕ್ಷೇತ್ರ ಅದೃಷ್ಟ. ಈ ಮೊದಲು ‘ಶ್ರೀರಾಮ್’, ‘ಮೈಲಾರಿ’ ಮುಂತಾದ ಸಿನಿಮಾಗಳಿಗೂ ಸವದತ್ತಿ ಯಲ್ಲಮ್ಮ ತಾಯಿಯ ಆಶೀರ್ವಾದ ಸಿಕ್ಕಿತ್ತು.
ಕನ್ನಡ ಚಿತ್ರರಂಗದ ಖ್ಯಾತ ನಟ ಡಾಲಿ ಧನಂಜಯ್ ಅವರು ‘ಉತ್ತರಕಾಂಡ’ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ‘ಕೆ.ಆರ್.ಜಿ. ಸ್ಟುಡಿಯೋಸ್’ ಮೂಲಕ ಕಾರ್ತಿಕ್ ಗೌಡ ಹಾಗೂ ಯೋಗಿ ಜಿ. ರಾಜ್ ಅವರು ನಿರ್ಮಾಣ ಮಾಡುತ್ತಿದ್ದಾರೆ. ರೋಹಿತ್ ಪದಕಿ ಅವರ ನಿರ್ದೇಶನದಲ್ಲಿ ‘ಉತ್ತರಕಾಂಡ’ ಮೂಡಿಬರುತ್ತಿದೆ. ಈ ಸಿನಿಮಾದಲ್ಲಿ ಆ್ಯಕ್ಷನ್ ಡ್ರಾಮಾ ಇರಲಿದೆ.
ಇದನ್ನೂ ಓದಿ: ಎಲ್ಲೆಲ್ಲೂ ಶಿವಣ್ಣ; ‘ಉತ್ತರಕಾಂಡ’ ಸೆಟ್ನಲ್ಲಿ ಶಿವರಾಜ್ಕುಮಾರ್ಗೆ ಅದ್ದೂರಿ ಸ್ವಾಗತ
ಪಾತ್ರವರ್ಗದ ಕಾರಣದಿಂದ ‘ಉತ್ತರಕಾಂಡ’ ಸಿನಿಮಾ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಶಿವರಾಜ್ಕುಮಾರ್, ಡಾಲಿ ಧನಂಜಯ, ಐಶ್ವರ್ಯಾ ರಾಜೇಶ್, ದಿಗಂತ್ ಮಂಚಾಲೆ, ಭಾವನಾ ಮೆನನ್, ರಂಗಾಯಣ ರಘು, ವಿಜಯ್ ಬಾಬು ಸೇರಿದಂತೆ ಅನೇಕ ಕಲಾವಿದರು ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ವಿಶೇಷ ಏನೆಂದರೆ, ಬಾಲಿವುಡ್ನ ಜನಪ್ರಿಯ ಗಾಯಕ ಕಮ್ ಸಂಗೀತ ನಿರ್ದೇಶಕ ಅಮಿತ್ ತ್ರಿವೇದಿ ಅವರು ಸಂಗೀತ ನೀಡುತ್ತಿದ್ದಾರೆ. ಅದ್ವೈತ ಗುರುಮೂರ್ತಿ ಅವರು ಮುಖ್ಯ ಛಾಯಾಗ್ರಾಹಕರಾಗಿ ಕೆಲಸ ಮಾಡಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.