ಗೀತಾ ಶಿವರಾಜ್ಕುಮಾರ್ಗೆ ಸರ್ಜರಿ; ಆಸ್ಪತ್ರೆಯಲ್ಲಿ ಮುಂದುವರಿದ ಚಿಕಿತ್ಸೆ
ಶಿವರಾಜ್ ಕುಮಾರ್ ಅವರು ಕ್ಯಾನ್ಸರ್ ನಿಂದ ಚೇತರಿಸಿಕೊಂಡ ಬಳಿಕ, ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದಾರೆ ಎಂದು ವರದಿ ಆಗಿದೆ. ಈಗ ಗೀತಾ ಅವರ ಆರೋಗ್ಯ ಸ್ಥಿತಿ ಸುಧಾರಿಸುತ್ತಿದೆ ಎಂದು ವರದಿಯಾಗಿದೆ. ಅವರ ಬೇಗನೆ ಚೇತರಿಸಿಕೊಳ್ಳುವಂತೆ ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.

ಶಿವರಾಜ್ಕುಮಾರ್ ಅವರು ಇತ್ತೀಚೆಗಷ್ಟೇ ಕ್ಯಾನ್ಸರ್ ಚಿಕಿತ್ಸೆ ಪಡೆದು ಬಂದಿದ್ದಾರೆ. ಅವರು ಕ್ಯಾನ್ಸರ್ನಿಂದ ಸಂಪೂರ್ಣ ಗುಣಮುಖರಾಗಿದ್ದಾರೆ. ಹೀಗಿರುವಾಗಲೇ ಅವರ ಪತ್ನಿ ಗೀತಾ ಶಿವರಾಜ್ಕುಮಾರ್ (Geetha Shivarajkumar) ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಕತ್ತಿನ ಭಾಗದಲ್ಲಿ ಶಸ್ತ್ರಚಿಕಿತ್ಸೆ ಆಗಿದೆ ಎಂದು ಅವರ ಆಪ್ತ ವಲಯದವರು ಮಾಹಿತಿ ನೀಡಿದ್ದಾರೆ. ಕುಟುಂಬದ ಕಡೆಯಿಂದ ಈ ಬಗ್ಗೆ ಇನ್ನಷ್ಟೇ ಅಧಿಕೃತ ಮಾಹಿತಿ ಹೊರಬರಬೇಕಿದೆ.
ಶಿವರಾಜ್ಕುಮಾರ್ ಅವರಿಗೆ ಕ್ಯಾನ್ಸರ್ ಕಾಣಿಸಿಕೊಂಡ ನಂತರ ಅವರ ಕುಟುಂಬದಲ್ಲಿ ಆತಂಕದ ವಾತಾವರಣ ಮೂಡಿತ್ತು. ಆ ಬಳಿಕ ಶಿವಣ್ಣ ಅವರು ಅಮೆರಿಕಕ್ಕೆ ತೆರಳಿ ಚಿಕಿತ್ಸೆ ಪಡೆದರು. ಈಗ ಶಿವರಾಜ್ಕುಮಾರ್ ಆರೋಗ್ಯವಾಗಿದ್ದಾರೆ. ಗೀತಾ ಅವರು ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದಾರೆ.
ಗೀತಾ ಶಿವರಾಜ್ಕುಮಾರ್ ಅವರಿಗೆ ನರದ ಸಮಸ್ಯೆಯಿಂದ ಕತ್ತಿನ ಭಾಗದಲ್ಲಿ ನೋವು ಕಾಣಿಸಿಕೊಂಡಿತ್ತು ಎನ್ನಲಾಗಿದೆ. ಈ ಮೊದಲೇ ಅವರು ಇದಕ್ಕೆ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಬೇಕಿತ್ತು. ಆದರೆ ಅದು ಸಾಧ್ಯವಾಗಿರಲಿಲ್ಲ. ಈಗ ಗೀತಾ ಅವರು ಕತ್ತಿನ ಭಾಗದಲ್ಲಿ ಸರ್ಜರಿ ಮಾಡಿಸಿಕೊಂಡಿದ್ದಾರೆ ಎನ್ನಲಾಗಿದೆ. ಅವರು ಬೇಗ ಚೇತರಿಕೆ ಕಾಣಲಿ ಎಂದು ಫ್ಯಾನ್ಸ್ ಹಾರೈಸುತ್ತಿದ್ದಾರೆ.
ಇದನ್ನೂ ಓದಿ: ‘ಅಪ್ಪು’ ಸಿನಿಮಾ ಯಾಕೆ ನೋಡಿಲ್ಲ? ಬಲವಾದ ಕಾರಣ ಕೊಟ್ಟ ಶಿವರಾಜ್ಕುಮಾರ್
ಶಿವಮೊಗ್ಗದಲ್ಲಿ ಮಾತನಾಡಿದ್ದ ಗೀತಾ ಅವರ ಸಹೋದರ ಹಾಗೂ ಸಚಿವ ಮಧು ಬಂಗಾರಪ್ಪ, ಗೀತಕ್ಕ ಅವರಿಗೆ ಸರ್ಜರಿ ಆಗಿದೆ ಎನ್ನುವ ಮಾಹಿತಿ ನೀಡಿದ್ದರು. ಆದರೆ, ಸರ್ಜರಿಯ ಕಾರಣ ಏನು ಎಂಬುದನ್ನು ರಿವೀಲ್ ಮಾಡಿರಲಿಲ್ಲ. ಈಗ ಅವರ ಆಪ್ತ ಮೂಲಗಳಿಂದ ಸರ್ಜರಿ ಹಿಂದಿನ ಕಾರಣ ರಿವೀಲ್ ಆಗಿದೆ.
ಶಿವರಾಜ್ಕುಮಾರ್ಗೆ ಅವರಿಗೆ ಕ್ಯಾನ್ಸರ್ ಕಾಣಿಸಿಕೊಂಡಾಗಿನಿಂದ ಕ್ಯಾನ್ಸರ್ಗೆ ಚಿಕಿತ್ಸೆ ಪಡೆಯುವವರೆಗೆ ಗೀತಾ ಅವರು ಬೆಂಬಲವಾಗಿ ನಿಂತಿದ್ದರು. ಪ್ರತಿ ಹಂತದಲ್ಲೂ ಪತಿಗೆ ಧೈರ್ಯ ತುಂಬುತ್ತಾ ಬಂದರು. ಇದರಿಂದ ಶಿವರಾಜ್ಕುಮಾರ್ ಅವರು ಬೇಗ ಚೇತರಿಕೆ ಕಾಣಲು ಸಾಧ್ಯವಾಯಿತು. ಈಗ ಪತ್ನಿಗೆ ಶಸ್ತ್ರಚಿಕಿತ್ಸೆ ಆದಾಗ ಶಿವರಾಜ್ಕುಮಾರ್ ಬೆಂಬಲಕ್ಕೆ ನಿಂತಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published On - 9:08 am, Wed, 26 March 25