AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಣ್ಣಾವ್ರ ಹಳೆಯ ಸಿನಿಮಾಗಳ ನೆನಪಿಸಿದ ಶಿವಣ್ಣನ ಹೊಸ ಸಿನಿಮಾ ಲುಕ್

Shiva Rajkumar-Dr Rajkumar: ರಾಜ್​​ಕುಮಾರ್ ಅವರು ಕೆಲವು ಸ್ಪೈ ಸಿನಿಮಾಗಳಲ್ಲಿ ನಟಿಸಿದ್ದಾರೆ. ‘ಜೇಡರ ಬಲೆ’, ‘ಆಪರೇಷನ್ ಡೈಮೆಂಟ್ ರಾಕೆಟ್’, ‘ಗೋವಾನಲ್ಲಿ ಸಿಐಡಿ’ ಇನ್ನೂ ಕೆಲವು ಸಿನಿಮಾಗಳಲ್ಲಿ ನಟಿಸಿದ್ದು, ಈ ಸಿನಿಮಾಗಳಲ್ಲಿ ಸೂಟು-ಬೂಟು ಧರಿಸಿ ಕೈಯಲ್ಲಿ ಗನ್ ಹಿಡಿದು ಥೇಟ್ ಜೇಮ್ಸ್ ಬಾಂಡ್ ರೀತಿ ಕಾಣಿಸಿಕೊಂಡಿದ್ದಾರೆ. ಇದೀಗ ಶಿವರಾಜ್ ಕುಮಾರ್ ಅವರೂ ಸಹ ತಮ್ಮ ಹೊಸ ಸಿನಿಮಾಕ್ಕೆ ಇದೇ ರೀತಿಯ ಲುಕ್​​ನಲ್ಲಿ ಕಾಣಿಸಿಕೊಂಡಿದ್ದಾರೆ.

ಅಣ್ಣಾವ್ರ ಹಳೆಯ ಸಿನಿಮಾಗಳ ನೆನಪಿಸಿದ ಶಿವಣ್ಣನ ಹೊಸ ಸಿನಿಮಾ ಲುಕ್
Dr Rajkumar Shiva Rajkumar
ಮಂಜುನಾಥ ಸಿ.
|

Updated on:Sep 16, 2025 | 2:15 PM

Share

ಶಿವರಾಜ್ ಕುಮಾರ್ ಅವರು ತಮ್ಮ ಹೊಸ ಸಿನಿಮಾಕ್ಕೆ ತಂದೆ ರಾಜ್​​ಕುಮಾರ್ ಅವರಂತೆ ಲುಕ್ ಮಾಡಿಕೊಂಡಿದ್ದಾರೆ. ರಾಜ್​​ಕುಮಾರ್ ಅವರು ಕೆಲವು ಸ್ಪೈ ಸಿನಿಮಾಗಳಲ್ಲಿ ನಟಿಸಿದ್ದಾರೆ. ‘ಜೇಡರ ಬಲೆ’, ‘ಆಪರೇಷನ್ ಡೈಮೆಂಟ್ ರಾಕೆಟ್’, ‘ಗೋವಾನಲ್ಲಿ ಸಿಐಡಿ’ ಇನ್ನೂ ಕೆಲವು ಸಿನಿಮಾಗಳಲ್ಲಿ ನಟಿಸಿದ್ದು, ಈ ಸಿನಿಮಾಗಳಲ್ಲಿ ಸೂಟು-ಬೂಟು ಧರಿಸಿ ಕೈಯಲ್ಲಿ ಗನ್ ಹಿಡಿದು ಥೇಟ್ ಜೇಮ್ಸ್ ಬಾಂಡ್ ರೀತಿ ಕಾಣಿಸಿಕೊಂಡಿದ್ದಾರೆ. ಇದೀಗ ಶಿವರಾಜ್ ಕುಮಾರ್ ಅವರೂ ಸಹ ತಮ್ಮ ಹೊಸ ಸಿನಿಮಾಕ್ಕೆ ಇದೇ ರೀತಿಯ ಲುಕ್​​ನಲ್ಲಿ ಕಾಣಿಸಿಕೊಂಡಿದ್ದಾರೆ.

ಶಿವರಾಜ್ ಕುಮಾರ್ ಅವರು ರೆಟ್ರೊ ಶೈಲಿನ ಸೂಟು, ಬೂಟು ಧರಿಸಿ ಕೈಯಲ್ಲಿ ರಿವಾಲ್ವರ್ ಹಿಡಿದಿರುವ ಚಿತ್ರ ಕೆಲ ದಿನಗಳ ಹಿಂದೆ ಬಿಡುಗಡೆ ಆಗಿತ್ತು. ‘ಸಪ್ತ ಸಾಗರದಾಚೆ ಎಲ್ಲೊ’ ಸಿನಿಮಾದ ನಿರ್ದೇಶಕ ಹೇಮಂತ್ ರಾವ್ ನಿರ್ದೇಶನ ಮಾಡುತ್ತಿರುವ ಹೊಸ ಸಿನಿಮಾ ‘666 ಆಪರೇಷನ್ ಡ್ರೀಮ್ ಥಿಯೇಟರ್’ ಸಿನಿಮಾನಲ್ಲಿನ ಶಿವಣ್ಣನ ಲುಕ್ ಆಗಿದೆ. ಇದೊಂದು ರೆಟ್ರೊ ಮಾದರಿಯ ಸಿನಿಮಾ ಆಗಿದ್ದು, ಇದಕ್ಕಾಗಿ ಶಿವಣ್ಣ ರೆಟ್ರೊ ಲುಕ್​​​ನಲ್ಲಿ ಕಾಣಿಸಿಕೊಂಡಿದ್ದಾರೆ. ಶಿವಣ್ಣನ ಲುಕ್ ಅಣ್ಣಾವ್ರನ್ನೇ ನೆನಪಿಸುವಂತಿದೆ.

ಈ ಸಿನಿಮಾನಲ್ಲಿ ಶಿವಣ್ಣನ ಜೊತೆಗೆ ಡಾಲಿ ಧನಂಜಯ್ ಸಹ ನಟಿಸಿದ್ದು. ಡಾಲಿ ಸಹ ರೆಟ್ರೊ ಲುಕ್​​ನಲ್ಲಿ ಕಾಣಿಸಿಕೊಂಡಿದ್ದಾರೆ. ಸಿನಿಮಾದ ಚಿತ್ರೀಕರಣ ಈಗಾಗಲೇ ಆರಂಭವಾಗಿ ಕೆಲ ಸಮಯವಾಗಿದೆ. ಸಿನಿಮಾದ ಮೊದಲ ಶೆಡ್ಯೂಲ್ ಚಿತ್ರೀಕರಣ ಈಗಾಗಲೇ ಮುಗಿದಿದೆ. ಇದೇ ತಿಂಗಳಲ್ಲಿ ಎರಡನೇ ಹಂತದ ಚಿತ್ರೀಕರಣ ಆರಂಭಿಸಲು ಚಿತ್ರತಂಡ ಸಜ್ಜಾಗಿದೆ. ಅದಕ್ಕಾಗಿ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಅದ್ಧೂರಿ ಸೆಟ್ ಹಾಕಲಾಗಿದೆ. ಕಂಠೀರವ ಸ್ಟುಡಿಯೋದಲ್ಲಿ ಹಾಕಲಾಗಿರುವ ಬೃಹತ್ ಆಕಾರದ ಸೆಟ್ ನಲ್ಲಿ‌ ಬರೋಬ್ಬರಿ 100 ದಿನಗಳ ಕಾಲ ಶೂಟಿಂಗ್ ನಡೆಸಲಾಗುವುದು.

ಇದನ್ನೂ ಓದಿ:ಅನುಶ್ರೀ ಪತಿಯನ್ನು ಮೊದಲು ನೋಡಿದ್ದೆ, ಪರಿಚಯವಿರಲಿಲ್ಲ, ಬಹಳ ಒಳ್ಳೇ ಹುಡುಗ: ಶಿವರಾಜ್ ಕುಮಾರ್

‘666 ಆಪರೇಷನ್ ಡ್ರೀಮ್ ಥಿಯೇಟರ್ ಬಗ್ಗೆ ಎಲ್ಲವನ್ನೂ ಹೇಮಂತ್ ಎಂ ರಾವ್ ಮತ್ತು ಅವರ ತಂಡ ಎಚ್ಚರಿಕೆಯಿಂದ ನೋಡಿಕೊಳ್ಳುತ್ತಿದೆ. ನಾವು ಇಂದಿನ ಪೀಳಿಗೆಯನ್ನು ಬೆರಗುಗೊಳಿಸುವ ಮತ್ತು ಹಿಂದಿನ ಪೀಳಿಗೆಯನ್ನು ನೆನಪಿನ ಹಾದಿಯಲ್ಲಿ ಕರೆದೊಯ್ಯುವ ಜಗತ್ತನ್ನು ಸೃಷ್ಟಿ ಮಾಡುವ ಪ್ರಯತ್ನದಲ್ಲಿದ್ದೇವೆ. ಸಿನಿಮಾಕ್ಕಾಗಿ ಹಲವು ಅದ್ಭುತವಾದ ಮತ್ತು ಭಿನ್ನವಾದ ಸೆಟ್​ಗಳನ್ನು ನಿರ್ಮಾಣ ಮಾಡುತ್ತಿದ್ದೇವೆ. ಈಗಲೇ ಆ ಬಗ್ಗೆ ಮಾಹಿತಿ ಹಂಚಿಕೊಳ್ಳಲು ಆಗುವುದಿಲ್ಲ ಆದರೆ ಸಿನಿಮಾದ ಬಗ್ಗೆ ಮುಂದಿನ ದಿನಗಳಲ್ಲಿ ಹೆಚ್ಚಿನ ಅಪ್​​ಡೇಟ್​​ಗಳನ್ನು ನೀಡಲಾಗುವುದು’ ಎಂದಿದ್ದಾರೆ.

ಧನಂಜಯ್ ಹಾಗೂ ಶಿವರಾಜ್ ಕುಮಾರ್ ಅವರು ‘666 ಆಪರೇಷನ್ ಡ್ರೀಮ್ ಥಿಯೇಟರ್’ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ವೈಶಾಕ್ ಜೆ. ಗೌಡ ಅವರ ‘ವೈಶಾಕ್ ಜೆ. ಫಿಲ್ಮ್ಸ್’ ಬ್ಯಾನರ್ ಅಡಿಯಲ್ಲಿ ಈ ಸಿನಿಮಾ ನಿರ್ಮಿಸಲಾಗುತ್ತಿದೆ. ಚರಣ್ ರಾಜ್ ಸಂಗೀತ ನಿರ್ದೇಶನ, ಅದ್ವೈತ ಗುರುಮೂರ್ತಿ ಅವರ ಛಾಯಾಗ್ರಹಣ ಈ ಸಿನಿಮಾಗಿದೆ.ವಿಶ್ವಾಸ್ ಕಶ್ಯಪ್ ಕಲಾ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:32 pm, Tue, 16 September 25

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು