AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿರಿಯ ನಟ ಶಿವರಾಂ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ; ಆಸ್ಪತ್ರೆ ಕಡೆಯಿಂದ ಪಾಸಿಟಿವ್​ ಸುದ್ದಿ

ಶಿವರಾಂ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಚಂದನವನದ ಅನೇಕ ಹಿರಿಯ ನಟ-ನಟಿಯರು ಬಂದು ಅವರನ್ನು ನೋಡಿಕೊಂಡು ಹೋಗುತ್ತಿದ್ದಾರೆ. ಅವರು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತಿದ್ದಾರೆ.

ಹಿರಿಯ ನಟ ಶಿವರಾಂ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ; ಆಸ್ಪತ್ರೆ ಕಡೆಯಿಂದ ಪಾಸಿಟಿವ್​ ಸುದ್ದಿ
ನಟ ಶಿವರಾಂ
TV9 Web
| Edited By: |

Updated on: Dec 03, 2021 | 2:59 PM

Share

ಹಿರಿಯ ನಟ ಶಿವರಾಂ ಅವರು ಕೋಮಾ ಸ್ಥಿತಿಗೆ ಹೋಗಿದ್ದಾರೆ ಎನ್ನುವ ಸುದ್ದಿ ಸಾಕಷ್ಟು ಆತಂಕ ಮೂಡಿಸಿತ್ತು. ಇಂದು (ಡಿಸೆಂಬರ್​ 3) ಮುಂಜಾನೆವರೆಗೂ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿರಲಿಲ್ಲ. ಆದರೆ, ಮಧ್ಯಾಹ್ನದ ವೇಳೆಗೆ ಅವರು ಚಿಕಿತ್ಸೆಗೆ ಸ್ಪಂದಿಸಿದ್ದಾರೆ. ಈ ವಿಚಾರ ಕೇಳಿ ಅವರ ಅಭಿಮಾನಿಗಳು ಹಾಗೂ ಚಿತ್ರರಂಗದವರು ಖುಷಿಪಟ್ಟಿದ್ದಾರೆ. ಅವರು ಚೇತರಿಕೆ ಕಂಡು, ಆಸ್ಪತ್ರೆಯಿಂದ ಬೇಗ ಬಿಡುಗಡೆಯಾಗಲಿ ಎಂದು ಅಭಿಮಾನಿಗಳು ಕೋರುತ್ತಿದ್ದಾರೆ.

ಕೆಲ ದಿನಗಳ ಹಿಂದೆ ಶಿವರಾಂ ಅವರನ್ನು ಬೆಂಗಳೂರಿನ ಬ್ಯಾಂಕ್​ ಕಾಲೋನಿಯಲ್ಲಿ ಇರುವ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಶಿವರಾಂ ಅವರು ಮನೆಯಲ್ಲಿ ಅಯ್ಯಪ್ಪ ಸ್ವಾಮಿ ಪೂಜೆ ಮಾಡಲು ಟೆರೆಸ್​ನಲ್ಲಿ ವ್ಯವಸ್ಥೆ ಮಾಡಿಕೊಂಡಿದ್ದಾರೆ. ಅಲ್ಲಿಗೆ ತೆರಳಿದ್ದಾಗ ಪ್ರಜ್ಞೆ ತಪ್ಪಿ ಬಿದ್ದರು. ಒಂದೂವರೆ ಗಂಟೆ ಬಳಿಕ ಅದು ತಿಳಿದುಬಂದಿತ್ತು. ನಂತರ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಎಂಆರ್​ಐ ಸ್ಕ್ಯಾನ್​ ಮಾಡಿದಾಗ ತಲೆ ಒಳಗೆ ಪೆಟ್ಟು ಬಿದ್ದಿರುವುದು ತಿಳಿದಿತ್ತು. ಅವರ ಆರೋಗ್ಯ ಇನ್ನಷ್ಟು ಗಂಭೀರ ಪರಿಸ್ಥಿತಿ ತಲುಪಿದೆ. ಅವರ ಮಿದುಳು ನಿಷ್ಕ್ರಿಯಗೊಂಡಿದ್ದು, ಕೋಮಾ ಹಂತ ತಲುಪಿದ್ದಾರೆ ಎಂದು ಇಂದು ಮುಂಜಾನೆ ವರದಿ ಆಗಿತ್ತು. ಆದರೆ, ಮಧ್ಯಾಹ್ನದ ವೇಳೆಗೆ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ. ‘ಹಿರಿಯ ನಟ ಶಿವರಾಂ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ’ ಎಂದು ಆಸ್ಪತ್ರೆಯ ವೈದ್ಯ ಡಾ.ಮೋಹನ್​ ಮಾಹಿತಿ ನೀಡಿದ್ದಾರೆ. ಈ ಮೂಲಕ ಅವರು ಮತ್ತೆ ಚೇತರಿಕೆ ಕಾಣಬಹುದು ಎನ್ನುವ ಆಶಾಭಾವನೆ ತುಂಬಿದ್ದಾರೆ.

ಶಿವರಾಂ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಚಂದನವನದ ಅನೇಕ ಹಿರಿಯ ನಟ-ನಟಿಯರು ಬಂದು ಅವರನ್ನು ನೋಡಿಕೊಂಡು ಹೋಗುತ್ತಿದ್ದಾರೆ. ಅವರು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತಿದ್ದಾರೆ. ಅವರ ಮಿದುಳು ನಿಷ್ಕ್ರಿಯಗೊಂಡಿದ್ದು, ಕೋಮಾ ಹಂತ ತಲುಪಿರೋದು ಅವರ ಕುಟುಂಬದವರು, ಸ್ನೇಹಿತರು ಮತ್ತು ಅಭಿಮಾನಿಗಳಲ್ಲಿ ಆತಂಕ ಮೂಡಿಸಿತ್ತು. ಈಗ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿರುವುದು ಅಭಿಮಾನಿಗಳಿಗೆ ಖುಷಿ ನೀಡಿದೆ.

ಇದನ್ನೂ ಓದಿ: ಹಿರಿಯ ನಟ ಶಿವರಾಂ​ ಅವರಿಗೆ ಆಗಿದ್ದೇನು? ಇಂಚಿಂಚೂ ವಿವರ ನೀಡಿದ ವೈದ್ಯರು

‘ತಮ್ಮನನ್ನು ಕಳೆದುಕೊಂಡು ತಿಂಗಳಾಗಿದೆ; ಮತ್ತೆ ದೇವರು ಯಾಕೆ ನೋವು ಕೊಡ್ತಾನೋ ಗೊತ್ತಿಲ್ಲ’: ಶಿವರಾಂ ಬಗ್ಗೆ ಶಿವಣ್ಣನ ಮಾತು

Follow Us
TV9 Web
TV9 Web

TV9 Kannada

Read More
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಗಾನವಿಯ ಟಾರ್ಗೆಟ್ ಮಾಡಿದರೇ ಮನೆ ಮಂದಿ: ವಿಡಿಯೋ ನೋಡಿ
ಗಾನವಿಯ ಟಾರ್ಗೆಟ್ ಮಾಡಿದರೇ ಮನೆ ಮಂದಿ: ವಿಡಿಯೋ ನೋಡಿ